Chamarajanagar
ಅಮಾವಾಸ್ಯೆ ಹಿನ್ನೆಲೆ ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಅವರಾತ್ರಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರು ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿದರು.
ದೇಗುಲವನ್ನು ವಿವಿಧ ಪುಷ್ಪ, ತಳಿರು ತೋರಣದಿಂದ ಸಿಂಗರಿ ಸಲಾಗಿತ್ತಲ್ಲದೆ, ವಿದ್ಯುತ್ ದೀಪಾ ಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ದೇಗುಲ ದಲ್ಲಿ ಸಂಜೆ 6.30 ರಿಂದ ರಾತ್ರಿ 8.30ರವರೆಗೆ ಸಾಲೂರು ಬೃಹನ್ಮ ಠದ ಪೀಠಾಧಿಪತಿ ಡಾ.ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಬೇಡಗಂಪಣ ಸರದಿ ಅರ್ಚಕರು ಮಾದಪ್ಪನಿಗೆ ಮಹಾರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಇತರ ಅಭಿಷೇಕದ ಜತೆಗೆ ಸಹಸ್ರ ಬಿಲ್ವಾರ್ಚನೆ ನೆರವೇರಿಸಿದರು.
ಬಳಿಕ ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿ ಮಾದಪ್ಪನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ಧೂಪ, ದೀಪಧಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಮೂಲಕ ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ ಸಾಂಪ್ರ ದಾಯಿಕವಾಗಿ ನೆರವೇರಿತು. ಬಳಿಕ ಭಕ್ತರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಉತ್ಸವ ಮೂರ್ತಿಯ ಮೆರವಣಿಗೆ: ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿದ
ಬಳಿಕ ವಿವಿಧ ಪುಷ್ಪಗಳಿಂದ ಸಿಂಗರಿಸಿದ್ದ ಬಸವ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸತ್ತಿಗೆ, ಸೂರಿಪಾನಿ, ಜಾಗಟೆ ಹಾಗೂ ಮಂಗಳ ವಾದ್ಯಂದೊಂದಿಗೆ
ಸಾಲೂರು ಶ್ರೀಗಳ ನೇತೃತ್ವದಲ್ಲಿ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ಈ ವೇಳೆ ಭಕ್ತರು ಉಘ ಮಾದಪ್ಪ ಉಘ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಭಕ್ತಿಭಾವ ಮೆರೆದರು. ಬಳಿಕ ನೆರೆದಿದ್ದ ಭಕ್ತರು ಪ್ರಸಾದ ವಿತರಿಸಲಾಯಿತು.
ಎಣ್ಣೆಮಜ್ಜನ ಹಿನ್ನೆಲೆಯಲ್ಲಿ ದೇಗುಲದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಸಂಜೆ 7ರಲ್ಲಿ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಹರಕೆ ಹೊತ್ತ ಭಕ್ತರು ದೇಗುಲದ ಸುತ್ತಾ ದಂಡಿನ ಕೋಲನ್ನು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಸ್ವಾಮಿ ಕೃಪೆಗೆ ಪಾತ್ರರಾದರು. ಈ ವೇಳೆ ಭಕ್ತರು ಜಯಘೋಷಗಳನ್ನು ಮೊಳಗಿಸಿದರು.
Chamarajanagar
ಜಲಾಯನ ಯಾತ್ರೆಗೆ ಚಾಲನೆ ನೀಡಿದ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್

ವರದಿ : ಗೋವಿಂದ ಕೆ ಗೌಡ ಹನೂರು
ಹನೂರು: ಪ್ರತಿಯೊಬ್ಬ ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವ ಕಾರ್ಯಕ್ಕೆ ಮುಂದಾಗಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್ ತಿಳಿಸಿದರು.
ಹನೂರು ತಾಲೂಕಿನ ಕೊರಟ್ಟಿ ಹೊಸೂರು ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಲಾಯನ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಂದು ಹನಿ ಹನಿ ನೀರನ್ನು ಸಂರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ. ಬೇಸಿಗೆ ಕಾಲದಲ್ಲಿ ನೀರಿನ ಬಳಕೆಯನ್ನು ಮುನ್ನೆಚ್ಚರಿಕೆಯಿಂದ ಬಳಸುವ ಮೂಲಕ ನಾವು ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳಬಹುದು.. ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಸಮೃದ್ಧ ಪರಿಸರವನ್ನು ಕಲ್ಪಿಸಬಹುದು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ದೊರೆಯುವ ವೈಜ್ಞಾನಿಕ ತಂತ್ರಜ್ಞಾನ ಹಾಗೂ ಮಾರ್ಗದರ್ಶನಗಳನ್ನು ಅನುಸರಿಸಿದರೆ ರೈತರು ಕೃಷಿಯಲ್ಲಿ ಆರ್ಥಿಕವಾಗಿ ಸಬಲರಾಗಬಹುದು. ಜೊತೆಗೆ ಮಣ್ಣು ಫಲವತ್ತಾಗಿ, ಪರಿಸರ ಸ್ನೇಹಿಯಾಗಿಸಲು ಸಾಧ್ಯವಿದೆ. ಈ ಎಲ್ಲಾ ಕಾರ್ಯಕ್ರಮವು ನಮ್ಮ ಪರಿಸರ ಮತ್ತು ಕೃಷಿಯ ಭವಿಷ್ಯವನ್ನು ಸುರಕ್ಷಿತವಾಗಿಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ರಾಮಾಪುರ ರೈತ ಸಂಪನ್ಮೂಲ ಕೇಂದ್ರದ ಕೃಷಿ ಅಧಿಕಾರಿ ಮನೋಹರ್ ಮಾತನಾಡಿ ದೇಶಕ್ಕೆ ಸೈನಿಕ ಎಷ್ಟು ಮುಖ್ಯವೋ, ರೈತನು ಕೂಡ ಅಷ್ಟೇ ಮುಖ್ಯ, ಸೈನಿಕ ದೇಶವನ್ನು ಸಂರಕ್ಷಣೆ ಮಾಡಿದರೆ ರೈತ ಇಡೀ ದೇಶಕ್ಕೆ ಅನ್ನ ನೀಡುತ್ತಾನೆ. ರೈತರು ವಲಸೆ ಹೋಗುವುದನ್ನು ತಪ್ಪಿಸಲು ಕೃಷಿ ಇಲಾಖೆ ವತಿಯಿಂದ ಸರ್ಕಾರ ವಿವಿಧ ಯೋಜನೆಗಳ ಮೂಲಕ ಮನೆಯ ಬಾಗಿಲಿಗೆ ಹಲವು ಕಾರ್ಯಕ್ರಮಗಳನ್ನು ತಲುಪಿಸುತ್ತಿದೆ. ಪ್ರತಿಯೊಬ್ಬರು ಆಗಾಗ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದಿಂದ ಸಿಗುವ ಸೌಲತ್ತುಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಲಾನಯನ ಕಾರ್ಯಕ್ರಮದ ಬಗ್ಗೆ ಚಿತ್ರಕಲೆ ಪ್ರಬಂಧ ಸೇರಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪ್ರಶಸ್ತಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನೀರು ಮಣ್ಣಿನ ಪಾತ್ರದ ಮಹತ್ವದ ಕುರಿತು ಜನರಲ್ಲಿ ಹರಿವು ಮೂಡಿಸಲು ಜಲಾಯನ ಯಾತ್ರೆಯ ಕಿರುಚಿತ್ರವನ್ನು ಪ್ರದರ್ಶನದ ಜೊತೆಗೆ ರಂಗವಾಹಿನಿ ಚಾಮರಾಜನಗರ ತಂಡದಿಂದ ನಾಟಕ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ನಟರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ಅಧಿಕಾರಿಗಳಾದ ನಿಶಾಂತ್, ನಾಗೇಂದ್ರ, ಧರ್ಮೇಂದ್ರ, ಉಪೇಂದ್ರ, ಜಗದೀಶ್ ಸ್ಥಳಿಯ ಮುಖಂಡರಾದ ಶಿವಣ್ಣ ಪೊನ್ನು ಶೆಟ್ಟಿ ಜಗ ಮಲ್ಲೇಶ್ ಸೇರಿದಂತೆ ಇತರರು ಹಾಜರಿದ್ದರು.
Chamarajanagar
ರಸ್ತೆ ಸುರಕ್ಷತಾ ಸಪ್ತಾಹದ ಅರಿವು ಮೂಡಿಸುವ ಜಾಥಾಗೆ ಚಾಲನೆ

ಚಾಮರಾಜನಗರ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾಗೆ ಚಾಲನೆ ದೊರೆಯಿತು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಅವರು ಜಾಥಾಗೆ ಹಸಿರು ನಿಶಾನೆ ತೋರಿ ಬಳಿಕ ಮಾತನಾಡಿ, ಜನಸಾಮಾನ್ಯರಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸಲು ಪ್ರತಿವರ್ಷದಂತೆ ಈ ಬಾರಿಯೂ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಯೋಜಿಸಲಾಗಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಅಪಘಾತ ಪ್ರಮಾಣವನ್ನು ತಗ್ಗಿಸುವುದೇ ಸಪ್ತಾಹದ ಉದ್ದೇಶವಾಗಿದೆ. ರಸ್ತೆ ಸುರಕ್ಷತೆಯ ಬಗ್ಗೆ ನಾಗರಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಅಗತ್ಯವಾಗಿದೆ ಎಂದರು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಕಳೆದ ಬಾರಿಗಿಂತ ಪ್ರಸ್ತುತ ಸಾಲಿನಲ್ಲಿ ಹೆಚ್ಚಾಗಿದೆ. ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜನರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ಚಾಮರಾಜನಗರವನ್ನು ಅಪಘಾತ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರು ಸಹಕರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಅವರು ತಿಳಿಸಿದರು.
ಪ್ರಾದೇಶಿಕ ಸಾರಿಗೆ ನಿರೀಕ್ಷಕ ದಿನೇಶ್‍ಕುಮಾರ್ ಮಾತನಾಡಿ ಸಾರ್ವಜನಿಕರು, ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಮಹತ್ವವನ್ನು ಅರಿಯಬೇಕು. ಅಪಘಾತ ಪ್ರಮಾಣಗಳನ್ನು ಕಡಿಮೆ ಮಾಡಲು ವಾಹನ ಚಲಾಯಿಸುವ ಪ್ರತಿಯೊಬ್ಬರು ಚಾಲನಾ ಪರವಾನಗಿ ಪಡೆದಿರಬೇಕು. 18 ವರ್ಷ ಮೇಲ್ಪಟ್ಟವರು ಮಾತ್ರ ವಾಹನ ಚಾಲನೆ ಮಾಡಬೇಕು. ಅಪ್ರಾಪ್ತರು ವಾಹನ ಚಾಲಿಸಿದರೆ ಅವರ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಲಾಗುವುದು. ಅಪಘಾತದಲ್ಲಿ ಸಿಲುಕಿದ ವ್ಯಕ್ತಿ ಮರಣ ಹೊಂದಿದರೆ ಅಪ್ತಾಪ್ತರನ್ನು ಬಾಲಮಂದಿರಕ್ಕೆ ಕಳುಹಿಸಲಾಗುವುದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಯುವಕರು ಬೈಕ್ ವೀಲಿಂಗ್ ಮಾಡಬಾರದು. ಕುಡಿದು ವಾಹನ ಚಾಲಿಸಬಾರದು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಸಂಚಾರಿ ನಿರೀಕ್ಷಕರಾದ ಮಹದೇವಸ್ವಾಮಿ ಇತರರು ಉಪಸ್ಥಿತರಿದ್ದರು
Chamarajanagar
ಗಾಯಗೊಂಡಿದ್ದ ಹಾವಿಗೆ ಚಿಕಿತ್ಸೆ

ಚಾಮರಾಜನಗರ: ತಾಲ್ಲೂಕಿನ ಕೆಲ್ಲಂಬಳ್ಳಿ ಗ್ರಾಮದಲ್ಲಿ ಮನೆ ನಿರ್ಮಾಣ ಸಂದರ್ಭದಲ್ಲಿ ಅಡಿಪಾಯ ತೆಗೆಯುವಾಗ ಕೆರೆ ಹಾವಿಗೆ ಕಬ್ಬಿಣ ಸರಳಿನಿಂದ ಏಟು ಬಿದ್ದು, ತೀವ್ರ ಗಾಯಗೊಂಡಿದ್ದ ಹಾವಿಗೆ ಚಿಕಿತ್ಸೆ ನೀಡಿ ರಕ್ಷಿಸಲಾಗಿದೆ.
ಉತ್ತುವಳ್ಳಿ ಗ್ರಾಮದ ಸ್ನೇಕ್ ಸುರೇಶ್ ರವರು ಕೆರೆ ಹಾವನ್ನು ಚಾಮರಾಜನಗರದ ಜಿಲ್ಲಾ ಪಶುಪಾಲನ ಪಾಲಿ ಕ್ಲಿನಿಕ್ ಗೆ ಕೊಂಡು ಹೋಗಿ ಪಶು ಪಾಲನ ಸಹಾಯಕ ನಿರ್ದೇಶಕ ಡಾ. ಎಂ ಮೂರ್ತಿ ಅವರು ಮತ್ತು ಸಿಬ್ಬಂದಿ ವರ್ಗದವರು ಹಾವಿಗೆ ಸೂಕ್ತ ಚಿಕಿತ್ಸೆ ನೀಡಿ ಚೇತರಿಸಿಕೊಂಡ ಬಳಿಕ ಕಾಡಿಗೆ ಬಿಟ್ಟಿರುತ್ತಾರೆ.
-
Mysore20 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu20 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Kodagu23 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore20 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Mandya22 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Mandya20 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Tech13 hours ago
ಅತ್ಯಂತ ಶಕ್ತಿಶಾಲಿ ಕ್ಯಾಮೆರಾ ಹೊಂದಿರುವ ಮಧ್ಯಮ ಬೆಲೆಯ ವಿವೋ ಕಂಪನಿಯ Vivo V50 ಹೊಸ ಫೋನ್ ಬಿಡುಗಡೆ : ಬೆಲೆ ಎಷ್ಟು?
-
Hassan18 hours ago
ಹಾಸನ ವಿಮಾನ ನಿಲ್ದಾಣದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ: ಎಚ್ಡಿ ಕುಮಾರಸ್ವಾಮಿ