Connect with us

Mandya

ವಿಚಾರ ಸಂಕಿರಣದಲ್ಲಿ ಆರು ನಿರ್ಣಯ ತೆಗೆದುಕೊಂಡ ಹೋರಾಟಗಾರರು

Published

on

ಮಂಡ್ಯ: ನಗರದ ಗಾಂಧಿ ಭವನದಲ್ಲಿ ಕಾವೇರಿ ಹಿತರಕ್ಷಣಾ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ನಡೆದ ವಿಚಾರ ಸಂಕಿರಣ ಕಾವೇರಿ ನದಿ ವಿವಾದದ ಶಾಶ್ವತ ಪರಿಹಾರಕ್ಕಾಗಿ ರಾಷ್ಟ್ರೀಯ ವೈಜ್ಞಾನಿಕ ಜಲನೀತಿ ರೂಪಿಸಬೇಕು ಎಂಬುದು ಸೇರಿದಂತೆ ಪ್ರಮುಖ ಆರು ನಿರ್ಣಯಗಳನ್ನು ತೆಗೆದುಕೊಂಡು ಮುಖ್ಯಮಂತ್ರಿಗೆ ಕಳುಹಿಸಲಾಯಿತು.

ವಿವಾದವಿಲ್ಲದ ವೈಜ್ಞಾನಿಕ ಸಂಕಷ್ಟ ಸೂತ್ರ ರಚಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಲಾಯಿತು, ಬೆಳೆ ಪರಿಹಾರ ಘೋಷಿಸಿ ಬಿಡುಗಡೆ ಮಾಡಬೇಕು. ಮೇಕೆದಾಟು ಯೋಜನೆ ಪ್ರಾರಂಭಿಸಿ-ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಬೇಕು. ಕಾವೇರಿ ಕೊಳ್ಳದ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದಿರುವ ಪ್ರಾಕೃತಿಕ ವೈಪರೀತ್ಯಗಳು, ಆರ್ಥಿಕ ಸ್ಥಿತಿ-ಗತಿಗಳು, ಆರ್ಥಿಕ ಮತ್ತು ಸಾಮಾಜಿಕ ಪರಿಣಾಮ, ನೀರು ನಿರ್ವಹಣೆ ಈ ಎಲ್ಲಾ ವಿಚಾರಗಳ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಬೇಕು ಎಂದು ನಿರ್ಣಯ ತೆಗೆದುಕೊಂಡರು.

ಮೈಷುಗರ್ ಸಕ್ಕರೆಕಾರ್ಖಾನೆ ರೈತರ ಹಿತಕ್ಕಾಗಿ ನೂತನ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿ ಕಾರ‌್ಯರೂಪಕ್ಕೆ ತರಬೇಕು. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿರುವುದನ್ನು ಸಭೆಯಲ್ಲಿ ಖಂಡಿಸಲಾಯಿತು.

ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯುವ ಹೋರಾಟ ಯಶಸ್ವಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಹೋರಾಟವೂ ನಿರಂತರವಾಗಿ ಮುನ್ನಡೆಯಬೇಕು. ಜಗತ್ತಿನ ಯಾವ ಭಾಗದಲ್ಲಿಯೂ ಇಂತಹ ಹೋರಾಟ ನಡೆದಿಲ್ಲ, ಅಷ್ಟರ ಮಟ್ಟಿಗೆ ಕಾವೇರಿ ನದಿ ವಿಚಾರವಾಗಿ ಸಮಾಜದ ಎಲ್ಲಾ ಸ್ತರದ ಜನತೆ ಹೋರಾಟ ಮಾಡಿ ಇತಿಹಾಸದ ಪುಟದಲ್ಲಿ ದಾಖಲು ಮಾಡಿದ್ದಾರೆ ಎಂದರು.

ಹೋರಾಟಕ್ಕೆ ಎಂದಿಗೂ ಸಾವಿಲ್ಲ, ಹೋರಾಟ ಮಾಡಿದರೆ ಏನು ಪ್ರಯೋಜನ ನೀರು ಹೋಗುತ್ತಲೇ ಇದೆ ಎಂದು ಹೇಳಿ ಮೌನಕ್ಕೆ ಮೊರೆ ಹೋಗುವ ಪ್ರತೀತಿ ಸರಿಯಲ್ಲ ನ್ಆಯಕ್ಕಾಗಿ ದನಿ ಎತ್ತದಿದ್ದರೆ ಬದುಕಿದ್ದು ಸತ್ತಂತೆ, ಕಾವೇರಿ ನದಿ ಬದುಕಿನ ವಿಚಾರ ಇದರಲ್ಲಿ ನಂಬಿಕೆ ಇರಬೇಕು. ಸಂಕುಚಿತ ಮನೋಭಾವ ಸರಿಯಲ್ಲ, ಪರ್ಯಾಯ ಎಂಬ ಆಲೋಚನೆ ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು, ಎಲ್ಲರೂ ಮಾಡುತ್ತಿರುವುದು ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಎಂಬ ಪ್ರಜ್ಞೆ ಇರಬೇಕು ಎಂದು ಸಲಹೆ ನೀಡಿದರು.

ನಿರಂತರ ಹೋರಾಟ ಮುಖ್ಯ, ಎಲ್ಲಾ ಶಕ್ತಿ ಒಗ್ಗೂಡಿ ಮುನ್ನಡೆಯಬೇಕಾಗಿದೆ, ಕೆಲವರು ಮತ ಬ್ಯಾಂಕ್ ಮತ್ತೆ ಕೆಲವರು ಸ್ಥಾನಮಾನಕ್ಕಾಗಿ ಹೋರಾಟದಲ್ಲಿ ಭಾಗಿಯಾಗಬಹುದು ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು, ಇದುವರೆಗಿನ ಕಾವೇರಿ ಹೋರಾಟವನ್ನು ಸೂಕ್ಷ್ಮವಾಗಿ ಗ್ರಹಿಸಿದರೆ ಆಯಾ ಕಾಲಘಟ್ಟದಲ್ಲಿ ಆಡಳಿತದಲ್ಲಿದ್ದ ಪಕ್ಷಗಳು ಮತ್ತು ಪ್ರತಿ ಪಕ್ಷದಲ್ಲಿದ್ದ ಪಕ್ಷಗಳು ಯಾವ ರೀತಿ ನಡೆದುಕೊಂಡಿವೆ, ಅವರ ಪಕ್ಷ ಅಧಿಕಾರದಲ್ಲಿದ್ದಾಗ ಆ ಪಕ್ಷದ ನಾಯಕರ ವರ್ತನೆ, ವಿರೋಧ ಪಕ್ಷದಲ್ಲಿದ್ದಾಗ ಅವರ ವರ್ತನೆ ಎಲ್ಲವನ್ನು ಜನತೆ ನೋಡಿದ್ದಾರೆ ಎಂದರು.

ಕಾವೇರಿ ವಿಚಾರದಲ್ಲಿ ತಮಿಳುನಾಡು ನಿರಂತರ ಕುತಂತ್ರ ಮತ್ತು ವಾಮ ಮಾರ್ಗ ಅನುಸರಿಸಿದೆ, ಎರಡು ರಾಜ್ಯಗಳ ನಡುವಿನ ಜಲ ವಿವಾದ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದ್ದರು ಸಹ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಪಕ್ಷವನ್ನ ಬೆಂಬಲಿಸಿ ಕಾವೇರಿ ನ್ಯಾಯಾಧಿಕರಣ ರಚನೆಗಾಗಿ ದೊಡ್ಡ ಲಾಭಿ ಮಾಡಿತು. ಅಲ್ಲಿಂದಲೇ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯ ಶುರುವಾಯಿತು, ಆದರೆ ಕರ್ನಾಟಕ ರಾಜ್ಯದ ರಾಜಕಾರಣಿಗಳು ರಾಜ್ಯದ ಹಿತ ಕಾಪಾಡಲು ಮುಂದಾಗಲಿಲ್ಲ, ಕಾವೇರಿ ವಿಚಾರದಲ್ಲಿ ಯಾವುದೇ ಆದೇಶವನ್ನು ತಿರಸ್ಕರಿಸುವ ಗಟ್ಟಿ ದನಿ ಎತ್ತಲಿಲ್ಲ ಎಂದು ವಿಷಾದಿಸಿದರು.

ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಹಾಡ್ಯ ರಮೇಶ್‌ರಾಜು, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್‌.ಕೆಂಪೂಗೌಡ, ಸಮಿತಿಯ ಬೇಕರಿ ರಮೇಶ್, ಮಾ.ಸೋ ಚಿದಂಬರ್, ಶಂಕರೇಗೌಡ, ಪುಟ್ಟಮ್ಮ, ನಿರ್ಮಲ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಸಹಭಾಗಿತ್ವದ ನೀರಾವರಿ ಆಡಳಿತ ನಡೆಸಲು ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಅತ್ಯಗತ್ಯ

Published

on

ಮಂಡ್ಯ: ಸಹಭಾಗಿತ್ವದ ನೀರಾವರಿ ಆಡಳಿತ ನಡೆಸಲು ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಅತ್ಯಗತ್ಯ ಎಂದು ಮಂಗಲ ನೀರು ಬಳಕೆದಾರರ ಸಹಕಾರ ಸಂಘದ ನಿರ್ದೇಶಕ ಮಂಗಲ ಯೋಗೇಶ್ ಆಗ್ರಹ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಭಾಗಿತ್ವದಲ್ಲಿ ನೀರಾವರಿ ಆಡಳಿತವನ್ನು ಪ್ರಾರಂಭಿಸಿ ಆ ಮೂಲಕ ರೈತರಲ್ಲಿ ನೀರು ನಿರ್ವಹಣೆ, ನೀರಿನ ಮಿತ ಬಳಕೆ ಮತ್ತು ಸದ್ಬಳಕೆ ಮಾಡುವ ಮಹತ್ವಾಕಾಂಕ್ಷೆಯೊಡನೆ ಪ್ರಾರಂಭಿಸಿದ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ ಅವಶ್ಯಕವಾಗಿದೆ. ಹಾಗಾಗಿ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಕಳೆದ ಮೂರು ದಶಕಗಳಿಂದಲೂ ನೀರು ಬಳಕೆದಾರರ ಸಹಕಾರ ಸಂಘಗಳು ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಾಧಿಸಿಲ್ಲ .ಈ ಸಂಬಂಧ ನೀರು ಬಳಕೆದಾರರ ಸಹಕಾರ ಸಂಘ ,ವಿತರಣಾ ವ್ಯಾಪ್ತಿಯ ಒಕ್ಕೂಟ, ಅಣೆಕಟ್ಟೆ ವ್ಯಾಪ್ತಿಯಲ್ಲಿ ಯೋಜನಾ ಮಟ್ಟದ ಮಹಾಮಂಡಳ, ರಾಜ್ಯಮಟ್ಟದಲ್ಲಿ ಶೃಂಗ ಮಹಾ ಮಂಡಳಗಳ ರಚನೆಯನ್ನು ಜರೂರಾಗಿ ಮಾಡಬೇಕಿದೆ ಎಂದರು.

ವಿಕೇಂದ್ರಿತ ಸಂಘಗಳ ಕಾರ್ಯ ಚಟುವಟಿಕೆಗಳು ಪ್ರಸಕ್ತ ಪರಿಣಾಮಕಾರಿಯಾಗಿ ನಡೆಯಬೇಕಾದರೆ ಈ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಿದೆ. ಯೋಜನೆಗಿಂತ ಮುನ್ನ 2000ನೇ ಇಸವಿಯಲ್ಲಿ ಕರ್ನಾಟಕ ಸರ್ಕಾರ ನೀರಾವರಿ ಕಾಯಿದೆಗೆ ತಿದ್ದುಪಡಿ ತಂದಿರುವುದು ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗೆ ಸಹಕಾರಿಯಾಗಿದ್ದು, ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ರಾಷ್ಟ್ರೀಯ ಬ್ಯಾಂಕುಗಳು ರೈತರಿಗೆ ಸಾಲ ವಿತರಿಸುವಾಗ ನೀರು ಬಳಕೆದಾರರ ಸಹಕಾರ ಸಂಘಗಳಿಂದಲೇ ಬಾಕಿ ಪ್ರಮಾಣಪತ್ರವನ್ನು ಪಡೆದುಕೊಳ್ಳುವಂತೆ ಸೂಚಿಸಬೇಕು. ಕೇಂದ್ರ ಸರ್ಕಾರದ ಧನಸಹಾಯದ ಕಾರ್ಯಕ್ರಮದಲ್ಲಿ ನೀರು ಬಳಕೆದಾರರ ಸಂಘಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ವಾರ್ಷಿಕ ಕಾರ್ಯ ಧನವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಬೇಕು. ವಿಸಿ ನಾಲಾ ಆಧುನಿಕರಣ ಕಾಮಗಾರಿಯನ್ನು ನಿಲ್ಲಿಸಿ ಮುಂಗಾರಿನಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಮಹಾಮಂಡಲಗಳಿಗೆ ಶೇರುಧನವಾಗಿ ಒಂದು ಕೋಟಿ ರೂಪಾಯಿಗಳನ್ನು ಸರ್ಕಾರ ನೀಡಿ ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊತ್ತತ್ತಿ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಕೆ ಎಸ್ ರವಿ, ಎಂ ಬಿ ಸುರೇಶ, ಚನ್ನಪ್ಪ, ಚಂದ್ರಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು

Continue Reading

Mandya

ಆರೋಗ್ಯಯುತವಾದ ಜೀವನಕ್ಕಾಗಿ 1 ಗಂಟೆ ಸಮಯವನ್ನು ಮೀಸಲಿಡಿ: ಡಾ: ಸೀತಾಲಕ್ಷ್ಮಿ

Published

on

ಮಂಡ್ಯ: ಆರೋಗ್ಯಯುತ ಜೀವನಕ್ಕಾಗಿ ಪ್ರತಿದಿನ ಯೋಗ, ವ್ಯಾಯಮ, ವಾಕ್ ಯಾವುದಾದರೂ ದೈಹಿಕ ಚಟುವಟಿಕೆಗೆ ಒಂದು ಗಂಟೆ ಮೀಸಲಿಡಿ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಸೀತಾ ಲಕ್ಷ್ಮಿ ಅವರು ಹೇಳಿದರು.

ಅವರು ಮಿಮ್ಸ್ ಇಲಾಖೆಯಲ್ಲಿ ಹಮ್ಮಿಕೊಂಡಿದ್ದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿ, 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಂಬಂಧ ಯೋಗೋತ್ಸವ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯ ಮಿಮ್ಸ್ ಇಲಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಎಲ್ಲಾ ವಿದ್ಯರ್ಥಿಗಳಿಗೂ ಡಿಜಿಟಲ್ ಪ್ರಮಾಣಪತ್ರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎಸ್.ಪಿ.ವೈ.ಎಸ್ ಎಸ್.ನ ಜಿಲ್ಲಾ ಸಂಚಾರಕರಾದ ಶಂಕರ ನಾರಾಯಣ ಶಾಸ್ತ್ರೀ, ಯೋಗ ತರಬೇತುದಾರ ಶಿವರುದ್ರ ಸ್ವಾಮಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯಸ್ಥರಾದ ರವಿ, ಮಿಮ್ಸ್ ನಿರ್ದೇಶಕ ಹಾಗೂ ಡೀನ್ ಡಾ.ಪಿ ನರಸಿಂಹಮೂರ್ತಿ, ಮಿಮ್ಸ್ ವೈದ್ಯಕೀಯ ಅಧೀಕ್ಷಕರು ಡಾ.ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Continue Reading

Mandya

ಕೃಷಿ ಸಚಿವರಿಂದ 2 ಕೋಟಿ ರೂ. ವೆಚ್ಚದ ಬೆಳ್ಳೂರು ರೈತ ಸಂಪರ್ಕ ಕೇಂದ್ರದ ಶಂಕುಸ್ಥಾಪನೆ

Published

on

ನಾಗಮಂಗಲ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇಂದು 2 ಕೋಟಿ ರೂ. ವೆಚ್ಚದಲ್ಲಿ ಬೆಳ್ಳೂರು ರೈತ ಸಂಪರ್ಕ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದರು.

ರೈತರ ಹಿತ ಸಂರಕ್ಷಣೆ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ರೈತರ ಹಿತ ಸಂರಕ್ಷಣೆ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚುವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನೂತನ ರೈತ ಸಂಪರ್ಕ ಕೇಂದ್ರಕ್ಕೆ ಗುದ್ದಲಿ ಪೂಜೆ ನೇರವೇರಿಸಿ ಕೃಷಿಕರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳನ್ನು ವಿತರಿಸಿ ಸಚಿವರು ಮಾತನಾಡಿದರು.

ರೈತರರು ಸಮಗ್ರ ಬೇಸಾಯದ ಬಗ್ಗೆ ಗಮನ ಹರಿಸಬೇಕು. ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಿ ಅನಿರೀಕ್ಷಿತ ನಷ್ಟ ದಿಂದ ರಕ್ಷಣೆ ಪಡೆಯಬೇಕು ಎಂದು ಅವರು ಹೇಳಿದರು.

ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜಗಳು, ರಸಗೊಬ್ಬರ ಹಾಗೂ ರೈತರಿಗೆ ಸಿಗುವ ಸಬ್ಸಿಡಿ ಉಪಯೋಗವಾಗುವ ಇನ್ನಿತರ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಎನ್.ಚಲುವರಾಯಸ್ವಾಮಿ ತಿಳಿಸಿದರು.

ತಾವು ಕೃಷಿ ಸಚಿವರಾದ ನಂತರ ರೈತರಿಗೆ ಎಲ್ಲಾ ಸೌಲಭ್ಯ ಒಂದೇ ಕಡೆ ಸಿಗವಂತೆ ಮಾಡಲು ರೈತ ಸಂಪರ್ಕ ಕೇಂದ್ರಗಳನ್ನು ಸಶಕ್ತಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ‌ ಇಲಾಖೆಯಲ್ಲಿ 600 ಸಹಾಯಕ ಕೃಷಿ ಅಧಿಕಾರಿ ಹಾಗೂ ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮವಹಿಸಲಾಗಿದೆ ಎಂದರು.

ರೈತರು ಮಳೆ ಪ್ರಮಾಣವನ್ನು ಅರಿತು ಕಡಿಮೆ ಮತ್ತು ದೀರ್ಘ ಅವಧಿಯಲ್ಲಿ ಬೆಳಗಳ ಬಗ್ಗೆ ನಿರ್ಧಾರ ಮಾಡಬೇಕಿದೆ. ಲಾಭದಾಯಕ ಕೃಷಿ ಬಗ್ಗೆ ರೈತ ಸಂಪರ್ಕ ಕೇಂದ್ರಗಳು ಮಾರ್ಗದರ್ಶನ ನೀಡುವ ಕಾರ್ಯ ನಿರ್ವಹಿಸಲಿವೆ ಎಂದು ಕೃಷಿ ಸಚಿವರು ತಿಳಿಸಿದರು.

ಬೆಳ್ಳೂರು ಹೋಬಳಿಯ ರೈತರಿಗೆ ಉಪಯೋಗ ವಾಗುವಂತೆ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿದೆ. ಮುಂದಿನ ದಿನಗಳಲ್ಲಿ ನಾಗಮಂಗಲ ತಾಲೂಕಿನ ಎಲ್ಲಾ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಪರಿಕರಗಳನ್ನು ಪೂರೈಸಲಾಗುವುದು ಎಂದು ಚಲುವರಾಯಸ್ವಾಮಿ ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಹಾಗೂ ಉಪ ನಿರ್ದೇಶಕಿ ಮಮತ, ನಾಗಮಂಗಲ ತಹಶೀಲ್ದಾರ್ ನಯೀಂ ಉನ್ನಿಸಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Trending

error: Content is protected !!