Mysore
ಗ್ಯಾರಂಟಿ ಯೋಜನೆಗಳು ಬಡವರ ಕೈ ಬಲಪಡಿಸಿವೆ ಶಾಸಕ ದರ್ಶನ್ ಧ್ರುವನಾರಾಯಣ್
ನಂಜನಗೂಡು ಏ.15
ಕಾಂಗ್ರೆಸ್ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ 5 ಗ್ಯಾರಂಟಿಗಳನ್ನು ಜಾರಿಗೆ ತಂದು ಬಡವರ ಕೈ ಬಲ ಪಡಿಸಿವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ,ಹೆಡಿಯಾಲ,ಹಲ್ಲರೆ,ಹಗಿನವಾಳು, ಹಾಡ್ಯ ಗ್ರಾ ಪಂ ಗಳ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತ ಯಾಚನೆ ಮಾಡಿ ಮಾತನಾಡುತ್ತಾ ಅವರು ,
ಕಾಂಗ್ರೆಸ್ ಪಕ್ಷ ಬಡವರ ಪರವಾದ ಪಕ್ಷ ಈ ದೇಶದ ಎಲ್ಲ ಜನರು ಸಮನ ರೀತಿಯಲ್ಲಿ ಜೀವನ ನಡೆಸಲು ಸಾಧ್ಯವಾಗಿರುವುದು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯವಾಗಿದ್ದು ಈಗ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕೈ ಯನ್ನು ಬಲಪಡಿಸುವ ಮೂಲಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಬೇಕಿದೆ ಚಾಮರಾಜನಗರ ಕ್ಷೇತ್ರ ಅಭಿವೃದ್ಧಿ ಕಾಣಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ.ಸರ್ವರಿಗೂ ಸಮ ಬಾಳು ಸರ್ವರಿಗೂ ಸಮ ಪಾಲು ಎಂಬ ತತ್ವ ಸಿದ್ಧಾಂತಗಳನ್ನು ಕಾಂಗ್ರೆಸ್ ಪಕ್ಷ ಅಳವಡಿಸಿಕೊಂಡಿದೆ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿಗಳು ಎಲ್ಲಾ ವರ್ಗದ ಜನಾಂಗದವರಿಗೆ ತಲುಪುತ್ತಿವೆ.ದೇಶ ಕಟ್ಟುವ ಕೆಲಸ ಮಾಡುತ್ತಿದೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ದೀನದಲಿತರ ಪರವಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ದೇಶದ ಸಂವಿಧಾನ ಉಳಿವಿಗಾಗಿ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಕಾಂಗ್ರೆಸ್ ಅಧಿಕಾರ ಹಿಡಿಯಲು ಚಾಮರಾಜನಗರ ಕ್ಷೇತ್ರದಿಂದಲ್ಲೇ ಪ್ರಾರಂಭವಾಗಲ್ಲಿ ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ಬ್ಲಾಕ್ ಅದ್ಯಕ್ಷರುಗಳಾದ ಕುರಹಟ್ಟಿ ಕೆ ಜಿ ಮಹೇಶ್, ಶ್ರೀಕಂಠನಾಯಕ, ವೀರಶೈವ ತಾಲ್ಲೂಕು ಅದ್ಯಕ್ಷ ಬುಲೆಟ್ ಮಹದೇವಪ್ಪ,ಜಿ ಪಂ ಮಾಜಿ ಅಧ್ಯಕ್ಷೆ ಲತಾಸಿದ್ದಶೆಟ್ಟಿ, ತಾ ಪಂ ಮಾಜಿ ಸದಸ್ಯ ಮೂಗಶೆಟ್ಟಿ,ದೇವರಾಯಶೆಟ್ಟಿಪುರ ಗ್ರಾ ಪಂ ಅದ್ಯಕ್ಷೆ ಶಿಲ್ಪ, ಹಲ್ಲರೆ ಗ್ರಾ ಪಂ ಅದ್ಯಕ್ಷೆ ದೇವಮ್ಮ,ಉಪಾಧ್ಯಕ್ಷ ರೆಹಮತ್ ಉಲ್ಲಾ,ಇಂಧನಬಾಬು,ಇಬ್ಜಾಲ ಕೆಂಡಗಣ್ಣಪ್ಪ, ಶಿವಪ್ಪದೇವರು,ಜಯರಾಂ,ಮಹದೇವು,ಮಹೇಶ್, ಗ್ರಾ ಪಂ ಸದಸ್ಯ ಗೋವಿಂದರಾಜು, ಸುಬ್ರಹ್ಮಣ್ಯ, ದೇಬೂರು ಆಶೋಕ್, ಹೆಜ್ಜಿಗೆ ರವಿ,
ಸುರೇಶ್,ದುಗ್ಗಹಳ್ಳಿ ಗ್ರಾ ಪಂ ಅದ್ಯಕ್ಷ ಶಿವನಾಗಪ್ಪ, ಮಡಿಕೆಹುಂಡಿ ಶಿವಣ್ಣ, ಬಸವಣ್ಣ,ಎಂ ಪುಟ್ಟಸ್ವಾಮಿ, ಸ್ವಾಮಿ,ಕಡಜ್ಜಟ್ಟಿ ಮಹೇಶ್,ಸೇರಿದಂತೆ ಪ್ರಮುಖರು ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Mysore
ಜೂಜಾಡುತ್ತಿದ್ದ ನಾಲ್ವರ ಬಂಧನ
ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.
ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.
Mysore
ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.
ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.
ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
Mysore
ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ
ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.
ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.
-
Hassan21 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
Chamarajanagar18 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International13 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan16 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
Hassan16 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ
-
National - International11 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ