Hassan
ಜ.೩೦ ರಂದು ನಗರದಲ್ಲಿ ಸೌಹಾರ್ದತಾ ಮಾನವ ಸರಪಳಿ ಧರ್ಮೇಶ್ ಹೇಳಿಕೆ

ಹಾಸನ : ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಗಾಂಧಿ ಹುತಾತ್ಮ ದಿನದ ಅಂಗವಾಗಿ ಕಾರ್ಯಕ್ರಮ ನಡೆಯುವಂತೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಜನವರಿ ೩೦ ರಂದು ಸಂಜೆ ೪ ಗಂಟೆಗೆ ಸೌಹಾರ್ದತಾ ಮಾನವ ಸರಪಳಿ ಹಾಗೂ ಸಭೆ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಇಂದು ವಿವೇಕ ಅವಿವೇಕ, ಸತ್ಯ-ಅಸತ್ಯ, ವಿಚಾರ-ವಿಕಾರಗಳ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆದರೆ ಮನುಷ್ಯ-ಮನುಷ್ಯರ ನಡುವಿನ ’ಕಂದರ’ ಹೆಚ್ಚಾಗುತ್ತಿದೆ. ಈ ಕಂದರದ ಒಳಗಿಂದ ಬರುತ್ತಿರುವ ಕರುಳ ಬಳ್ಳಿಯ ಕರೆ ಕ್ಷೀಣ ದನಿಯಾಗುತ್ತಿದೆ. ಹೊರಗಿನ ಅನುಚಿತ ಗೂಳಿಗದ್ದಲದಲ್ಲಿ ಕರುಳಬಳ್ಳಿಯ ಮಾನವೀಯ ಕರೆ ಕೇಳಿಸದಂತಾಗಿದೆ. ಇಂಥ ಕಳವಳಕಾರಿ ವಾತಾವರಣದಲ್ಲಿ ಸೌಹಾರ್ದವನ್ನು ಮುನ್ನೆಲೆಗೆ ತರಲು ಎಲ್ಲ ಕ್ಷೇತ್ರಗಳ ಮಾನವೀಯ ಮನಸ್ಸುಗಳು ಮುಂದಾಗಬೇಕಾಗಿದೆ ಎಂದರು. ಸೌಹಾರ್ದ ಎಂದರೆ ಪಕ್ಷಪಾತವಲ್ಲ. ಪೂರ್ವಾಗ್ರಹವಲ್ಲ. ಇದು ಎಲ್ಲಾ ವಲಯದ ಅವಿವೇಕಗಳನ್ನು ಮೀರಿದ ವಿವೇಕದ ಹಾದಿ. ಶಾಂತಿ, ಸಮಾಧಾನ ಮತ್ತು ಸಮಾನ ಮನಸ್ಥಿತಿಯ ಸಾಮಾಜಿಕ ಮೌಲ್ಯಪರ ಮತ್ತು ವಿರೋಧಿ ನೆಲೆಗಳಲ್ಲಿರುವ ವೈರುಧ್ಯಗಳನ್ನು ಒಂದಾಗಿಸುವ ಪ್ರಕ್ರಿಯೆಯ ಪ್ರತೀಕವೇ ಸೌಹಾರ್ದ. ನಮ್ಮ ಭಾರತಕ್ಕೆ ಬಹುದೊಡ್ಡ ಸೌಹಾರ್ದ ಪರಂಪರೆಯಿದೆ. ಬಹು ಸಂಸ್ಕೃತಿ, ಬಹುಭಾಷೆ ಮತ್ತು ಬಹು ಧರ್ಮಗಳ ಎಲ್ಲರೂ ಪರಸ್ಪರ ಸೌಹಾರ್ದದಿಂದ ಬದುಕುತ್ತ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕೆಂಬ ಬದ್ಧತೆಯಿಂದ ಅನೇಕ ಸಾಧಕರು ಶ್ರಮಿಸಿದ್ದಾರೆ. ಜಾತಿ, ಮತ ಧರ್ಮಗಳನ್ನು ಮೀರಿ ಒಟ್ಟಾಗಿ ಜೀವಿಸಿದ ಸೋದರತ್ವದ ಮೌಲ್ಯವನ್ನು ಪ್ರತಿನಿಧಿಸಿದ್ದಾರೆ. ವಿವಿಧ ಹಬ್ಬಾದಿ ಆಚರಣೆಗಳನ್ನು ಒಟ್ಟಾಗಿ ಮಾಡಿ ಸಂಭ್ರಮಿಸಿದ ನಿದರ್ಶನಗಳಿಗೂ ನಮ್ಮ ದೇಶವು ಉತ್ತಮ ಸಾಕ್ಷಿ ಸ್ವರೂಪಿಯಾಗಿದೆ. ಬಹುತ್ವದ ಬದುಕಿನ ಮಾದರಿಯಾಗಿ ವಿಶ್ವಕ್ಕೆ ದಾರಿತೋರಿಸಿದೆ. ನಮ್ಮ ಕರ್ನಾಟಕವು ಇಂತಹ ಸೌಹಾರ್ದ ಪರಂಪರೆಯನ್ನು ಉನ್ನತ ಮಟ್ಟದಲ್ಲಿ ಬಂದ ಆದರ್ಶ ರಾಜ್ಯವಾಗಿದೆ ಎಂದು ಹೇಳಿದರು. ಭಾರತ ಭಾರತವಾಗಿರಬೇಕು. ಧರ್ಮವು ರಾಷ್ಟ್ರೀಯತೆಗೆ ಮಾನದಂಡವಲ್ಲ. ಅದು ಮನುಷ್ಯ ಮನುಷ್ಯನ ನಡುವಿನ ವಯಕ್ತಿಕ ಸಂಬಂಧ. ಮನಸ್ಸಿನಲ್ಲಿ ಪರಧರ್ಮದ ಬಗ್ಗೆ ಕೆಟ್ಟದಾಗಿ ಯೋಚಿಸಬಾರದು. ಎಲ್ಲಾ ಧರ್ಮಗಳನ್ನು ಸಮದೃಷ್ಠಿಯಲ್ಲಿ ನೋಡಿ ಬೇರೆ ಧರ್ಮದಲ್ಲಿರುವ ಒಪ್ಪಿತ ವೈಶಿಷ್ಟ್ಯಗಳನ್ನು ಎಲ್ಲಾ ಧರ್ಮಿಯರು ಅಳವಡಿಸಿಕೊಳ್ಳಬೇಕು.
ಹಿರಿಯ ಸಾಹಿತಿ ಭಾನುಮುಸ್ತಾಕ್ ಮಾತನಾಡಿ, ಹಲವು ದಶಕಗಳಿಂದಲೂ ಕರ್ನಾಟಕವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಹೆಮ್ಮೆಯಿಂದ ಕರೆಯುತ್ತಾ ಬಂದ ಹಿರಿಮೆಗೆ ಈಗಾಗಲೇ ಗಂಭೀರ ಧಕ್ಕೆ ಬಂದೊದಗಿರುವುದು ನಿಚ್ಚಳವಾಗಿದೆ. ಜನರನ್ನು ಮತಾಂಧತೆಯ ಆಧಾರದಲ್ಲಿ ಜಾತಿ-ಮತಧರ್ಮಗಳ ಹೆಸರಿನಲ್ಲಿ ವಿಭಜಿಸುವ ಶಕ್ತಿಗಳಿಂದ ನಮ್ಮ ಸಾಮಾಜಿಕ ಸೌಹಾರ್ದತೆಗೆ ತೀವ್ರವಾದ ಹಾನಿಯಾಗಿದೆ. ಮತೀಯ ದ್ವೇಷ-ಹಗೆತನದ ಭಾವನೆಗಳು ಸಾಮಾನ್ಯ ಜನರ ಮನಸ್ಸನ್ನು ಆವರಿಸಿಕೊಳ್ಳುತ್ತಿರುವ ವಿಷಮ ಗಳಿಗೆಯಲ್ಲಿ ನಾವು ಹಾದು ಹೋಗುತ್ತಿದ್ದೇವೆ. ದೇವರು, ಮತಧರ್ಮ ಮುಂತಾದವುಗಳನ್ನು ಸಂಕುಚಿತ ಉದ್ದೇಶಗಳಿಗೆ ಎಗ್ಗಿಲ್ಲದೇ ಬಳಸಲಾಗುತ್ತಿದೆ. ಒಟ್ಟಿಗೆ ಹೋಗುವ ನಿಟ್ಟಿನಲ್ಲಿ ಪ್ರಗತಿಪರ ಮುಖಂಡರು, ವಿವಿಧ ಸಂಘಟನೆಗಳು, ರೈತರು, ಧಾರ್ಮಿಕ ಅಲ್ಪಸಂಖ್ಯಾತ ಸಂಘಟನೆಗಳು ಸಹಕಾರ ನೀಡಿದ್ದು, ಬರಗೂರು ರಾಮಚಂದ್ರಪ್ಪ, ಮಾವಳ್ಳಿ ಶಂಕರ್, ಸಾಹಿತಿ ಭಾನುಮುಸ್ತಾಕ್ ಎಲ್ಲಾರೂ ಸೇರಿದೊಡ್ಡ ಮಟ್ಟದಲ್ಲಿ ಜನವರಿ ೩೦ ರಂದು ಮಹಾತ್ಮ ಗಾಂಧಿ ಹುತಾತ್ಮ ದಿನದಂದು ಇಡೀ ರಾಜ್ಯಾಧ್ಯಂತ ಮಾನವ ಸರಪಳಿಯನ್ನು ಮಾಡಲು ಪಾಲ್ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಾಹಿತಿ ಭಾನುಮಸ್ತಾಕ್, ಅಂತರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸಂಚಾಲಕ ಅಂಬೂಗ ಮಲ್ಲೇಶ್, ಕ್ರೈಸ್ತ ಮುಖಂಡರಾದ ಸುರೇಶ್, ಹಿರಿಯ ಪತ್ರಕರ್ತರಾದ ವೆಂಕಟೇಶ್, ಅಜಾದ್ ಟಿಪ್ಪು ಸಂಘರ್ಷ ಸಮಿತಿ ಅಧ್ಯಕ್ಷ ಮುಬಾಶೀರ್ ಅಹಮದ್, ಸೌಹಾರ್ದ ವೇದಿಕೆಯ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ ಇತರರು ಉಪಸ್ಥಿತರಿದ್ದರು.
Hassan
ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ಎಟಿಆರ್ ರಾಜಿನಾಮೆ: ಪತ್ರ ವೈರಲ್

ಹಾಸನ: ರಾಜಕೀಯ ದಿಂದ ದೂರ ಸರಿದ್ರಾ ಹಿರಿಯ ರಾಜಕಾರಣಿ ಎಟಿ ರಾಮಸ್ವಾಮಿ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿದೆ.
ಏಪ್ರಿಲ್ 15 ರಂದೇ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರಗೆ ಬರೆದಿರೊ ಪತ್ರ ಎಂದು ಹೇಳಲಾಗುತ್ತಿರುವ ಈ ಪತ್ರದಲ್ಲಿಪರಿಸರ ಉಳಿವಿಗಾಗಿ ತೊಡಗಿಸಿಕೊಳ್ಳೋದಾಗಿ ಉಲ್ಲೇಖಿಸಿ ರಾಜಿನಾಮೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಹವಾಮಾನ ವೈಪರಿತ್ಯದಿಂದ ನೆರೆ ಬರ, ಭೂ ಕಂಪ ಸೃಷ್ಟಿ ಆಗುತ್ತಿದೆ. ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಅಹಾರ ವಿಷಪೂರಿತವಾಗಿದೆ. ಬೆಟ್ಟಗುಡ್ಡ ಅರಣ್ಯ ನಾಶದಿಂದ ನದಿ ತೊರೆ ಗಳು ಬತ್ತಿ ಹೋಗಿವೆ. ಈ ಹೊತ್ತಿನಲ್ಲಿ ರಾಜಕಾರಣ ಕ್ಕಿಂತ ಪರಿಸರ ದ ಉಳಿವು ಮುಖ್ಯವಾಗಿದೆ. ನಾನು ಪರಿಸರದ ಸಂರಕ್ಷಣೆಯಲ್ಲಿ ನನ್ನ ಸಂಪೂರ್ಣ ಸಮಯ ತೊಡಗಿಸಿಕೊಳ್ಳಬೇಕೆಂದಿದ್ದೇನೆ ಎಂದು ಉಲ್ಲೇಖಿಸಲಾಗಿದೆ.
ಈಗಾಗಲೆ ಪರಿಸರಕ್ಕಾಗಿ ನಾವು ಸಂಘಟನೆಯಲ್ಲಿ ರಾಜ್ಯಾದ್ಯಕ್ಷ ಹುದ್ದೆ ಅಲಂಕರಿಸಿರೊ ಎಟಿ ರಾಮಸ್ವಾಮಿ. ರಾಜ್ಯಮಟ್ಟದ ಹಲವು ಸಾಹಿತಿ ಚಿಂತಕರುಣ ಸ್ವಾಮಿಜಿಗಳು ಹೋರಾಟಗಾರ ರ ನೇತೃತ್ವದಲ್ಲಿ ಉದಯಿಸಿರೊ ಸಂಘಟನೆ ರಾಜಕೀಯದಲ್ಲಿ ಸಕ್ರಿಯರಾಗಿರೋರಿಗೆ ಸಂಘಟನೆಯಲ್ಲಿ ಅವಕಾಶ ಇಲ್ಲದ ಹಿನ್ನೆಲೆ ಸಕ್ರಿಯ ರಾಜಕಾರಣದಿಂದ ದೂರ ಸರಿದು ಪರಿಸರ ಸಂರಕ್ಷಣೆ ಯಲ್ಲಿ ತೊಡಗಿಕೊಳ್ಳಲು ತೀರ್ಮಾನ ಮಾಡಿರೊ ಬಗ್ಗೆ ಮಾಹಿತಿ ಇದ್ದು, ಹಾಗಾಗಿಯೇ ಬಿಜೆಪಿ ಪಕ್ಷ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಲ್ಕು ಬಾರಿ ಶಾಸಕರಾಗಿ ವಿಧಾನಸಬೆಗೆ ಆಯ್ಕೆಯಾಗಿದ್ದ ಎಟಿಆರ್, ಕಳೆದ ವಿಧಾನಸಭೆ ಚುನಾವಣೆ ಹಾಲಿ ಶಾಸಕರಾಗಿದ್ದರೂ ಟಿಕೇಟ್ ನೀಡದ ಜೆಡಿಎಸ್. ಇದರಿಂದ ಮನನೊಂದು ಬಿಜೆಪಿ ಸೇರಿದ್ದ ಎಟಿ ಆರ್, ಕಾಂಗ್ರೆಸ್ ನಿಂದ ಎರಡುಬಾರಿ ಜೆಡಿಎಸ್ ನಿಂದ ಎರಡುಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎಟಿ ರಾಮಸ್ವಾಮಿ. ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದದಿಂದ ಆಯ್ಕೆಯಾಗಿದ್ದ ಎಟಿಆರ್, 2023 ರಿಂದಲೂ ರಾಜಕೀಯ ದಿಂದ ಅಂತರ ಕಾಯ್ದುಕೊಂಡಿದ್ದರು.
Hassan
ಮೇಲ್ಸೇತುವೆ ಮುಂದಿನ ಮಾರ್ಚ್‌ಗೆ ಪೂರ್ಣ: ಸಂಸದ ಶ್ರೇಯಸ್ ಪಟೇಲ್

ಹಾಸನ: ನಗರದ ಹೊಸ ಬಸ್ ನಿಲ್ದಾಣದ ಎದುರಿನ ರೈಲ್ವೆ ಮೇಲ್ಸೇತುವೆ 2ನೇ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, 2026ರ ಫೆಬ್ರವರಿ ಇಲ್ಲವೇ ಮಾರ್ಚ್ ವೇಳೆಗೆ ಮುಗಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಶನಿವಾರದಂದು ನಗರದ ಎನ್.ಆರ್. ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೂ ನಿಮಾಣ ಹಂತದಲ್ಲಿರುವ ಮೇಲ್ಸೇತುವೆ ಮೇಲೆ ತೆರಳಿ ಎಲ್ಲೆಲ್ಲಿ ಕಾಮಗಾರಿ ಆಗಬೇಕು ಎಂಬುವರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಹಲವು ಕಾರಣಗಳಿಂದಾಗಿ ಕೆಲ ವರ್ಷಗಳಿಂದ ಕಾಮಗಾರಿ ನಿಂತಿತ್ತು. ಇದೀಗ ತಮ್ಮ ತಮ್ಮ ಪಾಲಿನ ಅನುದಾನ ನೀಡಲು ಸಮ್ಮತಿಸಿವೆ. ಹೀಗಾಗಿ ಈಗಾಗಲೇ ಶುರುವಾಗಿರುವ ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಗಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿ, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಆಗಬಾರದು ಎಂದು ಸೂಚನೆ ನೀಡಲಾಗಿದೆ ಎಂದರು. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು.
ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ೮೩.೭೨ ಕೋಟಿ. ಇದರಲ್ಲಿ ರಾಜ್ಯದ ಪಾಲು ೪೯.೫೪ ಕೋಟಿ ನೀಡಬೇಕಿದೆ. ಈಗ ೨೧.೮೧ ಕೋಟಿ ರೂ. ನೀಡುವುದಾಗಿ ಸರ್ಕಾರ ಹೇಳಿದ್ದು, ಹೆಚ್‌ಎಂಆರ್‌ಡಿಸಿ ಅಡಿ ೧೫ ಕೋಟಿ ನೀಡಲಾಗಿದೆ. ಅನುದಾನಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೇಲ್ಸೇತುವೆ ಮೇಲಿನ ಕಬ್ಬಿಣದ ಬೃಹತ್ ಕಮಾನು ನಿರ್ಮಾಣ ಹೈದ್ರಾಬಾದ್‌ನಲ್ಲಿ ಆಗಲಿದೆ, ಅದಕ್ಕಾಗಿ ೮ ತಿಂಗಳು ಸಮಯಾವಕಾಶ ಬೇಕಿದೆ. ಅಲ್ಲೀವರೆಗೂ ಸಿವಿಲ್ ವರ್ಕ್ ಸೇರಿ ಉಳಿದ ಕಾಮಗಾರಿ ನಡೆಯಲಿವೆ ಎಂದರು. ಉಸುಮಾರು ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಕೇಂದ್ರ ಸಹ ತನ್ನ ಪಾಲಿನ ಅನುದಾನ ನೀಡಲು ಒಪ್ಪಿದೆ. ಹೀಗಾಗಿ ಮೇಲ್ಸೇತುವೆ ಕಾಮಗಾರಿ ಇನ್ನು ಮಂದೆ ಯಾವುದೇ ಅಡೆ-ತಡೆ ಇಲ್ಲದೆ ಮುನ್ನಡೆಯಲಿದೆ ಎಂದರು. ಎರಡೂ ಬದಿಯ ನಾಲ್ಕು ಪಥದ ಮೇಲ್ಸೇತುವೆ ನಿರ್ಮಾಣ ಆದರೆ ವಾಹನ ಸಮಸ್ಯೆ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Hassan
ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಲ್ಲ: ಸಂಸದ ಶ್ರೇಯಸ್ ಪಟೇಲ್

ಹಾಸನ : ನಮ್ಮದು ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಪಕ್ಷ ಹಾಗಾಗಿ ಇದರ ಬಗ್ಗೆ ಜವಾಬ್ದಾರಿಯುತ ತೀರ್ಮಾನವನ್ನು ಸರ್ಕಾರದ ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ. ಎಲ್ಲಾ ಸಮಾಜವನ್ನು ಸಮವಾಗಿ ನೋಡಿ ಜಾತಿಗಣತಿಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜಾತಿಗಣತಿ ವರದಿ ಗೊಂದಲ ವಿಚಾರ ಹಾಸನದಲ್ಲಿ ಸಂಸದ ಶ್ರೇಯಸ್‌ಪಟೇಲ್ ಹೇಳಿಕೆ ನೀಡಿದರು.
ಮೊನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಾಮರ್ಶಿಸಿ ತೀರ್ಮಾನ ತೆಗೆದುಕೊಳ್ಳುಬೇಕೆಂದು ಒತ್ತಾಯಿಸಿದ್ದಾರೆ. ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗುವ ಕೆಲಸವನ್ನು ನಮ್ಮ ಪಕ್ಷ ಮಾಡಲ್ಲ. ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸಮಾಜ ಮಾಡಿಲ್ಲ, ಮಾಡುವುದಿಲ್ಲ. ಜನಸ್ನೇಹಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. 2015 ರಲ್ಲಿ ಜಾತಿಗಣತಿ ನಡೆದಿತ್ತು, ಎಲ್ಲರ ಬೇಡಿಕೆ ಇತ್ತು ಜಾತಿಗಣತಿಗಾಗಿ ಕೋಟ್ಯಾಂತರ ರೂ ವೆಚ್ಚ ಮಾಡಿದ್ದಾರೆ. ಈಗೀನ ವರದಿಯ ನೈಜತೆಯನ್ನು, ಸತ್ಯಾಸತ್ಯತೆಯನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರದಿಯನ್ನು ಇನ್ನೂ ಮಂಡಿಸಿಲ್ಲ, ವರದಿ ಹೊರಗೆ ಬಂದ ಮೇಲೆ ಗೊತ್ತಾಗುತ್ತೆ. ಇನ್ನೂ ಯಾರಿಗೂ ವರದಿಯಲ್ಲಿದೆ ಎಂದು ಗೊತ್ತಿಲ್ಲ.
ಬಿಜೆಪಿ ಸರ್ಕಾರ ಕೆಡವಲು ಯತ್ನಿಸುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಯಾವಾಗಲೂ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದೇ ವಿರೋಧ ಪಕ್ಷಗಳ ಗುರಿ ಎಲ್ಲರಿಗೂ ಅಧಿಕಾರದ ಆಸೆ ಇರುತ್ತೆ ನಮಗೂ ಆಸೆ ಇದೆ, ಆದರೆ ಸಿದ್ಧಾಂತ ಇದೆ, ಜನಸೇವೆ ಮಾಡಲು ನಾವು ಬಂದಿದ್ದೇವೆ. ಅಧಿಕಾರದ ದುರಾಸೆಗೋಸ್ಕರ ಈ ಕೆಲಸ ಮಾಡಬಹುದು.ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮಲ್ಲಿ ಒಗ್ಗಟ್ಟಿದೆ, ಒಗ್ಗಟ್ಟು ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ಸಿಇಟಿ ಪರೀಕ್ಷೆಗೆ ಹೋಗುವ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಅದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ, ಆ ತರ ಮಾಡಬಾರದು. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಒಬ್ಬ ಸಾರ್ವಜನಿಕನಾಗಿ ಹೇಳುತ್ತಿದ್ದೇನೆ. ಅವರವರ ಆಚರಣೆಗಳು, ಅವರವರ ವೈಯುಕ್ತಿಕ. ಜನಿವಾರ ತೆಗೆದು ಹೋಗಿ ಎನ್ನುವುದು ಅಪರಾಧ. ನಾನಂತು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan24 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ
-
Hassan6 hours ago
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು
-
Kodagu6 hours ago
ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿ – ಬೆಂಗಳೂರು ಕೊಡವ ಸಮಾಜ ಸಿಎಂಗೆ ಮನವಿ