Connect with us

Mandya

ಜ.23 ರಂದು ಬೃಹತ್ ರಕ್ತದಾನ ಶಿಬಿರ : ನಟರಾಜ್

Published

on

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್‌ನ ವತಿಯಿಂದ ಇದುವರೆಗೂ ೩೪೪ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ೪೩ ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ಯೋಧರ ಆಸ್ಪತ್ರೆಯನ್ನೂ ಒಳಗೊಂಡಂತೆ ಸರ್ಕಾರಿ ರಕ್ತನಿಧಿ ಕೇಂದ್ರಗಳಿಗೆ ನಿರಂತರವಾಗಿ ಕಾಲಕಾಲಕ್ಕೆ ಸಂಗ್ರಹಿಸಿದ ರಕ್ತ ಒದಗಿಸುತ್ತಿದೆ ಎಂದರು.

ಜನವರಿ ೨೩ರ ಬೆಳಿಗ್ಗೆ ೦೮ ಪ್ರಾರಂಭವಾಗುವ ರಕ್ತದಾನ ಶಿಬಿರ ಜನವರಿ ೨೪ರ ಬೆಳಿಗ್ಗೆ ೦೮ ಗಂಟೆ ವರೆಗೂ ನಡೆಯಲಿದೆ. ರಕ್ತದಾನ ಶಿಬಿರ ಸಂಬಂಧ ೧೨೮ ಹಳ್ಳಿಗಳಿಗೆ ಭೇಟಿ ಪ್ರಚಾರ ಮಾಡಲಾಗಿದೆ. ಜನವರಿ ೧೮ರಂದು ನಗರದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಮೂಲಕ ಪ್ರಚಾರ ಮಾಡಲಾಗಿದೆ. ಟ್ರಸ್ಟ್‌ನಿಂದ ನಡೆಯುವ ೩೪೫ನೇ ರಕ್ತದಾನ ಶಿಬಿರದಲ್ಲಿ ೧೫೦೦ ಯುನಿಟ್ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಯಿಂದ ರಕ್ತ ಸಂಗ್ರಹಿಸಲು ವೈದ್ಯ ಸಿಬ್ಬಂದಿಗಳು ೩ ಪಾಳಯದಲ್ಲಿ ಕಾರ್ಯನಿರ್ವಹಿಸಲಿದ್ದು, ಸರ್ಕಾರಿ ಆಸ್ಪತ್ರೆಯಿಂದ ೧೫೦ ಹಾಸಿಗೆ ವ್ಯವಸ್ಥೆಯನ್ನು ಒದಗಿಸಲಾಗುವುದು. ಸಂಗ್ರಹವಾದ ರಕ್ತವನ್ನು ಸೈನಿಕ ಆಸ್ಪತ್ರೆಗೆ ಬೇಕಾಗಿರುಷ್ಟು ತಲುಪಿಸಲಾಗುವುದು. ಉಳಿದ ಎಲ್ಲ ರಕ್ತವನ್ನು ಸರ್ಕಾರಿ ರಕ್ತ ನಿಧಿ ಕೇಂದ್ರ ಹಾಗೂ ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಗಣೇಶ್, ಅಭಿ, ಮಹದೇವ, ಉದಯ್, ರವಕುಮಾರ್, ಕುಮಾರ್, ಅನ್ವೇಶ್ ಇದ್ದರು.

Continue Reading

Mandya

ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

Published

on

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.

ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.

Continue Reading

Mandya

ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

Published

on

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ‌ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.

Continue Reading

Mandya

ಫೈನಾನ್ಸ್‌ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್‌.ಅಶೋಕ್‌

Published

on

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

Continue Reading

Trending

error: Content is protected !!