Kodagu
ಶಾಸಕ ಎ.ಎಸ್.ಪೊನ್ನಣ್ಣರಿಂದ ಬಸ್‌ಗಳ ಉದ್ಘಾಟನೆ
ಮಡಿಕೇರಿ : ವಿರಾಜಪೇಟೆ ನಗರ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ 8 ಹೊಸ ಮಾರ್ಗಗಳನ್ನು ಹಾಗೂ 8 ಹೊಸ ಬಸ್ ಗಳ ಉದ್ಘಾಟನೆ ಕಾರ್ಯಕ್ರಮವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನೆರವೇರಿಸಿದರು.
ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಗಳನ್ನು ಹಾಗೂ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ಎಂಟು ಹೊಸ ಬಸ್ಗಳನ್ನು ಶಾಸಕರ ಪ್ರಯತ್ನದಿಂದಾಗಿ ಒದಗಿ ಬಂದಿದೆ.

ಬಸ್ ಹಾಗೂ ಬಸ್ ಮಾರ್ಗಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶಾಸಕರು, ಆಧುನಿಕತೆ ಹಾಗೂ ನಗರೀಕರಣ ವೃದ್ಧಿಯಾದಂತೆಲ್ಲ ಜನಸಂದಣಿ ಜಾಸ್ತಿಯಾಗುವುದನ್ನು ಮನಗಂಡು ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೊಸ ಮಾರ್ಗಗಳನ್ನು ಹಾಗೂ ಸುಸೂತ್ರವಾಗಿ ಪ್ರಯಾಣಿಸಲು ಹೊಸ ಬಸ್ ಗಳನ್ನು ಈ ಭಾಗಕ್ಕೆ ಕಲ್ಪಿಸಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಬಸ್ ನ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಸ್ಥೆಗೆ ಒಳ್ಳೆಯ ಹೆಸರು ತರುವಲ್ಲಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಿದ್ದು ಇದರಿಂದ ನಾಡಿನ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರು ಜಾನ್ಸನ್, ವಿರಾಜಪೇಟೆ ಪುರಸಭೆಯ ಮುಖ್ಯಅಧಿಕಾರಿಗಳಾದ ನಾಚಪ್ಪ, ವಿರಾಜಪೇಟೆ ಪುರಸಭೆಯ ಉಪಾಧ್ಯಕ್ಷರಾದ ಫಸಿಯಾ ತಬ್ಸುಂ, ಹಾಗೂ ಸದಸ್ಯರು, ತಾಲೂಕು ದಂಡಾಧಿಕಾರಿಗಳು ಹಾಗೂ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರು ಹಾಗೂ ಸದಸ್ಯರುಗಳು, ಆಹ್ವಾನಿತ ಗಣ್ಯರು, ಕೆಎಸ್ ಆರ್ ಟಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kodagu
ನಿವೇಶನ ರಹಿತರ ಬೇಡಿಕೆ ಆಲಿಸಿದ ಶಾಸಕ ಮಂತರ್ ಗೌಡ
ಸೋಮವಾರಪೇಟೆ: ನಿವೇಶನರಹಿತ ಬಡವರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ಕುಂಬೂರು ಗ್ರಾಮದಲ್ಲಿ ನಡೆಸುತ್ತಿರುವ ಧರಣಿ ೫೨ ದಿನಕ್ಕೆ ಕಾಲಿಟ್ಟಿದೆ.
ಮಾದಾಪುರ ಗ್ರಾಮ ಪಂಚಾಯಿತಿ ಕುಂಬೂರು ಗ್ರಾಮದ ಸರ್ವೆ ನಂ.೧೨೫/೧, ೨೨/೧-೨ ರ ಸರ್ಕಾರಿ ಜಾಗದಲ್ಲಿ ಧರಣಿ ನಡೆಸುತ್ತಿದ್ದರು. ಜನಪ್ರತಿನಿಧಿಗಳಿಂದ, ಅಧಿಕಾರಿಗಳಿಂದ ಯಾವುದೇ ಪೂರಕ ಸ್ಪಂದನೆ ದೊರಕದ ಹಿನ್ನಲೆಯಲ್ಲಿ ಜೂ.೨೫ರಿಂದ ಸೋಮವಾರಪೇಟೆಯ ಶಾಸಕರ ಮನೆಯ ಮುಂದೆ ಆಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದರು.
ಸೋಮವಾರ ಸಂಜೆ ಧರಣಿ ಸ್ಥಳಕ್ಕೆ ತೆರಳಿದ ಶಾಸಕ ಡಾ.ಮಂತರ್ಗೌಡ ಅವರು, ಬಡ ನಿವೇಶನ ರಹಿತರ ಬೇಡಿಕೆಗಳನ್ನು ಆಲಿಸಿದರು. ಧರಣಿನಿರತರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪೈಸಾರಿ ಜಾಗವನ್ನು ಗುರುತಿಸುವಂತೆ ತಹಸೀಲ್ದಾರ್ ಕೃಷ್ಣಮೂರ್ತಿ ಅವರಿಗೆ ಸೂಚಿಸಿದರು.
ಮೂರು ದಿನಗಳ ಒಳಗೆ ಪೈಸಾರಿ ಜಾಗವನ್ನು ಗುರುತಿಸಿ ನಂತರ ಸರ್ವೆ ಮಾಡಿಸಿ, ಸೂಕ್ತ ಜಾಗದಲ್ಲಿ ನಿವೇಶನ ನೀಡುವುದಕ್ಕೆ ಕ್ರಮ ಜರುಗಿಸಲಾಗುವುದು ಎಂದು ಧರಣಿ ನಿರತರಿಗೆ ಶಾಸಕರು ಭರವಸೆ ನೀಡಿದರು. ಧರಣಿಯಲ್ಲಿ ಭಾಗವಹಿಸಿರುವ ನಿವೇಶನ ರಹಿತರ ಪಟ್ಟಿಯನ್ನು ತೆಗೆದುಕೊಂಡು ಪಿಡಿಒಗಳು ಮುಂದಿನ ಸಭೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರು ಸೂಚಿಸಿದರು.
ಧರಣಿಯ ನೇತೃತ್ವ ವಹಿಸಿದ್ದ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ, ನಿವೇಶನ ರಹಿತರ ಸಂಕಷ್ಟದ ಬದುಕನ್ನು ಶಾಸಕರಿಗೆ ಮನವರಿಕೆ ಮಾಡಿಕೊಟ್ಟರು.
Kodagu
ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಕೌಶಲ್ಯ ಬೆಳೆಸಿಕೊಳ್ಳಬೇಕು: ಬಸವರಾಜ ಹೊರಟ್ಟಿ ಅಭಿಮತ
ಕುಶಾಲನಗರ: ಉನ್ನತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಮೌಲ್ಯಗಳು, ಕೌಶಲ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಅಭಿಮತ ವ್ಯಕ್ತಪಡಿಸಿದರು.
ಕೊಡಗು ವಿಶ್ವವಿದ್ಯಾಲಯದ ಚಿಕ್ಕಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಾಗಬಾರದು. ಅದು ವ್ಯಕ್ತಿತ್ವ ವಿಕಸನ, ಸಮಾಜಮುಖಿ ಚಿಂತನೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಜೊತೆಗೆ ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವಂತ ಮಹಿಳೆಯರಿಂದ ಕುಟುಂಬ ಮತ್ತು ಸಮಾಜ ಸದೃಢವಾಗುತ್ತದೆ. ಇಂದಿನ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದು, ಅವರಿಗೆ ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ಕೌಶಲಗಳನ್ನು ಬೆಳೆಸಲು ಶಿಕ್ಷಣ ಸಂಸ್ಥೆಗಳು ಪೂರಕ ವಾತಾವರಣ ನಿರ್ಮಿಸಬೇಕು. ಪಾಲಕರು ಹೆಣ್ಣು-ಗಂಡು ಎಂಬ ಭೇದಭಾವವಿಲ್ಲದೆ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಅವರು ಹೇಳಿದರು.
ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗುತ್ತಿದೆ. ರಾಜ್ಯದ ಹಿರಿಯ ಶಿಕ್ಷಣ ತಜ್ಞ ಹಾಗೂ ವಿಧಾನ ಪರಿಷತ್ ಅಧ್ಯಕ್ಷರಾದ ಬಸವರಾಜ ಹೊರಟ್ಟಿಯವರ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆಯ ಯೋಜನೆಯ ಅಡಿಯಲ್ಲಿ ಬೈಫ್ ಸಂಸ್ಥೆಯು ರೈನ್ ಫಾರೆಸ್ಟ್ ಅಲೈಯನ್ಸ್ ಅವರ ಸಹಯೋಗದಲ್ಲಿ ಸಬಲ ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಕೊಡಗು ವಿಶ್ವವಿದ್ಯಾಲಯದ ಚಿಕ್ಕಾಳುವಾರದ ಜ್ಞಾನ ಕಾವೇರಿ ಆವರಣದಲ್ಲಿ 1,325 ಸಸಿಗಳನ್ನು ನೆಟ್ಟು ಸಂರಕ್ಷಿಸುವ ಕಾರ್ಯಕ್ರಮಕ್ಕೆ ಬಸವರಾಜ ಹೊರಟ್ಟಿಯವರು ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಹಿಂದುಸ್ತಾನಿ ಗಾಯಕ ಡಾ.ಮೃತ್ಯುಂಜಯ ಶೆಟ್ಟರ ಅವರು ವಚನ ಗಾಯನ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಕೃಷ್ಣಮೂರ್ತಿ, ಗ್ರಾಮಾಂತರ ಪೊಲೀಸ್ ಠಾಣೆ ಕುಶಾಲನಗರ ಆರಕ್ಷಕ ಉಪನಿರೀಕ್ಷಕರು ರಾಮಚಂದ್ರ ಮತ್ತು ಸಿಬ್ಬಂದಿ, ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಉಪನ್ಯಾಸಕ ಡಾ ಜಮೀರ್ ಅಹಮದ್ ನಿರೂಪಿಸಿ, ವಂದಿಸಿದರು.
Kodagu
ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ
ಮಡಿಕೇರಿ: ಕೊಡವಲ್ಯಾಂಡ್, ಕೊಡವ ಸಂಸ್ಕೃತಿ, ಆಚಾರ ವಿಚಾರಗಳ ರಕ್ಷಣೆ ಮತ್ತು ಕೊಡವರ ಸಂವಿಧಾನಬದ್ಧ ಹಕ್ಕುಗಳ ಪ್ರತಿಪಾದನೆಯ ಮೂಲಕ ಕಳೆದ ೩೬ ವರ್ಷಗಳಿಂದ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಜೂ.೨೬ರಂದು “ಕೊಡವರಿಗೆ ವಿಶೇ? ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ವಿಚಾರಗೋಷ್ಠಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಶುಕ್ರವಾರ ಬೆಳಿಗ್ಗೆ ೧೦.೩೦ ಗಂಟೆಗೆ ವಿಚಾರಗೋಷ್ಠಿ ನಡೆಯಲಿದ್ದು, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ವಿಕ್ರಮ್ ಹೆಗಡೆ ಅವರು “ಕೊಡವ ಧಾರ್ಮಿಕ ಆಚರಣೆ, ’ಕೋವಿ-ತೋಕ್” ವಿಧಿ ೨೫ ಮತ್ತು ೨೬ರ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆ” ಕುರಿತು ವಿಷಯ ಮಂಡಿಸಲಿದ್ದಾರೆ.
ಸುಪ್ರೀಂ ಕೋರ್ಟ್ ಹಾಗೂ ನ್ಯೂಯಾರ್ಕ್‌ನ ವಕೀಲರಾದ ಹಿಮಾ ಲಾರೆನ್ಸ್ ವಿಕ್ರಮ್ ಹೆಗಡೆ ಅವರು ಅಂತರರಾಷ್ಟ್ರೀಯ ವಿಶ್ವಸಂಸ್ಥೆಯ ಕಾನೂನಿನಡಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವಯಂ-ಆಡಳಿತ ಮತ್ತು ಅದಿಮ ಸಂಜಾತ ಕೊಡವ ಜನಾಂಗೀಯ ಗುರುತು ವಿಷಯದ ಕುರಿತು ಮಾತನಾಡಲಿದ್ದಾರೆ. ಹಿರಿಯ ವಕೀಲ ಹಾಗೂ ಸಾಹಿತಿ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಈ ವಿಚಾರಗೋಷ್ಠಿಯು ಕೊಡವರ ವಿಶೇ? ಸ್ಥಾನಮಾನಕ್ಕಾಗಿ ನಮ್ಮ ದೀರ್ಘಕಾಲದ ಆಕಾಂಕ್ಷೆಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಪ್ರಸ್ತುತ ಸಂದರ್ಭದಲ್ಲಿ ಸಾಂವಿಧಾನಿಕ ಗಂಭೀರತೆಯನ್ನು ಪ್ರತಿಬಿಂಬಿಸುತ್ತದೆ. ಕೊಡವರ “ಕೋವಿ”ಗೆ ೧೯೪೯ ರಲ್ಲಿ ಸರ್ದಾರ್ ಪಟೇಲರು ನೀಡಿದ ಸಂಸದೀಯ ಮನ್ನಣೆ. ಶಾಸ್ತ್ರೀಯ “ಕೊಡವ” ಗುರುತನ್ನು ಮರುಸ್ಥಾಪಿಸಿದ ೨೦೨೧ ಡಿ.೮ ರ ಕರ್ನಾಟಕ ಹೈಕೋರ್ಟ್‌ನ ತೀರ್ಪು, ಶಸ್ತ್ರಾಸ್ತ್ರ ಕಾಯ್ದೆ ೨೦೨೯ ರ ಅವಧಿ ಮುಗಿದ ನಂತರವೂ “ಕೋವಿ-ತೋಕ್” ಗೆ ಶಾಶ್ವತ ವಿನಾಯಿತಿ ನೀಡುವುದು, ಪರಕೀಯ ರಾಜರು ಮತ್ತು ಬ್ರಿಟಿ?ರು ವಶಪಡಿಸಿಕೊಂಡ ವಂಶಪಾರಂಪರ್ಯ ಜಮ್ಮಾಬಾಣೆ ಭೂಮಿಯ ಮರುಸ್ಥಾಪನೆ. ಅಂತರಾಷ್ಟ್ರೀಯ ಕಾನೂನಿನಡಿ ಕಂದಾಯ ರೈತರು ಮತ್ತು ಆದಿಮ ಸಂಜಾತ ಜನಾಂಗೀಯ ರೈತರ ನಡುವಿನ ವ್ಯತ್ಯಾಸ ಗುರುತಿಸಿಸುವಿಕೆ.
ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಅಮೂರ್ತ ಕ್ಷೇತ್ರದ ಮಾದರಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇ? ರಾಜಕೀಯ ಪ್ರಾತಿನಿಧ್ಯ. ನಮ್ಮ ಸಾಂವಿಧಾನಿಕ ಹಕ್ಕುಗಳನ್ನು ನಿರ್ಧರಿಸಲು, ಮುಂಬರುವ ೨೦೨೭ ರ ಭಾರತದ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವ ಜನಾಂಗಕ್ಕೆ ಪ್ರತ್ಯೇಕ “ಕೋಡ್” ಮತ್ತು “ಕಾಲಂ” ನೀಡುವುದು, ’ಕೋವಿ-ತೋಕ್” ವಿಧಿ ೨೫ ಮತ್ತು ೨೬ರ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆ ಸೇರಿದಂತೆ ಕಳೆದ ೩೬ ವರ್ಷಗಳ ಸುದೀರ್ಘ ಶಾಂತಿಯುತ ಹೋರಾಟದ ಮೂಲಕ ಪ್ರತಿಪಾದಿಸಿದ ವಿವಿಧ ಬೇಡಿಕೆಗಳನ್ನು ವಿಚಾರಗೋಷ್ಠಿಯಲ್ಲಿ ಉಲ್ಲೇಖಿಸಲಾಗುವುದು ಎಂದು ತಿಳಿಸಿದರು.
ಕೊಡವ ಸಮುದಾಯದ ಸಾಂವಿಧಾನಿಕ ಭವಿ?ದ ಕುರಿತಾದ ಈ ವೈಚಾರಿಕ ವಿಚಾರಗೋಷ್ಠಿಯಲ್ಲಿ ಸರ್ವ ಕೊಡವರ ಭಾಗವಹಿಸುವಿಕೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ರೆಸಾರ್ಟ್‌ಗಳನ್ನು ತೆರವುಗೊಳಿಸಲು ಒತ್ತಾಯ
ಕೊಡಗು ಜಿಲ್ಲೆಯ ೩೦೦ ಗ್ರಾಮಗಳಲ್ಲಿ ತಲಾ ೧೦ ರೆಸಾರ್ಟ್‌ಗಳು ತಲೆ ಎತ್ತಿವೆ, ಈ ರೆಸಾರ್ಟ್‌ಗಳಿಂದ ಕೊಡವಲ್ಯಾಂಡ್ ಗೆ ಅಪಾಯ ಕಾದಿದೆ. ಜನಸಂದಣಿಯನ್ನು ತಪ್ಪಿಸಿ ಈ ಪವಿತ್ರ ಭೂಮಿಯನ್ನು ರಕ್ಷಿಸಿಕೊಳ್ಳಬೇಕಾದರೆ ರೆಸಾರ್ಟ್‌ಗಳನ್ನು ತೆರವುಗೊಳಿಸಬೇಕು. ಹೋಂಸ್ಟೇ ಪರಿಕಲ್ಪನೆ ಕೊಡವ ಸಂಸ್ಕೃತಿಗೆ ಪೂರಕವಾಗಿದೆ, ಆದರೆ ರೆಸಾರ್ಟ್ ಪ್ರವಾಸೋದ್ಯಮದ ಚಿಂತನೆ ರಾಜ್ಯಕ್ಕೆ ಲಾಭ ಮಾಡಿಕೊಡುತ್ತದೆಯೇ ಹೊರತು ಕೊಡಗು ಜಿಲ್ಲೆಗೆ ಯಾವುದೇ ಲಾಭವಿಲ್ಲ. ರೆಸಾರ್ಟ್‌ಗಳಲ್ಲಿ ತಂಗುವ ಪ್ರವಾಸಿಗರಿಗಾಗಿ ಮಿತಿ ಮೀರಿ ನೀರಿನ ಬಳಕೆಯಾಗುತ್ತಿದೆ, ಜಲಮೂಲಗಳಿಗೆ ಹಾನಿಯಾಗುತ್ತಿದೆ.
ಆದರೆ ಕೊಡಗಿನ ಮೂಲ ನಿವಾಸಿಗಳು ನೀರು ಬಳಸಿದರೆ ಆಡಳಿತ ವ್ಯವಸ್ಥೆ ಆಕ್ಷೇಪ ವ್ಯಕ್ತಪಡಿಸುತ್ತದೆ. ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲಿರುವವರು ಕೂಡ ಕೊಡಗಿನಲ್ಲಿ ಭೂಖರೀದಿಯಲ್ಲಿ ತೊಡಗಿದ್ದಾರೆ. ಖ್ಯಾತ ರಾಜಕಾರಣಿಗಳು ಹಾಗೂ ಕಪ್ಪು ಹಣ ಹೊಂದಿರುವವರು ಭೂಮಿಯನ್ನು ಖರೀದಿಸುತ್ತಿದ್ದಾರೆ. ಹಣಕ್ಕಾಗಿ ಭೂಪರಿವರ್ತನೆ ನಿಯಂತ್ರಣವಿಲ್ಲದೆ ನಡೆಯುತ್ತಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ಆರೋಪಿಸಿದರು.
ಕೊಡಗಿನ ಅಸ್ತಿತ್ವ, ಪರಿಸರ ಮತ್ತು ಸಂಸ್ಕೃತಿಗೆ ದಕ್ಕೆ ಉಂಟು ಮಾಡುತ್ತಿರುವ ನಿಯಮ ಮೀರಿದ ರೆಸಾರ್ಟ್‌ಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ಈ ವಿಚಾರದ ಕುರಿತು ಮುಂದಿನ ದಿನಗಳಲ್ಲಿ ಬೃಹತ್ ಜನಜಾಗೃತಿ ಆಂದೋಲವನ್ನು ಯೋಜಿಸುವುದಾಗಿ ತಿಳಿಸಿದರು.
-
Chamarajanagar13 hours agoಅತಿಥಿ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ:
-
State18 hours agoಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ, ರಾಷ್ಟ್ರಪತಿಗಳಿಂದ ಅಂಗೀಕಾರ
-
Hassan9 hours agoಟಿವಿಎಸ್ ಎಕ್ಸೆಲ್ಗೆ ಕಾರು ಡಿಕ್ಕಿ : ಇಬ್ಬರು ಯುವಕರ ದಾರುಣ ಸಾವು
-
Special21 hours agoಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಿದ್ಧತೆ!!
-
Kodagu19 hours agoಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿ: ಸಿದ್ದಾಪುರದ ರಾಣಾಧಿಕಾರಿ ಮಂಜುನಾಥ್ ಗೆ ಗೌರವ
-
Mysore18 hours agoಇಟ್ಟಿಗೆ ಫ್ಯಾಕ್ಟರಿಯಲ್ಲಿ ಕಾನೂನು ಕಣ್ಣು ತಪ್ಪಿಸಿ ನಡೆಯುತ್ತಿದ್ದ ಜೀತ ಪದ್ಧತಿ ಪತ್ತೆ; ಇಬ್ಬರು ಅಪ್ರಾಪ್ತರು ಸೇರಿ 18 ಸೋಲಿಗರ ರಕ್ಷಣೆ, ಮೂವರ ಬಂಧನ!
-
Hassan8 hours agoಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಸಂಸದ ಶ್ರೇಯಸ್ ಪಟೇಲ್ ಮಧ್ಯಸ್ಥಿಕೆ
-
Kodagu18 hours agoಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ
