Kodagu
ಕುಂದಚೇರಿ ಗ್ರಾ.ಪಂ. ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ
ಮಡಿಕೇರಿ: ಗ್ರಾ.ಪಂ. ಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಮತ್ತು ರಾಜಕೀಯ ರಹಿತವಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ.
ಕುಂದಚೇರಿ ಗ್ರಾ.ಪಂ. ಚೆಟ್ಟಿಮಾನಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಡಿಜಿಟಲ್ ಗ್ರಂಥಾಲಯ, ಅರಿವು ಕೇಂದ್ರ, ಅಂಚೆ ಕಚೇರಿ ಮತ್ತು ಸಂಜೀವಿನಿ ಒಕ್ಕೂಟದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾ.ಪಂ ಪ್ರತಿನಿಧಿಗಳು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.

ಕ್ಷೇತ್ರದಾದ್ಯಂತ ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ, ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲು ಸರಕಾರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತಿದೆ. ಇದನ್ನು ಪಂಚಾಯಿತಿ ಪ್ರತಿನಿಧಿಗಳು ಸದುಪಯೋಗಪಡಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ತಾವು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದು, ಸರ್ವರೂ ಕೈಜೋಡಿಸಬೇಕೆಂದು ಎ.ಎಸ್.ಪೊನ್ನಣ್ಣ ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಚೇರಿ ಗ್ರಾ.ಪಂ. ಯ ಹಿರಿಯ ಸದಸ್ಯ ಹ್ಯಾರಿಸ್ ಅವರು 1982 ರಲ್ಲಿ ಪಂಚಾಯಿತಿಯ ಹಳೆಯ ಕಟ್ಟಡ ನಿರ್ಮಾಣಗೊಂಡಿತು, ಅಂದಿನಿಂದ ಇಂದಿನವರೆಗೆ ನೂತನ ಕಟ್ಟಡದ ನಿರ್ಮಾಣಕ್ಕೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿರುವ ಹಾಲಿ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಶಾಸಕರು, ಗ್ರಾ.ಪಂ ನ ಉಪಾಧ್ಯಕ್ಷರು, ಆಡಳಿತ ಮಂಡಳಿ, ಸರ್ವ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಮಾಜಿ ಪ್ರತಿನಿಧಿಗಳು, ಈಗಿನ ಮತ್ತು ಹಿಂದಿನ ಜಿಲ್ಲಾಧಿಕಾರಿಗಳು, ದಾನಿಗಳು, ಜಿ.ಪಂ., ತಾ.ಪಂ., 1994ರಿಂದ ರಚನೆಗೊಂಡ ಆರು ಆಡಳಿತ ಮಂಡಳಿ ಸೇರಿದಂತೆ ಸರ್ವರ ಆಸಕ್ತಿಯಿಂದ ನೂತನ ಕಟ್ಟಡ ನಿರ್ಮಾಣಗೊಂಡು ಇಂದು ಉದ್ಘಾಟನೆಗೊಂಡಿದೆ ಎಂದರು.
ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸನ್ಮಾನ
ಶಾಸಕ ಎ.ಎಸ್.ಪೊನ್ನಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನೆರವಂಡ ಉಮೇಶ್, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಶೇಖರ್, ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್, ಉಪಾಧ್ಯಕ್ಷೆ ಬೇಬಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಎಂ.ಎಸ್.ಗಂಗಮ್ಮ, ತಾಲೂಕು ಎ.ಡಿ ಹೇಮಂತ್ ಹಾಗೂ ಗುತ್ತಿಗೆದಾರ ಇಸ್ಮಾಯಿಲ್ ಕಾನಾವು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪಂಚಾಯಿತಿ ಸದಸ್ಯರಾದ ವಿಶ್ವ ಪ್ರವೀಣ್ ಕುಮಾರ್, ಬಸಪ್ಪ, ಸವಿತ, ನಮಿತ, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಪುಷ್ಪಾ, ನೇತ್ರಾವತಿ, ರೂಪ, ಲಕ್ಷ್ಮಿ, ಹೇಮಲತ, ಅನುಜ, ನಯನ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹರೀಶ್ ಸ್ವಾಗತಿಸಿ ನಿರೂಪಿಸಿ, ವಂದಿಸಿದರು. ಚೆಟ್ಟಿಮಾನಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಾಡಗೀತೆಯನ್ನು ಹಾಡಿದರು.
Kodagu
ಕೊಡಗು : ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗಿನ ಮಳೆ 788.68 ಮಿ.ಮೀ
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 11.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.79 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.68 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1854.35 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 19.90 ಮಿ.ಮೀ. ಕಳೆದ ವರ್ಷ ಇದೇ ದಿನ 28.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1159.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2807.56 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 787.52 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1754.40 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 817.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1771.50 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 19.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 841.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1994.67 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 337.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 943.59 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ 18.10, ನಾಪೋಕ್ಲು 9.30, ಸಂಪಾಜೆ 28.20, ಭಾಗಮಂಡಲ 24.30, ವಿರಾಜಪೇಟೆ 11.30, ಅಮ್ಮತ್ತಿ 9.90, ಹುದಿಕೇರಿ 22, ಶ್ರೀಮಂಗಲ 12.40, ಪೊನ್ನಂಪೇಟೆ 9.90, ಬಾಳೆಲೆ 8.20, ಸೋಮವಾರಪೇಟೆ 8.50, ಶನಿವಾರಸಂತೆ 5.80, ಶಾಂತಳ್ಳಿ 22, ಕೊಡ್ಲಿಪೇಟೆ 9.60, ಕುಶಾಲನಗರ 4.50, ಸುಂಟಿಕೊಪ್ಪ 3.80 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (23-07-2026) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.18 ಅಡಿಗಳು. ಕಳೆದ ವರ್ಷ ಇದೇ ದಿನ 2856.46 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 8.80 ಮಿ.ಮೀ., ಇಂದಿನ ನೀರಿನ ಒಳಹರಿವು 4326 ಕ್ಯುಸೆಕ್, ಕಳೆದ ವರ್ಷ ಇದೇ ದಿನ 3308 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 180 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 4500 ಕ್ಯುಸೆಕ್. ನಾಲೆಗೆ 350 ಕ್ಯುಸೆಕ್.
Kodagu
ಗ್ರಾಮ ಪಂಚಾಯತಿ ಶ್ರಮ: ಗುಡ್ಡೆಹೊಸೂರು ಅಂಗನವಾಡಿಗೆ ಆಧುನಿಕ ಸ್ಪರ್ಶ
ಗುಡ್ಡೆಹೊಸೂರು: ಗ್ರಾಮದ ಮಕ್ಕಳ ಬಾಲ್ಯಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಗುಡ್ಡೆಹೊಸೂರು ಗ್ರಾಮ ಪಂಚಾಯತಿಯು ಸ್ಥಳೀಯ ಅಂಗನವಾಡಿ ಕೇಂದ್ರಕ್ಕೆ ಸಂಪೂರ್ಣ ಆಧುನಿಕ ಹಾಗೂ ಶಿಶುಸ್ನೇಹಿ ರೂಪ ನೀಡುವ ಮೂಲಕ ಮಾದರಿಯಾಗಿದೆ. ಪಂಚಾಯತಿಯ ಪ್ರಯತ್ನದಿಂದ ಅಂಗನವಾಡಿ ಕೇಂದ್ರವು ಸುಸಜ್ಜಿತ, ನವೀನ ಹಾಗೂ ಆಕರ್ಷಕ ವಾತಾವರಣದೊಂದಿಗೆ ಕಂಗೊಳಿಸುತ್ತಿದೆ.
ಆಕರ್ಷಕ ವಾತಾವರಣ: ಗೋಡೆಗಳಿಗೆ ಚಿತ್ತಾರದ ಬಣ್ಣ, ಶುಚಿತ್ವದ ಫ್ಲೋರಿಂಗ್ ಹಾಗೂ ಮಕ್ಕಳಿಗೆ ಗಾಯವಾಗದಂತೆ ಗುಣಮಟ್ಟದ ಫ್ಲೋರ್ ಮ್ಯಾಟ್ ಅಳವಡಿಸಲಾಗಿದೆ.

ಶಿಶುಸ್ನೇಹಿ ಸೌಕರ್ಯ: ರಂಗಿನ ಕುರ್ಚಿ-ಮೇಜು, ಆಧುನಿಕ ಆಟಿಕೆ ಮತ್ತು ಕಲಿಕಾ ಸಾಮಗ್ರಿಗಳನ್ನು ಒದಗಿಸಲಾಗಿದೆ.
ಡಿಜಿಟಲ್ ಕಲಿಕೆ: ಇಂಟರ್ನೆಟ್ ಸಂಪರ್ಕದ ಸ್ಮಾರ್ಟ್ ಟಿವಿ ಮೂಲಕ ದೃಶ್ಯ-ಶ್ರವಣ ಮಾಧ್ಯಮದಲ್ಲಿ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಆರೋಗ್ಯ-ನೈರ್ಮಲ್ಯ: ಫ್ಯಾನ್, ಬೆಳಕು, ಶುದ್ಧ ಕುಡಿಯುವ ನೀರಿನ ಘಟಕ, ನೈರ್ಮಲ್ಯದ ಅಡುಗೆ ಮನೆ ಮತ್ತು ಬಾಲಸ್ನೇಹಿ ಶೌಚಾಲಯ ನಿರ್ಮಿಸಲಾಗಿದೆ.ಅಂಗನವಾಡಿಯ ಈ ಬದಲಾವಣೆಯಿಂದ ಮಕ್ಕಳು ಮತ್ತು ಪೋಷಕರಲ್ಲಿ ಸಂತಸ ಮೂಡಿದೆ. ಮಕ್ಕಳ ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸಿದ ಪಂಚಾಯತಿಯ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Kodagu
ಕೊಡಗಿನಲ್ಲಿ ಲೋಕಾಯುಕ್ತ ದಾಳಿ – ಕ್ರೀಡಾಶಾಲೆಗಳಲ್ಲಿ ದಾಖಲೆ ಪರಿಶೀಲನೆ
ಮಡಿಕೇರಿ: ಕೊಡಗು ಜಿಲ್ಲೆಯ ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಯೊಬ್ಬರ ವಿರುದ್ಧ ಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ.

ಲೋಕಾಯುಕ್ತ ತಂಡಗಳು ಜಿಲ್ಲೆಯ ವಿವಿಧ ಕ್ರೀಡಾಶಾಲೆಗಳಲ್ಲಿ ಅಧಿಕೃತ ಪರಿಶೀಲನೆ ನಡೆಸುತ್ತಿವೆ. ಈ ಸಂಬಂಧ ಜಿಲ್ಲೆಯ ಕೂಡಿಗೆ, ಮಡಿಕೇರಿ ಮತ್ತು ಪೊನ್ನಂಪೇಟೆಯಲ್ಲಿರುವ ಕ್ರೀಡಾಶಾಲೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ದೂರಿನಲ್ಲಿ ಉಲ್ಲೇಖವಾಗಿರುವ ಅಂಶಗಳ ಆಧಾರದ ಮೇಲೆ ಈ ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳು ತನಿಖೆಯ ಬಳಿಕ ಹೊರಬೀಳಲಿವೆ.
-
State10 hours agoಮೈಸೂರಲ್ಲಿ ಜಾನಕಮ್ಮ ನೆನಪಲ್ಲಿ ಸಂಗೀತದೌತಣ: ಎಸ್. ಜಾನಕಿ ಅಧ್ಯಯನ ಪೀಠ, ಧ್ಯಾನ ಮಂಟಪ ಸ್ಥಾಪನೆಗೆ ಹಂಸಲೇಖ ಘೋಷಣೆ
-
Special20 hours agoಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ!!
-
National6 hours agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ : ‘ಯುವಕರ ಭವಿಷ್ಯವೇ ಸರ್ಕಾರದ ಮೊದಲ ಆದ್ಯತೆ’ – ಪ್ರಧಾನಿ ಮೋದಿ
-
Hassan21 hours agoಬೇಡಿಕೆಗಳ ಈಡೇರಿಕೆಗೆ ಕೃಷಿ ಕಾಲೇಜು ಎದುರು ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಧರಣಿ
-
Politics2 hours agoKPSC ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಅಭ್ಯರ್ಥಿಗಳ ಒತ್ತಾಯ
-
State8 hours agoಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧದ ಕೇಸ್ ಕೈಬಿಟ್ಟರೆ ಉಪವಾಸ ಅಂತ್ಯ: ಸೋನಂ ವಾಂಗ್ಚುಕ್
-
National2 hours ago4 ಪ್ರಸ್ತಾಪ ಕಳುಹಿಸಿದ್ದೇವೆ, ಚರ್ಚೆಗೆ ಬನ್ನಿ : ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಜಿತೇಂದ್ರ ಸಿಂಗ್ ಆಹ್ವಾನ
-
Manglore3 hours agoಆರೋಗ್ಯ ಶಿಕ್ಷಣದಿಂದ ಹದಿಹರೆಯದವರ ಸ್ಥೂಲಕಾಯ ನಿರ್ವಹಣೆ ಕುರಿತು ಸಂಶೋಧನೆ: ದೀಕ್ಷಾ ಎಂ. ಶೆಟ್ಟಿಗೆ ಪಿಎಚ್ಡಿ
