Connect with us

Chamarajanagar

ಮುಖಂಡರುಗಳ ಸಭೆ

Published

on

ವರದಿ : ಗೋವಿಂದ‌‌ ಕೆ ಗೌಡ ಹನೂರು

ಕಳೆದ 10 ವರ್ಷಗಳಿಂದ ಕೇಂದ್ರದಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಸಂಕಷ್ಟಗಳೇ ಎದುರಾಗುತ್ತಿದೆ ಪೆಟ್ರೋಲ್, ಅಡುಗೆ ಅನಿಲ ದಿನುಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿರುವುದನ್ನು ಮನಗಂಡು ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನಗಳ ಮೂಲಕ ಸಹಾಯಹಸ್ತ ನೀಡಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

ಹನೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ, ಸೂಳೇರಿಪಾಳ್ಯ, ನಾಗಣ್ಣನಗರ ಗ್ರಾಮಗಳಲ್ಲಿ ಮುಖಂಡರುಗಳ ಸಭೆ ನಡೆಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಕಳದೆ ವಿಧಾನ ಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ 5. ಗ್ಯಾರಂಟಿಗಳನ್ನು ಅಧಿಕಾರ ಬಂದ‌ ಕೂಡಲೇ ಜಾರಿಗೆ ತಂದಿದ್ದಾರೆ, ಈ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಮುಂದಿನ ಐದು‌ ವರ್ಷಗಳ ವರೆಗೂ ಸ್ಥಗಿತಗೊಳಿಸುವುದಿಲ್ಲ ಆದರೆ ಬಿಜೆಪಿಯವರು ಲೋಕಸಭಾ ಚುನಾವಣಾ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುತ್ತಾರೆ ಅಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಗೆ ಬಹುಮತ ಬಂದರೆ ಖಂಡಿತವಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ. ಪ್ರತಿಯೊಬ್ಬರಿಗೂ ತೊಂದರೆ ಉಂಟಾಗುತ್ತದೆ ಎಂದರಲ್ಲದೇ ಮೋದಿ ಸರ್ಕಾರ ದಲಿತರು, ಬಡವರು, ಶೋಷಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಯಾವುದೇ ಕಾರ್ಯಕ್ರಮವನ್ನು ರೂಪಿಸಿಲ್ಲ ಎಂದರೆ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಮಾನ್ಯ ರಾಹುಲ್ ಗಾಂದಿ ಅವರು ಈಗಾಗಲೇ ಪ್ರತಿ ಕುಟುಂಬದ ಒಬ್ಬ ಬಡ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ, ರೈತ ಸಾಲ ಮನ್ನ, ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ 400 ರೂ, ರೈತರಿಗೆ ಬೆಂಬಲ ಬೆಲೆ ಸೇರಿದಂತೆ 5 ಗ್ಯಾರಂಟಿಗಳನ್ನು ನೀಡಿದ್ದಾರೆ ಎಂದು ತಿಳಿಸಿದರು..

ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಬಸವರಾಜು ಮಾತನಾಡಿ ಮಾನ್ಯ ಸಿದ್ದರಾಮಯ್ಯನವರ ಸರ್ಕಾರ ಕಳೆದ 2013 ರಿಂದ 2018 ರ ವೆರೆಗೆ ಹಾಗೂ ಕಳೆದ ಒಂದು ವರ್ಷದಿಂದ ಉತ್ತಮ ಆಡಳಿತವನ್ನು ನಡೆಸುವ ಮೂಲಕ ದೀನದಲಿತರ, ಹಿಂದುಳಿದವರ, ಬಡವರ ಪರವಾಗಿ ಶ್ರಮಿಸಿದೆ ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನಗಳ ಮೂಲಕ ಜೀವನ ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದಾರೆ ಆಗಾಗಿ ಈ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲೂ ಸುನೀಲ್ ಬೋಸ್ ಅವರಿಗೆ ಮತ ಹಾಕುವ ಮೂಲಕ ನಮ್ಮ ವಿಧಾನ ಸಭಾ ಕ್ಷೇತ್ರದಿಂದ ಅತೀ ಹೆಚ್ಷು ಮತಗಳನ್ನು ನೀಡಿ ಜಯಗೊಳಿಸಬೇಕು ಎಂದರು ‌..

ಇದೇ ಸಂದರ್ಭದಲ್ಲಿ ಹನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಗಿರೀಶ್, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಮುಖಂಡರಾದ ನಾಗರಾಜು, ಪಳನಿಸ್ವಾಮಿ, ಮುನಿಗೌಡ, ಬಸವೇಗೌಡ, ಚೆನ್ನಮಾದೇಗೌಡ, ಕಲೀಲ್, ಮಾದೇವ, ಹಾಗೂ ಇನ್ನೀತರರು ಇದ್ದರು…

Continue Reading
Click to comment

Leave a Reply

Your email address will not be published. Required fields are marked *

Chamarajanagar

ಯಳಂದೂರಿನಲ್ಲಿ ವಿಜೃಂಭಣೆಯಿಂದ ಬಕ್ರೀದ್ ಆಚರಣೆ

Published

on

ಯಳಂದೂರು : ಪಟ್ಟಣದಲ್ಲಿ ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಾಮಿಯಾ ಮಸೀದಿ ಬಳಿ ಜಮಾವಣೆಗೊಂಡ ಮುಸ್ಲಿಂ ಬಾಂಧವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪಟ್ಟಣ ಸೇರಿದಂತೆ ತಾಲೂಕಿನ ಮಾಂಬಳ್ಳಿ ಯರಿಯೂರು ಗುಂಬಳ್ಳಿ ಯರಗಂಬಳ್ಳಿ ಇರಸವಾಡಿ ಸೇರಿದಂತೆ ಗ್ರಾಮೀಣ ಪ್ರದೇಶದ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಪ್ರಾರ್ಥನೆ ಸಮಯದಲ್ಲಿ ಮುಸ್ಲಿಂ ಧರ್ಮಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪಟ್ಟಣದ ಮುಸ್ಲಿಂ ಬಡಾವಣೆಯಲ್ಲಿರುವ ದರ್ಗಾಕ್ಕೆ ತೆರಳಿ ಹಲೋ ಸಹ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಿಹಿಯನ್ನು ಹಂಚಲಾಯಿತು. ಪಟ್ಟಣದ ಮುಸ್ಲಿಂ ಬಡಾವಣೆ ಸೇರಿದಂತೆ ಬಳೆಪೇಟೆಯಲ್ಲಿರುವ ಚಿಣ್ಣರು ವಿವಿಧ ಪೋಷಕಗಳನ್ನು ಧರಿಸಿ ಸಂಭ್ರಮ ಪಟ್ಟರು. ಪೊಲೀಸ್ ಇಲಾಖೆ ವತಿಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Continue Reading

Chamarajanagar

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮದಿನಾಚರಣೆಯ ಕಾರ್ಯಕ್ರಮ

Published

on

ಯಳಂದೂರು ಜೂನ್ 16


ಯಳಂದೂರು ತಾಲ್ಲೂಕಿನ ವೈ.ಕೆ. ಮೋಳೆ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಯುವ ಸಂಘದ ವತಿಯಿಂದ ಹಾಂಗೂ ಉರಿಲಿಂಗಿಪೆದ್ದಿಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮಿಗಳ ದಿವ್ಯ ಸಾನಿಧ್ಯ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ

ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಭಾಗವಹಿಸಿ. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನ ಸನ್ಮಾನಿಸಿ ಗೌರವಿಸಲಾಯಿತು, ಈ ವೇಳೆ ಚಲನಚಿತ್ರ ನಟ ಚೇತನ್ ಅಹಿಂಸ ರವರು, ಎ.ಎಸ್.ಎಸ್.ಕೆ. ಅಧ್ಯಕ್ಷರಾದ ಸಂದೇಶ್ ರವರು,

ಮುಖಂಡರಾದ ಕಿನಕಹಳ್ಳಿ ರಾಚಯ್ಯ ರವರು, ಕಂದಹಳ್ಳಿ ನಂಜುಂಡಸ್ವಾಮಿ ರವರು, ಲೋಕೇಶ್ ಸಿಗಡಿ, ಮಧು ಮಾಲತಿ ರವರು, ಹಾಗೂ ಡಾ.ಬಿ‌.ಆರ್‌ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು,ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Chamarajanagar

ಯಳಂದೂರು:ತಾಲೂಕಿನ ಯರಿಯೂರು ಗ್ರಾಮದಲ್ಲಿ ಕರಾರಸಾ ನಿಗಮದ ಬಸ್ಸುಗಳು ಗ್ರಾಮದಲ್ಲಿ ನಿಲುಗಡೆ ಮಾಡಬೇಕೆಂದುಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ

Published

on

ತಾಲೂಕಿನ ಯರಿಯೂರು ಗ್ರಾಮಸ್ಥರು ಗ್ರಾಮದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ 209 ರಸ್ತೆಯನ್ನು ತಡೆದು ಪ್ರತಿಭಟನೆ ಮಾಡಿ
ಗ್ರಾಮದಿಂದ ವಿದ್ಯಾರ್ಥಿಗಳು ಕೂಲಿಕಾರ್ಮಿಕರು ಹಾಗೂ ಸಾರ್ವಜನಿಕರು ದಿನನಿತ್ಯ ಚಾಮರಾಜನಗರ, ಕೊಳ್ಳೇಗಾಲ ಮೈಸೂರು, ಬೆಂಗಳೂರು ಮಲೆ‌ಮಹದೇಶ್ವರ ಬೆಟ್ಟ ಮುಂತಾದ ಸ್ಥಳಗಳಿಗೆ ತೆರಳುತ್ತಾರೆ ಹಾಗೂ ಆ ಸ್ಥಳಗಳಿಂದ ಗ್ರಾಮಕ್ಕೆ ಆಗಮಿಸುತ್ತಾರೆ ಇಂತಹ ಗ್ರಾಮದಲ್ಲಿ ಕರರಾಸಾ ನಿಗಮದ ಬಸ್ಸುಗಳು ನಿಲ್ಲಿಸದೆ ಗ್ರಾಮಸ್ಥರಿಗೆ ಬಹಳ‌ತೊಂದರೆಯಾಗುತ್ತಿದೆ ಎಂದು ಆರೋಪಿ ಪ್ರತಿಭಟನೆ ನಡೆಸಿ .ಗ್ರಾಮಸ್ಥರು ಎಲ್ಲಿಗೆ ಹೋದರು ಯಳಂದೂರಿನಲ್ಲಿ ಇಳಿದು ಮತ್ತೆ ಖಾಸಗಿ ಬಸ್ಸಿನಲ್ಲಿ ಗ್ರಾಮಕ್ಕೆ ಬರಬೇಕಾದ ಸಂದರ್ಭ ಬಂದಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ದ ಘೋಷಣೆಕೂಗಿ ಪ್ರತಿಭಟನೆ ಮಾಡಿದರು

ವಿಷಯತಿಳಿದ ಸಾರಿಗೆ ಇಲಾಖೆಯ ವಿಭಾಗಾಧಿಕಾರಿಗಳು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿ ಪ್ರತಭಟನಾಕಾರ ಮನವಿಯನ್ನು ಆಲಿಸಿ ಮುಂದಿನ ದಿನಗಳಲ್ಲಿ ಕೋರಿಕೆ ನಿಲುಗಡೆಗೆ ಅವಕಾಶ ಮಾಡುತ್ತೇವೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ನಿಂಗರಾಜು, ಚಂದ್ರಶೇಖರ್ ಪ್ರಕಾಶ್ ಕೃಷ್ಣಯ್ಯ ಹಾಗೂ ಗ್ರಾಮಸ್ಥರು ‌ಪ್ರತಿಭಟನೆಯಲ್ಲಿ ಭಾಗವಿಹಿಸಿದರು

Continue Reading

Trending

error: Content is protected !!