Kodagu
ವಿಚಾರಣೆಗೆ ತೆರಳಿದ್ದ ವ್ಯಕ್ತಿ ನಾಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ
ಪೊನ್ನಂಪೇಟೆ : ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮಧು ಎಚ್.ಎಸ್. (35) ಅವರು ನಾಪತ್ತೆಯಾಗಿರುವ ಕುರಿತು ಅವರ ತಂದೆ ಸುರೇಶ್ ಅವರು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ತಾ. 16ರಂದು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ವಿಚಾರಣೆಗೆ ಹಾಜರಾಗುವಂತೆ ಪಿರಿಯಾಪಟ್ಟಣ ಪೊಲೀಸರು ಪೊನ್ನಂಪೇಟೆ ಕೃಷ್ಣ ನಗರ ನಿವಾಸಿ ಸುರೇಶ್ ಎಂಬುವವರ ಹಿರಿಯ ಪುತ್ರ ಮಧು ಅವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಅದರಂತೆ ಅವರು ವಿಚಾರಣೆಗೆ ಹಾಜರಾಗಲು ಪಿರಿಯಾಪಟ್ಟಣಕ್ಕೆ ತೆರಳಿದ್ದು, ಬಳಿಕ ಮನೆಗೆ ಹಿಂದಿರುಗಿಲ್ಲ. ಅಲ್ಲದೆ, ಕುಟುಂಬದ ಸದಸ್ಯರು ಅವರ ಮೊಬೈಲ್‌ಗೆ ಸಂಪರ್ಕಿಸಲು ಪ್ರಯತ್ನಿಸಿದರೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಧು ಅವರಿಗಾಗಿ ಸಂಬಂಧಿಕರು ಹಾಗೂ ಪರಿಚಿತರಲ್ಲಿ ವಿಚಾರಣೆ ನಡೆಸಿದರೂ ಯಾವುದೇ ಸುಳಿವು ದೊರಕದ ಹಿನ್ನೆಲೆಯಲ್ಲಿ ಅವರ ತಂದೆ ಸುರೇಶ್ ಅವರು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.
ನಾಪತ್ತೆಯಾಗಿರುವ ಮಧು ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆ ಅಥವಾ ಪೊನ್ನಂಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Kodagu
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಡಿಕೇರಿ : ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಪ್ರಕರಣವು ದಿನಾಂಕ:01-08-2025 ರಿಂದ 31-07-2026 ರೊಳಗೆ ನಡೆದಿರಬೇಕು ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.

ಮಕ್ಕಳ ದಿನಾಚರಣೆ-2026 ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿ ಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ ಮಡಿಕೇರಿ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ:20-08-2026ರೊಳಗೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.
ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-228010, 9482194105 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಅವರು ತಿಳಿಸಿದ್ದಾರೆ.
Kodagu
ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೊಡಗಿನ 9 ವಿದ್ಯಾರ್ಥಿಗಳು ಆಯ್ಕೆ
ಮಡಿಕೇರಿ : ಇದೇ ಜು.29 ರಿಂದ 31 ರ ವರೆಗೆ ನೇಪಾಳದ ಕಾಟ್ಮಂಡ್ ನಲ್ಲಿ ನಡೆಯುವ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಭಾರತ ತಂಡಕ್ಕೆ ಕರ್ನಾಟಕ ರಾಜ್ಯದಿಂದ 21 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಿಂದ ಮಿಥಶ್ ಜೆ., ರೀತನ್ ಡಿ.ಎಸ್,, ಅಜಯ್ ಎನ್.ಎಸ್., ಶ್ರಿಯಾನ್ ಗೌಡ, ಯಾಸಿನ್, ಹಫೀಸ್, ಕೌಶಿಕ್ ಕುಮಾರ್ ಯು.ಸಿ., ಮನ್ಸಿತ್ ಮೋಹನ್ ಹಾಗೂ ಸ್ವಾತಿಕ್ ಬಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
Kodagu
ಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
ಕುಶಾಲನಗರ: ಮುಂಗಾರು ಮಳೆಯ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. 2026-27ನೇ ಸಾಲಿನ ಜೂನ್ 1 ರಿಂದ ಜುಲೈ 21 ರವರೆಗೆ ಜಲಾಶಯದಲ್ಲಿ ಕೇವಲ 5.848 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಕಾವೇರಿ ನೀರಾವರಿ ನಿಗಮ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರನ್ನು ಮೀಸಲಿಡಲು ಸರ್ಕಾರ ನಿರ್ಧರಿಸಿದೆ. ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಸೂಚಿಸಿದ್ದಾರೆ.

ಈಗಾಗಲೇ ಫೆಬ್ರವರಿ 26 ಮತ್ತು ಜೂನ್ 5 ರ ಸರ್ಕಾರದ ಆದೇಶದಂತೆ ಜಲಾಶಯದ ನೀರನ್ನು ಕುಡಿಯಲು ಮಾತ್ರ ಬಳಸಲಾಗುತ್ತಿದೆ. ಜಿಲ್ಲಾಡಳಿತ ಮತ್ತು ಸ್ಥಳೀಯ ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ನೀರನ್ನು ಅವಲಂಬಿಸಿ ಯಾವುದೇ ಬೆಳೆ ಬೆಳೆಯದಂತೆ ರೈತರು ಹಾಗೂ ಅಚ್ಚುಕಟ್ಟುದಾರರು ಸಹಕರಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಮನವಿ ಮಾಡಿದ್ದಾರೆ.
-
Mysore11 hours agoಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
-
Mysore17 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Kodagu13 hours agoಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ
-
Politics6 hours agoಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ
-
Politics7 hours agoರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
-
Kodagu6 hours agoಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
-
Kodagu9 hours agoಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಡಾ. ಮಂತರ್ ಗೌಡ ಚಾಲನೆ
-
Manglore4 hours agoಮನೆ ಕಾಮಗಾರಿಗೆ ಬಂದು 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಕೃತ್ಯ ಎಸಗಿದ 24 ಗಂಟೆಯೊಳಗೆ ಆರೋಪಿ ಅಂದರ್
