Connect with us

Mandya

ಮರಿತಿಬ್ಬೇಗೌಡ ಬದಲಿಗೆ ನನ್ನನ್ನು ಬೆಂಬಲಿಸಿ – ಪುಟ್ಟ ಸಿದ್ದಶೆಟ್ಟಿ

Published

on

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಪಕ್ಷಾಂತರಿಯಾಗಿದ್ದು, ಶಿಕ್ಷಕರ ಪರವಾಗಿ ಯಾವುದೇ ಕಾರ್ಯವನ್ನು ಮಾಡಿಲ್ಲ. ಆದ್ದರಿಂದ ಈ ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತಿದ್ದು, ನನ್ನನ್ನು ಬೆಂಬಲಿಸುವಂತೆ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಿ ತಿಬ್ಬೆಗೌಡರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು,‌ ಆದರೆ ಶಿಕ್ಷಕರ ಪರವಾಗಿ ಯಾವುದೇ ಕೆಲಸಗಳನ್ನು ಮಾಡಿಲ್ಲ ಎಂದು ಆಪಾದಿಸಿದರು.

ನಾನು 1994 ರಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಮೇಲ್ಮನೆಗೆ ಆಯ್ಕೆಯಾಗಿದ್ದು, ಹಾಗೆಯೇ ಕಾಯಕ ಸಮಾಜ ಒಕ್ಕೂಟವನ್ನು ಸ್ಥಾಪಿಸಿ ಮೂರು ಮಂದಿಯನ್ನು ವಿಧಾನ ಪರಿಷತ್ತಿಗೆ ಕಳುಹಿಸಿದ್ದಲ್ಲದೆ ಇತರ ಪಕ್ಷಗಳ ಅಭ್ಯರ್ಥಿಗಳಿಗೂ ಬೆಂಬಲ ನೀಡಿ ಅವರನ್ನು ಗೆಲ್ಲಿಸಿರುವುದಾಗಿ ಹೇಳಿಕೊಂಡರು.

ಹೆಚ್.ಕೆ.ಪಾಟೀಲ, ರಾಮಚಂದ್ರಗೌಡ ಸೇರಿದಂತೆ ಇತರರಿಗೆ ನಮ್ಮ ಸಂಘಟನೆ ವತಿಯಿಂದ ಬೆಂಬಲ ನೀಡಿದ್ದು 1990ರಲ್ಲಿ ಮರಿ ತಿಬ್ಬೇಗೌಡರನ್ನು ಗೆಲ್ಲಿಸಿದ್ದೇವೆ. ಅವರು ಶಿಕ್ಷಕರ ಸಂಘವನ್ನು ಮೆಟ್ಟಿಲಾಗಿ ಮಾಡಿಕೊಂಡು ಹೋಗಿದ್ದಾರೆ. ಆದರೆ ಶಿಕ್ಷಕರ ಪರವಾಗಿ ಯಾವುದೇ ಕೆಲಸವನ್ನು ಮಾಡಿಲ್ಲ ಎನ್ನುವ ದೂರು ಅವರ ಮೇಲಿದೆ ಎಂದರು .

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. .ಆದರೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಿಕ್ಷಕರಿಗೆ ನೀಡಿದ್ದ ಭರವಸೆಗಳಾದ ಹಳೆ ಪಿಂಚಣಿ ವ್ಯವಸ್ಥೆ , 7 ನೇ ವೇತನ ಜಾರಿ ಸೇರಿದಂತೆ ಇತರ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಕಿಡಿಕಾರಿದರು .

ಮರಿತಿಬ್ಬೇಗೌಡರು ಮೊದಲು ಕಾಂಗ್ರೆಸ್ ನಲ್ಲಿದ್ದು ನಂತರ ಜೆಡಿಎಸ್ ಗೆ ಸೇರಿ ತರುವಾಯ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ,ಅವರು ಪಕ್ಷಾಂತರಿ ಆಗಿದ್ದಾರೆ ಎಂದು ಕಿಡಿ ಕಾರಿದರು.

ಈ ಬಾರಿ ತಾವು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಶಿಕ್ಷಕರು ತಮ್ಮನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದರು.

ಗೋಷ್ಠಿಯಲ್ಲಿ ಕಾಯಕ ಸಮಾಜ ಒಕ್ಕೂಟದ ರಾಜ್ಯ ಸಂಚಾಲಕ ಹೆಚ್ಎಲ್ ಕೆಂಪಶೆಟ್ಟಿ ,ಉಪಾಧ್ಯಕ್ಷ ಶಿವಪ್ಪ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಶಿವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ

Published

on

ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.

ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ‌.

ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ‌.

ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.

ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Mandya

ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಚೆಲುವರಾಯಸ್ವಾಮಿ

Published

on

ನಾಗಮಂಗಲ : ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಆ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಬಾಗದಲ್ಲಿ ಅಂಗವಿಕಲರಿಗೆ 2024 -25 ನೇ ಸಾಲಿನ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ತ್ರಿಚಕ್ರ ವಾಹನ ಸಮಾರಂಭದಲ್ಲಿ ಭಾಗವಹಿಸಿ ಸುಮಾರು 25 ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುತ್ತ ಮಾತನಾಡಿದರು.

ಅಂಗವಿಕಲರು ದಿನನಿತ್ಯದ ತಮ್ಮ ವ್ಯವಹಾರಿಕ ಕಾರ್ಯನಿಮಿತ್ತ ಕೆಲಸಗಳಿಗೆ ತ್ರಿಚಕ್ರ ವಾಹನ ಬಳಸುವ ಮುಖಾಂತರ ಸರ್ಕಾರದ ಇಂತಹ ಸೌವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಇತರೆ ಚಟುವಟಿಕೆಗಳಲ್ಲಿ ಈ ವಾಹನಗಳನ್ನು ಬಳಸದಂತೆ ತಮ್ಮ ಸ್ವಂತ ವಾಹನಗಳಾಗಿ ಬಳಸಿಕೊಳ್ಳುವ ಮುಖಾಂತರ ಸರ್ಕಾರದ ಯೋಜನೆಗಳನ್ನು ಪಡೆದು ಅನುಕೂಲ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಕೃಷಿ ವಿವಿ ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್. ಎಚ್ ಟಿ ಕೃಷ್ಣೆ ಗೌಡ. ಪುರಸಭಾ ಅಧ್ಯಕ್ಷರು ಗಣ್ಯರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Continue Reading

Mandya

ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ

Published

on

ಮಂಡ್ಯ : ಈ ಚಿತ್ರದಲ್ಲಿರುವ ವ್ಯಕ್ತಿ ಇಂದು (ಮಾ.14) ರಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲುಗಾಡಿಯಿಂದ ಬಿದ್ದು ಗಾಯಗೊಂಡಿರುತ್ತಾರೆ.

ಸದರಿಯವರ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ, ಅಥವ ಇವರ ಬಗ್ಗೆ ಮಾಹಿತಿ ಗೊತ್ತಿದ್ದಲ್ಲಿ ಮಾಹಿತಿ ನೀಡಲು
ರೈಲ್ವೆ ಹೊರ ಉಪ ಠಾಣೆ ಮಂಡ್ಯ ಕೋರಿದೆ.

Continue Reading

Trending

error: Content is protected !!