Connect with us

Politics

NEET-UG 2026 ರದ್ದತಿ ಮತ್ತು ಮರುಪರೀಕ್ಷೆ ನಿರ್ಧಾರಕ್ಕೆ ಮಧು ಬಂಗಾರಪ್ಪ ತೀವ್ರ ಆಕ್ರೋಶ

Published

on

ಬೆಂಗಳೂರು: ಕೇಂದ್ರ ಸರ್ಕಾರವು ನೀಟ್-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿರುವುದರ ಜೊತೆಗೆ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತೀವ್ರ ಕಳವಳ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷಾ ವ್ಯವಸ್ಥೆಯಲ್ಲಿನ ಪದೇ ಪದೇ ಉಂಟಾಗುತ್ತಿರುವ ವೈಫಲ್ಯಗಳು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಿದ್ದಾರೆ. ವರ್ಷಗಟ್ಟಲೆ ಶ್ರಮಪಟ್ಟ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ನಿರ್ಧಾರ ದೊಡ್ಡ ಆಘಾತವಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ದೊಡ್ಡ ದೊಡ್ಡ ನೀತಿಗಳ ಕುರಿತು ಮಾತನಾಡುವುದಕ್ಕಿಂತ ಮೊದಲು ಪರೀಕ್ಷಾ ಪಾರದರ್ಶಕತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅವರು ಟೀಕಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳಂತಹ ಘಟನೆಗಳು ಪುನರಾವರ್ತಿಸುತ್ತಿರುವುದನ್ನು ಅವರು ಗಂಭೀರ ವೈಫಲ್ಯವೆಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಬಿಜೆಪಿ ನಾಯಕರ ಮೌನವನ್ನು ಪ್ರಶ್ನಿಸಿದ ಸಚಿವರು, ಇದು ಕೇವಲ ಪರೀಕ್ಷೆಯ ವಿಷಯವಲ್ಲ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಬಲಿಷ್ಠ ಮತ್ತು ಪಾರದರ್ಶಕ ಪರೀಕ್ಷಾ ವ್ಯವಸ್ಥೆ ರೂಪಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Continue Reading

Politics

ಹರ್ಮನ್‌ಪ್ರೀತ್ ಕೌರ್‌ಗೆ ಪದ್ಮಶ್ರೀ ಗೌರವ

Published

on

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 66 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅವರ ಪತ್ನಿ ಹೇಮ ಮಾಲಿನಿ ಸ್ವೀಕರಿಸಿದರು.

ಪ್ರಸಿದ್ಧ ಪಿಟೀಲು ವಾದಕಿ ಎನ್.ರಾಜಮ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿತು. ಮಾಜಿ ರಾಜ್ಯಪಾಲ  ಗವ್ ಭಗತ್ ಸಿಂಗ್ ಕೋಶ್ಯಾರಿ ಹಾಗೂ ಖ್ಯಾತ ಬ್ಯಾಂಕರ್ ಉದಯ್ ಕೋಟಕ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಟ ಪ್ರೊಸೆನ್‌ಜಿತ್ ಚಟರ್ಜಿ ಅವರಿಗೂ ಪದ್ಮಶ್ರೀ ಗೌರವ ದೊರೆಯಿತು.

ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅದರಲ್ಲಿ 5 ಪದ್ಮ ವಿಭೂಷಣ, 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳಿವೆ. ಮೊದಲ ಹಂತದಲ್ಲಿ ಇಂದು 2 ಪದ್ಮ ವಿಭೂಷಣ, 6 ಪದ್ಮ ಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿಗಳನ್ನು ವಿತರಿಸಲಾಯಿತು. ಉಳಿದ ಪ್ರಶಸ್ತಿಗಳನ್ನು ಎರಡನೇ ಹಂತದಲ್ಲಿ ಪ್ರದಾನ ಮಾಡಲಾಗುತ್ತದೆ.

Continue Reading

Politics

ಕರ್ನಾಟಕ ರಾಜ್ಯಸಭೆ ಚುನಾವಣೆ: ಜೂನ್‌. 18ಕ್ಕೆ ಮತದಾನ

Published

on

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ತೆರವಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಜೂನ್‌ 18ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಿಂದ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಪ್ರಧಾನಿ ಎಚ್.ಡಿ.ದೇವೇಗೌಡ,  ಈರಣ್ಣ ಕಡಾಡಿ ಹಾಗೂ ನಾರಾಯಣ  ಅವರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣಾ ವೇಳಾಪಟ್ಟಿ

  • ನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ: ಜೂನ್‌ 8
  • ನಾಮಪತ್ರ ಪರಿಶೀಲನೆ: ಜೂನ್‌ 9
  • ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಜೂನ್‌ 11
  • ಮತದಾನ ಮತ್ತು ಫಲಿತಾಂಶ: ಜೂನ್‌ 18

ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಹಾಗೂ ಬಿಜೆಪಿಗೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಾಲಿನ ಮೂರು ಸ್ಥಾನಗಳಲ್ಲಿ ಒಂದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮರುನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಉಳಿದ ಎರಡು ಸ್ಥಾನಗಳಿಗೆ ಪಕ್ಷದೊಳಗಿನ ಹಲವು ನಾಯಕರು ಪೈಪೋಟಿಯಲ್ಲಿ ಇದ್ದಾರೆ.

ಇನ್ನೊಂದೆಡೆ, ಬಿಜೆಪಿ ಪಾಲಿನ ಒಂದು ಸ್ಥಾನಕ್ಕೆ ಜೆಡಿಎಸ್ ಕೂಡ ಆಸಕ್ತಿ ತೋರಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಬಿಜೆಪಿ–ಜೆಡಿಎಸ್ ಮೈತ್ರಿ ವಲಯದಲ್ಲಿ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

Continue Reading

Politics

ಗೃಹಲಕ್ಷ್ಮಿ ಹಣ ಬಾಕಿ| ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ

Published

on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ   ಯೋಜನೆಯಡಿ ಹಲವು ತಿಂಗಳಿಂದ ಹಣ ಜಮೆಯಾಗಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಇಬ್ಬರು ಮಹಿಳೆಯರು ಹೈಕೋರ್ಟ್‌   ಮೊರೆ ಹೋಗಿದ್ದಾರೆ.

ಬಸವೇಶ್ವರ ನಗರದ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿ, ಬಾಕಿ ಉಳಿದಿರುವ ಎಲ್ಲಾ ಕಂತುಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

ಅರ್ಜಿದಾರರ ಪರ ವಕೀಲರು, 2025ರ ಫೆಬ್ರವರಿಯಿಂದ 2026ರ ಮೇ ತಿಂಗಳವರೆಗೆ ಯಾವುದೇ ಹಣ ಖಾತೆಗೆ ಜಮೆಯಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಇದೇ ಸಮಸ್ಯೆ ರಾಜ್ಯದ ಲಕ್ಷಾಂತರ ಫಲಾನುಭವಿಗಳಿಗೂ ಎದುರಾಗಿದೆ ಎಂದು ಅವರು ವಾದಿಸಿದರು.

ಸರ್ಕಾರ ಪ್ರತೀ ಬಜೆಟ್‌ನಲ್ಲಿ ಯೋಜನೆಗೆ ಸಾವಿರಾರು ಕೋಟಿ ರೂಪಾಯಿ ಮೀಸಲಿಡುತ್ತಿದ್ದರೂ, ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಹಾಗಾದರೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಪ್ರಶ್ನಿಸಿದರು. ಬಾಕಿ ಇರುವ ಎಲ್ಲಾ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಆದೇಶಿಸಬೇಕೆಂದು ಮನವಿ ಮಾಡಿದರು.

ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುರಜ್‌ ಗೋವಿಂದರಾಜು ಮತ್ತು ಕೆ. ಮನ್ಮಥ ರಾವ್  ಅವರ ವಿಭಾಗೀಯ ಪೀಠವು ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಯೋಜನೆ ಅನುಷ್ಠಾನದಲ್ಲಿ ಆಗಿರುವ ವಿಳಂಬದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಲಾಗಿದೆ.

Continue Reading

Trending

error: Content is protected !!