Connect with us

National

ಮೆಸ್ಸಿಯ ಕೊನೆಯ ವಿಶ್ವಕಪ್ ಕನಸು ಭಗ್ನ’ : ಸ್ಪೇನ್‌ಗೆ ವಿಶ್ವಕಪ್, ಅರ್ಜೆಂಟೀನಾ ಸೋಲು

Published

on

ನ್ಯೂಯಾರ್ಕ್: ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿಯ ಕೊನೆಯ ವಿಶ್ವಕಪ್ ಗೆಲ್ಲುವ ಕನಸು ಈಡೇರಲಿಲ್ಲ. 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾ 1-0 ಗೋಲುಗಳ ಅಂತರದಲ್ಲಿ ಸೋತು, ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು ಸ್ಪೇನ್‌ಗೆ ವಿಶ್ವಕಪ್ ಕಿರೀಟ ತಂದುಕೊಟ್ಟಿತು.

ಪಂದ್ಯದ ಆರಂಭದಿಂದಲೇ ಸ್ಪೇನ್ ಚೆಂಡಿನ ಮೇಲೆ ಹಿಡಿತ ಸಾಧಿಸಿ ಅರ್ಜೆಂಟೀನಾ ಮೇಲೆ ನಿರಂತರ ಒತ್ತಡ ಹೇರಿತು. ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಕೆಲ ಅವಕಾಶಗಳನ್ನು ಸೃಷ್ಟಿಸಿದರೂ, ಸ್ಪೇನ್‌ನ ಸಂಘಟಿತ ರಕ್ಷಣೆಯನ್ನು ಭೇದಿಸಲು ಸಾಧ್ಯವಾಗಲಿಲ್ಲ. ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಸ್ ಹಲವು ಅದ್ಭುತ ಸೇವ್‌ಗಳನ್ನು ಮಾಡಿ ತಂಡವನ್ನು ಪಂದ್ಯದಲ್ಲಿ ಉಳಿಸಿದ್ದರು.

ನಿಗದಿತ 90 ನಿಮಿಷಗಳಲ್ಲಿ ಯಾವುದೇ ತಂಡ ಗೋಲು ದಾಖಲಿಸದ ಕಾರಣ ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿತು. 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು ಬಾರಿಸಿ ಸ್ಪೇನ್‌ಗೆ ಮುನ್ನಡೆ ತಂದುಕೊಟ್ಟರು. ಕೊನೆಯ ಕ್ಷಣಗಳಲ್ಲಿ ಅರ್ಜೆಂಟೀನಾ ಸಮಬಲ ಸಾಧಿಸಲು ಹೋರಾಡಿದರೂ ಯಶಸ್ವಿಯಾಗಲಿಲ್ಲ.

ಈ ಗೆಲುವಿನೊಂದಿಗೆ ಸ್ಪೇನ್ 2010ರ ಬಳಿಕ ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮತ್ತೊಂದೆಡೆ, ಮೆಸ್ಸಿಗೆ ಇದು ವಿಶ್ವಕಪ್‌ನಲ್ಲಿ ಕೊನೆಯ ಪಂದ್ಯವಾಗುವ ಸಾಧ್ಯತೆ ಇದ್ದು, ಮತ್ತೊಮ್ಮೆ ಟ್ರೋಫಿ ಎತ್ತುವ ಅವರ ಕನಸು ಭಗ್ನಗೊಂಡಿತು.

Continue Reading

National

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

Published

on

ನವದೆಹಲಿ,ಜು.: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ.


ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಅಯೋಧ್ಯೆ ರಾಮಮಂದಿರದಲ್ಲಿನ ದೇಣಿಗೆ ಕಳ್ಳತನದ ಆರೋಪ, ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ವಿವಾದಗಳು ಅಧಿವೇಶನದ ಆರಂಭದಿಂದಲೇ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.

ಚರ್ಚೆಗೆ ನಿಗದಿಯಾಗಿರುವ ಪ್ರಮುಖ ಮಸೂದೆಗಳಲ್ಲಿ ‘ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026’ ಸೇರಿದ್ದು, ಇದರ ಚರ್ಚೆಗೆ ನಾಲ್ಕು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಹಾಗೆಯೇ, ‘ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026’ ರ ಕುರಿತು ಲೋಕಸಭೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಲಿದೆ.

 

Continue Reading

Hassan

ಚೆನ್ನಮ್ಮರವರ ನಿಧನ: ಸೋಮವಾರ ಅಂತ್ಯಕ್ರಿಯೆ

Published

on

ಬೆಂಗಳೂರು/ಹಾಸನ : ಇಂದು ರಾತ್ರಿ 9 ಗಂಟೆಗೆ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಪದ್ಮನಾಭನಗರಕ್ಕೆ ರವಾನಿಸಲಾಗುತ್ತದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಗೆ ತರಲಿದ್ದು, ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಸೋಮವಾರ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತದೆ.

Continue Reading

National

ಪುರಿ ಜಗನ್ನಾಥ ರಥಯಾತ್ರೆ: 103 ಜೇಬುಗಳ್ಳರ ಬಂಧನ, 203 ಮೊಬೈಲ್‌ಗಳ ವಶ

Published

on

ಭುವನೇಶ್ವರ: ಜಗನ್ನಾಥ ರಥಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿರುವ ಹಿನ್ನೆಲೆಯಲ್ಲಿ ಪುರಿ ಪೊಲೀಸರು ವಿಶೇಷ ಕಳ್ಳತನ ವಿರೋಧಿ ಕಾರ್ಯಾಚರಣೆ ನಡೆಸಿ ಇದುವರೆಗೆ 103 ಜೇಬುಗಳ್ಳರನ್ನು ಬಂಧಿಸಿದ್ದು, ಕಳುವಾಗಿದ್ದ 203 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಗ್ರ್ಯಾಂಡ್ ರಸ್ತೆ, ಜಗನ್ನಾಥ ದೇವಸ್ಥಾನ, ಕಡಲತೀರ, ಬಸ್ ಮತ್ತು ರೈಲು ನಿಲ್ದಾಣ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ 24 ಗಂಟೆಗಳ ನಿಗಾ ವಹಿಸಲಾಗಿತ್ತು. ಸಿಸಿಟಿವಿ, ಗುಪ್ತಚರ ಮಾಹಿತಿ ಹಾಗೂ ಆಧುನಿಕ ತಂತ್ರಜ್ಞಾನದ ನೆರವಿನಿಂದ ಶಂಕಿತರನ್ನು ಪತ್ತೆಹಚ್ಚಲಾಗಿದೆ.

ವಶಪಡಿಸಿಕೊಂಡ ಮೊಬೈಲ್‌ಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಾಲೀಕರಿಗೆ ಹಿಂತಿರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತರು ತಮ್ಮ ಮೊಬೈಲ್, ಪರ್ಸ್ ಹಾಗೂ ಆಭರಣಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿರುವ ಪೊಲೀಸರು, ರಥಯಾತ್ರೆಯ ಬಳಿಕವೂ ಕಳ್ಳತನ ವಿರೋಧಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Continue Reading

Trending

error: Content is protected !!