Location
ಮಕ್ಕಳು ನನ್ನ ನೋಡಿಕೊಳ್ಳುತ್ತಿಲ್ಲ; ಜನತ ದರ್ಶನದಲ್ಲಿ ಅಜ್ಜಿ ಕಣ್ಣೀರು

ಮೈಸೂರು : ಜನತಾ ದರ್ಶನದಲ್ಲಿ ಸಚಿವ ಮಹದೇವಪ್ಪ ಮುಂದೆ ಅಜ್ಜಿವೊಬ್ಬರು ಕಣ್ಣೀರಾಕಿದ್ದಾರೆ.
ಮೈಸೂರಿನ ರಾಜೇಂದ್ರ ನಗರ ಕೆಸರೆ ನಿವಾಸಿ ವೆಂಕಟಮ್ಮ 83 ರಿಂದ ಕಣ್ಣೀರು.
ನನ್ನ ಗಂಡು ಮಕ್ಕಳು ನನ್ನ ನೋಡಿಕೊಳ್ಳುತ್ತಿಲ್ಲ
ನನಗೆ 3 ಜನ ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು
ಗಂಡು ಮಕ್ಕಳು ನಂದು ಒಂದು ಕೋಟಿ ರೂಪಾಯಿ ಆಸ್ತಿ ತೆಗೆದುಕೊಂಡಿದ್ದಾರೆ.ನ್ಯಾಯಾಲಯ ಹೇಳಿದರೂ ನನ್ನನ್ನು ನೋಡಿಕೊಳ್ಳುತ್ತಿಲ್ಲ ಅಂತಾ ಅಲವತ್ತುಕೊಂಡ ಅಜ್ಜಿ
ತಕ್ಷಣ ಎಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಕರೆದು ಸೂಚನೆಅಜ್ಜಿಯ ಸಮಸ್ಯೆಯನ್ನು ಒಂದು ವಾರದಲ್ಲಿ ಬಗೆಹರಿಸುವಂತೆ ಸೂಚನೆ ನೀಡಿದ ಡಿಸಿ ಡಾ ಕೆ ವಿ ರಾಜೇಂದ್ರ.
ಚಾಮುಂಡಿಬೆಟ್ಟದಲ್ಲಿ ಕೆಲಸ ಮಾಡುತ್ತಿರುವ ಮಗ
ಐದು ಮಳಿಗೆಯನ್ನು ಹೊಂದಿದ್ದಾನೆ ಅಂತಾ ದೂರು
ಸದ್ಯ ಮಗಳ ಆಶ್ರಯದಲ್ಲಿರುವ
ವೆಂಕಟಮ್ಮ
Hassan
ಸತ್ಯಮಂಗಲದಲ್ಲಿ ನಮ್ಮ ಕ್ಲಿನಿಕ್ ಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ

ಹಾಸನ: ಹಾಸನ ನಗರದ ಹೋರ ವಲಯದ ಸತ್ಯ ಮಂಗಲ ಬಡಾವಣೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರು ನಮ್ಮ ಕ್ಲಿನಿಕ್ ಉದ್ಘಾಟಿಸಿದರು.
ಅದಕ್ಕೂ ಮುನ್ನ ಕ್ಲಿನಿಕ್ ನಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಆವರಣದಲ್ಲಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದ ಅವರು, ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಕ್ಲಿನಿಕ್ ಗೆ ಚಾಲನೆ ನೀಡಿದ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ಗ್ರಾಮಸ್ಥರು ಪ್ರೀತಿಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್, ಹಾಸನ ನಗರಸಭೆ ನಗರಪಾಲಿಕೆಯಾಗಿ ಬೆಳೆಯುತ್ತಿವ ಪ್ರಸ್ತುತ ಸಂದರ್ಭದಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯಗಳಿಗೆ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಾಸನಕ್ಕೆ ತರಲಾಗುತ್ತಿದೆ ಎಂದರು.
ಅದರಂತೆ ಸತ್ಯಮಂಗಲಕ್ಕೆ ಹೇಮಾವತಿ ನದಿಯಿಂದ ಕುಡಿಯುವ ನೀರು ಒದಗಿಸುವ ಬಹುಮುಖ್ಯ ಕೆಲಸಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಕಾಮಗಾರಿಯು ಮುಗಿಯುವ ಹಂತದಲ್ಲಿದೆ. ಅಲ್ಲದೆ ಮನುಷ್ಯನ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಬಹಳ ಮುಖ್ಯ ಇದನ್ನು ಮನಗಂಡು ಅವರ ಆರೋಗ್ಯ ರಕ್ಷಣೆಗಾಗಿ ನಮ್ಮ ಕ್ಲಿನಿಕ್ ತೆರೆಯಲಾಗಿದೆ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಆಸ್ಪತ್ರೆಗೆ ಅಗತ್ಯ ಇರುವ ವೈದ್ಯಕೀಯ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅನುದಾನ ತಂದು ಬಡಾವಣೆಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಶ್ರಮ ವಹಿಸಿ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು .
ಈ ವೇಳೆ ನಗರಸಭೆ ಅಧ್ಯಕ್ಷರು ಸದಸ್ಯರುಗಳು, ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು ಗ್ರಾಮದ ಮುಖಂಡರು, ಕಾರ್ಯಕರ್ತರು, ಯುವಕರು,ಹಿರಿಯರು, ಗ್ರಾಮಸ್ಥರು, ಸಾರ್ವಜನಿಕರು ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು…
Mysore
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣ ತುರ್ತು ಕ್ರಮಕ್ಕೆ ಡಿಸಿ ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

ಮೈಸೂರು: ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ.ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಪಡುವಾರಳ್ಳಿಯಲ್ಲಿರುವ ಬಾಬು ಜಗಜೀವನ ರಾಮ್ ಭವನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬಂಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬಂಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿಯು ಸದಸ್ಯರನ್ನು ಠಾಣೆ ವ್ಯಾಪ್ತಿಯ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು ನಗರದಲ್ಲಿ ಅಕ್ರಮ ಮದ್ಯ ಮಾರಾಟ ಬಗ್ಗೆ ದೂರುಗಳು ಬಂದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನು ರೀತಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.
Mysore
ಫುಟ್‌ಪಾತ್ ವ್ಯಾಪಾರಿಗಳ ತೆರವುಗೊಳಿಸಿ ಇಲ್ಲವೆ ಅವರಿಗೆ ಸೂಕ್ತ ಸ್ಥಳ ನಿಗಧಿಪಡಿಸಿ

ಮೈಸೂರು: ಹೋಟೆಲ್ ಉದ್ಯಮಕ್ಕೆ ತಲೆ ನೋವಾಗಿರುವ ಫುಟ್ ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಬೇಕು. ಇಲ್ಲವೆ ಅವರಿಗೆ ಸೂಕ್ತ ಸ್ಥಳ ನಿಗದಿಪಡಿಸಬೇಕು ಎಂದು ಮೈಸೂರು ಹೋಟೆಲ್ ಮಾಲೀಕರು, ಪಾಲಿಕೆ ಆರೋಗ್ಯಾಧಿಕಾರಿಗಳನ್ನು ಒತ್ತಾಯಿಸಿದರು.
ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಗುರು ವಾರ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಆಹಾರ ಸುರಕ್ಷಣಾ ಅಧಿಕಾರಿ ಡಾ.ಎಸ್.ಎಲ್.ರವೀಂದ್ರ ಅವರೊಂದಿಗೆ ನಡೆದ ಆಹಾರ ಸುರಕ್ಷತೆ ಹಾಗೂ ಉದ್ದಮ ನವೀಕರಣ ಕುರಿತ ಸಂವಾದ ಕಾರ್ಯಕ್ರಮ ದಲ್ಲಿ ಫುಟ್‌ಪಾತ್ ವ್ಯಾಪಾರವೆಂಬುದು ದೊಡ್ಡ ಮಾಫಿಯಾ ಆಗಿ ಬೆಳೆದಿದೆ. ಪಾಲಿಕೆ ಅಧಿಕಾರಿಗಳು ಫುಟ್ ಪಾತ್ ವ್ಯಾಪಾರಿಗಳನ್ನು ಟಚ್ ಮಾಡಲು ಸಾಧ್ಯವಿಲ್ಲ. ಫುಟ್‌ಪಾತ್ ವ್ಯಾಪಾರಿಗಳಿಂದ ಸರ್ಕಾರಕ್ಕೆ ಲಕ್ಷ ಲಕ್ಷ ತೆರಿಗೆ ಕಟ್ಟುವ ಹೋಟೆಲ್ ಉದ್ಯಮ ನಷ್ಟದತ್ತ ಸಾಗುವಂತಾಗಿದೆ ಆದ್ದರಿಂದ ಕೂಡಲೇ ಎಲ್ಲೆಂದರಲ್ಲಿ ವ್ಯಾಪಾರ ನಡೆಸುವ ಫುಟ್ ಪಾತ್ ವ್ಯಾಪಾರಿ ಗಳನ್ನು ತೆರವುಗೊಳಿಸಿ, ಇಲ್ಲವೆ ಅವರಿಗೆ ಸೂಕ್ತ ಸ್ಥಳ ನೀಡಿ ಎಂದು ಮನವಿ ಮಾಡಲಾಯಿತು.
ಹೋಟೆಲ್ ಮಾಲೀಕರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಫುಟ್ ಪಾತ್ ವ್ಯಾಪಾರಿಗಳ ಸರ್ವೆ ಕಾರ್ಯ ನಡೆಯುತ್ತಿದೆ. ಸ್ವಚ್ಛ ಸರ್ವೇಕ್ಷಣೆ ಮುಗಿದ ಕೂಡಲೇ ಪರವಾನಗಿ ಇಲ್ಲದ ಫುತ್ ಪಾತ್ ವ್ಯಾಪಾರಿ ಗಳನ್ನು ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸುವ ಹಾಗೂ ಅವರಿಗೆ ಸೂಕ್ತಸ್ಥಳ ಸೂಚಿಸುವ ಅಭಿಯಾನ ನಡೆಸಲಾ ಗುವುದು ಎಂದು ಭರವಸೆ ನೀಡಿದರು.
ಹಾಗೆಯೇ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ. ಸಾಧ್ಯವಾದಷ್ಟು ನಿಮ್ಮ ಹೋಟೆಲ್ ಲೋಗೋ ಇರುವ ಬಟ್ಟೆ ಬ್ಯಾಗ್ ಗಳನ್ನು ಬಳಸಿ, ಸಾಕಾಣಿಕೆ ದಾರರಿಗೆ ಹಾಗೂ ಪೌರಕಾರ್ಮಿಕರಿಗೆ ನೀಡುವ ಆಹಾರ ತ್ಯಾಜ್ಯವನ್ನು ಪ್ಲಾಸ್ಟಿಕ್ ನಿಂದ ಬೇರ್ಪಡಿಸಿ ನೀಡಿ. ಎಲ್ಲೆಂದರಲ್ಲಿ ಆಹಾರ ತ್ಯಾಜ್ಯ ಹಾಗೂ ಪ್ಲಾಸ್ಟಿಕ್ ಬಿಸಾಡಿದ್ದರೆ ಕೂಡಲೇ ಮಾಹಿತಿ ನೀಡಿ. ಮುಂದಿನ ತಿಂಗಳು ಉದ್ಯಮ ಪರವಾನಗಿ ನವೀಕರಣ ಇನ್ನಿತರೆ ಲೈಸೆನ್ಸ್‌ಗಳ ಅಭಿಯಾನವನ್ನು ನಡೆಸಲಿದ್ದು, ಹೋಟೆಲ್ ಮಾಲೀಕರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಶುಚಿತ್ವ ಕಾಪಾಡಿ: ಆಹಾರ ಸುರಕ್ಷತಾ ಅಧಿಕಾರಿ ಡಾ.ಎಸ್.ಎಲ್.ರವೀಂದ್ರ ಮಾತನಾಡಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡು ವುದರ ಜೊತೆಗೆ ಆಹಾರ ಪದಾರ್ಥ ಗಳನ್ನು ಕಡ್ಡಾಯವಾಗಿ ತೊಳೆದು ಬಳಸ ಬೇಕು. ಅದರಲ್ಲೂ ಮುಖ್ಯವಾಗಿ ಅಡುಗೆ ತಯಾರಕರು ಕೈ ತೊಳೆದು, ಆಹಾರ ಪದಾರ್ಥಗಳನ್ನು ಕಟ್ ಮಾಡಬೇಕು. ಕಟಿಂಗ್ ನಂತರವೂ ಕೈ ತೊಳೆಯಬೇಕು. ಆಹಾರಕ್ಕೆ ತಲೆ ಕೂದಲೂ ಬೀಳದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೆಯೇ ಆಹಾರ ಭದ್ರತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸ ಬೇಕು. ಪರವಾನಗಿಗಳು ಗ್ರಾಹಕರಿಗೆ ಕಾಣುವಂತೆ ಇರಿಸಬೇಕು ಎಂದು ಸಲಹೆ ನೀಡಿದರು. ಹಾಗೆಯೇ ಆನ್‌ಲೈನ್ ಮೂಲಕ ಉದ್ಯಮ ಪರವಾನಗಿ, ತೆರಿಗೆ ಕುರಿತು ಮಾಹಿತಿ ನೀಡ ಲಾಯಿತು. ಮೈಸೂರು ಹೋಟೆಲ್ ಮಾಲೀ
ಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಕಾರ್ಯದರ್ಶಿ ಎ.ಆರ್.ರವೀಂದ್ರ ಭಟ್, ಹೋಟೆಲ್ ಮಾಲೀಕರ ಸಂಘದ ಧರ್ಮದತ್ತಿ ಅಧ್ಯಕ್ಷ ರವಿಶಾಸ್ತ್ರಿ, ಉಪಾಧ್ಯಕ್ಷ ಸುರೇಶ್(ಉಗ್ರಯ್ಯ), ಕಾರ್ಯದರ್ಶಿ ಸುಬ್ರಹ್ಮಣ್ಯ ತಂತ್ರಿ, ಪತ್ತಿನ ಸಹಕಾರ ಸಂಘದ ಅದ್ಯಕ್ಷ ನಾರಾಯಣಹೆಗಡೆ ಮತ್ತಿತರರಿದ್ದರು.
-
Hassan22 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
State24 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Chamarajanagar20 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu21 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan21 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore20 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
Mysore20 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ