ಚೆನ್ನೈ: ಗಣೇಶ ಚತುರ್ಥಿ ಆಚರಣೆ ವೇಳೆ ತಮಿಳುನಾಡಿನ (Tamil Nadu) ವೆಲ್ಲೂರು ಮೂಲದ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ (Ganesh procession) ವೇಳೆ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ (Burqa Dances) ನೃತ್ಯ ಮಾಡಿದ್ದ. ಈ ದೃಶ್ಯದ ವೀಡಿಯೋ ವೈರಲ್ ಆಗಿತ್ತು. ಬುರ್ಕಾ ಧರಿಸಿದ್ದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿ, ವಿರುತ್ತಂಪಟ್ಟು ಮೂಲದ ಅರುಣ್‌ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.