Connect with us

Hassan

ಮೈತ್ರಿ ಅಭ್ಯರ್ಥಿ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಬೆಂಬಲಿಸಲು

Published

on

ಹಾಸನ : ದೇಶದ ಪ್ರಜಾ ಪ್ರಭುತ್ವ, ಸಂವಿಧಾನದ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ. ಹಾಗೂ ಜೆ ಡಿ ಎಸ್ ಎನ್.ಡಿ.ಎ ಕೂಟ ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸುವಂತೆ ಡಾ|| ಬಿ.ಆರ್. ಅಂಬೇಡ್ಕರ್ ದಲಿತ ಹೋರಾಟಗಾರರ ಒಕ್ಕೂಟದ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಧರ್ ಕಲಿವೀರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ನೇತೃತ್ವದ ಎನ್.ಡಿ.ಎ ಪಕ್ಷಗಳ ರಂಗದ ಮುಖಂಡರು ಡಾ: ಬಿ.ಆರ್. ಅಂಬೇಡ್ಕರ್ ರವರ ವಿರಚಿತ ಸಂವಿಧಾನವನ್ನು ಬದಲಾಯಿಸುವ ಉದ್ದೇಶವಿದೆಯೆಂದು ಹೇಳಿಕೊಂಡಿದ್ದಾರೆ. ಶತಮಾನಗಳ ಹಿಂದೆ ಜಾರಿಯಲ್ಲಿದ್ದ ಜಾತಿ ಆಧಾರಿತ ವರ್ಣಾಶ್ರಮ ಮತ್ತು ಮನುಸ್ಮೃತಿಯನ್ನು ಅಸಮಾನತೆಯನ್ನು ವಾಪಸ್ಸು ಜಾರಿಗೆ ತರುವ ದುರುದ್ದೇಶವನ್ನು ಹೊಂದಿದ್ದಾರೆ. ಈ ರಂಗವು ೪೦೦ ಲೋಕಸಭಾ ಸ್ಥಾನಗಳನ್ನು ಗೆದ್ದು ಬಹುಮತವನ್ನು ಸಾಧಿಸಿ ಸಂವಿಧಾನವನ್ನು ಬದಲಾಯಿಸುವ ಷಡ್ಯಂತ್ರವನ್ನು ಹೊಂದಿವೆ ಎಂದು ದೂರಿದರು. ಕರ್ನಾಟಕ ರಾಜ್ಯದಲ್ಲಿ ಬಿ.ಜೆ.ಪಿ./ ಜೆ.ಡಿ.ಎಸ್ ಪಕ್ಷಗಳನ್ನು ಸೋಲಿಸಿ ತಾನೇ ಗೆಲ್ಲುವ ಶಕ್ತಿಯನ್ನು ಕಾಂಗ್ರೆಸ್ ಪಕ್ಷವು ಮಾತ್ರ ಹೊಂದಿದೆ. ಕಾಂಗ್ರೆಸ್ ಪಕ್ಷವು ಹೊರಡಿಸಿರುವ ಚುನಾವಣಾ ಪ್ರಣಾಳಿಕೆಯಲ್ಲಿ ದೇಶಾದ್ಯಂತ ಐ.ಎನ್.ಡಿ.ಐ.ಎ. ರಂಗವು ಮಿತ್ರ ಪಕ್ಷಗಳು ಸೇರಿ ಬಹುಮತ ಸಾಧಿಸಿ ಕೇಂದ್ರ ಸರ್ಕಾರವನ್ನು ರಚಿಸಿದ ಪಕ್ಷದಲ್ಲಿ ಐದು ನ್ಯಾಯ ಜಾರಿಗೆ ತರುವ ಭರವಸೆಯನ್ನು ನೀಡಲಾಗಿದೆ. ಯುವ ನ್ಯಾಯ ಅಂದರೆ ಪ್ರತಿಯೊಬ್ಬ ವಿದ್ಯಾವಂತ ಯುವಕನಿಗೆ ಉದ್ಯೋಗದ ಗ್ಯಾರಂಟಿ, ಪ್ರತಿ ವರ್ಷ ೧ ಲಕ್ಷ ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ಅಂದರೆ ಮಹಿಳಾ ನ್ಯಾಯ, ರೈತ ನ್ಯಾಯ ಅಂದರೆ ಸ್ವಾಮಿನಾಥನ್ ಆಯೋಗದ ಸೂತ್ರದ ಪ್ರಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಸ್ಥಾನಮಾನ, ಮನ್‌ರೇಗಾ ಯೋಜನೆಯಲ್ಲಿ

ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ರೂ. ೪೦೦ ರೂಗಳೆಂಬ ಎಂಬ ಶ್ರಮಿಕ ನ್ಯಾಯ, ಜಾತಿ ಗಣತಿಯಂತೆ ಪಾಲುದಾರಿಕೆ ನ್ಯಾಯ ಅಂದರೆ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಜಾರಿಗೊಳಿಸಲು ರಾಷ್ಟ್ರ ವ್ಯಾಪಿ ಜನಗಣತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿ ಮತ್ತು ಪ್ರತಿಯೊಂದು ಸಮುದಾಯವನ್ನು ಪರಿಗಣಿಸಲಾಗುವುದು ಎಂದರು. ಜಾತಿ ಆಧಾರಿತ ಮೀಸಲಾತಿ ಪ್ರಮಾಣವನ್ನು ಶೇಕಡಾ ೫೦ ಕ್ಕಿಂತ ಹೆಚ್ಚಿಸಲು ಸಂವಿಧಾನಕ್ಕೆ ತಿದ್ದುಪಡಿ ತರಲಾಗುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ ಕಾಯ್ದೆಯನ್ನು ಪರಿಶಿಷ್ಟರ ಜನಸಂಖ್ಯೆ ಆಧಾರದ ಮೇಲೆ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಅನುದಾನ ಮೀಸಲಿಡುವ ಕಾನೂನು ಜಾರಿಗೊಳಿಸಲಾಗುವುದು, ಮುಂತಾದ ಜನಪರ ಕಾಯ್ದೆಗಳ ಭರವಸೆಯನ್ನು ನೀಡಲಾಗಿದೆ ಕರ್ನಾಟಕ ರಾಜ್ಯ ಸರ್ಕಾರವು ಈಗಾಗಲೇ ತಾನು ಭರವಸೆ ನೀಡಿದ ಪ್ರಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ತಾನು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಮ್ಮ ಒಕ್ಕೂಟದಲ್ಲಿ ಇರುವ ವಿವಿಧ ಸಂಘಟನೆಗಳ ಬಣಗಳು ಕಾಂಗ್ರೆಸ್ ಪಕ್ಷಕ್ಕೆ ಹೊರಗಿನ ಬೆಂಬಲವನ್ನು ನೀಡಲು ತೀರ್ಮಾನಿಸಲಾಗಿದ್ದು, ಹಾಸನ ಜಿಲ್ಲಾದ್ಯಂತ ಮತ್ತು ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವಿಚಾರ ಸಂಕಿರಣ, ಗುಂಪು ಚರ್ಚೆಗಳನ್ನು ಏರ್ಪಡಿಸಲಾಗುವುದು ಎಂದು ಹೇಳಿದರು. ಈ ಚರ್ಚೆಗಳಲ್ಲಿ ಭಾರತದ ಸಂವಿಧಾನದಲ್ಲಿ ಅಡಗಿರುವ ಸಾಮಾಜಿಕ ಆರ್ಥಿಕ ಸಮಾನತೆಯ ಮೂಲ ಆಶಯಗಳಿಗೆ ಭಂಗ ತರುತ್ತಿರುವ ದೇಶದ ಪ್ರಜಾ ಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ. /ಜೆ ಡಿ ಎಸ್ ಎನ್.ಡಿ.ಎ ಕೂಟವನ್ನು ಸೋಲಿಸುವುದೇ ಭಾರತದ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯ ಎಂಬುದನ್ನು ಮತದಾರರಿಗೆ ವಿವರಿಸಲಾಗುವುದು ಎಂದು ಉದ್ದೇಶವನ್ನು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಕೃಷ್ಣದಾಸ್, ನಾರಾಯಣದಾಸ್, ಮಲ್ಲೇಶ್ ಅಂಬೂಗ, ಬಲರಾಮ್, ಕೆ. ಈರಪ್ಪ, ಭಾಗ್ಯ ಕಲಿವೀರ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಪಟ್ಟಣದ ತಾಲೂಕು ಕಚೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ

Published

on

ಮಹದೇವ್ ಸಿಸಿ ಭೇರ್ಯ
ಕೆ ಆರ್ ನಗರ – ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಶಾಸಕ ಡಿ ರವಿಶಂಕರ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕೆಂಪೇಗೌಡ ಜಯಂತಿಯನ್ನು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕು ಆಡಳಿತ ಮತ್ತು ತಾಲೂಕು ಒಕ್ಕಲಿಗರ ಸಂಘದ ಮುಖಂಡರು ಸೇರಿದಂತೆ ಗೆಲ್ಲ ಸಮಾಜದ ಜನರು ಸೇರಿ ವಿವಿಧ ಕಲಾತಂಡದೊಂದಿಗೆ ಕೆಂಪೇಗೌಡ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡುವ ಮೂಲಕ ಸಾಲಿಗ್ರಾಮದ ತಾಲೂಕು ಕಚೇರಿ ಎದುರು ಆಚರಣೆ ಮಾಡಲು ತಾಲೂಕು ಆಡಳಿತ ಮತ್ತು ಒಕ್ಕಲಿಗರ ಸಂಘ ತೀರ್ಮಾನಿಸಲಾಗಿದ್ದು ಎರಡು ತಾಲೂಕಿನ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡೋಣ ಎಂದು ತಿಳಿಸಿದರು,

ಕಳೆದ ವರ್ಷ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲು ಪೂರ್ವಭಾವಿ ಸಭೆಯಲ್ಲಿ ಕೆ ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಕೆಆರ್ ನಗರ ಮತ್ತು ಸಾಲಿಗ್ರಾಮ ಎರಡು ತಾಲೂಕುಗಳು ಸೇರಲಿದ್ದು ಒಂದು ವರ್ಷ ಕೆಆರ್ ನಗರದಲ್ಲಿ ಮತ್ತೊಂದು ವರ್ಷ ಸಾಲಿಗ್ರಾಮದಲ್ಲಿ ಆಚರಣೆ ಮಾಡಲು ಒಕ್ಕಲಿಗ ಸಂಘದ ಅಧ್ಯಕ್ಷರು ಮತ್ತು ಸಮಾಜದ ಹಿರಿಯ ಮುಖಂಡರ ಸೂಚನೆಯಂತೆ ತಾಲೂಕು ಆಡಳಿತದಿಂದ ಕಳೆದ ವರ್ಷ ಕೆಆರ್ ನಗರದಲ್ಲಿ ಆಚರಣೆ ಮಾಡಲಾಗಿತ್ತು. ಕೆಲವು ಮುಖಂಡರು ಸಾಲಿಗ್ರಾಮದಲ್ಲಿ ಒಕ್ಕಲಿಗ ಸಮುದಾಯ ಭವನ ಆಗುವವರೆಗೆ ಕೆಆರ್ ನಗರದಲ್ಲಿ ಆಚರಣೆ ಮಾಡೋಣ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಸಮುದಾಯ ಭವನ ನಿರ್ಮಾಣಕ್ಕೂ ಜಯಂತಿಗೂ ಯಾವುದೇ ಸಂಬಂಧ ಇಲ್ಲ ಸಮುದಾಯ ಭವನವನ್ನ ಈ ಬಾರಿ ತಾಲೂಕಿನ ಮುಖಂಡರು ಮತ್ತು ಒಕ್ಕಲಿಗ ಸಂಘದ ಎಲ್ಲಾ ಮುಖಂಡರ ಮಾರ್ಗದರ್ಶನದಲ್ಲಿ ಭವನವನ್ನು ಕಟ್ಟೋಣ ಎಂದು ಸಾಲಿಗ್ರಾಮ ಭಾಗದ ಮುಖಂಡರು ಸಭೆಯಲ್ಲಿ ತಿಳಿಸಿದರು.

ಕಳೆದ ವರ್ಷ ಸಭೆಯಲ್ಲಿ ನಿರ್ಣಯ ಮಾಡಿದಂತೆ ಸಾಲಿಗ್ರಾಮ ತಾಲೂಕಿನಲ್ಲಿ ಹೆಚ್ಚು ಒಕ್ಕಲಿಗ ಸಮುದಾಯ ಇರುವುದರಿಂದ ಈ ವರ್ಷ ಸಾಲಿಗ್ರಾಮದಲ್ಲಿ ಆಚರಣೆ ಮಾಡಬೇಕು ಸಮಾಜದ ಮುಖಂಡರು ಎಂದು ಒತ್ತಾಯಿಸಿದರು.

ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಮ್‌ಟಿ ಅಣ್ಣೇಗೌಡ ಮಾತನಾಡಿ. ಸಭೆಯಲ್ಲಿ ಸಾಲಿಗ್ರಾಮದಲ್ಲೇ ಈ ವರ್ಷ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲು ಸಮಾಜದ ಎಲ್ಲ ಮುಖಂಡರು ಒಮ್ಮತ ನಿರ್ಣಯ ಸೂಚಿಸಿರುವುದರಿಂದ ಸಾಲಿಗ್ರಾಮದಲ್ಲಿ ಆಚರಣೆ ಮಾಡೋಣ ಎರಡು ತಾಲೂಕಿನ ಒಕ್ಕಲಿಗ ಸಮಾಜ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಕೆ ಆರ್ ನಗರ ತಹಸಿಲ್ದಾರ್ ಸಿ ಎಸ್ ಪೂರ್ಣಿಮಾ, ಸಾಲಿಗ್ರಾಮ ತಹಸಿಲ್ದಾರ್ ನರಗುಂದ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಹರೀಶ್, ಆರೋಗ್ಯ ಆಡಳಿತ ಅಧಿಕಾರಿ ಡಾಕ್ಟರ್ ನಟರಾಜ್, ಬಿಇಓ ಕೃಷ್ಣಪ್ಪ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಟಿ ಅಣ್ಣೇಗೌಡ, ಮಿರ್ಲೆ ನಂದೀಶ್, ಮಂಜೇಗೌಡ ಪರಶುರಾಮ್, ಉದಯಶಂಕರ್, ಎಂ ಜೆ ರಮೇಶ್,

Continue Reading

Hassan

ಹಾಸನ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

Published

on

ಹಾಸನ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ, ಮೂವರ ಸ್ಥಿತಿ ಚಿಂತಾಜನಕ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಕೀರಿಹಳ್ಳಿ ಗಡಿ ಬಳಿ ಘಟನೆ

ಹಾಸನದ ಕಡೆಗೆ ಬರುತ್ತಿದ್ದ KA-57 F 4530 ನಂಬರ್‌ನ ಸಾರಿಗೆ ಬಸ್

ಧರ್ಮಸ್ಥಳಕ್ಕೆ ಭೇಟಿ ನೀಡಿ ದಾವಣಗೆರೆಗೆ ತೆರಳುತ್ತಿದ್ದ KA-17 MB-8067 ನಂಬರ್‌ನ ಕಾರು

ಕಾರಿನಲ್ಲಿದ್ದ ದಾವಣಗೆರೆ ಮೂಲದ ಚೇತನ್, ನಾಗರಾಜ್, ಚೇತನ್ ಎಂಬುವವರ ಸ್ಥಿತಿ ಚಿಂತಾಜನಕ

ಪುನೀತ್ ಎಂಬುವವರಿಗೆ ಸಣ್ಣಪುಟ್ಟ ಗಾಯ

ಗಾಯಾಳುಗಳು ಹಾಸನದ ಆಸ್ಪತ್ರೆಗೆ ರವಾನೆ

ಅಪಘಾತದಲ್ಲಿ ಸಾರಿಗೆ ಬಸ್‌ನ ನಿರ್ವಾಹಕನ ಕಣ್ಣಿಗೆ ಬಲವಾದ ಗಾಯ

ಬಸ್‌ನಲ್ಲಿದ್ದ ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Hassan

ದಿವ್ಯಾಂಗರಿಗಾಗಿ ಜೂ.೨೦ ರಿಂದ ಮೂರು ದಿನಗಳ ಕಾಲ ಉಚಿತ ಆರೋಗ್ಯ ಶಿಬಿರ : ಚರಣ್

Published

on

ಹಾಸನ: ನಗರದ ರಾಜೀವ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಆವರಣದಲ್ಲಿ ಜೂನ್ ೨೦, ೨೧ ಹಾಗೂ ೨೨ ರಂದು ಮೂರು ದಿನಗಳ ಕಾಲ ಬೆನ್ನು ಹುರಿ ಆಪಘಾತಕ್ಕೊಳಗಾದವರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಗಾಲಿ ಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೇವಾ ಭಾರತಿ ಸಂಸ್ಥೆಯ ಹಿರಿಯ ಮ್ಯಾನೇಜರ್ ಚರಣ್

ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಸೇವ ಭಾರತಿ – ಸೇವಾಧಾಮ ರಾಜೀವ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಸಹಯೋಗದಲ್ಲಿ ಜೂನ್ ೨೦ ರಿಂದ ಮೂರು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣೆ ಮತ್ತು ಗಾಲಿ ಕುರ್ಚಿ ಜಾಥಾವನ್ನು ಏರ್ಪಡಿಸಲಾಗಿದೆ.

ನಗರದ ರಾಜೀವ್ ಆಯುರ್ವೇದ ವೈದ್ಯಕೀಯ ವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಮೂರು ದಿನಗಳ ಕಾಲ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಿ.ಎನ್ ಶಿವಸ್ವಾಮಿ ಉದ್ಘಾಟಿಸಲಿದ್ದಾರೆ. ಕನ್ಯಾಡಿಯ ಸೇವಾ ಭಾರತಿಯ ಕಾರ್ಯದರ್ಶಿ ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದು, ರಾಜೀವ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ.ಎಸ್ ರತ್ನ, ಹಿಮ್ಸ್ ನಿರ್ದೇಶಕ ಡಾ.ಎಸ್ ವಿ ಸಂತೋಷ್ , ಜಿಲ್ಲಾ ಶಾಸ್ತ್ರ ಚಿಕಿತ್ಸಕ ಡಾ. ಲೋಕೇಶ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ಆರ್ ಅನುಪಮಾ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು

. ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಒದಗಿಸಲಾಗಿದ್ದು ಜೊತೆಗೆ ಯೋಗ, ಪ್ರಾಣಾಯಾಮ, ಒತ್ತಡ ಗಾಯನಿರ್ವಹಣೆ, ಆಪ್ತ ಸಮಾಲೋಚನೆ, ಮನೋರಂಜನ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಅರ್ಹ ಫಲಾನುಭವಿಗಳಿಗೆ ಗಾಲಿ ಕುರ್ಚಿ, ಮೆಡಿಕಲ್ ಕಿಟ್ ಹಾಗೂ ನೀರಿನ ಹಾಸಿಗೆಗಳನ್ನು ಹಸ್ತಾಂತರಿಸಲಾಗುವುದು. ಕಾರ್ಯಗಾರದ ಕೊನೆಯ ದಿನ ಜೂನ್ ೨೨ರಂದು ಸೇವಾ ಭಾರತೀಯ ವತಿಯಿಂದ ಗಾಲಿ ಕುರ್ಚಿ ರಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಹಾಸಿಗೆ ಹಿಡಿದು ಬೆನ್ನು ಉರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಹಾಗೂ ಎಲ್ಲರಂತೆ ಬದುಕಲು ಧೈರ್ಯ ತುಂಬುವ ಹಾಗೂ ಜಾಗೃತಿ ಮೂಡಿಸಲು ಅಂದು ಬೆಳಗ್ಗೆ ೯ ಗಂಟೆಗೆ ಮಹಾರಾಜ ಉದ್ಯಾನವನದ ಮುಂಭಾಗದಿಂದ ಎನ್ನಾರ್ ಸರ್ಕಲ್ ಮೂಲಕ ರಾಲಿ ಸಾಗಲಿದೆ ಎಂದರು. ಜೂನ್ ೨೨ ರಂದು ಮದ್ಯಾಹ್ನ ೧೨ ಗಂಟೆಗೆ ಸಮಾರೋಪ ಸಮಾರಂಭ ಜರಗಲಿದ್ದು, ರಾಜೀವ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಎಸ್.ಎ. ನಿತಿನ್, ವಿ. ನಿರಂಜನ್ ನೆರ್ಲಿಗೆ, ಯೋಗನಾಥ್, ಗಂಗಾಧರ್ ಇತರರು ಪಾಲ್ಗೊಳ್ಳುವುದಾಗಿ ಹೇಳಿದರು.

ಸಂಘಟನಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಈ ಸಮಾಜದಲ್ಲಿ ಬೆನ್ನುಹುರಿ ಆಗತಕ್ಕೊಳಗಾದವರು ಮಾನಸಿಕ ಖಿನ್ನತೆಗೆ ಹಾಗೂ ಹಲವಾರು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ ಸರ್ಕಾರ ಈ ಬಗ್ಗೆ ಅಗತ್ಯ ಚಿಂತನೆ ನಡೆಸಬೇಕಿದೆ. ನಮಗೆ ನೀಡುತ್ತಿರುವ ೧೪೦೦ ರೂ ಗಳ ಸಹಾಯ ಧನ ೫,೦೦೦ಕ್ಕೆ ಹೆಚ್ಚಿಸಬೇಕು ಹಾಗೂ ನಮ್ಮನ್ನು ನೋಡಿಕೊಳ್ಳುವವರಿಗೆ ೨೦೦೦ ಸಹಾಯಧನ ನೀಡಬೇಕು, ವೀಲ್ ಚೇರ್, ನೀರಿನ ಹಾಸಿಗೆಗಳನ್ನು, ಮೆಡಿಕಲ್ ಕಿಟ್ ನೀಡಬೇಕು ಪ್ರತಿ ತಾಲೂಕಿನಲ್ಲಿಯೂ ಪುನಸ್ಟೇತನ ಕೇಂದ್ರಗಳನ್ನು ತೆರೆಯಬೇಕು ಎಂದು ಕೋರಿದರು. ಈ ಜಾಥದ ಮುಲಕ ಹಾಸಿಗೆ ಹಿಡಿದ ಬೆನ್ನುಹುರಿ ಅಪಘಾತಕ್ಕೆ ಒಳಗಾದ ವಿವ್ಯಾಂಗರನ್ನು ಮುಖ್ಯವಾಹಿನಿಗೆ ಬರುವಂತೆ ಮಾಡುವುದು. ಎಲ್ಲಾರಂತೆ ಬದಲು ದೈರ್ಯ ತುಂಬುವುದು ಆಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ್, ನಾಗಾರ್ಜುನ್ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!