Mandya
ನಾಲೆ ಕಳಪೆ ಕಾಮಗಾರಿ ಆರೋಪ ಸಚಿವರ ಹೇಳಿಕೆಗೆ ಖಂಡನೆ
ಮಂಡ್ಯ : ಮಾಜಿ ಸಚಿವರೊಬ್ಬರು ವಿಶ್ವೇಶ್ವರಯ್ಯ ನಾಲೆ ಆಧುನೀಕರಣದ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ್ದಾರೆ. ಆದರೆ ಅವರ ಕಾಲದಲ್ಲಿ ನಡೆದಿರುವ ಕಳಪೆ ಕಾಮಗಾರಿಗಳ ಬಗ್ಗೆ ತನಿಖೆಗೆ ಒಪ್ಪಿಸುವ ಅಗತ್ಯತೆ ಇದೆ ಎಂದು ಕಿಸಾನ್ ಕಾಂಗ್ರೆಸ್ ಮೇಲುಕೋಟೆ ಘಟಕದ ಅಧ್ಯಕ್ಷ ಸಿ.ಆರ್.ರಮೇಶ್ ತಿರುಗೇಟು ನೀಡಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಟಾರ್ಗೆಟ್ ಮಾಡಿರುವ ಮಾಜಿ ಸಚಿವರು, ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಯಿಂದ ಜಿಲ್ಲಾ ಮಂತ್ರಿ ಚಲುವರಾಯಸ್ವಾಮಿ ಗುತ್ತಿಗೆದಾರರ ಜೇಬು ತುಂಬಿಸುತ್ತಿದ್ದಾರೆ. ಸರ್ಕಾರ ತಮ್ಮದೇ ಇದೆ ಎಂದು ನಾಲಾ ಆಧುನೀಕರಣ ಕಾಮಗಾರಿಯನ್ನು ಕಳಪೆ ಗುಣಮಟ್ಟದಿಂದ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿರುವುದು ಸರಿಯಲ್ಲ ಎಂದರು.
ಮಾಜಿ ಸಚಿವರು ನಾಲಾ ಆಧುನೀಕರಣ ಕಾಮಗಾರಿಯ ಪರಿಶೀಲನೆ ಮಾಡುವುದಾಗಿ ಜತೆಗೆ ತಮ್ಮ ಕಾರ್ಯಕರ್ತರನ್ನು ಗಸ್ತು ಹಾಕಿಸುತ್ತೇನೆ ಎಂದಿದ್ದಾರೆ. ರೈತರಿಗೆ ನೀರು ಬಿಡದೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಹೇಳಿರುವ ಮಾಜಿ ಸಚಿವರಿಗೆ ಜಿಲ್ಲೆಯ ರೈತರ ಬಗ್ಗೆ ಆಸಕ್ತಿ ಬಂದಿರುವುದಕ್ಕೆ ಸ್ವಾಗತಿಸುತ್ತೇವೆ. ಈಗಾಗಲೇ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನಾಲಾ ಆಧುನೀಕರಣ ಕಾಮಗಾರಿ ಪರಿಶೀಲನೆ ನಡೆಸಿ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇವರದೇ ಜನತಾದಳ ಅಧಿಕಾರದಲ್ಲಿದಾಗ 1996ರಲ್ಲಿ ವಿಶ್ವೇಶ್ವರಯ್ಯ ನಾಲಾ ಆಧುನೀಕರಣ ಕಾಮಗಾರಿ ನಡೆದಾಗ ನೀರು ಹರಿಸಿ ಕಾಮಗಾರಿ ಮಾಡಲಾಗಿತ್ತೆ ಎಂದು ಪ್ರಶ್ನಿಸಿದರು.
ಮಾಜಿ ಸಚಿವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಐದು ವರ್ಷವಾದರೂ ಕೆಲವು ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿವೆ. ಒಂದು ವರ್ಷ ಮೆಟ್ಲಿಂಗ್, ಇನ್ನೊಂದು ವರ್ಷ ಡಾಂಬರು ಎಂಬುದಾಗಿ ವಿಳಂಬ ಹಾಗೂ ಕಳಪೆ ಕಾಮಗಾರಿ ಮಾಡಲಾಗಿದೆ. ಕೆಲವು ಅನಧಿಕೃತ ಕಾಮಗಾರಿಯನ್ನೂ ನಡೆಸಲಾಗುತ್ತಿದೆ. ಈ ಕಳಪೆ ಕಾಮಗಾರಿಗಳ ಬಗ್ಗೆಯೂ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಕೃತಜ್ಞತೆ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿ ಬೆಂಬಲಿಸಿದ ಜಿಲ್ಲೆಯ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಈ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತವಾಗಿದ್ದು. ಅತ್ಯಧಿಕ ಮತಗಳ ಅಂತರದಲ್ಲಿ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಕುರುಬರ ಸಂಘದ ಪಾಂಡವಪುರ ತಾಲೂಕು ಅಧ್ಯಕ್ಷ ಡಿ.ಹುಚ್ಚೇಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾ ನಿರ್ದೇಶಕ ಎನ್. ಕೃಷ್ಣೇಗೌಡ, ಕಾಂಗ್ರೆಸ್ ಮುಖಂಡರಾದ ಕಿರಣ್, ಚಂದಗಾಲು ವಿಜಿ, ಪ್ರಕಾಶ್, ದೇವರಾಜು ಇತರರು ಉಪಸ್ಥಿತರಿದ್ದರು.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore22 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Education23 hours ago
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ
-
Cinema23 hours ago
ಬಿಗ್ಬಾಸ್ ಸೀಸನ್ 11: ಮೀಸಲಾತಿ ಮೂಲಕ ಹನುಮಂತು ಫೈನಲ್ಸ್ ತಲುಪಿದ್ದಾರೆ ಎಂದ ನಟಿ ಹಂಸ
-
Mysore7 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu9 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Chamarajanagar24 hours ago
ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು: ಟಿ ಹಿರಲಾಲ್
-
Kodagu9 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu6 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ