Connect with us

Mandya

ನಾಳೆ ಕೇಂದ್ರ ಸಚಿವ ಹೆಚ್ಡಿಕೆ ಜನತಾ ದರ್ಶನ ಹಿನ್ನಲೆ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಮಾಜಿ ಸಚಿವ ಸಿಎಸ್ ಪುಟ್ಟರಾಜು ಭೇಟಿ – ಪರಿಶೀಲನೆ

Published

on

ಮಂಡ್ಯ: ನಗರದ ಅಂಬೇಡ್ಕರ್ ಭವನದಲ್ಲಿ ನಾಳೆ(ಜು.05)
ನಡೆಯಲಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜನತಾ ದರ್ಶನ ಕಾರ್ಯಕ್ರಮ ಹಿನ್ನೆಲೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪರಿಶೀಲನೆ ನಡೆಸಿದರು.

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮಂಡ್ಯದಲ್ಲಿ ಜನತಾ ದರ್ಶನ ನಡೆಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ, ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕ‌ರ್ ಭವನದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ.ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು,
ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾದ ಮೇಲೆ ಮಂಡ್ಯಕ್ಕೆ ಕೇಂದ್ರ ಮಂತ್ರಿಯಾಗಿ ಬಂದಿದ್ದರು. ನಾಳೆ ಬೆಳಿಗ್ಗೆ ಜನತಾ ದರ್ಶನ ಕಾರ್ಯಕ್ರಮ ಇದೆ.
ಸಂಜೆಯ ವರೆಗೂ ಕಾರ್ಯಕ್ರಮ ಇರಲಿದೆ. ಜನಸಾಮಾನ್ಯರ ಜೊತೆ ಇದ್ದು ಸಮಸ್ಯೆ ಆಲಿಸಲಿದ್ದಾರೆ.

ಕುಮಾರಣ್ಣ ಅವರಿಗೆ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ.
ಜನರ ನೀರಿಕ್ಷೆಯನ್ನ ಕುಮಾರಣ್ಣ ಈಡೇರಿಸುವ ಕೆಲಸ ಮಾಡ್ತಾರೆ.
ದೇಶದ ಕೆಲಸದ ಜೊತೆಗೆ ಮಂಡ್ಯದ ಜನರ ಋಣ ತೀರಿಸುವ ಅವಕಾಶ ಅವರಿಗೆ ಲಭಿಸಿದೆ. ನೂರಕ್ಕೆ ನೂರರಷ್ಟು ಜಿಲ್ಲೆಯ ಅಭಿವೃದ್ದಿಯನ್ನು ಸಹಕಾರ ಮಾಡುತ್ತಾರೆ.

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ವಿರೋಧ ವಿಚಾರವಾಗಿ ಮಾತನಾಡಿದ ಪುಟ್ಟರಾಜು, ನಮ್ಮೆಲ್ಲರ ಬೆನ್ನೆಲುಬು ಕನ್ನಂಬಾಡಿ ಅಣೆಕಟ್ಟೆ. ಅದರ ಸುರಕ್ಷಿತೆಗೆ ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳುತ್ತೊ ಅದರ ಪರ ನಾವು ಇರ್ತೇವೆ. ಅದರ ಬಗ್ಗೆ ವಿಶ್ಲೇಷಣೆ ಮಾಡಲ್ಲ. ಕನ್ನಂಬಾಡಿ ಅಣೆಕಟ್ಟೆ ಸುರಕ್ಷಿತೆ ಮುಖ್ಯ.

ಜಿಲ್ಲಾಡಳಿತ ಕಾನೂನು ಬದ್ದವಾಗಿ ಸುರಕ್ಷಿತೆಯ ಜವಾಬ್ದಾರಿ ಹೊತ್ತಿದೆ. ಅವರ ಜೊತೆ ನಾವು ಇರ್ತೇವೆ.
ಕುಮಾರಣ್ಣ ಅವರು ಕೂಡ ಜಿಲ್ಲಾಡಳಿತಕ್ಕೆ ಸಹಕಾರ ಕೊಡ್ತಾರೆ ಎಂದರು.

ವಿಸಿ ನಾಲೆಗೆ ನೀರು ಬಿಡುವ ವಿಚಾರವಾಗಿ ಮಾತನಾಡಿ, ತಕ್ಷಣವೇ ನಾಲೆಗಳಿಗೆ ನೀರು ಬಿಡಬೇಕು.
ಸಂಬಂಧಿಸಿದ ಅಧಿಕಾರಿಗಳ ಜೊತೆ ಕುಮಾರಣ್ಣ ಮಾತನಾಡಿದ್ದಾರೆ.
ಯಾವುದೇ ಮುಲಾಜಿಲ್ಲದೆ ನೀರು ಬಿಡುವ ಕೆಲಸವಾಗುತ್ತದೆ ಎಂದರು.

ಮೈಸೂರು ಮೂಡ ಹಗರಣ ವಿಚಾರವಾಗಿ ಮಾತನಾಡಿ, ಇದರ ಬಗ್ಗೆ ಮಾಹಿತಿ ಇಲ್ಲ. ಕಾನೂನು ಚೌಕಟ್ಟಿನಲ್ಲಿ ಯಾರು ದೊಡ್ಡವರಲ್ಲ.
ಯಾರೇ ಇದರಲ್ಲಿ ತಪ್ಪು ಮಾಡಿದ್ದರು ಕ್ರಮವಾಗುತ್ತದೆ ಎಂದರು.

ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಬಿಜೆಪಿ ಒತ್ತಾಯ ವಿಚಾರವಾಗಿ ಮಾತನಾಡಿದ ಪುಟ್ಟರಾಜು, ಕಾನೂನು ಬದ್ದವಾಗಿ ನಾವು ಬಿಜೆಪಿ ಜೊತೆ ಸೇರಿ ವಿರೋಧ ಪಕ್ಷದವರಾಗಿ ರಾಜೀನಾಮೆಗೆ ಒತ್ತಾಯ ಮಾಡ್ತೇವೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು

Continue Reading
Click to comment

Leave a Reply

Your email address will not be published. Required fields are marked *

Mandya

ತ್ರಿಶೂಲಂ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆಯ ಉದ್ದೇಶ, ನೊಂದವರ ಬಾಳಿಗೆ ಸಹಾಯ ಹಸ್ತ ಮಾಡುವುದು: ಡಾ.ರಾಘವೇಂದ್ರ ರಾವ್‌

Published

on

ಮದ್ದೂರು:  ಸಮಾಜದಲ್ಲಿ ನೊಂದವರ ಬಾಳಿಗೆ ಸಹಾಯ ಹಸ್ತಚಾಚುವ ಉದ್ದೇಶದಿಂದ ತ್ರಿಶೂಲಂ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ವೇದಬ್ರಹ್ಮ ಡಾ.ರಾಘವೇಂದ್ರ ರಾವ್ ಪುರೋಹಿತರು ತಿಳಿಸಿದರು.

ತಾಲೂಕಿನ ಮಾಲಗಾರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ತ್ರಿಶೂಲಂ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆವತಿಯಿಂದ ಉಚಿತವಾಗಿ ಸಮವಸ್ತ್ರ, ನೋಟ್ ಬುಕ್ ಹಾಗೂ ಸಿಹಿ ವಿತರಿಸಿ ಮಾತನಾಡಿದರು.

ನಮ್ಮ ಸುತ್ತಮುತ್ತ ಪರಿಸರದಲ್ಲಿ ಹಲವಾರು ಮಂದಿಗೆ ಆಹಾರ, ಹೊದಿಕೆ, ಅನಾರೋಗ್ಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದಾರೆ ಅಂತವರನ್ನು ಗುರುತಿಸಿ ನಮ್ಮ ಕೈಯಲ್ಲಾದ ಸಹಾಯ ಮಾಡುವುದು ಹಾಗೂ ದಾನಿಗಳಿಂದ ಅನುಕೂಲ ಕಲ್ಪಿಸಬೇಕೆಂಬ ಹಂಬಲದಿಂದ ಸೇವಾ ಸಂಸ್ಥೆ ಆರಂಭಿಸಲಾಗಿದೆ ಎಂದರು.

ಮೊಲದ ಹಂತವಾಗಿ ಸೇವಾ ಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಸಮವಸ್ತ್ರ ಹಾಗೂ ನೋಟ್ಬುಕ್ಗಳನ್ನು ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಧಾಮರ್ಿಕ ಹಾಗೂ ಸಮಾಜಮುಖಿಯಾಗಿ ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶವಿದೆ ಎಂದು ಹೇಳಿದರು.

ಪ್ರಪಂಚದಲ್ಲಿ ಜ್ಞಾನಕ್ಕೆ ಮಿಗಿಲಾಗಿದ್ದು ಯಾವುದು ಇಲ್ಲಾ ಇದನ್ನರಿತು ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉನ್ನತ ಸ್ಥಾನಗಳಿಸಿ ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕು ಹಾಗೂ ಪಾಲಕರಿಗೆ, ಗುರು,ಹಿರಿಯನ್ನು ಗೌರವಿಸುವ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸರ್ಕಾರಿ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ ಜತೆಗೆ ಉತ್ತಮ ಶಿಕ್ಷಕರು ಇರುವುದರಿಂದ ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸಕರ್ಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳು ಉಳಿವಿಗೆ ಮುಂದಾಗಬೇಕೆಂದು ಮನವಿ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದಶರ್ಿ ಬಿ.ಕಿರಣ್ ಮಾತನಾಡಿ, ಡಾ.ರಾಘವೇಂದ್ರರಾವ್ ಅವರು ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಅದ್ವೀತಿಯ ಸಾಧನೆ ಮಾಡುವ ಜತೆಗೆ ಸೇವಾ ಸಂಸ್ಥೆಯ ಮೂಲಕ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಿರುವುದು ಶ್ಲಾಘನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

7 ನೇ ತರಗತಿ ವಿದ್ಯಾಥರ್ಿನಿ ಎಂ.ಆರ್.ದರ್ಶನಿ ಮಾತನಾಡಿ, ಡಾ.ರಾಘವೇಂದ್ರ ರಾವ್ ಅವರು ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಹಾಗೂ ನೋಟ್ಬುಕ್ಗಳನ್ನು ವಿತರಣೆ ಮಾಡಿರುವುದು ಸಂತೋಷ ಎಂದರು.

ಮುಖಂಡರಾದ ಮಮತಾರಾಂಖ, ಮುಖ್ಯ ಶಿಕ್ಷಕಿ ಎಚ್.ವಿಜಯಲಕ್ಷ್ಮಿ, ಎಸ್ಡಿಎಂಸಿ ಅಧ್ಯಕ್ಷ ನವೀನ್ಕುಮಾರ್, ಸದಸ್ಯರಾದ ಶೇಖರ್, ಸೋಮಶೇಖರ್, ರಮೇಶ್, ರಾಮಚಂದ್ರ, ಚನ್ನಯ್ಯ, ಸಹ ಶಿಕ್ಷಕರಾದ ಮಹೇಶ್, ಮಂಜುಳ, ಶ್ರುತಿ ಇದ್ದರು.

 

Continue Reading

Mandya

ಹಳೇ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನ ಭೀಕರ ಕೊ*ಲೆ

Published

on

ಮದ್ದೂರು: ಹಳೇ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ತಾಲ್ಲೂಕಿನ ವಡ್ಡರದೊಡ್ಡಿಯ ಅರುಣ್ ( 30 ) ಎಂಬಾತನೆ ಹತ್ಯೆಗೀಡಾದ ವ್ಯಕ್ತಿಯಾಗಿದ್ದು ಆತ ಅವಿವಾಹಿತನಾಗಿದ್ದು ಬೆಂಗಳೂರಿನಲ್ಲಿ ಆಟೋ ಡ್ರೈವರ್ ಆಗಿದ್ದ ಎಂದು ತಿಳಿದು ಬಂದಿದ್ದು, ವರಮಹಾಲಕ್ಷ್ಮಿ ಹಬ್ಬಕೆಂದು ತನ್ನ ಸ್ವಗ್ರಾಮವಾದ ವಳೆಗೆರೆದೊಡ್ಡಿ ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ.

ಶುಕ್ರವಾರ ರಾತ್ರಿ 9.30 ವೇಳೆ ಸುಮಾರಿಗೆ ಅರುಣ್ ಮತ್ತು ಆತನ ಸ್ನೇಹಿತರು ಸೋಮನಹಳ್ಳಿ ಬಳಿಯ ಎಂ.ಟಿ.ಆರ್ ಬಾರ್ ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಹಳೇ ವಿಚಾರವೊಂದಕ್ಕೆ ಕೆಲವರ ಬಳಿ ಪರಸ್ಪರ ಜಗಳ ಉಂಟಾಗಿದೆ. ಬಳಿಕ ಬಾರ್ ನಿಂದ ಸಿಬ್ಬಂದಿಗಳು ಎಲ್ಲರನ್ನು ಹೊರಗಡೆ ಕಳುಹಿಸಿದ್ದಾರೆ.

ಬಳಿಕ ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟರಿಂದ ಹತ್ತು ಮಂದಿ ಇದ್ದ ಗುಂಪು ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಿಪಿಐ ವೆಂಕಟೇಗೌಡ ಹಾಗೂ ಕೆಸ್ತೂರು ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದರು,ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದು ಆರೋಪಿಗಳ ಶೋಧ ಕಾರ್ಯ ಕೈಗೊಂಡಿದ್ದಾರೆ.

Continue Reading

Mandya

ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮಹತ್ತರ ಘಟ್ಟ: ಡಾ.ಕುಮಾರ

Published

on

ಮಂಡ್ಯ: ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಒಂದು ಮಹತ್ತರವಾದ ಘಟ್ಟವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ತಾಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೃಷಿ ಮಹಾವಿದ್ಯಾಲಯ ವಿ.ಸಿ. ಫಾರಂ ವತಿಯಿಂದ ನಡೆದ ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿ ಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಇಚ್ಚಾನುಸಾರ ಎನ್ಎಸ್ಎಸ್, ಎನ್ ಸಿಸಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಂತಹ ಶಿಬಿರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆ ಎನ್ನುವುದು ಶಿಕ್ಷಣದ ಜೊತೆ ನಮ್ಮನ್ನು ನಾವು ಸಮುದಾಯದಲ್ಲಿ ತೋಡಗಿಸಿಕೊಳುವುದರ ಮೂಲಕ ಸಮಾಜದ ನಿಜವಾದ ಸಮಸ್ಯೆಗಳನ್ನು ಅರಿತುಕೊಂಡು ಆ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದು ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿ ವಿದ್ಯಾರ್ಥಿಗಳ ಪಾತ್ರ ದೊಡ್ಡದಾಗಿರುತ್ತದೆ, ಕೃಷಿ ವಿದ್ಯಾರ್ಥಿಗಳು ತಮ್ಮ ಆರ್ಥಿಕತೆಯನ್ನು ವೃದ್ಧಿಸಿಕೊಳ್ಳುವ ಬದಲು ಸಮಾಜದ ಕುರಿತು ಯೋಚಿಸಿ ಸಮಾಜವನ್ನು ಮತ್ತು ದೇಶವನ್ನು ಅಭಿವೃದ್ಧಿ ಮಾಡುವತ್ತ ಹೆಜ್ಜೆ ಇಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ
ಎಂ.ಕೃಷ್ಣ, ನಿವೃತ್ತ ಎಸಿಎಫ್ ಎ.ಎಂ. ಅಣ್ಣಯ್ಯ,ಜಿಲ್ಲಾ ಕೆಡಿಪಿ ಸದಸ್ಯ ಸಿ.ಎಂ.ದ್ಯಾವಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ, ಸುಮಲೋಕೇಶ್, ಸದಸ್ಯ ಕೃಷ್ಣ, ಮುಖಂಡರಾದ ವೆಂಕಟೇಶ್, ಮರಿಗೌಡ,ಶಂಕರೇಗೌಡ,ಎನ್ಎಸ್ಎಸ್ ಶಿಬಿರಾಧಿಕಾರಿ ಪ್ರವೀಣ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Trending

error: Content is protected !!