Connect with us

Hassan

ಕುಡಿದ‌ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

Published

on

ಹಾಸನ : ಕುಡಿದ‌ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

ತಮ್ಮಯ್ಯ (58) ಕೊಲೆಯಾದ ವ್ಯಕ್ತಿ

ಬಲ್ಲೇನಹಳ್ಳಿ ಗ್ರಾಮದ ಜಗದೀಶ್ (40) ಕೊಲೆ ಮಾಡಿದ ಆರೋಪಿ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ರಾಮೇನಹಳ್ಳಿ ಗ್ರಾಮದಲ್ಲಿ ಘಟನೆ

ಕುರಿ, ದನಕರುಗಳನ್ನು ಮೇಯಲು ಬಿಟ್ಟು ಕಟ್ಟೆ ಮೇಲೆ ಮಲಗಿದ್ದ ತಮ್ಮಯ್ಯ

ಈ ವೇಳೆ ಕಂಠಪೂರ್ತಿ ಕುಡಿದು ಬಂದು ಸ್ಕ್ರೂ ಡ್ರೈವರ್‌ನಿಂದ ಚುಚ್ಚಿ ಕೊಂದಿರುವ ಜಗದೀಶ್

ತಮ್ಮಯ್ಯ ಮೃತಪಟ್ಟ ನಂತರ ಬೇಲೂರು ಆಸ್ಪತ್ರೆಗೆ ಆಸ್ಪತ್ರೆಗೆ ಕರೆ ತಂದು ನಾಟಕವಾಗಿದ್ದ ಪಾಪಿ ಅಳಿಯ

ಎದೆನೋವು ಕಾಣಿಸಿಕೊಂಡಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ಬಳಿ ಹೇಳಿದ್ದ ಜಗದೀಶ್

ತಮ್ಮಯ್ಯ ಅವರನ್ನು ತಪಾಸಣೆ ಮಾಡಿದಾಗ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವುದು ಬೆಳಕಿಗೆ

ಈ ವೇಳೆ ತಪ್ಪಿಸಿಕೊಳ್ಳಲು‌ ಯತ್ನಿಸಿದ ಜಗದೀಶ್

ಜಗದೀಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಕುಡಿತದ ದಾಸನಾಗಿದ್ದ ಆರೋಪಿ ಜಗದೀಶ್

ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading
Click to comment

Leave a Reply

Your email address will not be published. Required fields are marked *

Hassan

ಆ.2 ರಿಂದ 4ರ ವರೆಗೂ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ: ಎಂ.ಟಿ. ತ್ಯಾಗರಾಜ್

Published

on

ಹಾಸನ: ನಗರದ ಸಮೀಪ ಇರುವ ವೆಟರ್ನರಿ ಕಾಲೇಜಿನ ಆವರಣದಲ್ಲಿ ಆಗಸ್ಟ್ ೨ ರಿಂದ ೪ರ ವರೆಗೂ ಮೂರು ದಿನಗಳ ಕಾಲ ೧೯ ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಚೆಸ್ ಅಸೋಸಿಯೇಷನ್ ಕಾರ್ಯದರ್ಶಿ ಹಾಗೂ ಕದಂಬ ಚೆಸ್ ಅಕಾಡೆಮಿಯ ಸ್ಥಾಪಕರಾದ ಎಂ.ಟಿ. ತ್ಯಾಗರಾಜ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರದಂದು ಮಾತನಾಡಿ, ಜಿಲ್ಲಾ ಚೆಸ್ ಅಸೋಸಿಯೇಷನ್, ಕದಂಬ ಚೆಸ್ ಅಕಾಡೆಮ್, ವೆಟರ್ನರಿ ಕಾಲೇಜಿನ ಸಹ ಭಾಗಿತ್ವ ಹಾಗೂ ಎನ್.ಟ್.ಆರ್. ಚಾರಿಟಬಲ್ ಟ್ರಸ್ಟ್ ರವರ ಪ್ರಾಯೋಜಕತ್ವದೊಂದಿಗೆ ೧೯ ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿಯನ್ನು ಆಗಸ್ಟ್ ೨ರಿಂದ ೨೦೨೪ ಆಗಸ್ಟ್ ೪ರ ವರೆವಿಗೆ

ಹಾಸನ ನಗರದ ಬಳಿ ಇರುವ ವೆಟರ್ನರಿ ಕಾಲೇಜಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ಸುಮಾರು ೨೫೦ ರಿಂದ ೩೦೦ ಚೆಸ್ ಆಟಗಾರರು ಭಾಗವಹಿಸಲಿದ್ದು, ಈ ಚೆಸ್ ಪಂದ್ಯಾವಳಿಯಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರತ್ಯೇಕವಾಗಿ ೯ ಸುತ್ತುಗಳಿದ್ದು, ಅದರಲ್ಲಿ ಮೊದಲ ೪ ಸ್ಥಾನ ಪಡೆದು ವಿಜೇತರಾದ ಸ್ಪರ್ಧಿಗಳು ಹರಿಯಾಣ ರಾಜ್ಯದಲ್ಲಿ ದಿನಾಂಕ ಸೆಪ್ಟೆಂಬರ್ ೨೦ ರಿಂದ ೨೮ ಸಪ್ಟೆಂಬರ್ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕಾರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದರು. ಈ ಅವಕಾಶವನ್ನು ಜಿಲ್ಲೆಯ ಪ್ರತಿಯೊಬ್ಬ ಚೆಸ್ ಆಟಗಾರರು ಸದಪಯೋಗ ಪಡಿಸಿಕೊಳ್ಳುವುದರ ಮೂಲಕ ಮೇಲ್ಕಂಡ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

ಕದಂಬ ಚೆಸ್ ಅಕಾಡೆಮಿಯ ಅಧ್ಯಕ್ಷರಾದ ರತ್ನ ಕಿರಣ್ ಮಾತನಾಡಿ, ಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿಯಲ್ಲಿ ವಿಜೇತರಾದ ನಾಲ್ಕು ಜನರನ್ನು ಆಯ್ಕೆ ಮಾಡಿ ಅವರನ್ನು ಸೆಪ್ಟೆಂಬರ್ ೨೦ ರಿಂದ ೨೮ ಸಪ್ಟೆಂಬರ್ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕಾರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕದಂಬ ಚೆಸ್ ಅಕಾಡೆಮಿಯ ಉಪಾಧ್ಯಕ್ಷರಾದ ಮಂಜುನಾಥ್ ಪ್ರಸಾದ್, ಸಹ ಕಾರ್ಯದರ್ಶಿ ರಾಧ ಜಗದೀಶ್. ಚನ್ನಪಟ್ಟಣ ಶಾಖೆಯ ತರಬೇತುದಾರರಾದ ಕಾವ್ಯ ಚಂದನ್, ಹೇಮಾವತಿ ನಗರ ಶಾಖೆಯ ತರಬೇತುದಾರರಾದ: ನಯನ ಸತೀಶ್ ಇತರರು ಉಪಸ್ಥಿತರಿದ್ದರು.

Continue Reading

Hassan

ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಗೆ ಸಾವಿರಾರು ಶಿಕ್ಷಕರು

Published

on

ಹಾಸನ: ರಾಜ್ಯದ ನಿಯಮದಂತೆ ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಒಟ್ಟು ೩೪೨೨ ಜನ ಶಿಕ್ಷಕರು ವಗಾವಣೆಗಾಗಿ ಅರ್ಜಿ ಹಾಕಿದ್ದು, ಇದರಿಂದ ಮಕ್ಕಳಿಗೆ ಯಾವ ಸಮಸ್ಯೆ ಆಗುವುದಿಲ್ಲ. ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಹೆಸರು ತರಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಹೆಚ್.ಕೆ. ಪಾಂಡು ತಿಳಿಸಿದರು.

ನಗರದ ಮಹಾವೀರ ವೃತ್ತದ ಬಳಿ ಇರುವ ಕ್ಷೇತ್ರ ಶಿಕ್ಷಣ ಇಲಾಖೆ ಕಛೇರಿಯಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ನಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ವರ್ಗಾವಣೆ ಕೌನ್ಸಲಿಂಗ್ ಆಗುತ್ತಿದ್ದು, ಈಗಾಗಲೇ ಮುಖ್ಯ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಕೌನ್ಸಲಿಂಗ್

ಮುಗಿದಿದ್ದು, ಸಹ ಶಿಕ್ಷಕರು ಒಟ್ಟು ೩೪೨೨ ಶಿಕ್ಷಕರು ವರ್ಗಾವಣೆಗಾಗಿ ಅರ್ಜಿ ಹಾಕಿದ್ದಾರೆ. ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳ ವರ್ಗಾವಣೆ ತೆಗೆದುಕೊಳ್ಳಲಾಗುತ್ತಿದೆ. ಯಾವುದೇ ಗೊಂದಲವಿಲ್ಲದೇ ಉತ್ತಮವಾದ ಪ್ರಕ್ರಿಯೇ ನಡೆಯುತ್ತಿದೆ. ಮೂರು ದಿನಗಳ ಕಾಲ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆ ನಡೆಯಲಿದೆ. ಇವತ್ತು ನಾಳೆ ಪ್ರಾಥಮಿಕ ಹಂತದಲ್ಲಿ ನಡೆದು, ನಾಡಿದ್ದು, ಪ್ರೌಢಶಾಲಾ ವಿಭಾಗದು

ಕೌನ್ಸಲಿಂಗ್ ನಡೆಯುತ್ತದೆ ಎಂದರು. ರಾಜ್ಯ ಮಟ್ಟದಲ್ಲಿ ನಡೆಯುವಂತೆ ಕೌನ್ಸಲಿಂಗ್ ನ್ನು ಕಂಪ್ಯೂಟರ್ ಪ್ರಕಾರವಾಗಿ ಯಾವ ಗೊಂದಲಗಳಿಲ್ಲದೇ ವರ್ಗಾವಣೆಗೆ ಮಾಡಲಾಗುತ್ತಿದೆ. ವರ್ಗಾವಣೆಗೆ ಬಂದ ಶಿಕ್ಷಕರು ತಮ್ಮ ತಮ್ಮ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಶಿಕ್ಷಕರು ಹೋದ ಸರಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಿ ಆ ಶಾಲೆಗೆ ಹೆಸರನ್ನು ತಂದುಕೊಡಬೇಕು ಎಂದು ಕಿವಿಮಾತು

ಹೇಳಿದರು. ಈ ವರ್ಗಾವಣೆಯಿಂದ ಶಾಲೆ ಮಕ್ಕಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಮಕ್ಕಳ ಪಾಠ ಮುಂದುವರೆಯಲಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ೩೦೦ ಜನ ವರ್ಗಾವಣೆಗೆ ಮಾತ್ರ ಅವಕಾಶ ನೀಡಿದ್ದು, ನಂತರ ಕಂಫ್ಯೂಟರ್ ನಲ್ಲಿ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

Continue Reading

Hassan

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಹಾನ್ ದ್ರೋಹವನ್ನು ಖಂಡಿಸಿ ಜು.26 ರಂದು ಧರಣಿ : ಗಂಗಾಧರ್ ಹೇಳಿಕೆ

Published

on

ಹಾಸನ: ಹಾಸನ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗಕ್ಕೆ ಲಕ್ಷಾಂತರ ಕೋಟಿ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಮೀಸಲು ಹಣವನ್ನು ಅ ಜನಾಂಗದ ಪ್ರಗತಿಗೆ ಬಳಸದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಹಾನ್ ದ್ರೋಹವನ್ನು ಖಂಡಿಸಿ ಜುಲೈ ೨೬ ರಂದು ಬಹುಜನ ಸಮಾಜ ಪಾರ್ಟಿಯಿಂದ ಹಾಸನ ಜಿಲ್ಲಾ ಕೇಂದ್ರದಲ್ಲಿ ಧರಣಿ ಮಾಡುವುದಾಗಿ ಬಿ.ಎಸ್.ಪಿ. ರಾಜ್ಯ ಉಪಾಧ್ಯಕ್ಷ ಗಂಗಾಧರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆಂದು ಜಾರಿಗೆ ತಂದ ಎಸ್ ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ ಅನ್ವಯ ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನ ೨ ವರ್ಷಗಳಲ್ಲಿ ರೂ. ೨೫ ಸಾವಿರದ ೩೯೯ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ನೇರವಾಗಿ ಎಸ್ ಸಿ /ಎಸ್‌ಟಿಗಳ ಕುತ್ತಿಗೆ ಕುಯ್ಯುವ ಕೆಲಸ ಮಾಡಿದೆ. ೨೦೧೪ ರಿಂದ ಇದುವರೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನ ಈ ಮೂರು ಸರ್ಕಾರಗಳು ಒಟ್ಟು ಸುಮಾರು ೭೦ ಸಾವಿರ ಕೋಟಿ ರೂಪಾಯಿಗಳ ದುರ್ಬಳಕೆ ಮಾಡಿಕೊಂಡು ಮಹಾನ್ ದ್ರೋಹ ಬಗೆದಿವೆ ಎಂದು ದೂರಿದರು. ಮೀಸಲು ಹಣವನ್ನು ದುರ್ಬಳಕೆ ಮಾಡಲು ನಾಂದಿ ಹಾಡಿದ್ದು, ಇದೇ ಕಾಂಗ್ರೆಸ್ ಸರ್ಕಾರ. ಮುಂದೆ ಬಂದ ಬಿಜೆಪಿ ಮತ್ತು

ಜೆಡಿಎಸ್ ಸರ್ಕಾರಗಳೂ ಕೂಡ ಇದೇ ದಾರಿಯನ್ನು ಹಿಡಿದು ಎಸ್ ಸಿ /ಎಸ್‌ಟಿ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲು ಹಿಂಜರಿಯಲಿಲ್ಲ. ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಕಾನೂನು ಜಾರಿಯಾದಾಗಿನಿಂದ ಇದೂವರೆಗೆ ಹತ್ತು ವರ್ಷಗಳಲ್ಲಿ ೨ ಲಕ್ಷದ ೫೬ ಸಾವಿರ ೧೨ ಕೋಟಿಗಳನ್ನು ಈ ಯೋಜನೆಗೆ ಮೀಸಲಿರಿಸಲಾಗಿದೆ. ಈ ಹಣದಿಂದ ಕರ್ನಾಟಕದ ಎಸ್‌ಸಿ/ಎಸ್‌ಟಿ ಜನಾಂಗದ ಅಭಿವೃದ್ಧಿಗೆ ಮಾಡಬಹುದಾಗಿದ್ದ ಯೋಜನೆಗಳು ಎಂದರೇ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಎಂ.ಬಿ.ಬಿ.ಎಸ್. ಪಿಹೆಚ್.ಡಿ ವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು. ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ, ಬಿ.ಇ, ಲಕ್ಷಾಂತರ ಎಸ್‌ಸಿ/ಎಸ್‌ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು.

ಮನೆ ಇಲ್ಲದ ಪ್ರತಿಯೊಂದು ಎಸ್‌ಸಿ/ಎಸ್‌ಟಿ ಕುಟುಂಬಗಳಿಗೂ ಸುಸಜ್ಜಿತ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು. ಭೂರಹಿತ ಈ ಜನಾಂಗದ ಕೃಷಿ ಕಾರ್ಮಿಕರಿಗೆ ತಲಾ ೫ ಎಕರೆ ಕೃಷಿ ಜಮೀನು ಖರೀದಿಸಿ ಕೊಡಬಹುದಿತ್ತು. ಎಲ್ಲಾ ರೀತಿಯ ರೋಗಿಗಳಿಗೂ ಉಚಿತವಾಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಕೊಡಿಸಿ ಉಳಿಸಬಹುದಿತ್ತು. ಆದರೆ ಈ ಮೂರೂ ಪಕ್ಷದ ಸರ್ಕಾರಗಳು ಈ ಯೋಜನೆಯ ಶೇ. ೧೦% ರಷ್ಟನ್ನು ಕೂಡ ಎಸ್‌ಸಿ/ಎಸ್‌ಟಿಗಳಿಗೆ ನೇರವಾಗಿ ತಲುಪಿಸದೆ ಮಹಾ ದ್ರೋಹ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದರೆ ಎನ್ ಸಿ /ಎಸ್‌ಟಿ ವಿದ್ಯಾರ್ಥಿಗಳು ಕೇವಲ ಟಾಪ್ ೧೦೦ ಯೂನಿವರ್ಸಿಟಿಗಳಲ್ಲಿ ಸೀಟು ಪಡೆದರೆ ಮಾತ್ರ ಸ್ಕಾಲರ್ಶಿಪ್ ಎಂಬ ಕೊಕ್ಕೆ ಹಾಕಿ ಅನ್ಯಾಯವನ್ನು ಮಾಡಿದೆ. ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳ, ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ಪ್ರಾರಂಭದಲ್ಲೇ ಪೂರ್ಣ ಶುಲ್ಕ ಪಾವತಿಸುವಂತೆ ಮಾಡಲಾಗಿದೆ. ಎರಡು ವರ್ಷಗಳಿಂದ ಸಮಯಕ್ಕೆ ಸರಿಯಾಗಿ ಎಸ್ ಸಿ/ಎಸ್‌ಟಿ ಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಚುನಾವಣೆಯಲ್ಲಿ ಭರವಸೆ ನೀಡಿದ್ದಂತೆ ಲಕ್ಷಾಂತರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಖಾಸಗಿ ವಲಯದಲ್ಲಿ ಮೀಸಲಾತಿಗೆ ಕಾಯ್ದೆ ತಂದಿರುವುದಿಲ್ಲ ಎಂದ ಅವರು, ಸಮಾಜಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಎಸ್ ಸಿ ಮತ್ತು ಎಸ್ ಟಿ ಮೀಸಲು ಕ್ಷೇತ್ರಗಳಿಂದ ಗೆದ್ದಿರುವ ಮೂರೂ ಪಕ್ಷಗಳ ಒಬ್ಬ ಶಾಸಕನೂ, ಮಂತ್ರಿ, ಸಂಸದರಾಗಳಲ್ಲಿ ಬಾಯಿ

ಬಿಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಈಘೋರ ಅನ್ಯಾಯವನ್ನು ಪ್ರತಿಭಟಿಸಿ ಸರಿಪಡಿಸದಿದ್ದರೆ ಮುಂದಿನ ಪೀಳಿಗೆಗೆ ಏನೂ ಇಲ್ಲದಂತಾಗಿ ಅವರು ನಮ್ಮನ್ನು ಖಂಡಿತ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು. ಕಾಂಗ್ರೆಸ್ ಸರ್ಕಾರವು ಇಂದು ಎಸ್ ಸಿ ಎಸ್ ಟಿ ಗಳಿಗೆ ಅನ್ಯಾಯ ಮಾಡಿದಾಗ ಸುಮ್ಮನಿದ್ದರೆ ನಾಳೆ ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಅನ್ಯಾಯ ಮಾಡಲು ಮುಂದಾಗುತ್ತದೆ. ಬಿಜೆಪಿ, ಜೆಡಿಎಸ್ ಇದೇ ಚಾಳಿಯನ್ನು ಮುಂದುವರೆಸುತ್ತವೆ. ಏಳಿ ಎದ್ದೇಳಿ ಜಾಗೃತರಾಗಿ ಬಂಧುಗಳೇ, ಈ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಂತಹ ಮನುವಾದಿ ಪಕ್ಷಗಳಿಂದ ಖಂಡಿತಾ ನಮ್ಮ ಉದ್ಧಾರ ಸಾಧ್ಯವಿಲ್ಲ. ಬಾಬಾಸಾಹೇಬರು ಹೇಳಿದಂತೆ “ದಗಾಕೋರರ ಮನಬದಲಿಸಿ ನಮ್ಮ ನಿಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ನಿರಂತರ ಹೋರಾಟದಿಂದ ಮಾತ್ರ ಇದು ಸಾಧ್ಯ

ಎಂಬುದನ್ನು ಮರೆಯುವುದು ಬೇಡ”. ಜ್ಯಾತ್ಯಾತೀತ ಮನುವಾದಿ ಕಾಂಗ್ರೆಸ್ ಮತ್ತು ಜಾತಿವಾದಿ ಮನುವಾದಿ ಬಿಜೆಪಿ ಮತ್ತು ಜೆಡಿಎಸ್ ಒಂದೇ ದೇಹದ ಎರಡು ಕೈಗಳಿದ್ದಂತೆ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇವರಿಂದ ಬಹುಜನರ ಉದ್ಧಾರ ಸಾಧ್ಯವಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ಶಿವಮ್ಮ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್, ಜಿಲ್ಲಾ ಸಂಯೋಜಕ ಲಕ್ಷ್ಮಣ್ ಕೀರ್ತಿ, ಹೆಚ್.ಬಿ. ಮಲ್ಲಯ್ಯ ಇತರರು ಉಪಸ್ಥಿತರಿದ್ದರು.

 

Continue Reading

Trending

error: Content is protected !!