Mandya
ಪ್ರಕೃತಿ ವಿನಾಶ ನಿಲ್ಲಲಿ: ವಿಶ್ವ ಪರಿಸರ ದಿನಾಚರಣೆಯಲ್ಲಿ ನ್ಯಾ.ಬಿ.ಜಿ.ರಮಾ ಅಭಿಮತ
ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ. ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ , ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ, ನಗರಸಭೆ, ರೋಟರಿ ಮಂಡ್ಯ, ಇವರ ವತಿಯಿಂದ ಜಿಲ್ಲಾ ಅಗ್ನಿಶಾಮಕ ದಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟಿ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮನ್ನ ನಾವು ರಕ್ಷಣೆ ಮಾಡಿಕೊಳ್ಳುವ ಸಮಯ ದೂರವಿಲ್ಲ, ಹಲವು ವರ್ಷಗಳಿಂದಲೇ ನೀರುಗಲ್ಲುಗಳು ಕರಗಿ ಕಡಲ ತೀರಗಳು ಮುಳುಗುತ್ತವೆ ಎಂಬುದನ್ನು ತಜ್ಞರು ಹೇಳಿದ್ದಾರೆ. ಅದರಂತೆ ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಹಾಗಾಗಿ ಪ್ರಕೃತಿಯನ್ನು ರಕ್ಷಣೆ ಮಾಡುವುದು ಮುಖ್ಯವಾಗಬೇಕು. ಆ ಮೂಲಕ ಒಂದು ಸಸಿನೆಟ್ಟು ಪೋಷಣೆ ಮಾಡುವ ಮನೋಭಾವ ಹೆಚ್ಚಾಗಲಿ ಎಂದು ಅವರು ಸಲಹೆ ನೀಡಿದರು.
ವಿಶ್ವ ಪರಿಸರ ದಿನದಂದು ಮಾತ್ರ ಪರಿಸರ ಸಂರಕ್ಷಣೆ ಮಾಡದೆ, ಪ್ರತಿದಿನವೂ ಕೂಡ ಪರಿಸರ ಸಂರಕ್ಷಿಸುವ ಕೆಲಸ ಆಗಬೇಕು. ನಮ್ಮ ಮನೆಯ ಅಂಗಳದಲ್ಲಿ ಗಿಡಗಳನ್ನು ನೆಟ್ಟಿ ಪ್ರಕೃತಿಯನ್ನು ಉಳಿಸೋಣ ಎಂದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಅಗ್ನಿಶಾಮಕ ದಳದ ಕಚೇರಿಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಂಜುಳ ಇಟ್ಟಿ, ದಿಲೀಪ್ ಕುಮಾರ್, ಬಿ ಸಂದೀಪ್, ಸಾಲಿಯಾನ ಕೆ ಲಕ್ಷ್ಮಿ ಯೋಗೇಶ್ವರ, ಪೂಜಾ ಶೆಟ್ಟಿ, ಎರಡನೇ ಸಿವಿಲ್ ನ್ಯಾಯಾಧೀಶರಾದ ಶಂಕರ ವಜ್ರೇಶ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಆನಂದ್ ರೋಟರಿ ಅಧ್ಯಕ್ಷ ಬಿಎಸ್.ಅನುಪಮಾ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.
Mandya
ಬೃಹತ್ ಜನಜಾಗೃತಿ ಜಾಥಾ, ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿ, ಎಸ್‌ಪಿ
ಮದ್ದೂರು: ಅಜ್ಞಾನ, ಅರಿವಿನ ಕೊರತೆಯಿಂದ ತಮ್ಮ ಮೇಲಿರುವ ಭಾರ ಕಳೆದುಕೊಳ್ಳಬೇಕೆಂಬ ಉದ್ದೇಶದಿಂದ 18 ವರ್ಷಕ್ಕೂ ಮೊದಲೇ ಹೆಣ್ಣು ಮಕ್ಕಳ ಮದುವೆ ಮಾಡಿಸುವ ಮೂಲಕ ಪಾಲಕರು ಅವರ ಬದುಕನ್ನು ಬಲಿ ಕೊಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಕಳವಳ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶಾನಲಯ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ಮುಕ್ತ ಮಂಡ್ಯ ಜಿಲ್ಲಾ ಅಭಿಯಾನದ ಅಂಗವಾಗಿ ಬಾಲ್ಯ ವಿವಾಹ ವಿರೋಧಿಸಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೃಹತ್ ಜನಜಾಗೃತಿ ಜಾಥಾ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯ ವಿವಾಹವೂ ಒಂದಾಗಿದ್ದು, ಹೆಣ್ಣು ಮಕ್ಕಳ ಬದುಕಿಗೆ ಮಾರಕವಾಗಿ ಪರಿಣಮಿಸಿದೆ ಇಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ ಎಂದರು.
ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು, ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಸಹ ಸಾರ್ವಜನಿಕರ ಹೊಣೆಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯ ವಿವಾಹವು ಕಳೆದ ಮೂರು ವರ್ಷಗಳಿಗೆ ಹೊಲಿಸಿದರೆ ಈ ವರ್ಷ 14 ಪ್ರಕರಣಗಳಿಗೆ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ನಾವೆಲ್ಲರು ಜಾಗೃತರಾಗಬೇಕೆಂದು ಕಿವಿ ಮಾತು ಹೇಳಿದರು.
ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವಾರು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯ ವಿವಾಹವೂ ಒಂದು. ಇದು ಪ್ರಮುಖವಾಗಿ ಹೆಣ್ಣು ಮಕ್ಕಳ ಬದುಕಿಗೆ ಮಾರಕವಾಗಿ ಪರಿಣಮಿಸಿದೆ ಇಂತಹ ಪಿಡುಗಿಗೆ ಹಲವಾರು ಹೆಣ್ಣುಮಕ್ಕಳು ತುತ್ತಾಗಿದ್ದಾರೆ ಎಂದರು.
ಈ ಅನಿಷ್ಟ ಪದ್ದತಿ ಹಾಗೂ ಸಾಮಾಜಿಕ ಪಿಡುಗು ಎಂದು ಕೇಂದ್ರ ಸರ್ಕಾರ ಗುರುತಿಸಿ ಅದಕ್ಕಾಗಿಯೇ ಜಾರಿಗೆ ತಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಪ್ರಕಾರ 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ಮದುವೆ ಶಿಕ್ಷಾರ್ಹ ಅಪರಾಧವಾಗಿದೆ. ಈ ಕಾಯಿದೆ ಪ್ರಕಾರ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವ ಮೊದಲೇ ಬಾಲ್ಯ ವಿವಾಹ ಮಾಡಿದರೆ ಪಾಲಕರಿಗೆ 2 ವರ್ಷಗಳ ಕಠಿಣ ಜೈಲುವಾಸ, 1 ಲಕ್ಷ ದಂಡ ಇದೆ. ಇದು ಜಾಮೀನು ರಹಿತ ಹಾಗೂ ವಿಚಾರಣಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಆನಂದ್ ಮಾತನಾಡಿ, ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಸಾಕಷ್ಟು ಪ್ರಕರಣಗಳು ದಾಖಲಾಗಿದ್ದವು. ಆದರೆ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಕ್ಕಳ ರಕ್ಷಣಾ ನಿದರ್ೇಶನಾಲಯ, ಅಧಿಕಾರಿಗಳ ಜತೆಗೆ ಸಾಕಷ್ಟು ಜಾಥಾ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷ 14 ಪ್ರಕರಣಗಳಿಗೆ ಇಳಿಕೆಯಾಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ತರಲು ಎಲ್ಲರು ಮುಂದಾಗಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ತಾಲೂಕು ಕ್ರೀಡಾಂಗಣದವರೆಗೂ ವಿವಿಧ ಶಾಲಾ, ಕಾಲೇಜು ವಿದ್ಯಾಥರ್ಿಗಳು, ಅಂಗನವಾಡಿ ಕಾರ್ಯಕತರ್ೆಯರು, ಸಹಾಯಕಿರು, ಆಶಾ ಕಾರ್ಯಕತರ್ೆಯರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ, ಎನ್.ಸಿ ನಳಿನಿ, ಶಾಲಾ ಶಿಕ್ಷಣ ಇಲಾಖೆ ಉಪ ನಿದರ್ೇಶಕ ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಆಶಾ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಡಿವೈಎಸ್‌ಪಿ ಯಶವಂತ್ ಕುಮಾರ್, ನಗರಸಭೆ ಪೌರಾಯುಕ್ತೆ ಎಸ್.ಎನ್.ರಾಧಿಕಾ, ಬಿಇಓ ಎಸ್.ಬಿ.ಧನಂಜಯ, ಸಿಡಿಪಿಓ ಅರುಣ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದಶರ್ಿ ಎಂ.ಜೆ.ಸುಮಂತ್, ಸಿಪಿಐ ನವೀನ್ ಕುಮಾರ್ ಮತ್ತಿತರರು ಇದ್ದರು.
Mandya
ನಾಳೆ ಜೂನಿಯರ್ ಟೋಸ್ ಇಂಟರ್‌ನ್ಯಾಷನಲ್ ಪ್ರೀಸ್ಕೂಲ್‌ನ ಮಂಡ್ಯ ಶಾಖೆ ಲೋಕಾರ್ಪಣೆ : ಚಿರಾಗ್
ಮಂಡ್ಯ: ಅಶ್ವಿನಿ ಪುನಿತ್ ರಾಜ್‌ಕುಮಾರ್ ಅವರ ಸಂಸ್ಥಾಪಕ ಸಹಭಾಗಿತ್ವದ ಜೂನಿಯರ್ ಟೋಸ್ ಇಂಟರ್‌ನ್ಯಾಷನಲ್ ಪ್ರೀಸ್ಕೂಲ್‌ನ ಮಂಡ್ಯ ಶಾಖೆಯನ್ನು ಫೆ.5 ರಂದು ಮಧ್ಯಾಹ್ನ 12 ಗಂಟೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ ಶಾಖೆಯ ಪಾಲುದಾರ ಚಿರಾಗ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜೂನಿಯರ್ ಟೋಸ್ ಪ್ರೀಸ್ಕೂಲ್‌ನ 15ಕ್ಕೂ ಹೆಚ್ಚು ಶಾಖೆಗಳಿವೆ. ಮೈಸೂರಿನ ನಂತರ ಮಂಡ್ಯದಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗುತ್ತಿದೆ ಎಂದರು.

ನೂತನ ಶಾಖೆಯನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಮಾಜಿ ಮಂತ್ರಿ ಕೆ.ಗೋಪಾಲಯ್ಯ, ಶಾಕರಾದ ಪಿ.ರವಿಕುಮಾರ್ ಗೌಡ, ಮಧು ಜಿ.ಮಾದೇಗೌಡ, ಎಂ.ಜಿ.ದಿನೇಶ್ ಗೂಳೀಗೌಡ, ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಸಿ.ಭಗವಾನ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಎಡಿಸಿಸಿ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಬಿಬಿಎಂಪಿಯ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಡಿಐಜಿ ಎನ್.ವಿಷ್ಣುವರ್ಧನ, ಮಂಡ್ಯ ಎಸ್‌ಪಿ ಡಾ.ವಿ.ಜೆ.ಶೋಭರಾಣಿ, ಬೆಂಗಳೂರು ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ರಘುವೀರ್ ಗೌಡ ಹಾಗೂ ಸಂಸ್ಥೆಯ ಸಹ ಸಂಸ್ಥಾಪಕಿ ಅಶ್ವಿನಿ ಪುನಿತ್ ರಾಜ್‌ಕುಮಾರ್ ಭಾಗವಹಿಸುವರು ಎಂದು ಹೇಳಿದರು.
Mandya
ಫೆ.7ಕ್ಕೆ ನಾನು ಕಾಫಿರ ಪುಸ್ತಕ ಬಿಡುಗಡೆ : ಡಾ.ಸುಧಾಕರ್ ಹೊಸಳ್ಳಿ
ಮಂಡ್ಯ: ಅಖಿಲ ಭಾರತ ಸಾಹಿತ್ಯ ಪರಿಷದ್ ಮತ್ತು ಸ್ವರಾಷ್ಟ್ರ ಪ್ರಕಾಶನ ಸಹಯೋಗದಲ್ಲಿ ನಾನು ಕಾಫಿರ ಪುಸ್ತಕ ಬಿಡುಗಡೆ ಸಮಾರಮಭವನ್ನು ಫೆ.7ರಂದು ಬೆಳಿಗ್ಗೆ 10.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕೃತಿಯ ಕತೃ ಡಾ.ಸುಧಾಕರ್ ಹೊಸಳ್ಳಿ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಭಜಿಸಲು ಅಂಬೇಡ್ಕರ್‌ರನ್ನು ಹಿಂದೂ ಧರ್ಮದ ವಿರುದ್ಧ ಗುರಾಣೀಯಾಗಿ ಬಳಸಲಾಗುತ್ತಿದೆ. ಈ ಸಂಬಂಧ ಹಿಂದೂ ಸಮಾಜದ ಜಾಗೃತಿ ಭಾಗವಹಿsi `ನಾನೂ ಕಾಫಿರ’ ಕೃತಿ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್‍ಯದರ್ಶಿ ಬಿ.ಎಲ್.ಸಂತೋಷ್ ಕಾರ್‍ಯಕ್ರಮ ಉದ್ಘಾಟಿಸಿ, ಪುಸ್ತಕ ಬಿಡುಗಡೆ ಮಾಡುವರು. ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆ ವಹಿಸುವರು. ಎಸ್‌ಬಿಇಟಿ ಕಾರ್‍ಯದರ್ಶಿ ಡಾ.ಮೀರಾಶಿವಲಿಂಗಯ್ಯ ಹಾಗೂ ಸ್ವರಾಷ್ಟ್ರ ಪ್ರಕಾಶನದ ಮಹಾಪೋಷಕ ಚಂದ್ರಶೇಖರ್ ದಡದಪುರ ಭಾಗವಹಿಸಲಿದ್ದಾರೆ. ಸಂವಿಧಾನ ತಜ್ಞ, ಲೇಖಕ ಡಾ.ಸುಧಾಕರ ಹೊಸಳ್ಳಿ ಉಪಸ್ಥಿತರಿರುವರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಪುಸ್ತಕ ಪ್ರೇಮಿ ಎಂ.ಅಂಕೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷದ್‌ನ ಜಿಲ್ಲಾಧ್ಯಕ್ಷ ಎಚ್.ಪದ್ಮನಾಭ, ವಿಭಾಗ ಪ್ರಭಾರಿ ಬಿ.ಎಸ್.ಅನುಪಮ ಇದ್ದರು.
-
Politics6 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu12 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu12 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
Hassan4 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Hassan8 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
National7 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Chamarajanagar8 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
-
Mysore7 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
