Connect with us

Mysore

ನೆಮ್ಮದಿಯ ಬದುಕು ನಡೆಸಲು ಡಾ. ಬಿ. ಆರ್. ಅಂಬೇಡ್ಕರ್ ರವರು ನೀಡಿದ ಸಂವಿಧಾನ ಕಾರಣ :ಡಿ. ರವಿಶಂಕರ್ 

Published

on

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ :- ನಾವೆಲ್ಲಾ ಇಂದು ಸಮಾಜದಲ್ಲಿ ಉತ್ತಮವಾದ ನೆಮ್ಮದಿಯ ಬದುಕು ನಡೆಸಲು ಡಾ.ಬಿ.ಆರ್.ಅಂಬೇಡ್ಕರ್ ರವರು ನೀಡಿದ ಸಂವಿಧಾನವೇ ಕಾರಣವಾಗಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜನ್ಮ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಇಂದು ದೇಶದಲ್ಲಿ ಹಲವು ಜಾತಿ, ಧರ್ಮ, ಭಾಷಿಕರಿಗು ಸಮಾನ ಅವಕಾಶ ಸಿಗಬೇಕು, ಹಕ್ಕುಗಳೂ ಇರಬೇಕು ಎಂಬ ಉದ್ದೇಶದಿಂದ ನಮ್ಮ ಸಂವಿಧಾನ ರಚನೆಯಾಗಿದ್ದು, ನಮ್ಮ ಸಂವಿಧಾನವನ್ನು ನೋಡಿ ದ  ಹಲವು ರಾಷ್ಟಗಳು,ಸಂವಿಧಾನವನ್ನು ಅಳವಡಿಸಿಕೊಂಡಿರುವುದು ನಮಗೆ ಹಿರಿಮೆಯಾಗಿದೆ ಎಂದರು.
ಎಲ್ಲರು ಶಿಕ್ಷಿತರಾಗಿ, ಸಂಘಟಿತರಾಗಿ, ಪ್ರಗತಿ ಸಾಧಿಸುತ್ತಿರುವುದು ಹಾಗೂ ರಾಜಕೀಯ ಸ್ಥಾನ ಮಾನಗಳನ್ನು ಹೊಂದಿರುವುದು, ಸಂವಿಧಾನದಡಿಯಲ್ಲೇ ಆಗಿದ್ದು ನಾವೆಲ್ಲ ಅದರಂತೆಯೇ ನಡೆಯಬೇಕಾಗಿದೆ. ಪ್ರತಿಯೊಬ್ಬರಿಗೂ  ಅಧಿಕಾರ ಮತ್ತು ಸವಲತ್ತುಗಳಲ್ಲಿ ಸಮಾನತೆ ಇರಬೇಕು ಎಂಬ ಬಾಬಾ ಸಾಹೇಬರ ಉದ್ದೇಶದಂತೆ ನಾವು ತಾಲೂಕಿನಲ್ಲಿ ಅಭಿವೃದ್ಧಿ ಕಾಣದೆ  ಹಿಂದುಳಿದ ಗ್ರಾಮಗಳು, ಸಮುದಾಯಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಅoಬೇಡ್ಕರ್ ರವರ ತತ್ವ ಸಿದ್ದಾಂತಗಳನ್ನು ಅವರ ಜಯಂತಿಯoದು ಮಾತ್ರ ಅರಿಯದೇ, ಪ್ರತಿನಿತ್ಯ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದರೇ ಸಮಾಜ ಮತ್ತು ದೇಶ ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ತಿಳಿಸಿದರು.
  ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಅರ್ಜುನಹಳ್ಳಿ ರಾಜಯ್ಯ, ತಾಪಂ ಮಾಜಿ ಅಧ್ಯಕ್ಷ ಎಂ.ಹೆಚ್.ಸ್ವಾಮಿ, ಪುರಸಭಾ ಸದ್ಯಸರಾದ ಕೋಳಿಪ್ರಕಾಶ್, ಶಂಕರ್‌ಸ್ವಾಮಿ, ಮಿಕ್ಸರ್‌ಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ನಗರಾಧ್ಯಕ್ಷ ಎಂ.ಜೆ.ರಮೇಶ್, ಎಸ್‌ಸಿ ಘಟಕದ ಅಧ್ಯಕ್ಷ ನಂದೀಶ್, ಎಂಎಸ್‌ಎಸ್ ತಾಲೂಕು ಅಧ್ಯಕ್ಷ ಮಧುವನಹಳ್ಳಿರವಿಕುಮಾರ್, ವಕೀಲರಾದ ಮೂರ್ತಿ, ಕಾಂತರಾಜ್, ಮುಖಂಡರಾದ ಕಂಚುಗಾರಕೊಪ್ಪಲುಸ್ವಾಮಿ, ಗೀತಾಮಹೇಶ್, ಮಂಜುರಾಜ್, ಎಂ.ಎಸ್.ನoಜುoಡಸ್ವಾಮಿ, ರವಿಪೂಜಾರಿ, ಕಂಟ್ರಾಕ್ಟ್ ಕುಮಾರ್, ರಾಜಯ್ಯ, ಸಿದ್ದಾಪುರರಮೇಶ್ ಇನ್ನಿತರರು ಹಾಜರಿದ್ದರು.
Continue Reading
Click to comment

Leave a Reply

Your email address will not be published. Required fields are marked *

Mysore

ಚುಂಚನಕಟ್ಟೆ ಕಾವೇರಿ ನದಿಯಲ್ಲಿ ಶ್ರೀ ರಾಮ ದೇವರ ತೆಪ್ಪೋತ್ಸವ

Published

on

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ :- ಕಿವಿತುಂಬೆಲ್ಲಾ ಪಟಾಕಿ ಸದ್ದು. . . ಇದರ ನಡುವೆ ದೇವಾಲಯದಿಂದ ಉತ್ಸವ ಮೂರ್ತಿಯನ್ನು ಹೊತ್ತು ತಂದ ಭಕ್ತಾದಿಗಳು . . . ಅಲಂಕೃತಗೊಂಡಿದ್ದ ಮಂಟಪದಲ್ಲಿ ಪ್ರತಿಷ್ಠಾಪನೆಗೊಂಡ ಸೀತಾ ರಾಮ ಲಕ್ಷ್ಮಣ. . . ನದಿಯಲ್ಲಿ ಮೂರು ಸುತ್ತು ಸುತ್ತಿದ ಉತ್ಸವ ಮೂರ್ತಿಗಳು . . . ದೇವಲೋಕವೇ ಧರೆಗೆ ಬಂದ ಅನುಭವ . . . ಈ ಇಂತಹ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಮಂದಿ. . .
ಇದು ಸಾಲಿಗ್ರಾಮ  ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪುರಾಣ ಪ್ರಸಿದ್ದವಾಗಿರುವ ಶ್ರೀ ರಾಮದೇವರ ತೆಪ್ಪೋತ್ಸವದಲ್ಲಿ ಕಂಡು ಬಂದ ದೃಶ್ಯಗಳು.
ರಾತ್ರಿ 7.45 ರ ನಂತರ  ಇಲ್ಲಿನ ಶ್ರೀ ರಾಮದೇವರ ದೇವಾಲಯದಿಂದ ಶ್ರೀ ರಾಮ, ಲಕ್ಷಣ, ಸೀತಾಮಾತೆ ದೇವರುಗಳ ಉತ್ಸವ ಮೂರ್ತಿಗಳನ್ನು ಪಟಾಕಿ ಸಿಡಿಸುವ ಮೂಲಕ ಅದ್ದೂರಿ ಮೆರವಣಿಗೆ ಮೂಲಕ ಕಾವೇರಿ ನದಿಯ ದಡದಲ್ಲಿ ದೇವಾಲಯದ ಸಮೀಪವಿರುವ ಆಂಜನೇಯ ಗುಡಿಯ ಬಳಿ ವರ್ಣರಂಜಿತ ವಿದ್ಯುತ್ ಲೈಟ್‌ಗಳು ಮತ್ತು ಹೂವಿನ ಅಲಂಕಾರಗಳಿಂದ  ಶೃಂಗಾರಗೊoಡಿದ್ದ ತೆಪ್ಪದಲ್ಲಿ ಪ್ರತಿಷ್ಠಾಪಿಸಲಾಯಿತು.


ಅನಂತರ ತೆಪ್ಪದಲ್ಲಿ ದೇವರ ಉತ್ಸವ ಮೂರ್ತಿಗಳನ್ನು ರಾತ್ರಿ 8.15ರ ಸಮಯದಲ್ಲಿ ಕಾವೇರಿ ನದಿಯ ಮಧ್ಯ ಭಾಗಕ್ಕೆ ತೆಗೆದುಕೊಂಡು ಹೋಗಿ 3 ಭಾರಿ ತಿರುಗಿಸುತ್ತಿದ್ದಂತೆಯೇ ತೆಪ್ಪದಲ್ಲಿದ್ದ ಅರ್ಚಕ ವಾಸುದೇವನ್ ಉತ್ಸವ ಮೂರ್ತಿಗಳಿಗೆ ಮಂಗಳಾರತಿಯನ್ನು ಮಾಡಿದಾಗ ನೆರೆದಿದ್ದ ಸಾವಿರಾರು ಭಕ್ತಾಧಿಗಳು ಶ್ರೀ ರಾಮನಿಗೆ ಜೈಕಾರ, ಶ್ರೀರಮಣನ ಗೋವಿಂದಾ ಗೋ..ವಿಂದಾ ಎಂಬ ಘೋಷಣೆಗಳನ್ನು ಮೊಳಗಿಸಿದಾಗ ದೇವಲೋಕವೇ ಧರೆಗೆ ಬಂದಂತೆ ಭಾಸವಾಯಿತು.
ಕಾವೇರಿ ನದಿಯಲ್ಲಿ ಸುತ್ತಿ ಬಂದ ಶ್ರೀರಾಮ, ಲಕ್ಷಣ, ಸೀತಾ ದೇವರುಗಳ ಉತ್ಸವ ಮೂರ್ತಿಗಳನ್ನು ಭಕ್ತಾಧಿಗಳು ಚಪ್ಪಾಳೆ ತಟ್ಟುವ ಮೂಲಕ ಸ್ವಾಗತಿಸಿ ಪೂಜಾ ಕೈಂಕರ್ಯಗಳನ್ನು ಕೈಗೊಂಡು ತಮ್ಮ ಇಷ್ಟಾರ್ಥವನ್ನು ಈಡೇರುವಂತೆ ಪ್ರಾರ್ಥಿಸಿಕೊಂಡರು.
ಆನಂತರ ಉತ್ಸವ ಮೂರ್ತಿಗಳನ್ನು ಮತ್ತೆ ದೇವಾಲಯಕ್ಕೆ ಒತ್ತು ತರಲಾಯಿತು. ಈ ಬಾರಿಯ  ತೆಪ್ಪೋತ್ಸವಕ್ಕೆ ಗುಂಡ್ಲುಪೇಟೆ ಆನಂದ್‌ಕುಮಾರ್ ಎಂಬುವವರು ಭಾರಿ ಪಟಾಕಿಗಳನ್ನು ಸಿಡಿಸುವ ಮೂಲಕ ತೆಪ್ಪೋತ್ಸವಕ್ಕೆ ಕಳೆತಂದರು.
ಕಾರ್ಯಕ್ರಮದಲ್ಲಿ ಸಾಲಿಗ್ರಾಮ ತಸೀಲ್ದಾರ್ ನರಗುಂದ, ಉಪತಹಸೀಲ್ದಾರ್ ಕೆ.ಜೆ.ಶರತ್ , ಗ್ರಾಮ ಲೆಕ್ಕಿಗರಾದ ಮೇಘ, ಮೌನೇಶ್,ಕಾವೇರಿ,ಪ್ರಿಯಾ,
ದೇವಾಲಯದ ಇಓ ಕೆ.ರಘು, ಪಾರುಪತ್ತೆದಾರ್ ಯತೀರಾಜ್, ಸೇರಿದಂತೆ 3 ಸಾವಿರ ಭಕ್ತಾಧಿಗಳು ಹಾಜರಿದ್ದರು.

Continue Reading

Mysore

ಇಂದು ಬೆಳ್ಳಂಬೆಳಗ್ಗೆ ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಕ್ಷೇತ್ರದ ಶಾಸಕರು ,ನಟ ಡಾಲಿ ಧನಂಜಯ

Published

on

 

ವರದಿ : ಮಹದೇವಸ್ವಾಮಿ ಪಟೇಲ್

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕ್ಷೇತ್ರದ ಯುವ ಶಾಸಕ ದರ್ಶನ್ ಧ್ರುವನಾರಾಯಣ್, ಹಾಗೂ ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರು, ಭೇಟಿ ನೀಡಿ ದೇವರ ದರ್ಶನ ಪಡೆದರು.

ಇಂದು ಭಾನುವಾರ ಬೆಳ್ಳಂಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಶಾಸಕರಿಗೆ ಮತ್ತು ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರಿಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತವನ್ನು ಕೋರಿದರು.

ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ದೇವರ ಕೃಪೆಗೆ ಪಾತ್ರನಾಗಿ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.

ಈ ವೇಳೆ ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ದೇವಸ್ಥಾನ ಕಾರ್ಯನಿರ್ವಾಹಕಧಿಕಾರಿ ಜಗದೀಶ್, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಶಂಕರ್, ಕಾಂಗ್ರೆಸ್ ಪಕ್ಷದ ಯೂತ್ ಅಧ್ಯಕ್ಷ ದೇಬೂರು ಅಶೋಕ್, ಸೇರಿದಂತೆ ಹಲವಾರು ಭಾಗವಹಿಸಿದ್ದರು.

Continue Reading

Mysore

ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ

Published

on

ಮೈಸೂರು : ಮೈಸೂರು ವಿವಿ 105ನೇ ಘಟಿಕೋತ್ಸವದಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಅವರಿಗೆ ಪಿಎಚ್ ಡಿ ಪದವಿಯನ್ನು ಉನ್ನತ ಶಿಕ್ಷಣ ಸಚಿವರಾದ ಡಾ ಸುಧಾಕರ್ ಅವರು ಪ್ರದಾನ ಮಾಡಿದರು.

ಪ್ರೊ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಳವಳ್ಳಿ ತಾಲ್ಲೂಕಿನ ಸ್ಥಳನಾಮಗಳು ಸಾಂಸ್ಕೃತಿಕ ಅಧ್ಯಯನ ಪಿ.ಎಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಅಂಗೀಕರಿಸಿದೆ.

Continue Reading

Trending

error: Content is protected !!