Mysore
ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸದೆ ವಂಚನೆ ಮಾಡಿದ್ದಾರೆ – ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಮೈಸೂರು : ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸದೆ ವಂಚನೆ ಮಾಡಿದ್ದಾರೆ. ಇಬ್ಬರೂ ನುಡಿದಂತೆ ನಡೆದಿಲ್ಲ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದರು.
ಕಾಂತರಾಜು ವರದಿ ಜಾರಿ ಮಾಡಬೇಕು. 2ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ ನಗರದ ಎಫ್ಟಿಎಸ್ ವೃತ್ತದ ಅಂಬೇಡ್ಕರ್ ಪ್ರತಿಮೆ ಎದುರು ಎಸ್ಡಿಪಿಐ ನಡೆಸಿದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ಮುಸ್ಲಿಂ ಮತ್ತು ದಲಿತ ಸಮುದಾಯ ಪ್ರಮುಖ ಕಾರಣವಾಗಿದೆ. ಚುನಾವಣೆ ವೇಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಮೊದಲ ಕ್ಯಾಬಿನೆಟ್ನಲ್ಲೇ ಬಿಜೆಪಿ ರದ್ದುಪಡಿಸಿದ್ದ 2ಬಿ ಮೀಸಲಾತಿ ಪುನರ್ ಪ್ರತಿಷ್ಠಾಪನೆ ಮಾಡುವುದಾಗಿ ಹೇಳಿದ್ದರು. ಈಗ 10 ಕ್ಯಾಬಿನೆಟ್ಮೀಟಿಂಗ್ ಆದರೂ ಅದರ ಬಗ್ಗೆ ಪ್ರಸ್ತಾವನೆಯನ್ನೂ ಮಾಡಿಲ್ಲ. ಕೇಳಿದರೆ ಪ್ರಕರಣ ನ್ಯಾಯಾಲಯದಲ್ಲಿದೆ ಎನ್ನುತ್ತೀರಿ. ಆದರೇ, ಮತಾಂತರ ನಿಷೇದ ಕಾಯ್ದೆಪ್ರಕರಣವೂ ನ್ಯಾಯಾಲಯದಲ್ಲಿತ್ತು.ಅದನ್ನು ಸಂಪುಟ ಸಭೆಗೆ ತಂದು ಕಾಯ್ದೆ ರದ್ದು ಮಾಡಿದ್ದು ಹೇಗೆ? ಇದನ್ನೂ ಹಾಗೆಯೇ ಮಾಡಿ ಸುಖಾ ಸುಮ್ಮನೆ ಮುಸ್ಲಿಂ ಸಮುದಾಯವನ್ನು ವಂಚಿಸಬೇಡಿ ಎಂದು ಹರಿಹಾಯ್ದರು.
ಅಲ್ಪಸಂಖ್ಯಾತ ಮುಸ್ಲೀಂ ಸಮುದಾಯಕ್ಕೆ 30 ವರ್ಷಗಳಿಂದ ನೀಡಲಾಗಿದ್ದ 2ಬಿ ಮೀಸಲಾತಿ ಪುನರ್ ಪ್ರತಿಷ್ಠಾಪಿಸುವಂತೆ ಕಾಂಗ್ರೆಸ್ ಸರ್ಕಾರದಲ್ಲಿರುವ ಇಬ್ಬರು ಮುಸ್ಲಿಂ ಮಂತ್ರಿಗಳು ಸೇರಿದಂತೆ 9 ಶಾಸಕರಿಗೆ ಕೇಳುವ ಧೈರ್ಯ ಇಲ್ಲದಿರುವುದು ನಾಚಿಕೆಗೇಡು. ಅವರೆಲ್ಲರೂ ನಾಮರ್ಧರು ಎಂದುಕಿಡಿ ಕಾರಿದರು.
ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಕಾಂತರಾಜು ವರದಿ ಅಂಗೀಕರಿಸದೆ, ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ವರದಿ ಅಂಗೀಕರಿಸಲಿಲ್ಲ ಎಂದು ಆರೋಪಿಸುವ ಸಿಎಂ, ಆ ವೇಳೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು. ಯಾವ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಮಾಡಲಾಗಿತ್ತು ಎಂದು ಬಹಿರಂಗ ಮಾಡಲಿ. ಹೆಚ್ಡಿಕೆ ಸಿದ್ದರಾಮಯ್ಯ ಮೇಲೆ, ಸಿದ್ದರಾಮಯ್ಯ ಹೆಚ್ಡಿಕೆ ಮೇಲೆ ಆರೋಪ ಮಾಡುತ್ತಾ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ನಿಮಗೆ ದಮ್ಮು, ತಾಕತ್ತು ಇದ್ದರೆ ಕಾಂತರಾಜು ವರದಿ ಅಂಗೀಕರಿಸಿ ಅದಕ್ಕೆ ಅನುಗುಣವಾಗಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಕ್ಕೆ ಸೂಕ್ತ ಸೌಲಭ್ಯ ಕಲ್ಪಿಸಿ ಎಂದು ಅಬ್ದುಲ್ ಮಜೀದ್ ಸವಾಲು ಹಾಕಿದರು.
ಬಿಜೆಪಿ ಐಟಿ ಸೆಲ್ ಭಯ : ಒಂದು ವೇಳೆ ಕಾಂತರಾಜು ವರದಿ ಅಂಗೀಕರಿಸಿ ಸಮುದಾಯಗಳಿಗೆ ಅನುಕೂಲ ಮಾಡಿದ್ದಲ್ಲಿ ಮುಸ್ಲಿಂ ತುಷ್ಠೀಕರಣ ಎಂದು ಬಿಜೆಪಿ ಐಟಿ ಸೆಲ್ ಗುಲ್ಲೆಬ್ಬಿಸುತ್ತದೆ ಎಂಬ ಭಯ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಕಾಡುತ್ತಿದೆ. ಆದರೇ, ಜನ ಜಾಗೃತರಾಗಿದ್ದಾರೆ. ಕಳೆದ ಬಾರಿ ಕೋಮುವಾದಿ ಸರ್ಕಾರದಿಂದ ತೀವ್ರ ಅನ್ಯಾಯಕ್ಕೆಒಳಗಾಗಿದ್ದ ಮುಸ್ಲಿಂ ಮತ್ತು ದಲಿತ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತ್ತು. ಮುಂದಿನ ಚುನಾವಣೆಯಲ್ಲಿ ನೀವು ಈ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸದಿದ್ದಲ್ಲಿ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂಬುದು ನೆನಪಿರಲಿ ಎಂದು ಎಚ್ಚರಿಕೆ ನೀಡಿದರು.
ಬಿಹಾರದಲ್ಲಿ ಜಾತಿ ಗಣತಿ ವರದಿ ಪ್ರಕಟವಾಗಿದೆ. ಕಾಂಗ್ರೆಸ್ ಕೂಡ ತಾನು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ಮಾಡಿಸುವುದಾಗಿ ಹೇಳಿದೆ. ಆದರೇ ರಾಜ್ಯದಲ್ಲಿ ಈಗಾಗಲೇ ವರದಿ ತಯಾರಾಗಿದೆ. ಇದನ್ನು ಅಂಗೀಕರಿಸಿ ತುಳಿತಕ್ಕೆ ಒಳಗಾದ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕು. ಅಲ್ಲಿಯ ತನಕವೂ ಎಸ್ಡಿಪಿಐ ರಾಜ್ಯವ್ಯಾಪಿ ಜನ ಜಾಗೃತಿ ಮೂಡಿಸಿ ಹೋರಾಟ ನಡೆಸುತ್ತದೆ ಎಂದು ಮಜೀದ್ ಹೇಳಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ದೇವನೂರು ಪುಟ್ಟನಂಜಯ್ಯ, ಹರಿಹರ ಆನಂದಸ್ವಾಮಿ, ಮೌಲಾನ ನೂರುದ್ದೀನ್, ರಫತ್ ಖಾನ್,ತನ್ವೀರ್ ಪಾಷ, ಅಲ್ತಾಫ್ ಅಹಮದ್, ಸ್ವಾಮಿ ಮುಂತಾದವರು ಇದ್ದರು.
ಮುಸ್ಲಿಂ ಬೆಂಬಲದಿಂದ ಗೆದ್ದ ಶ್ಯಾಮನೂರು
ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಗೆಲ್ಲಲು 51 ಸಾವಿರ ಮುಸ್ಲಿಂ ಮತಗಳು ಕಾರಣ, ಆದರೇ ಅವರೀಗ ತಮ್ಮ ಸಮುದಾಯದ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ತಮ್ಮನ್ನು ಗೆಲ್ಲಿಸಿದ ಮುಸ್ಲಿಂ ಮತ್ತು ದಲಿತ ಸಮುದಾಯದ ಬಗ್ಗೆ ಅವರು ಚಕಾರೆ ಎತ್ತಿಲ್ಲ.ಸಮುದಾಯದ ಜನರು ಇದನ್ನು ಅರ್ಥ ಮಾಡಿಕೊಂಡು ಮುಂದಿನ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕು.
ಅಬ್ದುಲ್ ಮಜೀದ್.ರಾಜ್ಯಾಧ್ಯಕ್ಷರು.ಎಸ್ಡಿಪಿಐ.
Mysore
ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು : ಹಲವು ಕ್ರೀಡೆಗಳ ಜೊತೆಗೆ ಕುಸ್ತಿ ಪಂದ್ಯಾವಳಿಗಳಿಗೆ ಹೆಸರುವಾಸಿಯಾಗಿದೆ ಶಾಸಕ ದರ್ಶನ್ ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಪುರುಷರು ಮತ್ತು ಮಹಿಳೆಯರ ಹೊನಲು -ಬೆಳಕಿನ ಎರಡು ದಿನಗಳ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ನಗರದಲ್ಲಿ ಕುಸ್ತಿ ಪಂದ್ಯಾವಳಿ ಆ ಯೋಜನೆ ಮಾಡುವಂತೆ ಕಳೆದ ಎರಡು ವರ್ಷಗಳಿಂದ ಹೇಳುತ್ತಿದ್ದರು. ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಂದ್ಯಾವಳಿ ಅನುಕೂಲವಾಗಿದೆ. ನಾನು ಕೂಡ ಕ್ರೀಡಾಭಿಮಾನಿಯಾಗಿ ಪ್ರೋತ್ಸಾಹ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳನ್ನು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಉರಿಲಿಂಗ ಪೆದ್ದಿ ಮಠದ ಪೀಠಾಧ್ಯಕ್ಷ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ಕುಸ್ತಿ ಪಂದ್ಯಾವಳಿ ಒಂದು ಜನಪದ ಶೈಲಿ ಕ್ರೀಡೆಯಾಗಿದೆ. ಇಂತಹ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರತಿ ವರ್ಷ ಇಂತಹ ಕ್ರೀಡೆಗಳು ನಡೆಯಬೇಕು. ದಿ. ಧ್ರುವ ನಾರಾಯಣ್ ರವರಂತೆ ದರ್ಶನ್ ಕೂಡ ಇಂತಹ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮೈಸೂರಿನ ಮಾಜಿ ಮಹಾಪೌರರಾದ ಪುರುಷೋತ್ತಮ್, ಕಳಲೆ ಕೇಶವಮೂರ್ತಿ, ರಾಂಬೊ ಕಿರಣ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತೊರೆಮಾವು ಟಿ .ಡಿ.ಗಿರೀಶ್, ಸುಂದರ್ ರಾಜ್, ರಾಜೇಶ್, ಪರಮೇಶ್, ಈಶ್ವರ್, ಕೃಷ್ಣಪ್ಪ, ಗಿರೀಶ್ ಹಾಜರಿದ್ದರು.
Mysore
ಉದಯಗಿರಿಯ ನೂತನ ಪೊಲೀಸ್ ಠಾಣೆ ಉದ್ಘಾಟಿಸಿದ ಡಾ.ಜಿ.ಪರಮೇಶ್ವರ್
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ವ್ಯಾಪ್ತಿ ದೊಡ್ಡದಾಗಿದ್ದು, ಠಾಣೆಯನ್ನು ಎರಡು ವಿಭಾಗ ಮಾಡಿ ಹೊಸ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ನಗರದ ಸಿದ್ದಾರ್ಥನಗರದಲ್ಲಿ ನಿರ್ಮಿಸಿರುವ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಈಗ ಇರುವ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಪೊಲೀಸ್ ಠಾಣೆಯ ವ್ಯಾಪ್ತಿಯನ್ನು ವಿಭಾಗಿಸಿ ಹೊಸ ಪೊಲೀಸ್ ಠಾಣೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಪ್ರತಿಯೊಂದು ಪೊಲೀಸ್ ಠಾಣೆಯೂ ದೇವಸ್ಥಾನ ಎಂದು ನಾವು ತಿಳಿದುಕೊಳ್ಳಬೇಕು. ಜನ ಸ್ನೇಹಿಯಾಗಿ ಪೊಲೀಸ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ದೇಶದಲ್ಲೇ ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮವು ಯಶಸ್ವಿಯಾಗಿದ್ದು, ರಾಜ್ಯವು 3ನೇ ಸ್ಥಾನವನ್ನು ಪಡೆದುಕೊಂಡಿದೆ ಎಂದರು.

ಸುರಕ್ಷತೆ ಹೆಚ್ಚಲಿ: ಮೈಸೂರು ಪಾರಂಪರಿಕತೆ ಹಾಗೂ ಇತಿಹಾಸಕ್ಕೆ ಹೆಸರುವಾಸಿಯಾಗಿದೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸಿ ಪ್ರವಾಸಿಗರು ಇನ್ನು ಹೆಚ್ಚು ಬೇಟಿ ನೀಡುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು, ಸಾರ್ವಜನಿಕರೂ ಸಹಕರಿಸಬೇಕೆಂದು ಮನವಿ ಮಾಡಿದರು.
ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯ ಲಕ್ಷಿö್ಮಪುರಂ ಠಾಣೆ ವ್ಯಾಪ್ತಿಯ ವಿಸ್ತೀರ್ಣ ದೊಡ್ಡದಾಗಿದೆ. ಹೀಗಾಗಿ ಕುವೆಂಪು ನಗರ ಭಾಗಕ್ಕೆ ಒಂದು ಸಂಚಾರ ಪೊಲೀಸ್ ಠಾಣೆಯನ್ನು ನಿರ್ಮಿಸಿಕೊಡಬೇಕು. ಇಂದು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದರಿಂದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಬೇಕು ಎಂದು ಹೇಳಿದರು.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಇಂದು ವ್ಯಸನ ಮುಕ್ತದ ಜತೆಗೆ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು.
ಶಾಸಕ ಅನಿಲ್ ಕುಮಾರ್ ಮಾತನಾಡಿ, ಎಚ್.ಡಿ.ಕೋಟೆ ತಾಲೂಕಿಗೂ ಹೆಚ್ಚಿನ ಪೊಲೀಸ್ ಠಾಣೆಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ತು ಸದಸ್ಯ ಸಿ.ಎನ್. ಮಂಜೇಗೌಡ, ಮೈಲ್ಯಾಕ್ ಅಧ್ಯಕ್ಷ ಎಚ್.ಡಿ.ಗಣೇಶ್, ದಕ್ಷಿಣ ವಲಯ ಮಹಾನಿರೀಕ್ಷಕ ಡಾ.ಬೋರಲಿಂಗಯ್ಯ ಎಂ.ಬಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿಸಿಪಿ ಕೆ.ಎಸ್.ಸುಂದರ್ ರಾಜ್ ಉಪಸ್ಥಿತರಿದ್ದರು.
Mysore
ವಿದ್ಯಾರ್ಥಿಗಳು ನಿಶ್ಚಲ ಗುರಿಯೊಂದಿಗೆ ಸಾಗಿದರೆ ಸಾಧನೆ ಸಾಧ್ಯವಾಗುತ್ತದೆ: ಟಿ.ಜಿ.ಸುರೇಶ್ ಆಚಾರ್
ತಿ.ನರಸೀಪುರ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಧನೆ ಮಾಡಬೇಕಿದ್ದಲ್ಲಿ ಸಮಯ, ಪರಿಸ್ಥಿತಿ ಮತ್ತು ಪ್ರಭಾವಕ್ಕೆ ತಕ್ಕಂತೆ ತಮ್ಮ ಗುರಿಯನ್ನು ಬದಲಾಯಿಸದೆ ನಿಶ್ಚಲ ಗುರಿಯೊಂದಿಗೆ ಸಾಗಿದರೆ ಸಾಧನೆ ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್ ಟಿ.ಜಿ.ಸುರೇಶ್ ಆಚಾರ್ ತಿಳಿಸಿದರು.
ಪಟ್ಟಣದ ಗುರುಭವನದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.

ಸೈನಿಕ,ರಾಜಕಾರಣಿ,ಶಿಕ್ಷಕ,ವೈದ್ಯ, ಐಪಿಎಸ್ ಕೊನೆಪಕ್ಷ ರೈತನಾಗಬೇಕಾದರೂ ತಮ್ಮ ಜೀವನದಲ್ಲಿ ಕಟ್ಟುನಿಟ್ಟಾದ ಶಿಸ್ತನ್ನು ಪರಿಪಾಲನೆ ಮಾಡಬೇಕು. ಜತೆಗೆ ಏಕಾಗ್ರತೆ, ಸಂಯಮ, ನಿರಂತರ ಕಲಿಕೆ, ಅಭ್ಯಾಸ ಮತ್ತು ಅಚಲ ಗುರಿಯನ್ನು ಪಾಲನೆ ಮಾಡಿದರೆ ಯಶಸ್ಸು ಕಾಣಬಹುದು ಎಂದು ಹೇಳಿದರು.
ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಮಯ, ಸಂದರ್ಭ ಮತ್ತು ಪ್ರಭಾವಕ್ಕೆ ತಕ್ಕಂತೆ ಗುರಿಯನ್ನು ಬದಲಾವಣೆ ಮಾಡಿಕೊಳ್ಳುತ್ತಿರುವುದರಿಂದ ಯಶಸ್ಸು ಕಾಣುವುದರಲ್ಲಿ ಹಿನ್ನೆಡೆಯಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ದೆಸೆಯಿಂದಲೇ ತಮ್ಮ ಗುರಿಯನ್ನು ನಿಗದಿ ಮಾಡಿಕೊಳ್ಳಬೇಕು.ಕಠಿಣ ಪರಿಶ್ರಮ, ನಿರಂತರ ಪ್ರಯತ್ನದಿಂದ ಸಾಧನೆ ಮಾಡಬಹುದು ಎಂದರು.

ಸಿಡಿಪಿಒ ಗೋವಿಂದರಾಜು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಾವು ಏನು ಮಾಡಬೇಕು ಅನ್ನುವುದಕ್ಕಿಂತ ಏನನ್ನು ಮಾಡಬಾರದು ಎಂಬುದಷ್ಟೇ ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳು ಅಭ್ಯಾಸಕ್ಕೆ ನಿರ್ದಿಷ್ಟ ಸಮಯ ನಿಗದಿ ಪಡಿಸಿಕೊಳ್ಳಬೇಕು. ಆ ಸಮಯವನ್ನು ಅಭ್ಯಾಸಕ್ಕೆ ಮಾತ್ರ ಮೀಸಲಿರಿಸಬೇಕು ಎಂದು ಸಲಹೆ ನೀಡಿದರು.
ಇಂದಿನ ಯುವ ಸಮೂಹ ಮೊಬೈಲ್ ಗೀಳಿಗೆ ಬಿದ್ದು ಸಮಾಜ ಸ್ವಾಸ್ತ್ಯ ಮತ್ತು ವೈಯುಕ್ತಿಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆಧುನಿಕ ಕಾಲಘಟ್ಟದಲ್ಲಿ ಸೌಲಭ್ಯಗಳ ವಿಪುಲವಾಗಿವೆ. ಯುವ ಸಮೂಹ ಸೌಲಭ್ಯಗಳ ಸದ್ಬಳಕೆಯಲ್ಲಿ ಸೋತಿದೆ. ಇಂದಿನ ಶಿಕ್ಷಣ ಪದ್ದತಿ ಉತ್ತಮ ಫಲಿತಾoಶ ನೀಡುತ್ತಿದೆ. ಆದರೆ, ಯುವ ಜನಾಂಗ ಶಿಕ್ಷಣದ ಜತೆಗೆ ಸ್ಪರ್ಧಾತ್ಮಕ ಮನೋವೃತ್ತಿಯನ್ನು ರೂಢಿಸಿಕೊಳ್ಳುವುದರಲ್ಲಿ ಹಿಂದೆ ಬೀಳುವ ಮುಖೇನ ಸಾಧನೆ ಮಾಡುವಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತಾಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಕೆ. ರಂಗಸ್ವಾಮಿ, ಬಿಇಒ ಶಿವಮೂರ್ತಿ, ಬಿ ಆರ್ ಸಿ ನಾಗೇಶ್,ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜಣ್ಣ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕಿ ಶಾಂತ, ಹಿಂದುಳಿದ ವರ್ಗಗಳ ನಿಲಯ ಪಾಲಕಿ ವರಲಕ್ಷ್ಮಿ, ಸ್ಪರ್ಧಾತ್ಮಕ ಮತ್ತು ವೃತ್ತಿ ಮಾರ್ಗದರ್ಶನ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್, ಸಿರಿದೇವಿ, ಹಿಂದುಳಿದ ವರ್ಗಗಳ ನಿಲಯ ಮೇಲ್ವಿಚಾರಕರು, ವಿದ್ಯಾರ್ಥಿಗಳು ಹಾಜರಿದ್ದರು.
-
Chikmagalur16 hours agoವೈದ್ಯಕೀಯ ವಿಭಾಗದ ಕ್ಯಾಪ್ಟನ್ ಡಾ.ಸಾತ್ವಿಕ್ ಅರುಣ್ಗೆ ಅದ್ದೂರಿ ಸ್ವಾಗತ ಕೋರಿದ ಗ್ರಾಮಸ್ಥರು
-
Hassan12 hours agoಅಸಹಾಯಕ ಮಹಿಳೆಗೆ ಧಮ್ಕಿ ಹಾಕಿದ ಎಎಸ್ಐ ದೇವರಾಜ್
-
Special22 hours agoಪಿ ಎಂ ಆವಾಸ್ ಯೋಜನೆಯಿಂದ ಮನೆಕಟ್ಟಲು ಸಬ್ಸಿಡಿ!
-
State16 hours agoಉಳಿತಾಯದ ಹೂಡಿಕೆಗಳು MSIL ಸಂಸ್ಥೆಯಲ್ಲಿ ಸುಭದ್ರ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
-
Chamarajanagar18 hours agoಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ: ಹನೂರಿನ ಶಾಲೆಗಳಲ್ಲಿ ಅರಿವು ಮೂಡಿಸಿದ ರೈತ ದಂಪತಿ
-
Hassan13 hours agoರಾಷ್ಟ್ರೀಯ ಚಿಂತನೆ ಮೈಗೂಡಿಸಿಕೊಳ್ಳಿ : ಶಾಸಕ ಸಿಮೆಂಟ್ ಮಂಜು
-
Kodagu11 hours agoಕುಂದಚೇರಿ ಗ್ರಾ.ಪಂ. ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ
-
Hassan13 hours agoಮನೆಗಳ್ಳನ ಬಂಧನ : 140 ಗ್ರಾಂ.ಚಿನ್ನ ವಶ
