Connect with us

State

LPG Price: ಬಜೆಟ್‌ ಘೋಷಣೆ ಮುನ್ನವೇ ಜನಸಾಮಾನ್ಯರಿಗೆ ಶಾಕಿಂಗ್‌ ನ್ಯೂಸ್‌; ಹೆಚ್ಚಿದೆ ವಾಣಿಜ್ಯ ಸಿಲಿಂಡರ್‌ ಬೆಲೆ!!!

Published

on

LPG Price: ತಿಂಗಳ ಮೊದಲ ದಿನ ಇಂಧನ ಕಂಪನಿಗಳು ಜನಸಾಮಾನ್ಯರಿಗೆ ಬಿಗ್‌ಶಾಕ್‌ ನೀಡಿದೆ. ಇಂದು LPG ಹೊಸ ದರಗಳು ಪ್ರಕರಣವಾಗಿದ್ದು, ಈ ಬೆಲೆಗಳು ಇಂದಿನಿಂದಲೇ ಜಾರಿಗೆ ಬರಲಿದೆ.

ಗುರುವಾರ ತೈಲಮಾರುಕಟ್ಟೆ ಕಂಪನಿಗಳು (Oil Marketing Companies (OMCs) ಎಲ್‌ಪಿಜಿ ಬೆಲೆ ಪರಿಷ್ಕರಣೆ ಘೋಷಿಸಿದೆ.

ಇಂದು ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ ಹೆಚ್ಚಳ ಕಂಡಿದ್ದು, ಗೃಹ ಬಳಕೆಯ ಸಿಲಿಂಡರ್‌ ಬೆಲೆ ಸ್ಥಿರವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

19 ಕೆಜಿಯ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 14 ರೂ. ಗಳಷ್ಟು ಏರಿಕೆ ಕಂಡಿದೆ. ಕೋಲ್ಕತ್ತಾದಲ್ಲಿ 1,887 ರೂ., ಮುಂಬೈ: 1723.50 ರೂ. ಚೆನ್ನೈ: 1,937 ರೂ ಮತ್ತು ಬೆಂಗಳೂರಿನಲ್ಲಿ 1,851.50 ರೂಪಾಯಿ ಇದೆ.

ಗೃಹ ಬಳಕೆಯ ಸಿಲಿಂಡರ್‌ ಬೆಲೆ 14.2 ಕೆಜಿ ಗೆ ದೆಹಲಿಯಲ್ಲಿ 903 ರೂಪಾಯಿ, ಕೋಲ್ಕತ್ತಾದಲ್ಲಿ 929 ರೂ., ಚೆನ್ನೈ: 918.50 ರೂ. ಮತ್ತು ಬೆಂಗಳೂರಿನಲ್ಲಿ 905 ರೂಪಾಯಿ ಇದೆ.

Continue Reading
Click to comment

Leave a Reply

Your email address will not be published. Required fields are marked *

State

ತುಂಗಭದ್ರಾ ಅಣೆಕಟ್ಟೆ ಗೇಟ್ ಮುರಿದ ಪ್ರಕರಣ: ನೀರು ಖಾಲಿ ಮಾಡುವ ಕಾರ್ಯ ಆರಂಭ

Published

on

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದು ಹೋಗಿರುವುದರಿಂದ ನೀರು ಖಾಲಿ ಮಾಡುವ ಸಲುವಾಗಿ ಎಲ್ಲಾ 33 ಗೇಟ್‌ಗಳನ್ನು ತೆರೆದು ಸುಮಾರು 1 ಲಕ್ಷ ಕ್ಯುಸೆಕ್‌ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ.ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಪಿ.ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ವೈಕುಂಠ ಅತಿಥಿಗೃಹದಲ್ಲಿ ಭಾನುವಾರ ನಸುಕಿನಲ್ಲೇ ಸಭೆ ಆರಂಭಿಸಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ನೀರು ಭರ್ತಿಯಾಗಿದ್ದು, 60 ಟಿಎಂಸಿ ಅಡಿಯಷ್ಟು ಹೊರಹಾಕಿದರೆ ಅಂದರೆ 20 ಅಡಿ ನೀರಿನ ಮಟ್ಟ ಇಳಿಸಿದರೆ ಮಾತ್ರ ಗೇಟ್‌ ದುರಸ್ತಿ ಸಾಧ್ಯ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ನೀರು ಹೊರಗೆ ಬಿಡುವ ಕಾರ್ಯ ಇದೀಗ ನಡೆಯುತ್ತಿದೆ. ಸುಮಾರು 2 ಲಕ್ಷ ಕ್ಯುಸೆಕ್ ನೀರನ್ನು ಸತತ ನಾಲ್ಕು ದಿನ ಬಿಟ್ಟರೆ ಮಾತ್ರ ಈ ಮಟ್ಟ ತಲುಪಬಹುದು ಎಂದು ಹೇಳಲಾಗುತ್ತಿದೆ. ಶನಿವಾರ ಮಧ್ಯರಾತ್ರಿ 12ರ ಸುಮಾರಿಗೆ ಗೇಟ್‌ನ ಚೈನ್‌ ಲಿಂಕ್ ಮುರಿದು, ಕ್ರಸ್ಟ್ ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬೆಳವಣಿಗೆ ನಡೆದಿದೆ.

Continue Reading

State

ರಾಜ್ಯ ಸರ್ಕಾರದ ನಿರ್ಲಕ್ಯದಿಂದ ಟಿಬಿ ಡ್ಯಾಮ್ ಸಮಸ್ಯೆ ಎದುರಾಗಿದೆ: ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಬಸವರಾಜ ಬೊಮ್ಮಾಯಿ

Published

on

ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟು ಹಾಗೂ ಜನರ ಸುರಕ್ಷತೆಗೆ ಗಮನ ನೀಡಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ ಸಮಾನಾಂತರವಾದ ಅಣೆಕಟ್ಟು ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್ ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ, ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.


ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸರ್ಕಾರದ ನಿರ್ಲಕ್ಷ್ಯತನದಿಂದಲೇ ಹೀಗೆ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು. ನೋಡೋಣ ಏನಾಗಿದೆ ಎಂದು ಗೊತ್ತಾಗುತ್ತದೆ. ಡ್ಯಾಂನಲ್ಲೇ ಇಂಜಿಜಿಯರ್ ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ವರ್ಷ ಅತೀ ಹೆಚ್ಚು ಮಳೆ ಬರುತ್ತದೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ದರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ. ಈ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದರು.

Continue Reading

State

ಮುಂದಿನ 5 ದಿನಗಳ ಮಳೆ ಮುನ್ಸೂಚನೆ ಮತ್ತು ಎಚ್ಚರಿಕೆಗಳು: (ಮೂಲ:IMD)

Published

on

ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಇಂದು ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ, ಆಗಸ್ಟ್ 12 ರಿಂದ ಆಗಸ್ಟ್ 15 ರವರೆಗೆ ಮಳೆಯ ತೀವ್ರತೆಯು ಹೆಚ್ಚಾಗುವ ನಿರೀಕ್ಷೆಯಿದೆ.

ಭಾರತೀಯ ಹವಾಮಾನ ಇಲಾಖೆಯಿಂದ ಯಾವುದೇ ಎಚ್ಚರಿಕೆ ನೀಡಿರುವುದಿಲ್ಲ.

Continue Reading

Trending

error: Content is protected !!