Connect with us

Mysore

ಚಾಮುಂಡಿ ಬೆಟ್ಟ ಚಲೋ ಮತ್ತು ಮಹಿಷ ದಸರಾ ಆಚರಣೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ

Published

on

ಮೈಸೂರು: ಕೆಲವು ದಿನಗಳಿಂದ ಬಹಳಷ್ಟು ವಾದ-ವಿವಾದಕ್ಕೆ ಕಾರಣವಾಗಿದ್ದ ಚಾಮುಂಡಿ ಬೆಟ್ಟ ಚಲೋ ಮತ್ತು ಮಹಿಷ ದಸರಾ ಆಚರಣೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ಮಹಿಷಾ ದಸರಾ ಆಚರಣೆ ಸಮಿತಿ ವತಿಯಿಂದ ಅ.13ರಂದು ಬೆಳಗ್ಗೆ 9.30ಕ್ಕೆ ಮಹಿಷನ ಪ್ರತಿಮೆಗೆ ಮುಷ್ಪಾರ್ಚನೆ ಮಾಡಿ ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯದ್ವಾರ ತಾವರೆಕಟ್ಟೆ ಬಳಿಯಿಂದ ಮೃಗಾಲಯ ರಸ್ತೆ ಮೂಲಕ ಮೆರವಣಿಗೆ ಸಂಚರಿಸಿ ಪುರಭವನದ ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಿ, ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಂಬಂಧ ಪೊಲೀಸ್ ಅನುಮತಿ ನೀಡುವಂತೆ ಮಹಿಷ ದಸರಾ ಸಮಿತಿ ಮನವಿ ಮಾಡಿತ್ತು.
ಮತ್ತೊಂದೆಡೆ ಭಾರತೀಯ ಜನತಾ ಪಾರ್ಟಿ ಮಹಿಷ ದಸರಾ ಆಚರಣೆ ವಿರೋಧಿಸಿ ಅಂದೇ ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮ ಹಮ್ಮಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮುಖೇನ ಹತ್ತುವುದು ಹಾಗೂ ವಾಹನಗಳಲ್ಲಿ ರಸ್ತೆಯ ಮುಖಾಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ಬೆಟ್ಟದಲ್ಲಿ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಅನುಮತಿ ನೀಡುವಂತೆ ಮನವಿ ಮಾಡಲಾಗಿತ್ತು.
ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗು ಅನುಮತಿ ನಿರಾಕರಿಸಲಾಗಿದೆ. ಈ ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದ್ದಲ್ಲಿ ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ನಿರಾಕರಿಸಿ ಆದೇಶ ಹೊರಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mysore

ಯೋಗ ಚಿಕ್ಕವರಿಂದ ಹಿಡಿದು ಹಿರಿಯರ ತನಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅವಶ್ಯಕ

Published

on

ಮೈಸೂರು: ಯೋಗ ಚಿಕ್ಕವರಿಂದ ಹಿಡಿದು ಹಿರಿಯರ ತನಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅವಶ್ಯವಾಗಿದೆ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರು ಹೇಳಿದರು.

ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಚೈತನ್ಯ ಯೋಗಾ ಎಜುಕೇಷನ್ ಅಂಡ್ ರಿಸರ್ಚ್ ಫೌಂಡೇಷನ್ 25 ನೇ ವಾರ್ಷಿಕೋತ್ಸವ ಮತ್ತು ರಾಷ್ಟ್ರಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗದ ನಿರಂತರ ಅಭ್ಯಾಸ ಮತ್ತು ಗುರುಗಳ ಪರಿಶ್ರಮದಿಂದ ವಿದ್ಯಾರ್ಥಿಗಳು ಯೋಗ ಸ್ಪರ್ದೇಯಲ್ಲಿ ಪಾಲ್ಗೂಗೋಳ್ಳತ್ತಿರುವ ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾಗಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು.

ಯೋಗಾ ಮತ್ತು ಧ್ಯಾನ ಪ್ರಸುತ್ತವಾಗಿ ಪ್ರಪಂಚದಲ್ಲಿ ಮನುಷ್ಯನಿಗೆ ಅವಶ್ಯಕವಾಗಿದೆ. ಮೈಸೂರಿನಲ್ಲಿ ಹಿಂದೆ ಕೇಲವೆ ಯೋಗಶಾಲೆಗಳು ಇದ್ದವು ಹಾಗೂ ರಾಮಕೃಷ್ಣ ಶಾಲೆಯಲ್ಲಿ ಮಾತ್ರ ಇತ್ತು ಆದರೆ ಈಗ ನಗರದಲ್ಲಿ ಅನೇಕ ಕೇಂದ್ರಗಳು ತೇರೆದು ಯುವಕರು ಮತ್ತು ಹಿರಿಯರು ಭಾಗವಹಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು.

ಕಲುಷಿತವಾದ ನೀರು ಏರುಪೇರಾದ ವಾತಾವರಣದಿಂದ ಜನರು ಅನಾರೋಗ್ಯಕ್ಕೆ ಬಲಿಯಾಗುತ್ತಿದ್ದಾರೆ. ಪ್ರತಿದಿನ ಯೋಗಾಭ್ಯಾಸದಲ್ಲಿ ತೋಡಗಿಕೋಳ್ಳವುದರಿಂದ ಮನಸಿನ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದು ಎಂದು ಹೇಳಿದರು.

ಜೀವನದಲ್ಲಿ ಆಡಬರದಲ್ಲಿ ಬದುಕುವುದು ಬೇಡ ಸರಳವಾಗಿ ಬದುಕುಬೇಕು ಅನೇಕ ಮಹಾನ್ ವ್ಯಕ್ತಿಗಳಾದ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ಅಂಬೇಡ್ಕರ್ ಅವರುಗಳ ಆದರ್ಶಗಳನ್ನು ಓದುವುದರ ಜೊತೆಗೆ ಜೀವನದಲ್ಲಿ ಆಳವಡಿಸಿಕೊಂಡು ಬದುಕಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಲೆ ಸಾಹಿತ್ಯಕ್ಕೆ ಮೈಸೂರು ಮಹಾರಾಜರ ಕೊಡುಗೆ ಆಪಾರ ಜಗನ್ಮೋಹನ ಅರಮನೆಯನ್ನು ಕಟ್ಟಿಸಿರುವುದರಿಂದ ಮೈಸೂರಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಾಡುವುದಕ್ಕೆ ಉತ್ತಮವಾಗಿದೆ ಎಂದು ಹೇಳಿದರು.

ಭಾರತ ದೇಶದಲ್ಲಿ ಮೋದಿಯವರು ಪ್ರಾಧಾನ ಮಂತ್ರಿಯಾದ ನಂತರ ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ಕೊಟ್ಟು ಆವರು ಯೋಗಾದಲ್ಲಿ ಪ್ರತಿನಿತ್ಯ ತೋಡಗಿಸಿಕೊಂಡ್ಡಿದ್ದರೆ ಹಾಗೂ ಪ್ರಂಪಚಕ್ಕೆ ಯೋಗಾ ಪ್ರಾಮುಖ್ಯತೆಯನ್ನು ತಿಳಿಸಿರುವುದು ಭಾರತ ವಿಶ್ವಗುರುವಾಗಿದೆ ಎಂದರು.

25 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚೈತನ್ಯ ಯೋಗ ಎಜುಕೇಷನ್ ಅಂಡ್ ರಿಸರ್ಚ ಫೌಂಡೇಷನ್ಗೆ ಹೀಗೆ ಸಾಧನೆಯನ್ನು ಮುಂದುವರೆಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭಾಷಯ ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ರಾಮಕೃಷ್ಣ ಆಶ್ರಮದ ಸಂಚಾಲಕರಾದ ಪೂಜ್ಯ ಮಹಾಮೇಧಾನಂದಾಜಿ ಮಹಾರಾಜ್ ಸ್ವಾಮೀಜಿ ಮಾತನಾಡಿ ಭಾರತ ಪ್ರಂಪಚಕ್ಕೆ ವಿಶ್ವಗುರವಾಗಿತ್ತು ಮತ್ತೆ ಸ್ಥಾನವನ್ನು ಪಡೆಯಬೇಕು. ನಮ್ಮ ದೇಶ ಸಂಪತ್ತಿನಿಂದ ಮಾತ್ರ ಶ್ರೀಮಂತವಾಗಿರದೆ.ಜ್ಞಾನದಲ್ಲೂ ಪ್ರಂಪಚದಲ್ಲಿ ಶ್ರೀಮಂತವಾಗಿತ್ತು. ಅನೇಕ ದೇಶಗಳಿಂದ ಭಾರತಕ್ಕೆ ವ್ಯಕ್ತಿಗಳು ಜ್ಞಾನವನ್ನು ತಿಳಿಯಲು ಬರುತ್ತಿದ್ದರು ಎಂದು ತಿಳಿಸಿದರು.

ಜ್ಞಾನದ ಸಂಪತ್ತುನ್ನು ಭಾರತದಲ್ಲಿ ಅನೇಕ ತಲೆಮಾರುಗಳಿಂದ ಉಳಿಸಿಕೊಂಡು ಬಂದಿರುವುದಕ್ಕೆ ಯೋಗಾ ಉದಾಹರಣೆಯಾಗಿದೆ ಎಂದರು.

ವಿದೇಶಿಗರು ಹೆಚ್ಚು ಯೋಗಾವನ್ನು ಕಲಿಯುತ್ತಿದ್ದಾರೆ ಆದರೆ ನಮ್ಮ ದೇಶದ ಜನರಿಗೆ ಯೋಗಾದಿಂದ ಆಗುವ ಪ್ರಯೋಜನದ ಬಗ್ಗೆ ಹರಿವಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಪೋಷಕರು ಮಕ್ಕಳಿಗೆ ಮಾತ್ರ ಯೋಗಾವನ್ನು ಕಲಿಸುತ್ತಿಸದ್ದಾರೆ ಆದರೆ ತಾವುಗಳು ಕಲಿಯುತ್ತಿಲ್ಲ ಅವರು ಕೂಡ ಮಕ್ಕಳಿಂದ ಯೋಗವನ್ನು ಮನೆಯಲ್ಲಿ ಕಲಿತು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಯೋಗಾವನ್ನು ಪ್ರತಿದಿನ ಅಭ್ಯಾಸ ಮಾಡಿಕೊಳ್ಳವುದರಿಂದ ಉತ್ತಮ ಆರೋಗ್ಯ ನೆಮ್ಮದಿ ಹಾಗೂ ಸಂತೋಷವನ್ನು ಪಡೆಯಬಹಿದಾಗಿದೆ ಹಾಗೂ ಜೀವನದಲ್ಲಿ ಹಲವು ಬದಲಾವಣೆಗಳು ಉಂಟಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಉತ್ತಮ ಸಮಾಜ ನಿರ್ವಹಣೆ ಮಾಡಬೇಕು ಎಂದರೆ ಮನುಷ್ಯರಲ್ಲಿ ಮಾನಸಿಕ ಆರೋಗ್ಯ ಉತ್ತಮವಾಗಿ ಇರಬೇಕು. ಯಾವ ಸಮಾಜ ಹಣಕ್ಕಾಗಿ ಯಾವ ಕೆಲಸ ಮಾಡಲು ಸಿದ್ದವಾಗಿದೆಯೋ ಅದು ಅವನತಿಯತ್ತ ಸಾಗುತ್ತಿದೆ ಎಂದು ತಿಳಿಯಬಹುದು ಎಂದು ಹೇಳಿದರು

Continue Reading

Mysore

ಜಾತಿ ಬೇಧಗಳನ್ನು ತೊರೆದು ಬೆಳಕನ್ನು ತರುವ ಕಾರ್ಯವನ್ನು ವೇಮನ ಮಾಡಿದ್ದಾರೆ: ಸಿ.ಎನ್ ಮಂಜೇಗೌಡ

Published

on

ಮೈಸೂರು: ಸಮಾಜದ ಪರಿವರ್ತನೆಗೆ ತಮ್ಮ ವಿಚಾರಧಾರೆಗಳ ಮೂಲಕ ಬೆಳಕ್ಕನ್ನು ಚೆಲ್ಲಿರುವ ವೇಮನ ಅವರ ಜಯಂತಿಯನ್ನು ನಾನು ಬಹಳ ಸಂತೋಷದಿಂದ ಉದ್ಘಾಟನೆ ಮಾಡುತ್ತಿದ್ದೇನೆ ಎಂದು ವಿಧಾನ ಪರಿಷತ್ ಶಾಸಕರಾದ ಸಿ.ಎನ್. ಮಂಜೇಗೌಡ ಅವರು ಹೇಳಿದರು.

ಇಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಕಲಾಮಂದಿರ ಆವರಣದ ಕಿರುರಂಗಮಂದಿರಲ್ಲಿ ಹಮ್ಮಿಕೊಂಡಿದ್ದ, ವೇಮನ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜವನ್ನು ಒಳ್ಳೆಯಾದರಿಗೆ ತರುವಂತಹ ಕೆಲಸವನ್ನು ವೇಮನ ಅವರು ಮಾಡಿದ್ದಾರೆ. ಜಾತಿ ಬೇಧಗಳನ್ನು ತೊರೆದು ಕತ್ತಲನ್ನು ಬೆಳಗಿಸಿ, ಬೆಳಕನ್ನು ತರುವಂತಹ ಕಾರ್ಯವನ್ನು ವೇಮನ ಅವರು ಮಾಡಿದ್ದಾರೆ ಎಂದು ಹೇಳಿದರು.

ಪುಸ್ತಕದ ಮೂಲಕ ಎಲ್ಲಾ ರೀತಿಯ ವಿಚಾರ ಧಾರೆಗಳನ್ನು ನೀಡುವುದರ ಮೂಲಕ ಸಮಾಜವನ್ನು ಪರಿವರ್ತನೆ ಮಾಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದರು.

ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಪಿ. ಶಿವರಾಜು ಅವರು ಮಾತನಾಡಿ ಮಹಾಯೋಗಿ ವೇಮನ ಅವರು ನಮ್ಮ ಇಡೀ ದೇಶಕ್ಕೆ ನೀಡಿರುವಂತಹ ಆದರ್ಶಗಳು ಬಹಳ ಸತ್ಯವಾಗಿವೆ ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯ ಕಾರ್ಯಕ್ರಮವನ್ನು ಆಚರಿಸುತ್ತಾ ಇರುವುದು ಸಂತೋಷವನ್ನು ನೀಡುತ್ತದೆ ಎಂದು ಹೇಳಿದರು.

ಎಲ್ಲರೂ ಸಹ ಸಮಾನರು , ಯಾವುದೇ ಜಾತಿ ಬೇಧ ಇಲ್ಲದೆ ನಾವೆಲ್ಲರೂ ಒಂದು ಎಂಬುದನ್ನು ನಮಗೆ ತಿಳಿಸಿಕೊಟ್ಟಿರುವಂತಹ ವೇಮನಂತಹ ಮಹಾನ್ ದಾರ್ಶನಿಕರು ನಮಗೆ ದಾರಿದೀಪ ವಾಗಿದ್ದಾರೆ ಎಂದು ಹೇಳಿದರು.

ಬರೀ ನಾವು ಮಾತ್ರ ಜಯಂತಿಯನ್ನು ಆಚರಿಸುತ್ತೇವೆ ಎಂದು ಹೇಳದೆ ನಾವೆಲ್ಲರೂ ಸೇರಿ ಜಯಂತಿಯನ್ನು ಆಚರಿಸುತ್ತೇವೆ ಎಂಬ ಪರಿಕಲ್ಪನೆ ನಮ್ಮಲ್ಲಿ ಬರಬೇಕು ಎಂದು ತಿಳಿಸಿದರು.

ಸಾಹಿತ್ಯ ಎಂಬುದರಲ್ಲಿ ಒಂದು ವಿಶೇಷವಾದಂತಹ ಶಕ್ತಿ ಇದೆ. ಸಾಹಿತ್ಯವನ್ನು ಓದುವುದರಿಂದ ನಮ್ಮ ಜೀವನವನ್ನ ಯಾವ ರೀತಿ ಬದಲಾವಣೆ ಮಾಡಿಕೊಳ್ಳುತ್ತೇವೆ ಹಾಗೂ ಹೇಗೆ ನಮ್ಮ ಜೀವನವನ್ನು ರೂಪಿಸಿಕೊಳ್ಳುತ್ತೇವೆ ಎಂಬುದು ಬಹಳ ದೊಡ್ಡ ವಿಷಯವಾಗಿದೆ ಎಂದರು.

ಕೃಷ್ಣರಾಜನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಮೈಸೂರು ಕೃಷ್ಣಮೂರ್ತಿ ಅವರು ಮಾತನಾಡಿ ಭಾರತ ದೇಶವು ತತ್ವಜ್ಞಾನಿಗಳ ತವರು, ಭಾರತ ದೇಶದಲ್ಲಿ ಹುಟ್ಟಿರುವಂತಹ ತತ್ವಜ್ಞಾನಿಗಳು ಬೇರೆಲ್ಲೂ ಹುಟ್ಟಿಲ್ಲ ಬೇರೆ ಬೇರೆ ಕಾಲಘಟ್ಟಗಳಲ್ಲಿ ಕಾಣಿಸಿಕೊಂಡಿರುವಂತಹ ತತ್ವಜ್ಞಾನಿಗಳು ಈ ದೇಶವನ್ನು ಕಟ್ಟಿ ಬೆಳೆಸುವುದಕ್ಕೆ ಕೊಟ್ಟಿರುವಂತಹ ಕೊಡುಗೆ ಅಪಾರವಾಗಿದೆ. ಅವರಲ್ಲಿ ವೇಮನ ನಂತಹ ಸರ್ವಜ್ಞರು ಕೂಡ ನಮ್ಮ ದೇಶಕ್ಕೆ ಅಪಾರವಾದಂತದ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.

ವೇಮನ ಅವರು ನಮಗೆ ವ್ಯಕ್ತಿ ಶೀಲವನ್ನು ಹೇಳಿಕೊಟ್ಟಿದ್ದಾರೆ, ಜೊತೆಗೆ ಸಮಾನತೆ , ಮತ್ತು ಸತ್ಯ ಎಂಬ ಎರಡು ತತ್ವವನ್ನು ನೀಡಿದ್ದಾರೆ. ಎಲ್ಲಾ ಕಾಲವೂ, ಎಲ್ಲ ಸಮಾಜವು ನೆಮ್ಮದಿಯಿಂದ ಇರಲು ಈ ಎರಡು ತತ್ವಗಳು ಸಾಕು ಎಂದು ವೇಮನ ಅವರು ನಮಗೆ ತಿಳಿಸಿದ್ದಾರೆ ಇದಕ್ಕಿಂತ ನಮಗೆ ಇನ್ನೇನು ಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ. ಎನ್.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ ಸುದರ್ಶನ್, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಬಳಗದ ಅಧ್ಯಕ್ಷರಾದ ಡಾ. ಬಿ.ಎಂ ವಾಮದೇವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Continue Reading

Mysore

ಫೆಬ್ರವರಿ 10 ರಿಂದ 12 ರವರೆಗೆ ತಿ.ನರಸೀಪುರ ಕುಂಭಮೇಳ

Published

on

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ ನರಸೀಪುರದ ತ್ರಿವೇಣಿ ಸಂಗಮದ ಬಳಿ ಕುಂಭಮೇಳ 2025 ನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು

ಇಂದು ಕುಂಭ ಮೇಳ -2025 ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆಬ್ರವರಿ 10 ರಿಂದ 12 ಈವರೆಗೆ ಟಿ ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಅವರು ಮಾತನಾಡಿ 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11 ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಚತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.

ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು 1989 ರಿಂದ ಕುಂಭಮೇಳ ಆಚರಣೆ ಪ್ರಾರಂಭವಾಯಿತು. ಪ್ರತಿ 3 ವರ್ಷಕ್ಕೆ ಒಮ್ಮೆ ನಡೆಯುತ್ತದೆ. 2019 ರಲ್ಲಿ ನಡೆಯಿತು. ಕೋವಿಡ್ ಇದ್ದುದರಿಂದ 2021 ರಲ್ಲಿ ಕುಂಭಮೇಳ ನಡೆಯಲಿಲ್ಲ. ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!