Connect with us

Mandya

ಬರಾಕ್‌ ಒಬಾಮಾ ಆಗಮನ ಹಿನ್ನಲೆ: ಶಾಸಕರಿಂದ ಸ್ಥಳ ಪರಿಶೀಲನೆ

Published

on

ಮಂಡ್ಯ: ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಆಗಮನ ಹಿನ್ನೆಲೆಯಲ್ಲಿ ಶಾಸಕ ರವಿಕುಮಾರ್ ಗಣಿಗ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಲ್ಲೇಗೆರೆ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುತ್ ದೀಪ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿಕೊಡುವ ಬಗ್ಗೆ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತ್ತು.

 

ಈ ಹಿನ್ನೆಲಯಲ್ಲಿ ಅದಕ್ಕೆ ಸಿಎಂ ಒಪ್ಪಿಗೆಯನ್ನು ಸೂಚಿಸಿದ್ದರು, ಅದರಂತೆ ಬರಾಕ್ ಒಬಾಮಾ ಆಗಮಿಸುತ್ತಿರುವುದರಿಂದ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಲು ಶಾಸಕರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪ್ರಮುಖವಾಗಿ ಮೊದಲ ಹಂತದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಹೆಲಿಪ್ಯಾಡ್ ನಿರ್ಮಾಣ ಕುರಿತು ಚರ್ಚೆ ನಡೆಸಿದರು. ಮೂರು ಕಡೆ ಹೆಲಿಪ್ಯಾಡ್ ನಿರ್ಮಾಣ ಹಾಗೂ ಕೋಟ್ಯಂತರ ರೂ ವೆಚ್ಚದಲ್ಲಿ ರಸ್ತೆ ದುರಸ್ತಿ ಮಾಡಲಾಗುತ್ತಿದೆ. ಹಲ್ಲೇಗೆರೆ ಗ್ರಾಮದಿಂದ ಸುಮಾರು ಮೂರು ಕಿ.ಮೀ ದೂರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ರಸ್ತೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ. ಶೀಘ್ರದಲ್ಲಿಯೇ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುವುದು ಎಂದು ಶಾಸಕರು ಹೇಳಿದರು.

ವೇಗ ಪಡೆದುಕೊಂಡ ರಸ್ತೆ ಕಾಮಗಾರಿ: ಇನ್ನು ಹಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಮಂಡ್ಯದಿಂದ ಹಲ್ಲೇಗೆರೆ ಮಾರ್ಗವಾಗಿ ಕೌಡ್ಲೆ ಗ್ರಾಮಕ್ಕೆ ಹೋಗುವ ರಸ್ತೆ ಕಾಮಗಾರಿಯೂ ವೇಗ ಪಡೆದುಕೊಂಡಿದೆ. ಮಂಡ್ಯ ನಗರದ ಕಾರಿಮನೆ ಗೇಟ್ ಬಳಿ ಕೆಲಸ ಪೂರ್ಣಗೊಂಡು ಚಿಕ್ಕಬಳ್ಳಿ ಗ್ರಾಮದ ಸಮೀಪವೂ ಬಹುತೇಕ ಅಂತಿಮ ಹಂತದಲ್ಲಿದೆ. ಉಳಿದಂತೆ ಹಲ್ಲೇಗೆರೆ ಗ್ರಾಮದಲ್ಲಿ ಕಾಮಗಾರಿ ಪ್ರಾರಂಭವಾಗಲಿದ್ದು, ಸುಮಾರು 20 ದಿನದೊಳಗೆ ಡಾಂಬರೀಕರಣವೂ ಪೂರ್ಣಗೊಳ್ಳಲಿದೆ.

ಈ ಸಂದರ್ಭದಲ್ಲಿ ಅಮೆರಿಕಾದ ಅಕ್ಕ ಸಂಸ್ಥೆ ಮಾಜಿ ಅಧ್ಯಕ್ಷ ಶಿವಮೂರ್ತಿ ಕೀಲಾರ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಕುಟುಂಬ ಕಲ್ಯಾಣ ಯೋಜನಾ ವಿಧಾನಗಳ ಅರಿವು ಕಾರ್ಯಕ್ರಮ

Published

on

ಶ್ರೀರಂಗಪಟ್ಟಣ : ಪ್ರತಿ ಅರ್ಹ ದಂಪತಿಗಳು ಕುಟುಂಬ ಕಲ್ಯಾಣ ಯೋಜನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಬಹುದಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಹೇಳಿದರು.

ಅವರು ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿಯ ಗಂಜಾಂ ಮಚ್ಚಿ ಬಜಾರ್ ಬೀದಿಯ 4ನೇ ಅಂಗನವಾಡಿ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆ ಇವರಿಂದ ಆಯೋಜಿಸಿದ್ದ “ತಾಯಂದಿರಿಗೆ ಕುಟುಂಬ ಕಲ್ಯಾಣ ಯೋಜನಾ ವಿಧಾನಗಳ ಅರಿವು” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ತಾಯಿ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಹಾಗೂ ಏರುತ್ತಿರುವ ಜನಸಂಖ್ಯೆಗೆ ಕಡಿವಾಣ ಹಾಕಲು ಕುಟುಂಬ ಕಲ್ಯಾಣ ಯೋಜನೆಗಳು ಸಹಕಾರಿಯಾಗಲಿವೆ. ಪ್ರತಿ ಅರ್ಹ ದಂಪತಿಗಳು ಚಿಕ್ಕ ಕುಟುಂಬ ಸುಖಿ ಕುಟುಂಬ ನಿಯಮ ಪಾಲಿಸಿ. ಇದರಿಂದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಸಮುದಾಯದಲ್ಲಿ ಮದುವೆ ವಯಸ್ಸು,ಜನನ ನಡುವೆ ಅಂತರ ಹೆರಿಗೆ, ಸುರಕ್ಷಿತ ಗರ್ಭಪಾತ, ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಪುರುಷರ ಸಹಭಾಗಿತ್ವ ಹೆಚ್ಚಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಅರ್ಹ ಫಲಾನುಭವಿಗಳು ಕುಟುಂಬ ಕಲ್ಯಾಣ ಯೋಜನೆಗಳ ಸೇವೆ ಪಡೆಯಲು ಮುಂದಾಗಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿವಿಧ ಕುಟುಂಬ ಕಲ್ಯಾಣ ಯೋಜನೆಗಳ ಕುರಿತು ವಸ್ತು ಪ್ರದರ್ಶನ ಏರ್ಪಡಿಸಿ ಶಾಶ್ವತ ಹಾಗೂ ತಾತ್ಕಾಲಿಕ ಆಯ್ಕೆ ವಿಧಾನಗಳ ಕುರಿತು ತಾಯಂದಿರಿಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಾದೇವಮ್ಮ,ಅಂಗನವಾಡಿ ಕಾರ್ಯಕರ್ತೆ ಅಶ್ಮಾ ಬಾನು ಹಾಗೂ ಗರ್ಭಿಣಿಯರು,ಬಾಣಂತಿಯರು, ಮಕ್ಕಳ ತಾಯಂದಿರು ಹಾಜರಿದ್ದರು.

Continue Reading

Mandya

ಮನೆ ಮನೆಗೆ ಬಸವ ಜ್ಯೋತಿ ಕಾರ್ಯಕ್ರಮದ 147ನೇ ಆಧ್ಯಾತ್ಮಿಕ ಕಾರ್ಯಕ್ರಮ

Published

on

ಮಂಡ್ಯ: ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ (ರಿ) ಇವರ ವತಿಯಿಂದ ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಕದಂಬ ಜಂಗಮಮಠದ ಸಭಾಂಗಣದಲ್ಲಿ

ಮನೆ ಮನೆಗೆ ಬಸವ ಜ್ಯೋತಿ ಕಾರ್ಯಕ್ರಮದ 147ನೇ ಆಧ್ಯಾತ್ಮಿಕ ಕಾರ್ಯಕ್ರಮವು ಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿತು.

ಮಂಡ್ಯ ಜಿಲ್ಲಾ ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಎಸ್.ನಾಗರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಣ್ಣನವರ ಮೌಲ್ಯಯುತವಾದ ವಚನಗಳನ್ನು ಪ್ರತಿಯೊಬ್ಬರೂ ಸಹ ಮನೆ ಮನೆಯಲ್ಲಿಯೂ ಮಕ್ಕಳಿಗೆ ಹಾಗೂ ಕುಟುಂಬದ ಸದಸ್ಯರೆಲ್ಲರಿಗೂ ಸಹ ಬೋಧಿಸುವುದರಿಂದ ಒಳ್ಳೆಯ ಸುಧಾರಣೆ ಆಗುತ್ತದೆ ಎಂದರು.

ವಚನಗಳು ಪ್ರಾಣ ಇದ್ದಂತೆ. ಅವುಗಳೆಲ್ಲವನ್ನು ಸಂರಕ್ಷಿಸುವ ಹೊಣೆಯು ನಮ್ಮದಾಗಿದೆ. ಬಸವಣ್ಣನವರು ಶಿಕ್ಷಣಕ್ಕೆ ಮಹತ್ತರವಾದ ಹಾಗೂ ಮೌಲ್ಯಯುತವಾದ ವಚನಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಇಡೀ ಪ್ರಪಂಚಕ್ಕೆ ಬಸವಣ್ಣನವರ ಧರ್ಮದ ಆದರ್ಶಗಳು ಹೃದಯಕ್ಕೆ ಮತ್ತು ಮನಸ್ಸಿಗೆ ಬೇಕಾಗಿದೆ.

ನಮ್ಮ ಜೀವನದ ನಡೆಗೆ ಪ್ರೇರಣೆ ಕೊಡುವ ಏಕೈಕ ಧರ್ಮವೆಂದರೆ ಅದು ಬಸವ ಧರ್ಮ ಎಂದು ತಿಳಿಸಿದರು. ಯಾರು ಬಸವ ಧರ್ಮದಲ್ಲಿ ನಡೆದುಕೊಳ್ಳುತ್ತಾರೋ ಅವರೆಲ್ಲರನ್ನು ಈ ಧರ್ಮವು ಸನ್ಮಾರ್ಗದಲ್ಲಿ ಕರೆದೊಯ್ಯುತ್ತದೆ ಎಂದು ತಿಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತಾದಿಗಳೆಲ್ಲರಿಗೂ ಸಹ ಪ್ರಸಾದವನ್ನು ವಿನಿಯೋಗಿಸಲಾಯಿತು. ವೇದಿಕೆಯಲ್ಲಿ ಬಸವೇಶ್ವರ ಪತ್ತಿನ ಸಂಘದ ಉಪಾಧ್ಯಕ್ಷ ಡಿ.ದ್ಯಾವಣ್ಣ, ಬಸವರಾಜಪ್ಪ, ಶಿವಕುಮಾರ್, ಚೆನ್ನಪ್ಪ, ರುದ್ರಸ್ವಾಮಿ, ಬಸವರಾಜಣ್ಣ, ಎಂ. ಜಗದೀಶ್, ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Mandya

ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012 ರ ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರ

Published

on

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶಕಲಯ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪೊಲೀಸ್ ಇಲಾಖೆ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಕ್ಕಳ ನ್ಯಾಯ ( ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015 ಹಾಗೂ ತಿದ್ದುಪಡಿ

ಕಾಯ್ದೆ 2021, ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ( ಕರ್ನಾಟಕ ತಿದ್ದುಪಡಿ ಕಾಯ್ದೆ 2016 ) ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012 ರ ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರವು ಯಶಸ್ವಿಯಾಗಿ ಜರುಗಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೊಷಕರು ತಮ್ಮ ಮಕ್ಕಳನ್ನು ಹೆಚ್ಚು ಜಾಗೃತಗೊಳಿಸಿ ಬಾಲಾಪರಾಧ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ವಹಿಸಬೇಕು. ಹಾಗೆಯೇ ಪೋಷಕರೂ ಸಹ ಬಾಲ್ಯ ವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ದಿಟ್ಟ ನಿರ್ಧಾರ ಕೈಗೊಂಡು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡುವ ಕೆಲಸ ಮಾಡಬೇಕು. ಜೊತೆಗೆ ಮಕ್ಕಳ ಮೇಲಿನ ಲೈಂಗಿಕ ಕೃತ್ಯಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ನಾಗರೀಕರು ಕಾನೂನಿನ ತೀಕ್ಣತೆಯನ್ನು ಗಮನದಲ್ಲಿಟ್ಟುಕೊಂಡು ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರ ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಬೇಕೆಂದು ಅವರು ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಸ್ ರಾಜಮೂರ್ತಿ ರವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಿತು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಮಿಕ್ಕೆರೆ ವೆಂಕಟೇಶ್, ಡಿ.ವೈ.ಎಸ್.ಪಿ,ಗಳಾದ ಗಂಗಾಧರ್ ಸ್ವಾಮಿ ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷರಾದ ಅಶ್ವಥ್ ನಾರಾಯಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!