Location
ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ*

*ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ*
*ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ*- *ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು*
ಮೈಸೂರು;
ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 49 ಕೇಂದ್ರಗಳಲ್ಲಿ ಜರುಗಲಿದ್ದು ಯಾವುದೇ ಲೋಪದೋಷಗಳವಾಗದಂತೆ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಕಗಳ ಕಛೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸುಗಮ ಸಂಚಾಲನೆಗಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಮೈಸೂರು ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ 31,628 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು
ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಬೇಕು ಎಂದರು.
ಕೊಠಡಿಗಳಲ್ಲಿ ಗಡಿಯಾರ, ಸಿ.ಸಿ.ಟಿ.ವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಾಗಬೇಕು ಎಂದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.
ಪರೀಕ್ಷಾ ಕೇಂದ್ರಕ್ಕೆ ಮುಖ್ಯ ಅಧೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದರು.
ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಿ ಎಂದರು
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿಯನ್ನು online ನಲ್ಲಿ upload (PU exam login portal) ಮಾಡುವುದರಿಂದ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದರು.
ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆ ವಿತರಕರ ತಂಡದ ಬೆಂಗಾವಲಾಗಿ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಮರಿಸ್ವಾಮಿ ಹಾಗೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.
Kodagu
ಕೊಡಗು ಜಿಲ್ಲಾಡಳಿತ ಭವನದಲ್ಲಿ ಆಧುನಿಕ ತಂತ್ರಜ್ಞಾನದ ಲಿಫ್ಟ್ ಭಾಗ್ಯ

ಕೊಡಗು: ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾಡಳಿತ ಭವನದ ಸಂಕೀರ್ಣಕ್ಕೆ ಆಧುನಿಕ ತಂತ್ರಜ್ಞಾನದ ನೂತನ ಲಿಫ್ಟ್ ಅಳವಡಿಕೆ ಆಗಲಿದೆ. ಸುಮಾರು 14 ಲಕ್ಷ ರೂ ವೆಚ್ಚದಲ್ಲಿ ಸಂಪೂರ್ಣ ರಸ್ಟ್ ಪ್ರೂಫ್ ಲಿಫ್ಟ್ ಇನ್ನು ಮೂರು ವಾರಗಳ ಒಳಗಾಗಿ ಅಳವಡಿಸಿ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದು ನಿರ್ವಹಣೆ ಹೊತ್ತ ಸಂಸ್ಥೆ ಮಾಹಿತಿ ನೀಡಿದೆ.
ಜಿಲ್ಲಾಡಳಿತ ಭವನ ಲೋಕಾರ್ಪಣೆ ಗೊಂಡು ಐದು ವರ್ಷಗಳಲ್ಲಿಯೇ ಪದೇ ಪದೇ ರಿಪೇರಿಯಾಗಲು ಆರಂಭಿಸಿತ್ತು. ಕಟ್ಟಡ ನಿರ್ಮಾಣ ಕಾಲದಲ್ಲಿ ಕಾಮಗಾರಿ ವಸ್ತುಗಳನ್ನು ಸಾಗಿಸಲು ಲಿಫ್ಟ್ ಬಳಕೆಯಾದ್ದರಿಂದ ಅದರ ಸಾಮರ್ಥ್ಯ ಕೂಡ ಕುಗ್ಗಿತ್ತು. ಕಳೆದ ಡಿಸೆಂಬರ್ ನಲ್ಲಿ ಸಂಪೂರ್ಣ ಬಂದ್ ಆಗಿತ್ತು. ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರಿಂದ ಸಂಪೂರ್ಣ ಮಾಹಿತಿ ಪಡೆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅವರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಡಾ ಮಂತರ್ ಗೌಡ ಅವರು ಲಿಫ್ಟ್ ನ್ನು ರಿಪೇರಿ ಮಾಡುವ ಬದಲು ಹೊಸ ಲಿಫ್ಟ್ ಖರೀದಿಗೆ ಸೂಚನೆ ನೀಡಿದ ಮೇರೆಗೆ ದಿನಾಂಕ 31-1-2025 ರಂದು ಜಿಲ್ಲಾಧಿಕಾರಿಗಳು ಟೆಂಡರ್ ಕರೆದು ದಿನಾಂಕ 4-3-2025 ರಂದು ಕಾರ್ಯಾದೇಶವನ್ನು ಲಿಫ್ಟ್ ತಯಾರಿಕೆಯಲ್ಲಿ ಪ್ರತಿಷ್ಠಿತ ಸಂಸ್ಥೆ ಯಾಗಿರುವ ಬೆಂಗಳೂರಿನ ಸ್ವಿಫ್ಟ್ ಸ್ಪೇಸ್ ಎಲಿವೇಟರ್ಸ್ ಸಂಸ್ಥೆಗೆ ನೀಡಲಾಯಿತು.
ಹಳೆಯ ಲಿಫ್ಟ್ ನ್ನು ಸ್ಥಳಾಂತರಿಸುವ ಕೆಲಸ ಮುಗಿದಿದ್ದು, ಹೊಸ ಲಿಪ್ಟ್ ಅಳವಡಿಕೆಗೆ ಸಂಸ್ಥೆ ಸಿದ್ದತೆ ನಡೆಸುತ್ತಿದೆ. ಇನ್ನು ಮೂರು ವಾರಗಳಲ್ಲಿ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗಲಿದೆ. ಲಿಫ್ಟ್ ಇಲ್ಲದೆ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವೃದ್ದರು ಮತ್ತು ವಿಶೇಷ ಚೇತನರು ಜಿಲ್ಲಾಡಳಿತ ಭವನದ ಮೂರನೇ ಮಹಡಿ ತಲುಪಲು ಪ್ರಯಾಸ ಪಡುತ್ತಿದ್ದು, ಈಗ
ಉಸ್ತುವಾರಿ ಸಚಿವರು, ಕೊಡಗಿನ ಶಾಸಕದ್ವಯರು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಕಾಳಜಿಯಿಂದ ನಿಟ್ಟುಸಿರು ಬಿಡುವಂತೆ ಆಗಿದೆ.
Chikmagalur
ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನ ಕಟ್ಟಡ

ಚಿಕ್ಕಮಗಳೂರು: ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಜಿಲ್ಲಾ ಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಹೇಳಿದರು.
ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು.ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.
ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಎಂಎಲ್ಸಿ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು
Mysore
ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತ್ತಿರುವಾಗ ಘಟನೆ ಸಂಭವಿಸಿದೆ. ಕಾಡು ಹಂದಿಗಳನ್ನು ಬೇಡೆಯಾಡಲು ಕಿಡಿಗೇಡಿಗಳು ಸಿಡಿಮದ್ದನ್ನು ಅಳವಡಿಸಿದ್ದಾರೆ ಎಂಬುದನ್ನು ತಿಳಿಯದೇ ರೈತ ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್‌ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ವೇಳೆ ಸಿಡಿಮದ್ದು ಹಠಾತ್ತನೇ ಸಿಡಿದ ಪರಿಣಾಮ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ರೈತ ಚನ್ನನಂಜೇಗೌಡ ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಗಂಭೀರ ಗಾಯಗೊಂಡಿರುವ ಹಸುವಿಗೆ ಸೂಕ್ತ ಪರಿಹಾರ ನೀಡಬೇಕು. ಸಿಡಿಮದ್ದನ್ನು ಅಳವಡಿಸಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan15 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ