Connect with us

Kodagu

ಮರದ ಕೊಂಬೆ ಬಿದ್ದು ಮಹಿಳೆ ದುರ್ಮರ

Published

on

*ಮರದ ಕೊಂಬೆ ಬಿದ್ದು ಮಹಿಳೆ ದುರ್ಮರಣ*
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ದೊಡ್ಡ ಗಾತ್ರದ ಮರದ ಕೊಂಬೆ ಮೈ ಮೇಲೆ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.ಇಂದು ಬೆಳಗ್ಗೆ ಸುಂಟಿಕೊಪ್ಪ ಸಮೀಪದ ಡಿ. ಪನ್ಯ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಬಪ್ಪಯ್ಯ ಎಂಬುವವರ ಪತ್ನಿ ಲಕ್ಷ್ಮಿ (46) ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಇವರ ತಲೆಯ ಮೇಲೆ ಬಲವಾಗಿ ಬಿದ್ದಿದೆ. ಅದರ ಹೊಡೆತಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮಿ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಗೆ ಕರೆದೊಯ್ದು ಆರಂಭಿಕ ಚಿಕಿತ್ಸೆ ಕೊಡಿಸಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆದಾಗಲೇ ಲಕ್ಮಿ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಮೃತರು ಪತಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Kodagu

ನಾಲ್ ನಾಡ್ ಹಾಕಿ ಪಂದ್ಯಾವಳಿ ಮುಂದೂಡಿಕೆ

Published

on

ನಾಪೋಕ್ಲು: ನಾಲ್ ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಮೆ 22 ರಿಂದ ನಾಪೋಕ್ಲು ಬಳಿಯ ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ನಾಲ್ ನಾಡ್ ವ್ಯಾಪ್ತಿಯ ಅಂತರಗ್ರಾಮ ಹಾಕಿ ಪಂದ್ಯಾಟ ಮತ್ತು ಮಹಿಳೆಯರ ಹಗ್ಗಜಗ್ಗಾಟವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ.


ಪಂದ್ಯಾಟಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕ್ರೀಡಾಭಿಮಾನಿಗಳು ಮತ್ತು ನೋಂದಾಯಿತ ತಂಡಗಳು ಬದಲಿಸಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ನಾಲ್’ನಾಡ್ ಹಾಕಿ ಕ್ಲಬ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Kodagu

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

Published

on

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

539 ಕೆ.ಜಿ ಕಾಡುಕೋಣ ಮಾಂಸ ಸೇರಿ ಓರ್ವನ ಬಂಧನ.

ಎಮ್ಮೆಮಾಡು ನಿವಾಸಿ ಹ್ಯಾರಿಸ್(42) ಬಂಧಿತ ಆರೋಪಿ

ಬೆನ್ನಟ್ಟುವ ಸಂಧರ್ಭ ಜೊತೆಗಿದ್ದ ಮತ್ತೊಬ್ಬ ಆರೋಪಿ ಮೂಸ ಪರಾರಿ.

ಕೊಡಗು ಜಿಲ್ಲೆ ಮಾದಪುರ ಸಮೀಪದ ನಂದಿಮೊಟ್ಟೆಯಲ್ಲಿ ನಡೆದ ಘಟನೆ‌.

ಮಡಿಕೇರಿ ವಲಯ ಅರಣ್ಯ ಅಧಿಕಾರಿಗಳಿಂದ ನಡೆದ ಕಾರ್ಯಚರಣೆ.

ತಡರಾತ್ರಿ ಅಪ್ಪಂಗಳದಲ್ಲಿ ವಾಹನವನ್ನ ಬೆನ್ನಟಿ ಹಿಡಿದ ಅರಣ್ಯ ಅಧಿಕಾರಿಗಳು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು .

ಬಂಧಿತರಿಂದ ಎರಡು ಕತ್ತಿ ಹಾಗೂ ಪಿಕಪ್ ವಾಹನ ವಶಕ್ಕೆ.

Continue Reading

Kodagu

ಕೊಡಗು ಜಿಲ್ಲೆಯ ಮಳೆ ವಿವರ

Published

on

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 17.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 198.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 122.89 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.25 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 296.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 179.33 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 122.85 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 74.11 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 176.89 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 76.94 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 172.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 96.66 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 222 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 187.40 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 5.20, ನಾಪೋಕ್ಲು 9.20, ಸಂಪಾಜೆ 71, ಭಾಗಮಂಡಲ 55.60, ವಿರಾಜಪೇಟೆ ಕಸಬಾ 6.80, ಅಮ್ಮತ್ತಿ 10, ಹುದಿಕೇರಿ 1.30, ಶ್ರೀಮಂಗಲ 0.20, ಪೊನ್ನಂಪೇಟೆ 2, ಬಾಳೆಲೆ 90.10, ಸೋಮವಾರಪೇಟೆ ಕಸಬಾ 6.60, ಶನಿವಾರಸಂತೆ 11.20, ಶಾಂತಳ್ಳಿ 17.40, ಕೊಡ್ಲಿಪೇಟೆ 14, ಕುಶಾಲನಗರ 8.40, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (20-05-2024) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2823.09 ಅಡಿಗಳು. ಕಳೆದ ವರ್ಷ ಇದೇ ದಿನ 2819.78 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 31.40 ಮಿ.ಮೀ., ಇಂದಿನ ನೀರಿನ ಒಳಹರಿವು 287 ಕ್ಯುಸೆಕ್, ಕಳೆದ ವರ್ಷ ಇದೇ ದಿನ 89 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

Continue Reading

Trending

error: Content is protected !!