Connect with us

Mysore

ಕಪ್ಪಡಿ ಕ್ಷೇತ್ರದಲ್ಲಿ ಜಾತ್ರೆಯ  ಪೂರ್ವಸಿದ್ದತಾ ಸಭೆ

Published

on

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

 

ತಾಲೂಕು ಕಪ್ಪಡಿಕ್ಷೇತ್ರದಲ್ಲಿ ಜಾತ್ರಾ ನಿಮಿತ್ತ ಕರೆಯಲಾಗಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು.

 

ಸಾಲಿಗ್ರಾಮ  :    ಸತತವಾಗಿ  ಒಂದು ತಿಂಗಳ ಕಾಲ ನಡೆಯುವ ಇತಿಹಾಸಪ್ರಸಿದ್ದ ಕಪ್ಪಡಿ ಜಾತ್ರೆಗೆ ಬರುವ ಭಕ್ತಾಧಿಗಳಿಗೆ, ಯಾತ್ರಾರ್ಥಿಗಳಿಗೆ ಯಾವುದೆ ಕೊರತೆ ಆಗದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಸಂಬoಧಪಟ್ಟ ಅಧಿಕಾರಿಗಳು ಕೈಗೊಳ್ಳುವಂತೆ ಶಾಸಕ ಡಿ.ರವಿಶಂಕರ್ ಹೇಳಿದರು.

ತಾಲೂಕಿನ ಕಪ್ಪಡಿಕ್ಷೇತ್ರದಲ್ಲಿ ಜಾತ್ರಾ ಸಂಬoಧ ಕರೆಯಲಾಗಿದ್ದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳು ಮತ್ತು ಮುಖಂಡರು ಭಕ್ತಾಧಿಗಳಿಂದ ಕೇಳಿಬಂದ ಅನಿಸಿಕೆಗಳನ್ನು ಆಲಿಸಿ ನಂತರ ಮಾತನಾಡಿದರು. ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಸೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಹೆಬ್ಬಾಳು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಚತೆ ಹಾಗೂ ದ್ವಿಚಕ್ರ ವಾಹನನಿಲ್ದಾಣ, ಭಾರಿ ವಾಹನನಿಲ್ದಾಣ ಇನ್ನಿತರ ಕೆಲಸಗಳನ್ನು ನಿರ್ವಹಿಸುವಂತೆ ಹೇಳಿದರು.

ಸಮಗ್ರ ಶುದ್ದ ಕುಡಿಯುವ ನೀರು ಪೂರೈಸುವ ದೃಷ್ಟಿಯಿಂದ ಸೂಕ್ತ ಸ್ಥಳದಲ್ಲಿ ಎರಡು ಬೋರ್‌ವೆಲ್ ಕೊರೆಸಿ ಸಂಪರ್ಕ ಕಲ್ಪಿಸುವಂತೆ ಕುಡಿಯುವ ನೀರು ಇಲಾಖೆ ಎಇಇ ರಾಜಾರಾಂ ರಿಗೆ ಸೂಚಿಸಿದ ಶಾಸಕರು, ಮೈಸೂರು ರಸ್ತೆಯ ದೊಡ್ಡೆಕೊಪ್ಪಲು ಗ್ರಾಮದ ಬಳಿಯಿಂದ ಹಾಸನ-ಮೈಸೂರು ಮುಖ್ಯರಸ್ತೆ ಹಾಗೂ ಕಪ್ಪಡಿಗೆ ಬರುವ ಮುಖ್ಯರಸ್ತೆಗಳಲ್ಲಿ ಬರುವ ರಸ್ತೆ ಡುಬ್ಬಗಳಿಗೆ ಈ ಕೂಡಲೆ ರೇಡಿಯಂ ಬಣ್ಣ ಹಾಕಿ ಅಪಘಾತ ತಪ್ಪಿಸುವಂತೆ ಲೋಕೋಪಯೋಗಿ ಇಲಾಖೆ ಎಇಇ ಸುಮಿತರಿಗೆ ಸೂಚಿಸಿದರು.

ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಘಟಕ ವ್ಯವಸ್ಥಾಪಕ ಮಹೇಶ್‌ರಿಗೆ ಹೇಳಿದ ಅವರು, ಎಲ್ಲೆಡೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿಗಿಪೋಲೀಸ್ ಬಂದೋಬಸ್ತ್ ಏರ್ಪಡಿಸಿ, ಮದ್ಯ ಮಾರಾಟ ತಡೆಯುವಂತೆ ಹಾಗೂ ಕಪ್ಪಡಿ ಸಿಬ್ಬಂದಿ, ಪತ್ರಕರ್ತರು ಹಾಗೂ ಪ್ರಮುಖರಿಗೆ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಸಬ್‌ಇನ್ಸ್ಪೆಕ್ಟರ್ ಯತೀಶ್‌ರಿಗೆ ಸೂಚಿಸಿದರು.

ಕ್ಷೇತ್ರದಲ್ಲಿ ಅಂಬ್ಯುಲೆನ್ಸ್ ನೀಡುವುದಲ್ಲದೆ ತಾತ್ಕಾಲಿಕ ಆಸ್ಪತ್ರೆಯೊಂದಿಗೆ ಹಾವು, ನಾಯಿ ಕಡಿತದ ಔಷಧಿಯನ್ನು ಸದಾ ಇಡುವಂತೆ ೨೪*೭ ಸಿಬ್ಬಂದಿ ನೇಮಕ ಮಾಡಿ ಯಾತ್ರಾರ್ಥಿಗಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್‌ರಿಗೆ ಹೇಳಿದರು.

ಮಹಿಳೆಯರಿಗಾಗಿ ಸ್ನಾನದ ಮನೆ, ಬಟ್ಟೆ ಬದಲಿಸಲು ತಾತ್ಕಾಲಿಕ ಕೊಠಡಿಗಳ ನಿರ್ಮಾಣ, ಶೌಚಾಲಯ ನಿರ್ಮಾಣದೊಂದಿಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಕಪ್ಪಡಿಕ್ಷೇತ್ರದ ಲಿಂಗರಾಜ್‌ರಿಗೆ ಸೂಚಿಸಿದರು.

ತಾಲೂಕಿನಲ್ಲಿ  ನಡೆಯುವ ಯಾವುದೆ ಪೂರ್ವಭಾವಿ ಸಭೆ ಹಾಗೂ ಅಧಿಕೃತ ಸರಕಾರಿ ಸಭೆ ಸಮಾರಂಭಗಳಿಗೆ ಬಾರದ ಅಬಕಾರಿ ಇನ್ಸ್ಪೆಕ್ಟರ್ ವಿರುದ್ದ ಗರಂಆದ ಶಾಸಕರು ಅಬಕಾರಿ ಇಲಾಖೆ ಅಧಿಕಾರಿ ವಿರುದ್ದ ನೋಟೀಸ್ ಜಾರಿಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್‌ರಿಗೆ ಸೂಚಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾ.ಪಂ.ಇಒ ಜಿ.ಕೆ.ಹರೀಶ್, ಬಿಇಒ ಆರ್.ಕೃಷ್ಣಪ್ಪ, ತಾ.ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್, ಗ್ರಾಮೀಣ ಕುಡಿಯುವನೀರು ಇಲಾಖೆ ಎಇಇ ರಾಜಾರಾಂ, ಜಿ.ಪಂ.ಎಇಇ ವಿನುತ್, ಪಿಡಬ್ಲೂಡಿ ಎಇಇ ಸುಮಿತ, ಸಾರಿಗೆ ಘಟಕ ವ್ಯವಸ್ಥಾಪಕ ಮಹೇಶ್, ಸೆಸ್ಕಾಂನ ಜೆಇ ಕಾಶೀನಾಥ್, ಆರೋಗ್ಯ ಇಲಾಖೆ ಕೆ.ವಿ.ರಮೇಶ್ ಹೆಬ್ಬಾಳು ಗ್ರಾ.ಪಂ.ಅಧ್ಯಕ್ಷೆ ಆಶಾ ಕಾಂಗ್ರೇಸ್ ಮುಖಂಡ ಹೆಬ್ಬಾಳುನಾಗೇoದ್ರ, ಅಪ್ಪಿ , ರಾಜಶೇಖರ್, ಮಧು, ಸೋಮು, ಕಪ್ಪಡಿ ಕ್ಷೇತ್ರದ ಲಿಂಗರಾಜ್, ಭರತ್, ಮತ್ತಿತರರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ತಾಲ್ಲೂಕಿನ ತಗಡೂರಿನಲ್ಲಿ ವಾಂತಿ-ಭೇದಿ ಪ್ರಕರಣ — ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಭೇಟಿ

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 120ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದಾಗಿ ಕಾಲರಾ ರೋಗವು ಆವರಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಗಡೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.


ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀತಿ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಬಂದಿದ್ದೇನೆ. ಮಳೆಗಾಲ ಇನ್ನು ಕಡಿಮೆಯಾಗಿಲ್ಲ ಕೂಡಲೇ ಅಧಿಕಾರಿಗಳು ಗ್ರಾಮದ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೇಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮಸ್ಥರಿಗೆ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಬೇಕು. ಸ್ಥಗಿತಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು. ಈಗಾಗಲೇ ಮೂರು ಟ್ಯಾಂಕರ್ ಗಳಿಂದ ಶುದ್ಧ ಕುಡಿಯುವ ನೀರನ್ನು ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದೆ. ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆ ಆಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಪಂ ಸಿಇಒ ಗಾಯಿತ್ರಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಗ್ರಾಪಂ ಅಧ್ಯಕ್ಷೆ ಚಂದ್ರವತಿ ಬಸವರಾಜು, ಉಪಾಧ್ಯಕ್ಷ ಗುರುಮಲ್ಲೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಕುಮಾರಸ್ವಾಮಿ, ಯುವ ಮುಖಂಡರಾದ ಗಾರ್ಡನ್ ಮಹೇಶ್, ಶಿವರಾಂ, ಆಸ್ಪತ್ರೆಯ ವೈದ್ಯಾಧಿಕಾರಿ ಪ್ರಭು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Mysore

ವೃತ್ತಿನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯ

Published

on

ವೃತ್ತಿನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯ

 

ಸಾಲಿಗ್ರಾಮ  : ಬೆಂಗಳೂರಿನಲ್ಲಿ ವೃತ್ತಿ ನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೃಷ್ಣರಾಜನಗರ ತಾಲೂಕು ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯಿಸಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮುಂಭಾಗ ಧರಣಿ ಕೈಗೊಂಡು ಗ್ರೇಡ್-೨ ತಹಸೀಲ್ದಾರ್ ಬಾಲಸುಬ್ರಮಣ್ಯ ಹಾಗೂ ಶಿರಸ್ತೆದಾರ್ ಅಕ್ರಂ ಭಾಷ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅಧ್ಯಕ್ಷರು ಮೇ.೧೮ ರಂದು ಬೆಂಗಳೂರಿನ ಶಿವಾಜಿನಗರದ ಶಮ್ಸ್ ಕಲ್ಯಾಣ ಮಂಟಪದಲ್ಲಿ

ನಡೆಯುತ್ತಿದ್ದ ಮದುವೆ ಕಾರ್ಯಕ್ರಮದ ವಿಡಿಯೋ ಚಿತ್ರೀಕರಣಕ್ಕೆ ಹೋಗಿದ್ದ ಛಾಯಾಗ್ರಾಹಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಮದುವೆ ಸಮಾರಂಭದಲ್ಲಿದ್ದ ಕೆಲವು ಪುಂಡರು ಮನಬಂದoತೆ ಹಲ್ಲೆ ನಡೆಸಿದವರ ವಿರುದ್ಧ ಸಂಘದ ಪದಾಧಿಕಾರಿಗಳು ನಿರ್ದೇಶಕರು ಹಾಗೂ ಸದಸ್ಯರು ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರಿಗೆ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಹೊಟ್ಟೆಪಾಡಿಗಾಗಿ ವಿಡಿಯೋ ಚಿತ್ರೀಕರಣ ಮಾಡುವ ಛಾಯಾಗ್ರಾ ಹಕನ ಮೇಲೆ ಹಲ್ಲೆ ಮಾಡಿರುವುದು ಅಮಾನವೀಯ ಘಟನೆ ಯಾಗಿದ್ದು, ಇದರಿಂದ ಛಾಯಾಗ್ರಹಕರಿಗೆ ಯಾವುದೇ ರಕ್ಷಣೆ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.


ಈ ಕೃತ್ಯವನ್ನು ಖಂಡಿಸಿ ರಾಜ್ಯ ಛಾಯಾಗ್ರಹಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಲ್ಲೆ ನಡೆಸಿದ ಪುಂಡರ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಹಲ್ಲೆ ಮಾಡಿದ ಪುಂಡರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಛಾಯಾಗ್ರಹಕರಿಗೆ ಸೂಕ್ತ ರಕ್ಷಣೆ ದೊರಕಿಸಿಕೊಡಬೇಕು ಹಾಗೂ ಹಲ್ಲೆಗೊಳಾಗಿರುವ ಛಾಯಾಗ್ರಹಕನಿಗೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಸಿದರು.
ಈ ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷರುಗಳಾದ ಎಂ.ಪಿ.ಮಹದೇವ, ಸಂತೋಷ್, ಕಾರ್ಯದರ್ಶಿ ಶ್ರೀನಿವಾಸ್‌ಗೌಡ, ಪದಾಧಿಕಾರಿಗಳಾದ ಯೋಗೇಶ್, ಜಯರಾಜ್, ಚೀರನಹಳ್ಳಿ ರವಿ, ನಿರ್ದೇಶಕರುಗಳಾದ ಉಮಾಶಂಕರ್, ಶುಭಂರವಿ, ಮಂಜುನಾಥ್, ರಘುಚಂದಗಾಲು, ವಿಜಯ್, ಸದಸ್ಯರಾದ ಶಿಲ್ಪಶ್ರೀನಿವಾಸ್, ತಿಪ್ಪೂರುರವಿ, ಶ್ರೀನಿವಾಸ್, ಸಾರಾ.ನಾಗೇಶ್, ಮಧುವನಹಳ್ಳಿ ರಘು, ದಯನಂದ್, ರಕ್ಷಿತ್, ಸುನೀಲ್, ಶರತ್, ಸುನೀಲ್ ಮೊದಲಿಯರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Continue Reading

Mysore

ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ.ಹೆಚ್.ಸಿ.ಮಹದೇವಪ್ಪ

Published

on

ಮೈಸೂರು,ಮೇ.22: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ವಿಷಯ ತಿಳಿದು ಇಂದು ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು‌.

ಈ ವೇಳೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದ ಮೃತದೇಹಗಳನ್ನು ವೀಕ್ಷಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವರು, ಘಟನೆ ಕುರಿತು ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ವತಿಯಿಂದ ತಲಾ ಮೂರು ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಸ್ಥಳದಲ್ಲಿಯೇ ಘೋಷಿಸಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ಅವರು ಸೇರಿದಂತೆ ಮುಂತಾದವರು ಇದ್ದರು.

Continue Reading

Trending

error: Content is protected !!