Mysore
ಶ್ರೀ ಮಡಿವಾಳ ಮಾಚಿದೇವರ ಅರ್ಥಪೂರ್ಣ ಜಯಂತಿ : ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕರ ಭರವಸೆ
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ಮಡಿವಾಳ ಮಾಚಿದೇವರ ವಚನ ಸಾಹಿತ್ಯ ಓದಿ ತಿಳಿದುಕೊಂಡು, ಅಲ್ಲಿರುವ ಅರ್ಥ ಜೀವನದಲ್ಲಿ ರೂಢಿಸಿಕೊಂಡರೆ. ಉತ್ತಮವಾಗಿ ಬದುಕು ಸಾಗುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಗರದ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ಶ್ರೀ ಮಡಿವಾಳ ಮಾಚೀದೇವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಮಡಿವಾಳ ಮಾಚೀದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ವಚನ ಉಳಿಸಿದ ಮಹಾತ್ಮ, ಅನುಭವ ಮಂಟಪ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಡಿವಾಳ ಮಾಚಿದೇವರ ಜಯಂತಿಯನ್ನು ನಂಜನಗೂಡಿನಲ್ಲಿ ಅರ್ಥಪೂರ್ಣವಾಗಿ, ಆಚರಿಸಲಾಗುತ್ತಿದೆ
ಮಡಿವಾಳ ಮಾಚಿದೇವರು ವಚನ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಅಪಾರ ಕೊಡುಗೆ ಕೊಟ್ಟಿದ್ದಾರೆ. ಶತಮಾನದ ಹಿಂದೆ ಬಸವಣ್ಣನವರ ಅನುಭವ ಮಂಟಪ ಕಟ್ಟುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಸಮಾಜಕ್ಕೆ ಅಪಾರ ಕೊಡುಗೆ ಕೊಟ್ಟ ಮಡಿವಾಳ ಮಾಚಿದೇವರ ಜಯಂತಿಯನ್ನು ನಮ್ಮ ಸರ್ಕಾರ ಬಂದ ಮೇಲೆ ಆಚರಣೆ ಮಾಡುತ್ತಾ ಬರಲಾಗಿದೆ. ಸಂವಿಧಾನ ಅಡಿಯಲ್ಲಿ ಎಲ್ಲರಿಗೂ ಸಿಕ್ಕಬೇಕು ಹಾಗೆ ನಿಮ್ಮ ಸಮಾಜದ ಬಸವರಾಜು ರವರನ್ನು ನಗರಸಭೆಯಲ್ಲಿ ನಾಮಿನಿ ಸದಸ್ಯನಾಗಿ ಆಯ್ಕೆ ಮಾಡಿದ್ದೇವೆ ಎಂದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಮಡಿವಾಳ ಮಾಚಿದೇವರ ಜಯಂತಿಗೆ ಚಾಲನೆ ನೀಡಿದರು . ನಂಜನಗೂಡು ತಾಲೂಕಿನಲ್ಲಿ ಮಡಿವಾಳ ಜನಾಂಗ ಸಾಕಷ್ಟು ಹಿಂದುಳಿದಿದೆ.
ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಜನಾಂಗದ ಅಭಿವೃದ್ಧಿಗಾಗಿ 50 ಲಕ್ಷ ರೂಪಾಯಿ ಅನುದಾನವನ್ನು ನೀಡಿದ್ದೇನೆ. ಮಡಿವಾಳ ಮಾಚಿದೇವರ ವಚನ ಸಾಹಿತ್ಯ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಬಹುಮಾನಗೆ ನಮ್ಮ ತಂದೆಯವರ ಧ್ರುವ ನಾರಾಯಣ್
ಟ್ರಸ್ಟ್ ವತಿಯಿಂದ ಪ್ರಥಮ ಬಹುಮಾನವನ್ನು ನೀಡಲಾಗಿದೆ. ಇಂತಹ ಮಹನೀಯರ ಸಂದೇಶವನ್ನು ಹೆಚ್ಚು ತಿಳಿದು ಕಾರ್ಯಕ್ರಮಗಳನ್ನು ಮಾಡಬೇಕು ಅಂತ ತಿಳಿಸಿದರು.

ಇದೇ ಸಂದರ್ಭ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವರ ವಚನ ಸಾಹಿತ್ಯ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಬಹುಮಾನಗಳನ್ನು ನೀಡಿ ಶಾಸಕರು ಬೆನ್ನು ತಟ್ಟಿದರು.
ನಗರ ಸಭೆ ನಾಮ ನಿರ್ದೇಶಕ ಸದಸ್ಯ ಹಾಗೂ ಮಡಿವಾಳ ಪ್ರಧಾನ ಕಾರ್ಯದರ್ಶಿ ಬಸವರಾಜು ಮಾತನಾಡಿ, 2015ರಲ್ಲಿ ಸಿದ್ದರಾಮಯ್ಯರವರು ಜಾರಿ ಮಾಡಿದರು , ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆದಮೇಲೆ ಸರ್ಕಾರ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಶಾಸಕ ದರ್ಶನ್ ರವರ ಇವತ್ತು ನಂಜನಗೂಡಿನಲ್ಲಿ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಭಾಗವಹಿಸಿ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ನಮ್ಮ ಸಮಾಜ ಆರ್ಥಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕವಾಗಿ ತೀರ ಹಿಂದುಳಿದಿದೆ. ಮುಂದಿನ ದಿನಗಳಲ್ಲಿ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ ಶಾಸಕರಿಗೆ ತುಂಬು ಹೃದಯದ ಧನ್ಯವಾದಗಳನ್ನು ಜನಾಂಗದ ಪರವಾಗಿ ತಿಳಿಸುವುದಾಗಿ ಹೇಳಿದರು.

ಭಾಷಣಕಾರರು ಕಬ್ಬಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಎಸ್.ಎನ್. ಸಿದ್ದರಾಜಪ್ಪ ರವರು ಮಾಚಿದೇವರು ವಿಷಯಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಇದಕ್ಕೂ ಮುನ್ನ ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿ ನಂಜನಗೂಡಿನ ಆರ್ .ಪಿ. ರಸ್ತೆಯ ಮೂಲಕ ಶ್ರೀಕಂಠೇಶ್ವರ ಶ್ರೀಕಂಠೇಶ್ವರಸ್ವಾಮಿಯ ದೇವಸ್ಥಾನದವರೆಗೆ ಬೃಹತ್ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದವು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕಳಲೆ ಎನ್ ಕೇಶವಮೂರ್ತಿ, ತಹಶೀಲ್ದಾರ್ ಸ್ಮಿತಾ ರಾಮು, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಾರುತಿ, ತಾ.ಪಂ. ಕಾರ್ಯನಿರ್ವಾಹಕ ಆಧಿಕಾರಿ ಜೆರಾಲ್ಡ್ ರಾಜೇಶ್, ಡಿವೈಎಸ್‌ಪಿ ರಘು, ಶಿಕ್ಷಣ ಕ್ಷೇತ್ರಧಿಕಾರಿ ಮಹೇಶ್, ಪಟ್ಟಣದ ಇನ್ಸ್ಪೆಕ್ಟರ್ ರವೀಂದ್ರ, ಆರ್. ಐ. ಹರೀಶ್, ತಾಲೂಕು ಅಧ್ಯಕ್ಷರಾದ ಪ್ರಸನ್ನ ಕುಮಾರ್ , ನಗರಸಭೆ ಸದಸ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಬಸವರಾಜ್, ಗೌರವಾಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಮಹೇಶ್, ಖಜಾಂಚಿ ಸೋಮಣ್ಣ, ನಾಗರಾಜು, ಪ್ರಭುಸ್ವಾಮಿ, ಸುರೇಶ್, ನಂಜುಂಡ, ಗಣೇಶ, ಸೇರಿದಂತೆ ಹಲವು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
Mysore
ಮೈಸೂರು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ. ಶಿವರಾಜ್
ಮೈಸೂರು: ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.

ಫೆ.11 ರಂದು ಕಾರ್ಯಾಗಾರ:
2025 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 11 ರಂದು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದರು.
ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್. ಮಂಜು ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್. ಟಿ.ಯೋಗೇಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.
Mysore
ಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಪ್ರಯೋಗಾಲಯ ಇದ್ದ ಬಗ್ಗೆ ರಾಷ್ಟಿçÃಯ ಮಾದಕ ವಸ್ತು ನಿಯಂತ್ರಣಾ ದಳ(ಎನ್‌ಸಿಬಿ) ಖಚಿತ ಪಡಿಸಿದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು, 14 ತಂಡಗಳನ್ನು ರಚಿಸಿಕೊಂಡು ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಎಸಿಪಿ ರವಿಪ್ರಸಾದ್ ಉಸ್ತುವಾರಿಯಲ್ಲಿ ಇನ್ಸ್‌ಪೆಕ್ಟರ್ ಹಾಗೂ ಸಬ್‌ಇನ್ಸ್‌ಪೆಕ್ಟರ್ ಗಳನ್ನು ಒಳಗೊಂಡ 14 ತಂಡಗಳನ್ನು ರಚಿಸಲಾಗಿದೆ. ಸದರಿ ತಂಡಗಳು ಈಗಾಗಲೇ ಮೂರು ದಿನಗಳಿಂದಲೂ ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ರಸಾಯನಿಕ ಪದಾರ್ಥಗಳ ಆಧಾರಿತ ಕೈಗಾರಿಕೆಗಳು, ಉತ್ಪಾದನಾ ಘಟಕಗಳು, ಕೈಗಾರಿಕಾ ಶೆಡ್‌ಗಳನ್ನು ಗುರಿಯಾಗಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಹೆಬ್ಬಾಳು, ಹೂಟಗಳ್ಳಿ, ಕೂರ್ಗಳ್ಳಿ, ಮೇಟಗಳ್ಳಿ, ಬನ್ನಿಮಂಟಪ, ಹಿನಕಲ್ ಕೈಗಾರಿಕಾ ಪ್ರದೇಶಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಮೈಸೂರು ನಗರ, ಮೈಸೂರು ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ವ್ಯಾಪ್ತಿಯ 250ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ತಪಾಸಣೆ ನಡೆಸಲಾಗಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ನಗರದ ರಿಂಗ್ ರಸ್ತೆಯ ಸಿದ್ದಿಕಿ ನಗರ ಸಮೀಪ ಮುಂಬೈ ಪೊಲೀಸರ ವಿಶೇಷ ತಂಡ ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತು ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದರು. ಇತ್ತೀಚೆಗೆ ನವದೆಹಲಿಯ ಎನ್‌ಸಿಬಿ ತಂಡದವರು ಹೆಬ್ಬಾಳು ಕೈಗಾರಿಕಾ ಪ್ರದೇಶದ ಪಿನಾಯಿಲ್ ತಯಾರಿಕಾ ಘಟಕದಲ್ಲಿ ಡ್ರಗ್ಸ್ ಪ್ರಯೋಗಾಲಯ ಇರುವುದನ್ನು ಕಂಡು ಹಿಡಿದಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
Mysore
ಕಾಂಗ್ರೆಸ್ ಅಹಾರೋತ್ರಿ ಧರಣಿ ಅಂತ್ಯ
ಮೈಸೂರು: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸೋಮವಾರ ಬೆಳಗ್ಗೆ ಅಂತ್ಯಗೊಂಡಿತು.
ಎಐಸಿಸಿ ಸೂಚನೆ ಹಿನ್ನೆಲೆಯಲ್ಲಿ ವಿವಿಧ ಹಂತದ ಹೋರಾಟ ರೂಪಿಸಿದ್ದು, ಮೈಸೂರಿನ ಪುರಭವನ ಆವರಣದಲ್ಲಿ ಸೋಮವಾರ ಅಹೋರಾತ್ರಿ ಸತ್ಯಗ್ರಹ ಸಂಘಟಿಸಲಾಗಿತ್ತು. ಕೆಪಿಸಿಸಿ ಉಪಾಧ್ಯಕ್ಷ, ಮೈಸೂರು ಉಸ್ತುವಾರಿ ವಿ.ಎಸ್.ಉಗ್ರಪ್ಪ ಅವರ ನೇತೃತ್ವದಲ್ಲಿ ರಾತ್ರಿಪೂರ್ತಿ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಶಾಸಕರು ಪಾಲ್ಗೊಂಡರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟವನ್ನು ಅಂತ್ಯಗೊಳಿಸಲಾಯಿತು.
ಜಾನಪದ ಕಥೆ, ಕಾರ್ಯಕರ್ತರ ಗಾಯನ: ಪ್ರತಿಭಟನೆಯಲ್ಲಿ ತೊಡಗಿದ್ದವರು ನಿದ್ದೆಗೆ ಜಾರದಂತೆ ರಾತ್ರಿ ಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಹಿರಿಯ ರಂಗಕರ್ಮಿ ಎಚ್.ಜನಾರ್ದನ್ (ಜನ್ನಿ) ತಂಡದವರು ಕ್ರಾಂತಿಗೀತೆಗಳನ್ನು ಹಾಡಿದರು.
ಜಾನಪದ ಗಾಯಕ ಮೈಸೂರು ಗುರುರಾಜ್ ಅವರು ಇಡೀ ರಾತ್ರಿ ಮಾದಪ್ಪ, ಮಂಟೇಸ್ವಾಮಿ ಕಥಪ್ರಸಂಗ ಹಾಗೂ ಜನಪದ ಗೀತೆಗಳನ್ನು ಹಾಡಿ ರಂಜಿಸಿದರು. ಗಾಯನದಲ್ಲಿ ಆಸಕ್ತಿ ಇದ್ದ ಕಾಂಗ್ರೆಸ್ ಮುಖಂಡರೂ ವಿವಿಧ ಗೀತೆಗಳನ್ನು ಹಾಡಿ ಗಮನ ಸೆಳೆದರು.
ಬೆಳಗ್ಗೆ 5 ಗಂಟೆಗೆ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ಸಾಕ್ಷö್ಯಚಿತ್ರಗಳನ್ನು ವೀಕ್ಷಿಸಿದರು. ರಾಷ್ಟçಗೀತೆ ಹಾಡಲಾಯಿತು. ಕೊನೆಯದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟ ಯಶಸ್ವಿಗೊಂಡಿತು.
ಅಹೋರಾತ್ರಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮುಖಂಡರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನಿದ್ದೆಗೆ ಜಾರದಂತೆ ಟೀ, ಕಾಫಿ ವಿತರಿಸಲಾಗುತ್ತಿತ್ತು. ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ಎಲ್ಲ ಹಂತದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಮಹಿಳೆಯರು ಮುಖಂಡರು ಹಾಜರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾವಣೆ ಮಾಡಿದೆ. ದೇಶದ ಜನರ ದುಡಿಯುವ ಹಕ್ಕನ್ನ ಕಿತ್ತುಕೊಂಡಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ. ನರೇಗಾದಿಂದ 15 ಕೋಟಿ ಜನ ಉದ್ಯೋಗ ಪಡೆಯುತ್ತಿದ್ದರು. ಕೋವಿಡ್ ವೇಳೆ ನರೇಗಾದಿಂದ ಜನರು ಜೀವನ ಸಾಗಿಸಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಲಕ್ಷಾಂತರ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ನೀಡಿ, ಜೀವನಕ್ಕೆ ಆಧಾರವಾಗಿದ್ದ ಮನರೇಗಾ ಯೋಜನೆಯನ್ನು ಬದಲಾವಣೆ ಮಾಡಲಾಗಿದೆ. ಕಾಯ್ದೆ ಮರುಸ್ಥಾಪನೆಗೆ ಆಗ್ರಹಿಸಿ ನಮ್ಮ ಹೋರಾಟ ಮುಂದುವರಿಯಲಿದೆ. ಬಡ ಜನರ ಉದ್ಯೋಗದ ಹಕ್ಕು ಕಸಿಯುವ ಹೊಸ ಕಾಯಿದೆಯನ್ನು ಹಿಂಪಡೆಯಬೇಕು ಎಂದರು.
ಈ ಹಿಂದೆ ಕೇಂದ್ರ ಸರ್ಕಾರವೇ ಮನರೇಗಾಕ್ಕೆ ಹಣ ಕೊಡುತ್ತಿತ್ತು. ಹೊಸ ಕಾಯ್ದೆಯಂತೆ ಈಗ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40 ಕೊಡಬೇಕಿದೆ. ಕೇವಲ ಹೆಸರನ್ನು ಮಾತ್ರ ಬದಲಾವಣೆ ಮಾಡಿದ್ದಾರೆ. ಇದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಯಥಾವತ್ತಾಗಿ ಮನ್‌ರೇಗಾ ಯೋಜನೆ ಜಾರಿ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.
ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸಿದೆ. ಗ್ರಾಮೀಣ ಬಡವರ ಬದುಕಿಗೆ ಆಸರೆಯಾಗಿರುವ ಈ ಯೋಜನೆಯನ್ನು ಮರುಜೀವಂತಗೊಳಿಸಬೇಕು. ಮನರೇಗಾ ಮರಳಿ ತರೋಣ ಜನರ ಉದ್ಯೋಗದ ಹಕ್ಕನ್ನು ಉಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಣ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಮಾಜಿ ಶಾಸಕರಾದ ಎಚ್.ಪಿ. ಮಂಜುನಾಥ್, ಜಿ.ಎನ್.ನಂಜುಂಡಸ್ವಾಮಿ, ಎಂ.ಕೆ. ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಬಿ.ಎಲ್.ಭೈರಪ್ಪ, ಕೆ.ವಿ. ಮಲ್ಲೇಶ್, ಭಾಸ್ಕರ್ ಎಲ್.ಗೌಡ, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ಎಂ.ಶಿವಣ್ಣ, ರವಿ ಮಂಚೇಗೌಡನಕೊಪ್ಪಲು, ಈಶ್ವರ್ ಚಕ್ಕಡಿ, ಕೆ.ಮಹೇಶ್, ಹುಣಸೂರು ಬಸವಣ್ಣ ಮುಂತಾದವರು ಭಾಗವಹಿಸಿದ್ದರು.
-
Manglore2 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Cinema22 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Hassan2 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan3 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
National4 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State5 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya7 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Special23 hours agoಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಅನುದಾನ – ನಿಮ್ಮ ಹಳ್ಳಿಗೂ ಅವಕಾಶ!
