Connect with us

Mandya

ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತವಾಗಿರಬೇಕು: ಬಿ.ಮುರಳಿ ಕುಮಾರ್

Published

on

ಮಂಡ್ಯ: ಲೋಕಸಭಾ ಸರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಕರ್ನಾಟಕ ರಾಜ್ಯದ ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರಳಿ ಕುಮಾರ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಎಫ್.ಎಸ್.ಟಿ, ತಂಡಗಳ ವಾಹನಕ್ಕೆ ಜಿ.ಪಿ.ಎಸ್ ಅಳವಡಿಸಿ ಅವರ ವಾಹನ ಚಲನೆಯ ಸ್ಥಳಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಿಂದ ನಿಗಾ ವಹಿಸಲಾಗುತ್ತಿದೆ. ಈ ವಾಹನಗಳು ಅರ್ಧ ಗಂಟೆಯಿಂದ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ನಿಂತರೆ ತಕ್ಷಣ ಕರೆ ಮಾಡಿ ಕಾರಣ ಕೇಳಿ ಮಾಹಿತಿ ಪಡೆದುಕೊಳ್ಳಿ ಎಂದರು.

ಚೆಕ್ಬಪೋಸ್ಟ್ ಗಳಲ್ಲಿ ಹೊರ ಜಿಲ್ಲೆಯಿಂದ ಅಕ್ರಮವಾಗಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ನಿಗಾ ವಹಿಸಬಹುದು. ಜಿಲ್ಲೆಯ ಒಳಭಾಗದಲ್ಲಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಸ್ಥಳೀಯ ಪೊಲೀಸ್, ಎಫ್.ಎಸ್.ಟಿ, ತಂಡಗಳು ನಿಗಾ ವಹಿಸಬೇಕು ಎಂದರು.

ವಿಧಾನಸಭಾ ಕ್ಷೇತ್ರವಾರು ರಚನೆಯಾಗಿರುವ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮೇಲ್ವಿಚರಣಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ವೆಚ್ಚವನ್ನು ಲೆಕ್ಕಕ್ಕೆ ಸೇರಿಸಿ ವರದಿ ನೀಡಬೇಕು ಎಂದರು.

ಮತದಾನ ಪ್ರಾರಂಭವಾಗುವ 72 ಗಂಟೆಗಳ ಅವಧಿಯಲ್ಲಿ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ ಎಂದರು.

ಚುನಾವಣಾ ವೆಚ್ಚ ವೀಕ್ಷಕರಾದ ರೋಹಿತ್ ಅಸುದಾನಿ ಹಾಗೂ ಕುಮಾರ್ ಪ್ರಿಯತಮ್ ಅಶೋಕ್ ಅವರು ಮಾತನಾಡಿ ಈಗಾಗಲೇ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಎರಡು ಬಾರಿ ಚುನಾವಣಾ ವೆಚ್ಚವನ್ನು ಪರಿಶೀಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ
ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ತಂಡಗಳು, ಚೆಕ್ ಪೋಸ್ಟ್, ವಶಪಡಿಸಿಕೊಂಡಿರುವ ನಗದು, ಮದ್ಯ ಹಾಗೂ ಇನ್ನಿತರೆ ವಸ್ತುಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯ ನಂತರ ವಿಶೇಷ ಚುನಾವಣಾ ವೆಚ್ಚ ವೀಕ್ಷಕರು ಕಂಟ್ರೋಲ್ ರೂಂ, ಮೀಡಿಯಾ ಮಾನಿಟರಿಂಗ್ ಸೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್‌ಡಿಕೆ ಕಳವಳ

Published

on

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು, ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.

ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Mandya

ವೈರಮುಡಿ ಉತ್ಸವದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು : ಎನ್.ಚಲುವರಾಯಸ್ವಾಮಿ

Published

on

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಮೇಲುಕೋಟೆ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಏಪ್ರಿಲ್ 2 ರಿಂದ 14 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಏಪ್ರಿಲ್ 7 ರಂದು ನಡೆಯಲಿರುವ ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದಾರೆ ಎಂದರು.

ಬೇಸಿಗೆ ಬಿಸಿಲಿನ ತಾಪ ಹೆಚ್ಚಿದ್ದು, ಭಕ್ತಾಧಿಗಳಿಗೆ ಮುಖ್ಯವಾಗಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.

ಕುಡಿಯುವ ನೀರು, ದಸೋಹ ಭವನದಲ್ಲಿ ಆಹಾರ ವಿತರಣೆ ಹಾಗೂ ಪ್ರಸಾದ ವಿತರಣೆ ಭಾಗಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಪರೀಕ್ಷೆಗೆ ಒಳಪಡಿಸಿದ ನಂತರವೇ ವಿತರಣೆಯಾಗಬೇಕು.

ಮೇಲುಕೋಟೆಗೆ ವಿವಿಧ ಭಾಗಗಳಿಂದ ಸಂಪರ್ಕಿಸುವ ರಸ್ತೆಗಳ ದುರಸ್ತಿ ಕೆಲಸಗಳು ವೇಗವಾಗಿ ನಡೆಸಿ ಪೂರ್ಣಗೊಳಿಸಬೇಕು. ವಾಹನ ನಿಲುಗಡೆ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಟ್ಯಾಂಕರ್ ದೇವಸ್ಥಾನದ ಸುತ್ತಲೂ ,ಕಲ್ಯಾಣಿ, ಪಾರ್ಕಿಂಗ್ ಸ್ಥಳ ಸೇರಿದಂತೆ ಜನಸಂದಣಿ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆಯಾಗಬೇಕು ಭಕ್ತಾಧಿಗಳಿಗೆ‌ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದರು.

ವೈರಮುಡಿ ಉತ್ಸವದಲ್ಲಿ ಭಾಗವಹಿಸುವ ಭಕ್ತಾಧಿಗಳಿಗೆ ದಸೋಹ ಭವನ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ‌ ನೀಡಲು ದೇವಸ್ಥಾನದ ಸುತ್ತಲೂ ಸೂಚನಾ ಪಲಕಗಳನ್ನು ಅಳವಡಿಸಿ, ದಸೋಹ ಭವನದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು‌. ದಸೋಹಕ್ಕೆ ಬೇಕಿರುವ ಆಹಾರ ಸಾಮಗ್ರಿಗಳ ದಾಸ್ತಾನು ಆಗಬೇಕು.

ದೇವಸ್ಥಾನ ಸುತ್ತ ಹೆಚ್ಚಿನ ಟ್ರನ್ಸ್ ಪರ್ಮರ್ ಬೇಕಿದ್ದಲ್ಲಿ ವ್ಯವಸ್ಥೆ ಮಾಡಿಕೊಳ್ಳಿ, ಅಗತ್ಯವಿರುವ ಕಡೆ ಹೆಚ್ಚಿನ ವಿದ್ಯುತ್ ‌ದೀಪಗಳ ವ್ಯವಸ್ಥೆಯಾಗಬೇಕು‌. ಕಲ್ಯಾಣಿಗಳ ಸ್ವಚ್ಛತೆಯನ್ನು ಕೈಗೊಳ್ಳಿ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಈ ಬಾರಿ 19 ಲಕ್ಷ ರೂ ವೆಚ್ಚದಲ್ಲಿ ಶಾಶ್ವತವಾಗಿ ಸಿ.ಸಿ.ಟಿ ವಿ ಅಳವಡಿಸಲಾಗುವುದು. ಇದನ್ನು ವೀಕ್ಷಿಸಲು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು.

ಕಲ್ಯಾಣಿಗಳ ಬಳಿ ನುರಿತ ಈಜುಗಾರರನ್ನು ನೇಮಿಸಬೇಕು. ಕಲ್ಯಾಣಿ ಯ ಹತ್ತಿರ ವಿದ್ಯುತ್ ದೀಪಗಳು ಹಾಗೂ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಾಯಿಸಲು ಶೆಡ್ ಗಳ ನಿರ್ಮಾಣವಾಗಬೇಕು ಎಂದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಪಾಂಡವಪುರ ‌ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ‌ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಹೆಚ್ಐವಿ ಸೋಂಕಿತರನ್ನು ತಾರತಮ್ಯ ಮಾಡುವುದು ಅಪರಾಧ: ಶ್ರೀವಿನಾಯಕ್

Published

on

ಶ್ರೀರಂಗಪಟ್ಟಣ : ಹೆಚ್ಐವಿ ಸೋಂಕಿತರನ್ನು ಯಾವುದೇ ಕ್ಷೇತ್ರದಲ್ಲಿ ತಾರತಮ್ಯ ಮಾಡುವುದು ಅಪರಾಧವಾಗಿದ್ದು, ಕಾಯ್ದೆ ಉಲ್ಲಂಘಿಸಿದಲ್ಲಿ 6 ತಿಂಗಳು ಜೈಲು ಹಾಗೂ 2 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಜಿಲ್ಲಾ ಮೇಲ್ವಿಚಾರಕ ಶ್ರೀವಿನಾಯಕ್ ಹೇಳಿದರು.

ಅವರು ಪಟ್ಟಣದ ಕೋರುನ್ ಇಂಡಿಯಾ ಗಾರ್ಮೆಂಟ್ಸ್ ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಮಂಡೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಶ್ರೀರಂಗಪಟ್ಟಣದ ವತಿಯಿಂದ ಗಾರ್ಮೆಂಟ್ ನ ಆಡಳಿತ ವಿಭಾಗದ ಅಧಿಕಾರಿಗಳಿಗಾಗಿ ಹೆಚ್ಐವಿ ಏಡ್ಸ್ ನಿಯಂತ್ರಣ ಕಾಯ್ದೆ 2017 ಕುರಿತು ಏರ್ಪಡಿಸಿದ ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು.

ಹೆಚ್ಐವಿ ಏಡ್ಸ್ ರೋಗ ಲಕ್ಷಣ,ಚಿಕಿತ್ಸೆ ಕುರಿತು ಮಾಹಿತಿ ನೀಡಿದ ಅವರು ಹೆಚ್ಐವಿ ಸೋಂಕು ಹರಡುವುದು ಶೇಕಡ 90ರಷ್ಟು ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಲೇ ಬರುತ್ತದೆ ಸಂಸ್ಕರಿಸದ ಸೂಜಿ,ಸಿರಿಂಜಗಳು, ಸೋಂಕಿತ ರಕ್ತವನ್ನು ಪಡೆಯುವುದರಿಂದ ಹಾಗೂ ಸೋಂಕಿತ ತಾಯಿಯಿಂದ ಮಗುವಿಗೆ ಹರಡುವ ಪ್ರಮಾಣ ಶೇ10 ರಷ್ಟಿದ್ದು ಹಾಗಾಗಿ ಹೆಚ್ಐವಿ ಏಡ್ಸ್ ನಿಯಂತ್ರಿಸಲು ಯುವಜನತೆ ಮದುವೆಯಾಗುವ ತನಕ ಬ್ರಹ್ಮಚರ್ಯ ಪಾಲಿಸುವಂತೆ ತಿಳಿಸಿದರು.

ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಐವಿ ನಿಯಂತ್ರಣ ಸಲುವಾಗಿ ಎಲ್ಲಾ ಸಮುದಾಯಗಳಿಗೆ ಹಾಗೂ ಯುವ ಪೀಳಿಗೆಗೆ ಮಾಹಿತಿ ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇಂದಿನ ಯುವ ಜನಾಂಗ ಏಡ್ಸ್ ನಂತಹ ಖಾಯಿಲೆಗೆ ತುತ್ತಾಗುತ್ತಿರುವುದು ಕಳವಳಕಾರಿ ಸಂಗತಿ ಯುವಕರು ತಮ್ಮ ಜೀವನ ಹಾಳು ಮಾಡಿಕೊಳ್ಳದೆ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಏಡ್ಸ್ ಗೆ ಚಿಕಿತ್ಸೆ ಸಾಧ್ಯ ಆದರೆ ಸಂಪೂರ್ಣ ಗುಣ ಮುಖರಾಗಲು ಅಸಾಧ್ಯ. ಈ ಕಾರಣದಿಂದ ರೋಗಕ್ಕೆ ತುತ್ತಾಗದಂತೆ ಎಚ್ಚರ ವಹಿಸಬೇಕು. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.

ನಂತರ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿ, ಏಡ್ಸ್ ರೋಗ ನಿಯಂತ್ರಿಸಲು ಸಾಧ್ಯವಿದ್ದು ಪ್ರತಿಯೊಬ್ಬರಿಗೂ ಇದರ ಬಗ್ಗೆ ತಿಳುವಳಿಕೆ ಅಗತ್ಯವಾಗಿದೆ ಎಂದರು.

ಕಾರ್ಯಗಾರದಲ್ಲಿ ಹೆಚ್.ಆರ್ ಮ್ಯಾನೇಜರ್ ಸುಭಾಷ್ ಬಿ,ಶೃತಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಮೇಘನಾ, ಎಂ&ಇ ರಘು ಪ್ರಸಾದ್, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ್ ಎಂ ಸಿ, ಶುಶ್ರೂಷಕಿ ರೇಖಾ ಹಾಗೂ ಆಡಳಿತ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Continue Reading

Trending

error: Content is protected !!