Kodagu
ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ
ಸುಂಟಿಕೊಪ್ಪ : ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಶ್ರಯ ಪಡೆದ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದ ಶಾಸಕರು ಸಾಂತ್ವಾನ ಹೇಳಿದರು.

ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾರೂ ಕೂಡ ಭಯ ಪಡುವಂತಹ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿ, ಜನಪ್ರತಿನಿಧಿಗಳು ನಿಮ್ಮ ಜೊತೆಗಿದ್ದಾರೆ ಎಂದು ಧೈರ್ಯ ತುಂಬಿದರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೋಜಮ್ಮ, ಉಪಾಧ್ಯಕ್ಷ ಮುಸ್ತಫಾ, ಕಾರ್ಯನಿರ್ಚಹಣಾಧಿಕಾರಿ ಪರಮೇಶ್ವರ್ ಇತರರು ಇದ್ದರು.
Kodagu
ನಾಪೋಕ್ಲು ಮೂರ್ನಾಡು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ತೋಡಿಗೆ ವಾಲಿದ ಸಾರಿಗೆ ಬಸ್ -ಪ್ರಯಾಣಿಕರು ಪಾರು
ನಾಪೋಕ್ಲು : ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ರಸ್ತೆ ಬದಿಯ ತೋಡಿಗೆ ವಾಲಿದ ಘಟನೆ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಬೊಳಿಬಾಣೆ ಎಂಬಲ್ಲಿ ಶುಕ್ರವಾರ ನಡೆದಿದೆ.

ಕರಿಕೆಯಿಂದ ಭಾಗಮಂಡಲ, ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುವ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಬೊಳಿಬಾಣೆ ಎಂಬಲ್ಲಿ ಹಿಂಬದಿಯಿಂದ ಬಂದ ವಾಹನಕ್ಕೆ ದಾರಿ ಕೊಡುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೊಡಿಗೆ ವಾಲಿದೆ ನಿಂತಿದೆ. ಅವಘಡದಿಂದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ.
Kodagu
ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ವಿದ್ಯಾಲಯದ ಹಾಕಿ ಪಟುಗಳ ಸಾಧನೆ.
ಮಡಿಕೇರಿ : ಬೆಂಗಳೂರಿನ ಕೊರಮಂಗಲದ ಚಿನ್ಮಯ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಚಿನ್ಮಯ ಕಪ್–2026′ ಅಂತರಶಾಲಾ ರಾಜ್ಯಮಟ್ಟದ ರಿಂಕ್ ಹಾಕಿ (5–ಎ–ಸೈಡ್) ಪಂದ್ಯಾವಳಿಯಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳ 14 ವರ್ಷದೊಳಗಿನ ಬಾಲಕರ ತಂಡವು – ಚಾಂಪಿಯನ್ ಪಟ್ಟವನ್ನೂ,17 ವರ್ಷದೊಳಗಿನ ಬಾಲಕಿಯರ ತಂಡವು ಸತತವಾಗಿ ಎರಡನೇ ಬಾರಿಯೂ ಚಾಂಪಿಯನ್ ಪಟ್ಟವನ್ನೂ ಹಾಗೂ 17 ವರ್ಷದೊಳಗಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು.
ಪಂದ್ಯಾವಳಿಯ ಅತ್ಯುತ್ತಮ ಪ್ರದರ್ಶನಕ್ಕಾಗಿ 17 ವರ್ಷದೊಳಗಿನ ವಿಭಾಗದಲ್ಲಿ ಕೊಡಗು ವಿದ್ಯಾಲಯದ ತೇಜಲ್ ಬೋಪಣ್ಣ ಮತ್ತು 14 ವರ್ಷದೊಳಗಿನ ವಿಭಾಗದ ಎಂ.ಎಸ್. ಚಿನ್ನಪ್ಪ ಅವರು ಪಂದ್ಯಾವಳಿಯ ಅತ್ಯುತ್ತಮ ಆಟಗಾರ’ ಪ್ರಶಸ್ತಿಯನ್ನು ಪಡೆದರು.
17 ವರ್ಷದೊಳಗಿನ ವಿಭಾಗದಲ್ಲಿ ವರ್ಣ ಬೋಜಮ್ಮ ಅವರು ಪಂದ್ಯಾವಳಿಯ ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಗೆ ಭಾಜನರಾದರು.
ಈ ಸಾಧನೆಗೆ ತರಬೇತುದಾರರಾದ ದೀನಾ ಹಾಗೂ ಪಾರ್ವತಿ ಅವರ ನಿಖರ ತರಬೇತಿ ಮತ್ತು ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಸುಮಿತ್ರಾ ಕೆ ಎಸ್ ಹಾಗೂ ಆಡಳಿತ ಮಂಡಳಿಯವರು ತಿಳಿಸಿದ್ದಾರೆ
Kodagu
ಕೊಡಗು ಜಿಲ್ಲೆಯ ಮಳೆ ವಿವರ
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 42.29 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 936.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2132.17 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 46.10 ಮಿ.ಮೀ. ಕಳೆದ ವರ್ಷ ಇದೇ ದಿನ 31.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1382.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3197.72 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 54.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 916.72 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1939 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 42.52 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.59 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 957.92 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2018.63 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 56.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1021.98 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2423.27 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 397.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1081.29 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ 37, ನಾಪೋಕ್ಲು 43.40, ಸಂಪಾಜೆ 31, ಭಾಗಮಂಡಲ 73, ವಿರಾಜಪೇಟೆ 55.40, ಅಮ್ಮತ್ತಿ 54.50, ಹುದಿಕೇರಿ 37, ಶ್ರೀಮಂಗಲ 58, ಪೊನ್ನಂಪೇಟೆ 55, ಬಾಳೆಲೆ 20.09, ಸೋಮವಾರಪೇಟೆ 56, ಶನಿವಾರಸಂತೆ 28, ಶಾಂತಳ್ಳಿ 118, ಕೊಡ್ಲಿಪೇಟೆ 24, ಕುಶಾಲನಗರ 5.60, ಸುಂಟಿಕೊಪ್ಪ 17.20 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (31-07-2026) ವರದಿ
******************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.88 ಅಡಿಗಳು. ಕಳೆದ ವರ್ಷ ಇದೇ ದಿನ 2855.13 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 11.20 ಮಿ.ಮೀ., ಕಳೆದ ವರ್ಷ ಇದೇ ದಿನ 3.40 ಮಿ.ಮೀ., ಇಂದಿನ ನೀರಿನ ಒಳಹರಿವು 4008 ಕ್ಯುಸೆಕ್, ಕಳೆದ ವರ್ಷ ಇದೇ ದಿನ 6462 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 3700 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 3500 ಕ್ಯುಸೆಕ್. ನಾಲೆಗೆ 431 ಕ್ಯುಸೆಕ್.
-
Chamarajanagar24 hours agoಕಾರು ಸಾಲ ಮಂಜೂರಿಗೆ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾ ವ್ಯವಸ್ಥಾಪಕ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ
-
Manglore23 hours agoಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಡಿಎನ್ಎ ಪರೀಕ್ಷೆಯಲ್ಲಿ ಮೂವರ ಗುರುತು ದೃಢ
-
Hassan4 hours agoರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ: ರೈತರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹ
-
Hassan20 hours agoಅಮ್ಮನ ದರ್ಶನಕ್ಕೆ ಬಂದವರಿಗೆ ಕೃತಜ್ಞತೆ ಅರ್ಪಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಜನಸಾಗರವನ್ನು ಕಂಡು ಗದ್ಗದಿತರಾದ ಕುಮಾರಸ್ವಾಮಿ
-
Mysore23 hours agoಸುಳ್ಳು ದಾಖಲೆ ಸೃಷ್ಟಿಸಿ ಮೂಲ ಆದಿವಾಸಿಗಳಿಗೆ ವಂಚನೆ: ರಾಜ್ಯ ಮೂಲ ಆದಿವಾಸಿ ವೇದಿಕೆ ಗಂಭೀರ ಆರೋಪ
-
Mysore8 hours agoಮೂರನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತರ ಸಾಗರ; ಗಿಳಿ ಹಸಿರು ಸೀರೆಯಲ್ಲಿ ಲಕ್ಷ್ಮೀ ಅಲಂಕಾರ
-
Kodagu5 hours agoಹಿಟ್ ಅಂಡ್ ರನ್: ಬೈಕ್ಗೆ ಕಾರು ಡಿಕ್ಕಿ, ಸವಾರ ಸಾ*ವು
-
Mysore6 hours agoತಮಿಳುನಾಡಿಗೆ ನೀರು ಬಿಟ್ಟು ಈಗ ಸರ್ವಪಕ್ಷ ಸಭೆ ಏಕೆ?; ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಆಗ್ರಹ
