Connect with us

Mysore

ಕುಟುಂಬ ರಾಜಕಾರಣ ಮಾಡುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌‍ ಬಗ್ಗೆ ಆರೋಪ ಮಾಡುತ್ತಾರೆ – ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌

Published

on

ಮೈಸೂರು: ರಾಜ್ಯಾಧ್ಯಕ್ಷರನ್ನು ಬಿಟ್ಟು ಕುಟುಂಬ ರಾಜಕಾರಣ ಮಾಡುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌‍ ಬಗ್ಗೆ ಆರೋಪ ಮಾಡುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಲೇವಡಿ ಮಾಡಿದರು.
ರಾಜ್ಯ ಸರ್ಕಾರದಲ್ಲಿ ವೈಎಸ್ಟಿ, ಎಸ್‌‍ಎಸ್ಟಿ ಟ್ಯಾಕ್‌್ಸ ಇರುವ ಬಗ್ಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಎಚ್‌.ಡಿ. ದೇವೇಗೌಡರು ಹೇಳಿದ್ದರು. ಆದರೆ, ಇದೀಗ ಅವರೇ ಪದೇ, ಪದೆ ಮೋದಿಯವರನ್ನು ಭೇಟಿ ಮಾಡುತ್ತಿದ್ದಾರೆ. ವೈಯಕ್ತಿಕವಾಗಿ ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವವಿದೆ. ನಾವು ಕೂಡ ಎಚ್‌ಡಿಕೆ ಟ್ಯಾಕ್‌್ಸ ಅಂತ ಹೆಸರು ಕೊಡಬಹುದು. ಅವರ ರಾಜಕೀಯ ನಡೆ ಬಗ್ಗೆ ಜನರಿಗೆ ಗೊತ್ತಿದೆ. ಹಳೆ ಮೈಸೂರು ಭಾಗದಲ್ಲಿ ಅವರ ಅವಕಾಶವಾದಿ ರಾಜಕಾರಣ ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಐಟಿ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಕಳೆದ ಚುನಾವಣೆಯ ಸೋಲಿನಿಂದ ಹತಾಶರಾಗಿದ್ದಾರೆ. ಅವರಿಗೆ ಗಾಯದ ಮೇಲೆ ಉಪ್ಪು ಸುರಿದ ಹಾಗೆ ಆಗಿದೆ. ರಾಜ್ಯದಲ್ಲಿ ಮೋದಿ ಪರವಾದ ಅಲೆ ಇಲ್ಲ. ಮೋದಿ ಮುಖ ನೋಡಿ ಯಾರೂ ಮತ ನೀಡುವುದೂ ಇಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್‌‍ನ ಗ್ಯಾರಂಟಿಗಳು ಜನಮನ್ನಣೆ ಗಳಿಸಿವೆ. ಈಗಾಗಲೇ ನಾಲ್ಕು ಗ್ಯಾರಂಟಿಗಳು ಜನರನ್ನು ತಲುಪುತ್ತಿವೆ. ಇದು ಬಿಜೆಪಿಯವರ ನಿದ್ದೆ ಕೆಡಿಸಿದೆ. ಹಾಗಾಗಿ ಕಾಂಗ್ರೆಸ್‌‍ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ ಎಂದರು.
ಜಿಲ್ಲೆಗೊಂದು ವಿಶ್ವವಿದ್ಯಾನಿಲಯಗಳ ಸ್ಥಾಪನೆಗೆ ಮುಂದಾಗಿದ್ದ ಈ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರ ಅವೈಜ್ಞಾಕ. ಮೈಸೂರು ವಿಶ್ವವಿದ್ಯಾನಿಲಯ ಶತಮಾನದ ಇತಿಹಾಸ ಹೊಂದಿದೆ. ಇದನ್ನು ವಿಭಜಿಸುವುದು ಸೂಕ್ತವಲ್ಲ. ಬಹುತೇಕ ವಿಶ್ವವಿದ್ಯಾನಿಲಯಗಳಲ್ಲಿ ಬೋಧಕರ ಕೊರತೆಯಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲೂ ಬೋಧಕರ ಕೊರತೆಯಿದೆ. ಜತೆಗೆ ಅನೇಕ ಸಮಸ್ಯೆಗಳೂ ಇವೆ. ನಾನು ಈಗಾಗಲೇ ಅನೇಕ ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಿ ಈ ಸಂಬಂಧ ಮಾಹಿತಿ ಪಡೆದಿದ್ದೇನೆ. ಇರುವ ವಿಶ್ವವಿದ್ಯಾನಿಲಯಗಳ ಸಮಸ್ಯೆಗಳನ್ನು ಬಗೆಹರಿಸದೇ, ಹೊಸ ವಿಶ್ವವಿದ್ಯಾನಿಲಯ ತೆರೆದು ಅದಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ನೀಡುವುದು ಹೊರೆಯಾಗುತ್ತದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Mysore

ಪಿರಿಯಾಪಟ್ಟಣ ತಾಲೂಕಿನ ಮಾಜಿ ಶಾಸಕರಾದ ಕೆ.ಮಹದೇವ್ ಅವರ ಮನವಿ ಮೇರೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದು

Published

on

ಪಿರಿಯಾಪಟ್ಟಣ ತಾಲೂಕಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿ ಉಂಟಾಗಿರುವ ಪ್ರದೇಶಗಳಿಗೆ ಮೇ.22 ರ ಬುಧವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಲಿದ್ದಾರೆ.


ಪಿರಿಯಾಪಟ್ಟಣ ತಾಲೂಕಿನ ಮಾಜಿ ಶಾಸಕರಾದ ಕೆ.ಮಹದೇವ್ ಅವರ ಮನವಿ ಮೇರೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದು

ಬೆಳಿಗ್ಗೆ 11 ಗಂಟೆಗೆ ಚಪ್ಪರದಹಳ್ಳಿ ಹಾರನಹಳ್ಳಿ ಅಂಬಲಾರೆ ಮಾರ್ಗವಾಗಿ ಮಳೆಯಿಂದ ಹಾನಿ ಉಂಟಾದ ಸ್ಥಳಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ, ಅವರೊಟ್ಟಿಗೆ ಶಾಸಕರಾದ ಜಿ.ಟಿ ದೇವೇಗೌಡ, ಮಾಜಿ ಸಚಿವರಾದ ಸಾ.ರಾ ಮಹೇಶ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಆಗಮಿಸಲಿದ್ದಾರೆ.

Continue Reading

Mysore

ಶಾಲೆಗಳಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕೋರಿದ್ದಾರೆ.

Published

on

ಪಿರಿಯಾಪಟ್ಟಣ ತಾಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಪ್ರವೇಶಾತಿ ಸಂಬಂಧ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ಪ್ರವೇಶಾತಿ ಅರ್ಜಿಗಳನ್ನು ನಿಲಯ/ ಆಶ್ರಮ ಶಾಲೆಗಳಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕೋರಿದ್ದಾರೆ.

ಪಿರಿಯಾಪಟ್ಟಣ ಟೌನ್ ಬೈಲಕುಪ್ಪೆ ಪಂಚವಳ್ಳಿ ರಾವಂದೂರು ಗ್ರಾಮಗಳಲ್ಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 5 ರಿಂದ 10ನೇ ತರಗತಿಯವರೆಗೆ ಹಾಗು ಅಬ್ಬಳತಿ ಮುತ್ತೂರು ಕಾಲೋನಿ ಮತ್ತು ದೊಡ್ಡ ಹೊಸೂರು ಗ್ರಾಮಗಳಲ್ಲಿನ ಪರಿಶಿಷ್ಟ ವರ್ಗದ ಆಶ್ರಮ ಶಾಲೆಗಳಲ್ಲಿ 1 ರಿಂದ 7 ನೇ

ತರಗತಿಯವರೆಗೆ ಮತ್ತು ಪಿರಿಯಾಪಟ್ಟಣ ಟೌನ್ ನಲ್ಲಿರುವ ಮೆಟ್ರಿಕ್ ನಂತರದ ನಂತರದ ಬಾಲಕರ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಐಟಿಐ ಪದವಿ ತರಗತಿಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಪಿರಿಯಾಪಟ್ಟಣ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗು ಬಿ.ಟಿ ಮಹದೇವ 9449131475, ಜೂಲಿಯಟ್ 7892693275, ಲಲಿತಾ 9886368125, ದೇವಿ 7760456705, ಯಶೋಧ 9972593675 ಸಂಪರ್ಕಿಸುವಂತೆ ಕೋರಿದ್ದಾರೆ.

Continue Reading

Mysore

ಕಲುಷಿತ ನೀರಿನ ಪ್ರಕರಣ: ಆರೋಗ್ಯಾಧಿಕಾರಿಗಳ ಅಮಾನತು ಮಾಡುವಂತೆ ಕೆಆರ್ ಎಸ್ ಪಕ್ಷ ಆಗ್ರಹ

Published

on

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಸರಿಯಾಗಿ ಕಾರ್ಯ ನಿರ್ವಹಿಸದೆ ನಿರ್ಲಕ್ಷ್ಯಮಾಡಿ, ಪರೋಕ್ಷವಾಗಿ ಜನಸಾಮಾನ್ಯರ ಸಾವಿಗೆ ಕಾರಣವಾಗಿರುವ ಜಿಲ್ಲಾ ಆರೋಗ್ಯ ಅಧಿಕಾರಿ, ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಜೀನಾಮೆ ನೀಡಬೇಕು. ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಒಬ್ಬ ಬಡ ಯುವಕ ನೀರನ್ನು ಕುಡಿದು ಸಾವನ್ನಪ್ಪಿದ್ದಾನೆ. ಹಾಗೂ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ 114ಕ್ಕೂ ಹೆಚ್ಚು ಸಾರ್ವಜನಿಕರು ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಯೋಗ್ಯ ಅಧಿಕಾರಿಗಳನ್ನು ನೇಮಿಸಿಕೊಂಡಿರುವ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸರಿಯಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡದೆ ಮತ್ತು ನೀರನ್ನು ಸಂಗ್ರಹಿಸುವ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸದೆ ಕಲುಷಿತ ನೀರನ್ನು ಜನರಿಗೆ ಕುಡಿಯಲು ಸರಬರಾಜು ಮಾಡಿರುವುದರಿಂದ ಈ ಅನಾಹುತಗಳು ಇದಕ್ಕೆ ಮೂಲ ಕಾರಣವಾಗಿದೆ.

ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕುಮಾರಸ್ವಾಮಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮದ ಬಗ್ಗೆ ಅಸಡ್ಡೆ ತೋರಿಸುವುದು ಮತ್ತು ಸ್ಥಳೀಯ ಅಧಿಕಾರಿಗಳ ಕಾರ್ಯವೈಖರಿಯನ್ನ ಮೇಲ್ವಿಚಾರಣೆ ಮಾಡದೇ ಕಛೇರಿಯಲ್ಲೇ ಕುಳಿತು ಸರ್ಕಾರದ ಸವಲತ್ತುಗಳನ್ನು ಅನುಭವಿಸುತ್ತಾ ಇರುವುದು. ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಗ್ರಾಮೀಣ ಪ್ರದೇಶಗಳಿಗೆ ಹೋಗಿ ಮೇಲ್ವಿಚಾರಣೆ ಮಾಡದೇ ಇರುವುದೇ ಕಾರಣವಾಗಿದೆ. ಆದ್ದರಿಂದ ನಿಷ್ಪಕ್ಷವಾದ ತನಿಖೆ ಮಾಡಬೇಕು. ತಕ್ಷಣವೇ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕುಮಾರಸ್ವಾಮಿಯವರನ್ನ ಕರ್ತವದಿಂದ ಅಮಾನತು ಮಾಡಬೇಕು. ಈ ದುರ್ಘಟನೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮಳೆಗಾಲದಲ್ಲಿ ಇದು ಸರ್ವೇಸಾಮಾನ್ಯ ಇಂತಹ ಸಾವು ನೋವುಗಳು ಆಗುತ್ತವೆ ಎಂಬ ಮಾತಿನಲ್ಲಿ ಹೇಳಿರುವುದು ಆತನ ದುರಾಂಕಾರಿ ವರ್ತನೆಯಾಗಿದ್ದು, ಆತನು ಆ ಹುದ್ದೆಯಲ್ಲಿ ಹೊಂದಿರುದಕ್ಕೆ ಲಾಯಕ್ ಇಲ್ಲದ ಅಯೋಗ್ಯ ಎಂದು ಕಿಡಿಕಾರಿದ್ದಾರೆ.

ಜನಸಾಮಾನ್ಯರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಈತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತಿಯ ಪಿಡಿಒ ಕೂಡ ಇದಕ್ಕೆ ನೇರ ಹೊಣೆಯಾಗಿದ್ದಾರೆ ಅವರನ್ನು ಕೂಡ ಸೇವೆಯಿಂದ ಅಮಾನತು ಪಡಿಸಬೇಕು. ಸಾವಿಗಿಡಾಗಿರುವ ಕನಕರಾಜು ಕುಟುಂಬಕ್ಕೆ 50 ಲಕ್ಷ ಪರಿಹಾರವನ್ನು ಕೂಡಲೇ ಕೊಡಬೇಕು. ಆತನ ಸಾವಿಗೆ ಕಾರಣವಾಗಿರುವ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಒಂದು ವೇಳೆ ಇದನ್ನು ನಿರ್ಲಕ್ಷ್ಯ ಮಾಡಿದ್ದಲ್ಲಿ, ಜಿಲ್ಲಾಧಿಕಾರಿಗಳೇ ಇದರ ಹೊಣೆಯನ್ನು ಹೊರಬೇಕಾಗುತ್ತದೆ. ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮತ್ತು ಉಸ್ತುವಾರಿ ಸಚಿವರ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

Continue Reading

Trending

error: Content is protected !!