Location
ಮಂಡ್ಯಕ್ಕೆ ಬಾಂಬ್ ಹಾಕುವವರು ಬರುತ್ತಿದ್ದಾರೆ ಎಚ್ಚರಿಕೆಯಿಂದಿರಿ: ಕಲ್ಲಡ್ಕ ಪ್ರಭಾಕರ್
ಮಂಡ್ಯಕ್ಕೆ ಬಾಂಬ್ ಹಾಕುವವರು ಬರುತ್ತಿದ್ದಾರೆ ಎಚ್ಚರಿಕೆಯಿಂದಿರಿ: ಕಲ್ಲಡ್ಕ ಪ್ರಭಾಕರ್
ಕಲ್ಲಡ್ಕ ಪ್ರಭಾಕರ್‌ನಿಂದ ಆಕ್ರೋಶ ಭರಿತ ಭಾಷಣ
ಮಂಡ್ಯ: ಮುಸ್ಕಾನ್‌ಗೆ ಹಣ, ಶಹಬ್ಬಾಶ್‌ಗಿರಿ ಕೊಟ್ಟದ್ದು ಭಯೋತ್ಪಾದಕ ಸಂಘಟನೆ ಅಲ್‌ಖೈದಾ, ಆ ಸಂಘಟನೆ ಜೊತೆ ಸಂಪರ್ಕದಲ್ಲಿರುವ ಹೆಣ್ಣು ಮಗಳು ಮಂಡ್ಯದಲ್ಲಿದ್ದಾಳೆ, ಬಾಂಬ್ ಹಾಕುವವರು ಬರುತ್ತಿದ್ದಾರೆ ಇನ್ನುಮುಂದೆ ಹುಷಾರಾಗಿರಿ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಎಚ್ಚರಿಕೆ ನೀಡಿದರು.
ಪಟ್ಟಣದ ಮೂಡಲಬಾಗಿಲು ಆಂಜನೇಯ ಸ್ವಾಮಿ ದೇವಾಲಯ ಆವರಣದಲ್ಲಿ ಹಿಂದೂ ಸಂಘಟನೆಗಳ ಸಹಯೋಗದಲ್ಲಿ ನಿರ್ಮಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನೀವು ಹಿಬಾಜ್ ಧರಿಸಲು ಅವಕಾಶ ನೀಡಿದರೆ ನಾವು ಕೇಸರಿ ಶಾಲು ಧರಿಸುತ್ತೇವೆ, ಕೇಸರಿ ಟೋಪಿ ಧರಿಸುತ್ತೇವೆ. ಅಲ್ಲಾ ಹು ಅಕ್ಬರ್ ಅಂದರೇ ನಾವು ಜೈ ಶ್ರೀರಾಮ್ ಎನ್ನುತ್ತೇವೆ, ಶಾಲೆಗಳಲ್ಲಿ ಜೈಶ್ರೀರಾಮ್ ಘೋಷಣೆ ಕೂಗುತ್ತೇವೆ, ತಾಕತ್ತು ಇದ್ದರೇ ತಡೆಯಿರಿ
ದ ಕೇಳರ ಸ್ಟೋರಿ, ಕಾಶ್ಮೀರ ಫೈಲ್ಸ್ ಸಿನೆಮಾ ನೋಡಿ, ಮತಾಂತರ, ಹಿಂದೂಗಳ ಮೇಲಿನ ದೌರ್ಜನ್ಯ ತೋರಿಸಿದ್ದಾರೆ, ಮುಸ್ಲಿಂ ಹುಡುಗರಲ್ಲ, ಯುವತಿಯರು ಮೋಸ ಮಾಡುತ್ತಿದ್ದಾರೆ. ದಿ ಕೇರಳ ಸ್ಟೋರಿ ಮೂವಿಯಲ್ಲಿ ಈ ಬಗ್ಗೆ ತೋರಿಸಿದ್ದಾರೆ.
ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ ಎಂದು ಹರಿಯಾಯ್ದರು.
ಕ್ಯಾ.ಪ್ರಾಂಜಲ್ ಬಲಿದಾನಕ್ಕೆ ಕಾರಣರಾದವರು ಕಾಂಗ್ರೆಸ್. ಆ ವಿಷಬೀಜ ಬಿತ್ತಿ, ಬೆಳೆದವರು ಕಾಂಗ್ರೆಸ್, ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ದರು, 10 ಸಾವಿರ ಕೋಟಿ ರೂ. ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ, ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಹಿಂದೂಗಳು ಸರ್ಕಾರಕ್ಕೆ ತೆರಿಗೆ ಕಟ್ಟುವುದು ಎಂದು ಆಕ್ರೋಶ ಹೊರಹಾಕಿದರು.
ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದು ಪ್ರತ್ಯೇಕತೆ ಬೀಜ ಬಿತ್ತುತ್ತೀರಾ? ಯಾರಲ್ಲೂ ಭೇದಭಾವ ಬರಬಾರದೆಂದು ಸಮವಸ್ತ್ರ ಇದೆ. ಹಿಜಾಬ್ ತರುವ ತಾಕತ್ ಇದೆಯಾ ನಿಮಗೆ. ತಾಕತ್ ಇದ್ದರೆ ಹಿಜಾಬ್ ವಾಪಸ್ ತರುವ ಪ್ರಯತ್ನ ಮಾಡಿ, ಬೀಬಿ ಮುಸ್ಕಾನ್ ಅಲ್ಲಾ ಹು ಅಕ್ಬರ್ ಘೋಷಣೆ ಹೇಳಿದಳು, ನೀನು ಮನೆಯಲ್ಲಿ, ಮಸೀದಿಯಲ್ಲಿ ಈ ಘೋಷಣೆ ಹೇಳು. ಈ ದೇಶದಲ್ಲಿ ರಾಮ್ ರಾಮ್ ಎಂದು ಹೇಳಬೇಕು ಎಂದು ಎಚ್ಚರಿಕೆ ನೀಡಿದರು.
ಈ ದೇಶದಲ್ಲಿ ಇರಬೇಕಾದರೆ ಎಲ್ಲರಂತೆ ಇರಬೇಕು. ಮುಸ್ಕಾನ್‌ಗೆ ಹಣ, ಶಹಬ್ಬಾಶ್‌ಗಿರಿ ಕೊಟ್ಟದ್ದು ಭಯೋತ್ಪಾದಕ ಸಂಘಟನೆ ಅಲ್‌ಖೈದಾ, ಆ ಸಂಘಟನೆ ಜೊತೆ ಸಂಪರ್ಕದಲ್ಲಿರುವ ಹೆಣ್ಣು ಮಗಳು ಮಂಡ್ಯದಲ್ಲಿದ್ದಾಳೆ. ಹುಷಾರಿಗರಬೇಕು.
ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ದರೆ ಅವಳು ಕಾಲೇಜಿಗೆ ಹೋಗಲಿ, ಮಂಡ್ಯದಲ್ಲಿ ಬಾಂಬ್ ಹಾಕುವ ಲಕ್ಷಣಗಳಿವೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ದೇಶ ವಿಭಜನೆ ಮಾಡಬೇಡಿ ಅಂದಿದ್ದರು. ದೇಶವನ್ನ ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು. ಮುಸಲ್ಮಾನ್ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರು ಮತಾಂತರ ಮಾಡುತ್ತಿದ್ದಾರೆ, ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ. ಹಿಂದೂ ಹುಡುಗಿಯರನ್ನ ಯಾಕೆ ಟಾರ್ಗೆಟ್ ಮಾಡ್ತೀರಾ. ನಿಮಗೆ ತಲಾಕ್ ಹೇಳುವ ಅವಕಾಶ ಇತ್ತು. ಮೋದಿ ಸರ್ಕಾರದಿಂದ ತ್ರಿವಳಿ ತಲಾಕ್ ಇಲ್ಲದಾಗಿದೆ.
ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ ಎಂದು ಟೀಕಿಸಿದರು.
………….
Mysore
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿ: ಕೊಡಗಿನಲ್ಲಿ ಟವರ್‌ಗಳಿಗೆ ಬ್ಯಾಟರಿ ಸೆಟ್ ಅಳವಡಿಸಲು ಯದುವೀರ್ ಮನವಿ
ಮೈಸೂರು: ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಕ್ಷೇತ್ರಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಬೇಕಾದ ಅಗತ್ಯವಿರುವುದರಿಂದ ಕೂಡಲೇ ಟವರ್‌ಗಳಿಗೆ ಬ್ಯಾಟರಿ ಸೆಟ್ ಅಳವಡಿಕೆ ಹಾಗೂ 15 ಪವರ್ ಪ್ಲಾಂಟ್ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಸಲ್ಲಿಸಿದರು.
ಕಳೆದ ಬಾರಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಕಂಬಗಳು ಧರೆಗುರುಳಿದಿದ್ದು, ಇದರಿಂದ ಸಾರ್ವಜನಿಕರಿಗೆ ಸಂಪರ್ಕ ಸಾಧಿಸಲು ಭಾರಿ ತೊಂದರೆ ಎದುರಾಗಿತ್ತು.
ಈ ನಿಟ್ಟಿನಲ್ಲಿ ಕೇಂದ್ರ ಸಚಿವರಿಗೆ ಪತ್ರ ಬರೆದು ಮೂಲ ಸೌಕರ್ಯ ಹೆಚ್ಚಿಸಲು ಆಗ್ರಹಿಸಲಾಗಿತ್ತು ಎಂದರು.
ಅತಿ ಶೀಘ್ರದಲ್ಲೇ ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hassan
ಟಿಕೆಟ್ ಪರಿಶೀಲನೆ ವೇಳೆ ಭೀಕರ ಅಪಘಾತ: ಲಾರಿ ಗುದ್ದಿ KSRTC ಟಿಕೆಟ್ ತನಿಖಾಧಿಕಾರಿ ಸ್ಥಳದಲ್ಲೇ ಸಾ*ವು
ಹಾಸನ : ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ KSRTC ಟಿಕೆಟ್ ತಪಾಸಣಾ ಇನ್ಸ್‌ಪೆಕ್ಟರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣಾ ಇನ್ಸ್‌ಪೆಕ್ಟರ್ ಶಕುನಿಗೌಡ (57) ಮೃತ ಅಧಿಕಾರಿ. ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಅವರು ರಸ್ತೆ ದಾಟುತ್ತಿದ್ದ ವೇಳೆ, ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಶಕುನಿಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.
Chamarajanagar
ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ
ಗುಂಡ್ಲುಪೇಟೆ: ಸಿಡಿಮದ್ದು ಸಿಡಿದು ಹಸುವಿಗೆ ಬಾಯಿ ಛಿದ್ರ ವಾಗಿರುವ ಘಟನೆ ನಡೆದಿದೆ.
ತಾಲೂಕಿನ ಸೋಮಹಳ್ಳಿ ಗ್ರಾಮದ ನಂಜುಂಡಪ್ಪ ನವರಿಗೆ ಸೇರಿದ ಹಸು. ನಂಜುಂಡಪ್ಪನವರ ಜಮೀನಿನಲ್ಲಿ ಹಸು ಮೇಯಿಸುವಾಗ ಸಂದರ್ಭದಲ್ಲಿ ಸಿಡಿಮದ್ದು ಸಿಡಿದು ಸಂಪೂರ್ಣ ಬಾಯಿ ಸೀಳಿಹೋಗಿ ಛಿಧ್ರವಾಗಿದೆ.

ಸಿಡಿಮದ್ದು ಸಿಡಿದು ಹಸುವಿನ ಬಾಯಿ ಸಂಪೂರ್ಣ ಚಿದ್ರವಾಗಿದ್ದು ಅದು ಬದುಕುಳಿಯುವುದು ಕಷ್ಟಕರವಾಗಿದೆ. ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಕ್ರಮವಹಿಸಬೇಕು ಹಾಗೂ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
-
Hassan19 hours agoಸರ್ಕಾರಿ ಆದೇಶ ಉಲ್ಲಂಘಿಸಿ ಕ್ರಿಸ್ಮಸ್ ರಜೆ ದುರುಪಯೋಗ : ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ
-
Hassan17 hours agoಡಿ.14 ರಿಂದ ಜ.4 ರವರೆಗೂ ಬಾಳ್ಳುಪೇಟೆಯಲ್ಲಿ ಯೋಗ, ಧ್ಯಾನ ಶಿಬಿರ
-
Kodagu18 hours agoಏ.24 ರಿಂದ 28ರ ವರೆಗೆ ಮೇಕೇರಿ ಮಸೀದಿಯ ಮಖಾಂ ಉರೂಸ್
-
Chamarajanagar16 hours agoರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ
-
Hassan15 hours agoಡಿ. 16ಕ್ಕೆ ಖಾಸಗಿ ವಿದ್ಯಾಸಂಸ್ಥೆ ವಿರುದ್ಧ ಪ್ರತಿಭಟನೆ : ಎಂ.ಡಿ.ಬಾಲರಾಜು ಆಗ್ರಹ
-
Hassan17 hours agoನೂತನ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದ ಸಿಮೆಂಟ್ ಮಂಜು
-
Mysore18 hours agoಗ್ರಾ.ಪಂ.ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ: ಡಾ.ಮಲ್ಲಿಕಾರ್ಜುನಸ್ವಾಮಿ
-
Mandya19 hours agoಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ: ಎಸಿ ಚೇತನಾ ಯಾದವ್ ಕರೆ
