Chikmagalur
ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ನೋಟ್ ಪುಸ್ತಕ ವಿತರಣೆ, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ: ಮಧು ಬಂಗಾರಪ್ಪ
ಚಿಕ್ಕಮಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಒಂದನೇ ತರಗತಿಯಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ನೋಟು ಪುಸ್ತಕ ಹಾಗೂ ಪಠ್ಯ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕೊಪ್ಪ ತಾಲೂಕು ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಈಗಾಗಲೇ ಶೂಗಳು, ಸಾಕ್ಸ್‌ಗಳು ಮತ್ತು ಸಮವಸ್ತ್ರ ನೀಡುವುದರ ಜೊತೆಗೆ ಪಠ್ಯಪುಸ್ತಕ ಹಾಗೂ ನೋಟ್ ಪುಸ್ತಕಗಳನ್ನು ಸಹ ನೀಡಲಾಗುತ್ತದೆ ಎಂದರು.
8ನೇ ತರಗತಿಯವರೆಗಿನ ಮಕ್ಕಳಿಗೆ ಒಂದು ಮೊಟ್ಟೆ ಮಾತ್ರ ವಿತರಿಸಲಾಗುತ್ತಿತ್ತು. ಅದನ್ನು ನಮ್ಮ ಸರ್ಕಾರ 10ನೇ ತರಗತಿಯವರೆಗೆ ವಿಸ್ತರಿಸಿದೆ. ಬಡ ಮಕ್ಕಳ ಅಪೌಷ್ಟಿಕತೆ ನೀಗಿಸುವ ಸಲುವಾಗಿ ಬೆಳಿಗ್ಗೆ ಹಾಲು ಹಾಗೂ ರಾಗಿ ಮಾಲ್ಟ್ ಜೊತೆಗೆ ವಾರವಿಡೀ ಮೊಟ್ಟೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಬಡತನಕ್ಕೆ ಸ್ಪಂದಿಸಿ ಕಾರ್ಯ ನಿರ್ವಹಿಸುವುದೇ ಸರ್ಕಾರದ ಕೆಲಸ. ಈ ನಿಟ್ಟಿನಲ್ಲಿ 57 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗುವಂತೆ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೆಯೇ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಆಡಿದ ಮಾತು ಉಳಿಸಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 11 ತಿಂಗಳಲ್ಲಿ 13 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. ಇದೇ ಡಿಸೆಂಬರ್.7 ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಮತ್ತೆ 12 ಸಾವಿರ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಈ ಶೈಕ್ಷಣಿಕ ವರ್ಷ ಆರಂಭವಾದ ಸಂದರ್ಭದಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಕಾರ್ಯ ನಡೆದಿದೆ ಎಂದರು.
ಹಿಂದೆ ಎಸ್‌ಎಸ್‌ಎಲ್‌ಸಿಯ ಪರೀಕ್ಷಾ ಕ್ರಮದಲ್ಲಿ ಬದಲಾವಣೆ ತರಲಾಗಿದ್ದು, ಕಳೆದ ವರ್ಷ ಎರಡು ಮತ್ತು ಮೂರನೇ ಪರೀಕ್ಷೆ ನಡೆಸಿ ಅದರಲ್ಲಿ ಸುಮಾರು 1,16,000 ಮಕ್ಕಳು ಉತ್ತೀರ್ಣರಾಗಿ ಇವತ್ತು ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದಾರೆ. 2024 ರಲ್ಲಿ ಇಬ್ಬರು ಮಾತ್ರ 625ಕ್ಕೆ 625ಅಂಕ ಪಡೆದಿದ್ದರು. ಆದರೆ ಈ ಬಾರಿ ಈ ಸಂಖ್ಯೆ ೫೧ಕ್ಕೆ ಏರಿದೆ. ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದರಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಒಂದು ಗ್ರಾ.ಪಂ. ವ್ಯಾಪ್ತಿಗೆ ಒಂದರಂತೆ ಇಡೀ ರಾಜ್ಯಕ್ಕೆ 6 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಸ್ಥಾಪಿಸಬೇಕೆಂಬ ಉದ್ದೇಶ ಸರ್ಕಾರದ್ದು. ಜೊತೆಗೆ ಆ ಶಾಲೆಗಳ ವಿದ್ಯಾರ್ಥಿಗಳಿಗೆ ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಉಚಿತ ಬಸ್ ವ್ಯವಸ್ಥೆಯೂ ಲಭ್ಯವಿರುತ್ತದೆ ಎಂದು ತಿಳಿಸಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಾತನಾಡಿ, ಸುಮಾರು 45 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಗ್ರಾ.ಪಂ.ಯ ಕಟ್ಟಡ, ಸುಮಾರು 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ, 82 ಲಕ್ಷ ರೂ.ಗಳ ವೆಚ್ಚದಲ್ಲಿ ಐದು ಶಾಲಾ ಕೊಠಡಿಗಳನ್ನು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದ್ದಾರೆ. ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆಮೂಲಾಗ್ರ ಬದಲಾವಣೆ ತಂದಿದ್ದಾರೆ. ಇಂದು ಖಾಸಗಿ ಉದ್ಯಮಿಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಲು ಮಂದೆ ಬರಲು ಸಿದ್ಧರಿದ್ದಾರೆ. ಅದರಲ್ಲೂ ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಸಹಯೋಗದಲ್ಲಿ ಸುಮಾರು 1560 ಕೋಟಿ ರೂ.ಗಳ ಆರ್ಥಿಕ ನೆರವು ತಂದಿದ್ದು, ವಾರದಲ್ಲಿ ಆರು ದಿನಗಳ ಕಾಲ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ರಾಗಿ ಮಾಲ್ಟ್ ನೀಡುವ ಯೋಜನೆ ರೂಪಿಸಲಾಗಿದೆ. ಇದು ಸಚಿವರಾದ ಮಧು ಬಂಗಾರಪ್ಪ ಅವರ ಪ್ರಯತ್ನದಿಂದ ಆಗಿದೆ ಎಂದರು.
ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ, ಕರ್ಕೇಶ್ವರ ಗ್ರಾ,ಪಂ. ಅಧ್ಯಕ್ಷ ರಾಜೇಶ್ ಕೇಶವತ್ತಿ, ಉಪಾಧ್ಯಕ್ಷೆ ಆಶಾಲತ, ಎಸ್‌ಡಿಎಂಸಿ ಅಧ್ಯಕ್ಷೆ ಮಮತ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮರಾಜು, ಗ್ರಾ.ಪಂ.ಸದಸ್ಯರುಗಳು ಮತ್ತಿತರರು ಕಾರ್ಯಕ್ರಮದಲ್ಲಿದ್ದರು.
Chikmagalur
ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
ಚಿಕ್ಕಮಗಳೂರು : ಜಿಲ್ಲೆ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ಕಳೆದ ರಾತ್ರಿ ಹತ್ಯೆ ಮಾಡಲಾಗಿದೆ.
ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಂಜಯ್ ದಾಖಲಾಗಿದ್ದು, ಮಿಧುನ್ ವರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ನಲರಾಯಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ದತ್ತ ಜಯಂತಿ ಮುಗಿದ ಹಿನ್ನೆಲೆ ಸಖರಾಯಪಟ್ಟಣ ಬಸ್ ನಿಲ್ದಾಣ ಬಳಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮ್ಮೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ದುಷ್ಕರ್ಮಿಗಳು ಗಣೇಶ್ ಗೌಡ ಎಂಬುವವರನ್ನು ಹತ್ಯೆ ಮಾಡಿದ್ದಾರೆ.
ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಒಬ್ಬರು ಜಿಲ್ಲಾಪತ್ರೆಗೆ ದಾಖಲಾಗಿದ್ದಾರೆ.
Chikmagalur
ಬಿಜಿಎಸ್: ಚಿತ್ರಕಲೆಯಲ್ಲಿ ವರೇಣ್ಯ ಜಿಲ್ಲಾಮಟ್ಟಕ್ಕೆ ಆಯ್ಕೆ
ಚಿಕ್ಕಮಗಳೂರು: ಹಿರಿಯ, ಕಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯಲ್ಲಿ ನಗರದ ಆದಿಚುಂಚನಗಿರಿ ಬಡಾವಣೆಯಲ್ಲಿರುವ ಬಿಜಿಎಸ್ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದಲ್ಲಿ ಚಾಂಪಿಯನ್‌ಶಿಪ್ ಪಡೆದು, ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕಿರಿಯರ ವಿಭಾಗ
ಧಾರ್ಮಿಕ ಪಠಣ (ಅರೇಬಿಕ್)-ರೆಯಾನ್ ಪ್ರಥಮ, ಛದ್ಮವೇಷ ಜ್ಞಾನಪೂರ್ಣ ಪ್ರಥಮ, ಕಥೆಹೇಳುವುದು ತನಿಷ್ಕ್ ಪ್ರಥಮ, ಚಿತ್ರಕಲೆ ಗೌರಿ ಪ್ರಥಮ, ಧಾರ್ಮಿಕ ಪಠಣ(ಸಂಸ್ಕೃತ) ಚಿರದ್ವಿತ ದ್ವಿತೀಯ, ಆಶುಭಾಷಣ ಲೇಕ್ಷಿತ ದ್ವಿತೀಯ, ಕನ್ನಡ ಕಂಠಪಾಠ ವೈಭವಿ ತೃತೀಯ, ಕ್ಲೇ ಮಾಡಲಿಂಗ್ ದೈವಿಕ್ ತೃತೀಯ ಸ್ಥಾನ ಪಡೆದಿದ್ದಾರೆ.

ಹಿರಿಯರ ವಿಭಾಗ
ಭಕ್ತಿಗೀತೆಯಲ್ಲಿ ಭವ್ಯಾ ಪ್ರಥಮ, ಆಶುಭಾಷಣ ಸಮರ್ಥ್.ಕೆ.ಪಿಪ್ರಥಮ, ಚಿತ್ರಕಲೆ ವರೇಣ್ಯ ಪ್ರಥಮ, ಕನ್ನಡ ಕಂಠಪಾಠ ವನಶ್ರೀ ದ್ವಿತೀಯ, ಹಿಂದಿ ಕಂಠಪಾಠ ರುಕ್ಮಿಣಿ ದ್ವಿತೀಯ, ದೇಶಭಕ್ತಿಗೀತೆ ಭವ್ಯ.ಪಿ.ಜೆ ದ್ವಿತೀಯ, ಧಾರ್ಮಿಕ ಪಠಣ ಇನಿಕ ತೃತೀಯ ಸ್ಥಾನ ಪಡೆದಿರುತ್ತಾರೆ.
ಪ್ರೌಢಶಾಲಾ ವಿಭಾಗ
ಜಾನಪದ ಗೀತೆ ಹಾಗೂ ಕವನ ಪದ್ಯವಾಚನ ದ್ವಿತೀಯ ಸ್ಥಾನ ದರ್ಶಿನಿ ಪಿ.ಸಿ, ಜಾನಪದ ನೃತ್ಯ ಹೇಮಶ್ರೀ, ಡಿಂಪಲ್, ವಿದ್ಯಾ, ಪ್ರೀತಾ, ಶೈನಿತಾ, ಸಂಜನಾ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಭಾಗವಹಿಸಿ ಬಹುಮಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿಯವರು ಅಭಿನಂದನೆ ತಿಳಿಸಿದರು. ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜಿ.ಆರ್.ಚಂದ್ರಶೇಖರ್ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು.
Chikmagalur
ಮೊದಲು ಇಂಡಿಯಾ ಅಲೈಯನ್ಸ್ ನಿಂದ ಡಿಎಂಕೆಯನ್ನು ಹೊರಹಾಕಲಿ: ಸಿ.ಟಿ.ರವಿ
ಚಿಕ್ಕಮಗಳೂರು : ಸನಾತನ ಧರ್ಮವನ್ನು ಡೆಂಗ್ಯೂ-ಮಲೇರಿಯಾಗೆ ಹೋಲಿಸಿದ ಡಿಎಂಕೆಯನ್ನು ಮೊದಲು ಇಂಡಿಯಾ ಅಲೈಯನ್ಸ್ ನಿಂದ ಹೊರಹಾಕಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ದ್ವೇಷ ಭಾಷಣದ ವಿರುದ್ಧ ಮಸೂದೆ ಜಾರಿ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೊದಲು ಡಿಎಂಕೆಯನ್ನು ಹೊರಹಾಕಲಿ. ಅವರ ಜೊತೆ ಮೈತ್ರಿ ಮಾಡಿಕೊಂಡವರಿಗೆ ಮಸೂದೆ ತರುವ ನೈತಿಕತೆ ಏನಿದೆ? ಇವರಿಗೆ ತಾಕತ್ತಿದ್ದರೆ, ದ್ವೇಷವನ್ನೇ ಹುಟ್ಟಿಕೊಂಡು ಹುಟ್ಟಿರೋ ಮತ-ಮತಗ್ರಂಥಗಳನ್ನ ನಿಷೇಧಿಸಲಿ. ಮತಗ್ರಂಥಗಳ ಹೆಸರಲ್ಲಿ ಎಷ್ಟು ಭಯೋತ್ಪಾದನೆ ನಡೆದಿದೆ, ಎಳೆ ಮಕ್ಕಳಿಗೆ ದ್ವೇಷ ಕಲಿಸುತ್ತಿದ್ದಾರೆ. ಅವರ ಕೃತ್ಯಗಳನ್ನು ಎಲ್ಲವನ್ನೂ ಬಿಚ್ಚಿಡುತ್ತೇವೆ, ಇವರಿಗೆ ಧಮ್ ಇದ್ದರೆ ಆ ಮತಗಳು-ಮತಗ್ರಂಥಗಳನ್ನ ನಿಷೇಧಿಸಲಿ ಎಂದು ಕಿಡಿಕಾರಿದರು.

ಆಧಾರ ಸಹಿತ ನಿರೂಪಿಸಿದ ಮೇಲೆ ನಿಷೇಧ ಮಾಡಬೇಕಲ್ವಾ, ಹೇಳಿಕೊಡೋನ ಒದ್ದು ಒಳಗೆ ಹಾಕಬೇಕಲ್ವಾ, ಎಳೆ ಮಕ್ಕಳನ್ನೇ ಭಯೋತ್ಪಾದಕರನ್ನಾಗಿ ಮಾಡುವವರ ಒದ್ದು ಒಳಹಾಕಬೇಕಲ್ವಾ. ಧಮ್ ಇದ್ದರೆ ಮಾಡಲಿ, ಇಲ್ಲ ಇವರು ಹೇಡಿಗಳು, ಇವರಿಗೆ ಧಮ್ ಇಲ್ಲ ಅನ್ನೋದು ಅರ್ಥವಾಗುತ್ತದೆ. ಮಸೂದೆ ಸಂದರ್ಭ ಕೆಲ ವಿಚಾರಗಳನ್ನು ಚರ್ಚೆ ಮಾಡುತ್ತೇವೆ, ಅಲ್ಲೇ ಮಾತನಾಡೋದು ಸೂಕ್ತ. ಇಲ್ಲಿ ಎಲ್ಲವನ್ನೂ ಚರ್ಚೆ ಮಾಡೋದು ಸರಿಯಲ್ಲ, ಆಧಾರ ಸಹಿತವಾಗಿ ಅಲ್ಲೇ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
-
State8 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan4 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
State20 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Mysore22 hours agoನಾಳೆಯಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಉಚಿತ ಥೈರಾಯ್ಡ್ ತಪಾಸಣೆ
-
National21 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Hassan7 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Chikmagalur10 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Mysore2 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
