Connect with us

Mysore

ಧಾರಾಕಾರ ಮಳೆ, ಗಾಳಿಗೆ ಮನೆ ಮೇಲೆ ಬಿದ್ದ ಮರ, ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು

Published

on

ಸಾಲಿಗ್ರಾಮ:  ಪಟ್ಟಣದ  ರಾಂಪುರ   ಗ್ರಾಮದ ಜೋಗಿ ಕಾಲೋನಿ ಬಡಾವಣೆಯಲ್ಲಿ  ಸುರಿದ ಧಾರಾಕಾರ ಮಳೆ, ಗಾಳಿಗೆ  ಮನೆಯ ಚಾವಣಿ ಮೇಲೆ  ಮರವು  ಬಿದ್ದಿದ್ದು, ನವ ವದು ವರ ಸೇರಿದಂತೆ  ಕುಟುಂಬಸ್ಥರು ಸಿನಿಮೀಯ ರೀತಿಯಲ್ಲಿ ಪ್ರಾಣಾಪಾಯದಿಂದ  ಪಾರಾಗಿರುವ ಘಟನೆ ನಡೆದಿದೆ.
ಹೊಸದಾಗಿ ಮದುವೆಯಾದ ವದು ವರರ ಪ್ರಥಮ ರಾತ್ರಿಯ ದಿನವೇ ರಾತ್ರಿ ವೇಳೆಯಲ್ಲಿ ಮರ ಬಿದ್ದಿದೆ, ಬಿದ್ದ ರಭಸಕ್ಕೆ ಮನೆಯ ಗೋಡೆಯ ಮೇಲೆ ಬಿದ್ದಿದೆ.ಮೇಲಿನ ಹಂಚುಗಳು ವದು, ವರರ ಮೇಲೆ ಬಿದ್ದು, ಪ್ರಾಣಪಾಯದಿಂದ ಪಾರಾಗಿರುತ್ತಾರೆ.

ಬಡಾವಣೆಯ  ಮಂಜುಳಾ ಕೃಷ್ಣ ಜೋಗಿ  ರವರಿಗೆ ಸೇರಿದ ಮನೆ ಯಾಗಿದ್ದು.ಈ ಘಟನೆಯಿಂದ ಮನೆಯಲ್ಲಿ ಇದ್ದ ಸಾವಿರಾರು  ಬೆಲೆಯ ವಸ್ತುಗಳು ಹಾಗೂ  ಧಾನ್ಯಗಳು ನಷ್ಟ ಉಂಟಾಗಿದೆ. ಕುಟುಂಬಸ್ಥರು ವಾಸ ಮಾಡಲು ಮನೆ ಇಲ್ಲದೆ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಷಯ ತಿಳಿದ ಘಟನಾ ಸ್ಥಳಕ್ಕೆ  ಗ್ರಾಮ ಲೆಕ್ಕಾಧಿಕಾರಿ  ದರ್ಶನ್   ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ವರದಿ    ನೀಡಿರುತ್ತಾರೆ.

ರಾಂಪುರ ಗ್ರಾಮ ಪಂಚಾಯತಿ ಸದಸ್ಯ ರಾಂಪುರ ಲೋಕೇಶ್ ಮಾತನಾಡಿ   ಸರ್ಕಾರ ಕೂಡಲೇ ಈ ಕುಟುಂಬಕ್ಕೆ ಪರಿಹಾರ ಮತ್ತು ಆಶ್ರಯ ಮನೆ ನೀಡುವಂತೆ ಜಿಲ್ಲಾ ಮತ್ತು ತಾಲೂಕು ಆಡಳಿತಕ್ಕೆಒತ್ತಾಯಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mysore

ದಲೈವಾಲಾ ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ಸ್ವಾಗತಾರ್ಹ: ಕುರುಬೂರು ಶಾಂತಕುಮಾರ್‌

Published

on

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಹಿತಕ್ಕಾಗಿ ಹೋರಾಡುತ್ತಿದ್ದ ದಲೈವಾಲಾ 53 ದಿನಗಳ ಉಪವಾಸ ಕೈ ಬಿಟ್ಟು ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರೈತರೆಲ್ಲ ಅವರ ಪ್ರಾಣದ ಬಗ್ಗೆ ಆತಂಕಗೊಂಡಿದ್ದರು ಎಂದು ಹೇಳುತ್ತ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ, ಕಾನೂನು ಜಾರಿಗಾಗಿ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯೆತರ ಸಂಘಟನೆ ರಾಷ್ಟ್ರೀಯ ಸಂಚಾಲಕ ಜಗಜಿತ್ ಸಿಂಗ್ ಧಲೈವಾಲಾ 53 ದಿನದ ಉಪವಾಸ ಸತ್ಯಾಗ್ರಹ ನಿಲ್ಲಿಸಿ ವೈದ್ಯಕೀಯ ಚಿಕಿತ್ಸೆಗೆ ಸಮ್ಮತಿ ಸೂಚಿಸಿದ್ದಾರೆ. ಆದರೆ, ಬೇಡಿಕೆ ಈಡೆರುವ ತನಕ ಚಳುವಳಿ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ. ಪೊಲೀಸ್ ಮಹಾ ನಿರ್ದೇಶಕರು ಅಧಿಕಾರಿಗಳ ತಂಡ ಚಳುವಳಿ ನಡೆಯುತ್ತಿರುವ ಕನೋರಿ ಬಾರ್ಡರ್ಗೆ ಮೂರು ದಿನಗಳ ಹಿಂದೆ ತೆರಳಿ ಫೆಬ್ರವರಿ 14 ರಂದು ಚಂಡೀಗಡದಲ್ಲಿ ರೈತರ ಸಮಸ್ಯೆಗಳಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ಕೇಂದ್ರ ಸರ್ಕಾರದ ಲಿಖಿತ ಪತ್ರ ನೀಡಿ 3 ಗಂಟೆಗಳ ಕಾಲ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗಿದೆ ಉಪವಾಸ ನಿರತ ದಲೆವಾಲ ನಿರ್ಧಾರ ರೈತರ ಹೋರಾಟದ ಶಕ್ತಿ ಹೆಚ್ಚಿಸಿದೆ. ಕಳೆದ ಮೂರು ದಿನಗಳಿಂದ 124 ರೈತರು ದಲೆವಾಲ ಉಪವಾಸ ಬೆಂಬಲಿಸಿ ನಾವು ಪ್ರಾಣ ತ್ಯಾಗಕ್ಕೆ ಸಿದ್ದ ಎಂದು ಉಪವಾಸ ಆರಂಭಿಸಿದರು. ಅವರು ಸಹ ಉಪವಾಸವನ್ನು ನಿನ್ನೆಯಿಂದ ಕೈಬಿಟ್ಟಿದ್ದಾರೆ. ಆದರೆ, ಸಮಸ್ಯೆ ಬಗೆಹರಿಯುವ ತನಕ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದರು.

ಜನವರಿ 26 ರಂದು ದೇಶಾದ್ಯಂತ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಟ್ಯಾಕ್ಟರ್ ರಾಲಿ ನಡೆಸಲು ಕರೆ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿಯೂ ತಾಲೂಕು ಜಿಲ್ಲಾ ಮಟ್ಟದಲ್ಲಿ ಟ್ರ‍್ಯಾಕ್ಟರ್ ರ‍್ಯಾಲಿ ನಡೆಸಲಾಗುವುದು. ದೇಶದ ಸ್ವಾತಂತ್ರಕ್ಕಾಗಿ ಪ್ರಾಣ ಕಳೆದುಕೊಂಡ ಸ್ವತಂತ್ರ ಹೋರಾಟಗಾರರ ದೇಶದ ಗಡಿಯಲ್ಲಿ ಗಡಿ ರಕ್ಷಣೆಗಾಗಿ ಹುತಾತ್ಮರಾದ. ದೇಶದ ಜನರ ಆಹಾರ ಭದ್ರತೆಯಾಗಿ ದುಡಿದು ಹುತಾತ್ಮರಾದ ರೈತರ ನೆನಪಿನ ದಿನ ರಾಜ್ಯಮಟ್ಟದಲ್ಲಿ 30 ರಂದು ದಾವಣಗೆರೆಯಲ್ಲಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ವಿಶ್ವಕಪ್ ಖೋ ಖೋ ಪಂದ್ಯದಲ್ಲಿ ವಿಶ್ವ ಕಪ್ ಗೆದ್ದು ಜಯಭೇರಿ ಬಾರಿಸಿದ ಪುರುಷ, ಮಹಿಳೆಯರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಮಹಿಳೆಯರ ಭಾರತ ತಂಡದಲಿ ಉತ್ತಮ ಆಟ ಆಡುವ ಮೂಲಕ ಪ್ರಶಸ್ತಿಗೆ ಬಾಜನರಾಗಿರುವ ನಮ್ಮ ರಾಜ್ಯದ ಹಿರಿಮೆ ಹೆಚ್ಚಿಸಿದ ನಮ್ಮ ಊರಿನ ಕು. ಚೈತ್ರಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಜ್ಯ ಸರ್ಕಾರ ಅಭಿನಂದನೆ ಹೇಳಿದರೆ ಸಾಲದು. ಇಂಥಹ ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹ ನೀಡಲು ಮುಂದಾಗಬೇಕು. ಈಗಾಗಲೇ ಮಹಾರಾಷ್ಟ್ರ ಸರ್ಕಾರ ಅಲ್ಲಿನ ಕ್ರೀಡಾಪಟುಗೆ 3 ಕೋಟಿ ರೂ. ಪ್ರೋತ್ಸಾಹ ಧನ ನೀಡುವ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು.

ಟಿ ನರಸೀಪುರ ತಾಲೂಕಿನ ಸರ್ವ ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ನಾಳೆ (ಜ.21) ಚೈತ್ರಳನ್ನು ಅಭೂತಪೂರ್ವ ಸ್ವಾಗತ ನೀಡಿ ಅಭಿನಂದನಾ ಸಮಾರಂಭ ನಡೆಸಲಾಗುತ್ತಿ ಎಂದು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ದೇವನೂರು ವಿಜಯೇಂದ್ರ, ಸಾತಗಳ್ಳಿ ಬಸವರಾಜು, ಹಳ್ಳಿಕೆರೆಹುಂಡಿ ಪ್ರಭುಸ್ವಾಮಿ, ಕುರುಬೂರ್ ಪ್ರದೀಪ್, ವಾಜಮಂಗಲನಾಗೇಂದ್ರ ಉಪಸ್ಥಿತರಿದ್ದರು.

Continue Reading

Mysore

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ 2.5 ಲಕ್ಷ ಹಣ ಸಂಗ್ರಹ

Published

on

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ತುಂಬಾ ಯಶಸ್ವಿಯಾಗಿ ಪೂರ್ಣಗೊಂಡಿತು. ಒಟ್ಟಾರೆಯಾಗಿ 2.5 ಲಕ್ಷ ರೂಪಾಯಿ ಸಂಗ್ರಹವಾಗಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಅವರು ತಿಳಿಸಿದರು.

ರಂಗಾಯಣದ ಬಿ.ವಿ. ಕಾರಂತ್ ರಂಗ ಚಾವಡಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು . ಆರಂಭವಾದ ಮೊದಲೆರಡು ದಿನಗಳಲ್ಲಿ ಸಾರ್ವಜನಿಕರ ಸಂಖ್ಯೆಯು ಕಡಿಮೆಗೊಂಡಿದ್ದು. ತದನಂತರ ಕೊನೆಯದಿನದ ವರೆಗೂ ಕಲಾಮಂದಿರ ವರೆತು ಪಡಿಸಿ ಶೇ.80. 90 ರಂಗಾಯಣ ಕಲಾಪ್ರೇಕ್ಷರಿಂದ ತುಂಬಿ ತುಳುಕಿತು ವಾರಾಂತ್ಯ [ ಶನಿವಾರ ಮತ್ತು ಭಾನುವಾರ] ದಿನಗಳಲ್ಲಿ ಕಲಾಮಂದಿರನು ಸೇರಿ ಶೇ 100 ಸಾರ್ವಜನಿಕರಿಂದ ಕಂಗೊಳಿಸಿತು ಎಂದು ಹೇಳಿದರು.

ಪ್ರತಿವರ್ಷದಂತೆ ಈ ವರ್ಷವು ಬಹುಭಾಷೆಯ ನಾಟಕಗಳು, ಚಲನಚಿತ್ರಗಳು, ಬೀದಿನಾಟಕಗಳು, ಜನಪದ ಉತ್ಸವ, ಪುಸ್ತಕ ಮೇಳ, ಕರಕುಶಲ ಮೇಳ ಮತ್ತು ಪ್ರಾತ್ಯಕ್ಷಿಕೆ, ದೇಸಿ ಆಹಾರ ಮೇಳ, ಚಿತ್ರಕಲಾ ಪ್ರದರ್ಶನ, ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಪ್ರೇಕ್ಷಕರ ಮೆಚ್ಚುಗೆಗೆ ಕಾರಣವಾದವು ಎಂದರು.

ಒಟ್ಟಾರೆಯಾಗಿ 6 ದಿನಗಳ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ 1.200 ಕ್ಕು ಹೆಚ್ಚು ಕಲಾವಿದರು ಭಾಗವಹಿಸಿ ವಿಬಿನ್ನವಾಗಿ ಕಲೆ ಸಾಂಸ್ಕೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ ಎಂದು ಹೇಳಿದರು.

ಈ ವರ್ಷ ಬಹುರೂಪಿಯ ರಾಷ್ಟ್ರೀಯ ನಾಟಕೋತ್ಸವದಲ್ಲಿ ಬಹಳ ವಿಶೇಷವಾಗಿ ಮಕ್ಕಳ ಬಹುರೂಪಿ ವಿಶೇಷ ಕಾರ್ಯಕ್ರಮ ಆರಂಭಿಸಿದ್ದು. ಒಟ್ಟಾರೆಯಾಗಿ ಮಕ್ಕಳ ನಾಟಕವನ್ನು ಸುಮಾರು ಒಂದು ಸಾವಿರ ಮಕ್ಕಳು ವಿಕ್ಷಣೆ ಮಾಡಿದರು. ಚಲನಚಿತ್ರ ಮತ್ತು ಮಕ್ಕಳ ಚಲನಚಿತ್ರವನ್ನು ಎರಡು ಸಾವಿರ ಮಕ್ಕಳು ವಿಕ್ಷಿಸಿದ್ದಾರೆ ಎಂದು ತಿಳಿಸಿದರು.
ರಂಗಾಯಣದ ಉಪನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಉಪಸ್ಥಿತರಿದ್ದರು.

Continue Reading

Mysore

ಮೈಸೂರಿನಲ್ಲಿ ಸಾಂಸ್ಕೃತಿಕ ಕಾವೇರಿ ರಾಜ್ಯ ಸಮ್ಮೇಳನ

Published

on

ಮೈಸೂರು: ಮೈಸೂರಿನಲ್ಲಿ ಸಂಸ್ಕೃತ ಕಾವೇರಿ ರಾಜ್ಯ ಸಮ್ಮೇಳನವನ್ನು ಫೆಬ್ರವರಿ 1 ಮತ್ತು 2 ರಂದು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಆಯೋಜಿಸಲಾಗಿದೆ ಎಂದು ಕೃಷ್ಣ ರಾಜಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರು ತಿಳಿಸಿದರು.

ಈ ಕುರಿತು ನಗರದ ಪ್ರತಿಕಾಗೋಷ್ಠಿಯಲ್ಲಿ ಸೋಮವಾರ ಮತನಾಡಿದ ಅವರು ಯಾವುದೇ ಜಾತಿ ಧರ್ಮ ಬೇದವಿಲ್ಲದೆ ಎಲ್ಲರ ಮನೆಗಳಲ್ಲಿ ಸಂಸ್ಕೃತ ಪಾಠ ಶಾಲೆಗಳು ಆರಂಭ ಆಗಬೇಕು ಎಂಬ ದೃಷ್ಟಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ನಗರದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಫೆಬ್ರವರಿ 1 ರಂದು ಸಂಸ್ಕೃತಿಕ ಕಾವೇರಿ ರಾಜ್ಯ ಸಮ್ಮೇಳನವನ್ನು ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಉದ್ಘಾಟನೆಯನ್ನು ನೆರವೇರಿಸುವರು. ಮೈಸೂರು ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಮುಕ್ತಿದಾನಂದಜಿ ಮಹರಾಜ್ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು ಎಂದು ಹೇಳಿದರು.

ಸಂಸ್ಕ್ರತ ಕಾವೇರಿ ರಾಜ್ಯ ಸಮ್ಮೇಳನದ ಆಕರ್ಷಣೆಗಳು: ವಿಶೇಷ ಉಪನ್ಯಾಸ, ವಿವಿಧ ಗೋಷ್ಠಿಗಳು, ವಿಜ್ಞಾನ ಪ್ರದರ್ಶಿನ, ವಸ್ತು ಪ್ರದರ್ಶಿನ, ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ಈ ಸಮ್ಮೇಳನದಲ್ಲಿ ಶೋಭಾಯಾತ್ರೆಯು ಫೆಬ್ರವರಿ 1 ರಂದು ಸಂಜೆ 5 ಗಂಟೆಗೆ ವಿದ್ಯಾರಂಣ್ಯ ಪುರಂ, ಚಾಮುಂಡಿಪುರಂ, ಮೂಲಕ ಗಣಪತಿ ಸಚ್ಚಿದಾನಂದ ಆಶ್ರಮದ ವರೆಗೂ ನಡೆಸಿ ನಂತರ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದ್ದು ಸಂಸ್ಕೃತ ಭಾರತಿಯ ಅಖಿಲ ಭಾರತ ಉಪಾಧ್ಯಕ್ಷ ದಿನೇಶ್ ಕಾಮತ್ ಅವರಿ ಸಾರ್ವಜನಿಕ ಸಭೆ ಕುರಿತು ಭಾಷಣ ಮಾಡುವರು ಎಂದರು.

ಸಂಸದ ಯದುವೀರ್ ಒಡೆಯರ್ ಅವರು ಕಾರ್ಯಕ್ರಮದ ಗೌರವಾಧ್ಯಕ್ಷರಾಗಿ ಭಾಗವಹಿಸುವರು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿ,ಶ್ರೀ ಶರಚ್ಚಂದ್ರ ಸ್ವಾಮೀಜಿ, ಮೈಸೂರು ವಿವಿ.ಯ ಕುಲಪತಿ ಪ್ರೊ, ಲೋಕನಾಥ್, ಸಂಗೀತ ವಿವಿ.ಯ ಕುಲಪತಿ ಪ್ರೊ, ವಿ ನಾಗೇಶ್ ಬೆಟ್ಟಕೋಟೆ, ಸಂಸ್ಕೃತ ವಿವಿ.ಯ ಕುಲಪತಿ ಡಾ. ಅಹಲ್ಯ ಶರ್ಮ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸಂಸದ ಪ್ರತಾಪ್ ಸಿಂಹ, ಶ್ರೀ ನಿಧಿ ಗ್ರೂಫ್ಸ್ ನ ಪ್ರಭಾಕರ್ ರಾವ್ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭವು ಫೆಬ್ರವರಿ 2 ರಂದು ಸಂಜೆ 5 ಗಂಟೆಗೆ ನಡೆಯಲಿದ್ದು, ಸಂಸ್ಕೃತ ಭಾರತಿಯ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿಗಳಾದ ಜಯಪ್ರಕಾಶ್ ಗೌತಮ್ ಅವರು ಸಮಾರೋಪ ಭಾಷಣ ಮಾಡುವರು ಎಂದು ತಿಳಿಸಿದರು.

ಸಂಸ್ಕೃತ ಭಾರತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಭಟ್, ಅಖಿಲ ಭಾರತ ಪ್ರಚಾರ ಪ್ರಮುಖರಾದ ಡಾ,ಸಚಿನ್ ಕಟಾಳೆ, ರಾಜ್ಯ ಕಾರ್ಯದರ್ಶಿ ಗುರುರಾವ್ ಕುಲಕರ್ಣಿ, ರಾಜ್ಯದ ಸಂಸ್ಕೃತ ಪ್ರಧ್ಯಾಪಕರು ಸಂಸ್ಕೃತ ಸಾಹಿತಿಗಳು, ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಹೇಳಿದರು.

ಸಂಸ್ಕೃತ ಭಾರತಿ ಕರ್ನಾಟಕ ಸಮ್ಮೇಳನದ ಸಂಚಾಲಕ ಡಾ. ಬಿ.ಜೆ. ಭಾಗ್ಯಲಕ್ಷ್ಮಿ, ಸಂಸ್ಕೃತ ಕಾವೇರಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಅ.ಮ. ಭಾಸ್ಕರ ಅವರು ಉಪಸ್ಥಿತರಿದ್ದರು.

Continue Reading

Trending

error: Content is protected !!