Connect with us

Chamarajanagar

ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಕರಾಟೆ ತರಬೇತಿ ಅತ್ಯಗತ್ಯ: ಶಾಸಕ ಮಂಜುನಾಥ್

Published

on

ಹನೂರು: ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಹಾಗೂ ಸದೃಢರಾಗಿರಲು ಕರಾಟೆ ತರಬೇತಿ ಪಡೆದುಕೊಂಡರೆ ಎಲ್ಲವನ್ನು ಜಯಿಸಬಹುದು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಗುರು ಪರಶುರಾಮ ಶಿತೋರ್ಯು ಕರಾಟೆ ಅಕಾಡೆಮಿ ವತಿಯಿಂದ ಕರಾಟೆ ತರಬೇತಿಯಲ್ಲಿ ಪ್ರಾವಿಣ್ಯತೆ ಮತ್ತು ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ವಿದ್ಯಾಭ್ಯಾಸ ಸೇರಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಗುರಿ ಇರಬೇಕು. ಆಗಿದ್ದರೆ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದರು.

ನಗರ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ತರಬೇತಿಗಳು ಅಕಾಡೆಮಿಗಳು ಇರುತ್ತದೆ. ಅದೇ ರೀತಿ ಹನೂರು ಪಟ್ಟಣ ವ್ಯಾಪ್ತಿಯಲ್ಲಿರುವ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಗುರು ಪರಶುರಾಮ ಕರಾಟೆ ಅಕಾಡೆಮಿ ವತಿಯಿಂದ ಕರಾಟೆ ತರಬೇತಿ ನೀಡುತ್ತಿರುವುದು ಸಂತಸದ ವಿಚಾರ. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಹೊರತರುವ ನಿಟ್ಟಿನಲ್ಲಿ ತರಬೇತಿಗಳು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಕಳೆದ ಹಲವು ವರ್ಷಗಳಿಂದ ಗುರು ಪರಶುರಾಮ್ ಕರಾಟೆ ಅಕಾಡೆಮಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಚಾರ ಎಂದರು.

ಇದೆ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಮೂರ್ತಿ ಪಟ್ಟಣ ಪಂಚಾಯಿತಿ ಸದಸ್ಯ ಪವಿತ್ರ, ಮುಖಂಡರುಗಳಾದ ಜಸ್ಸಿಂ ಪಾಷ, ಮಾದಪ್ಪ ಹಮೀದ್ ಸೇರಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Chamarajanagar

SSLC ವಿದ್ಯಾರ್ಥಿಸಾಧನೆಗೆ ಉತ್ತೇಜನೆ : ಜಿಲ್ಲಾಧಿಕಾರಿ ಶ್ರೀರೂಪ

Published

on

ಚಾಮರಾಜನಗರ:- ವಿದ್ಯಾರ್ಥಿಗಳು ಒತ್ತಡ ಮುಕ್ತ ಹಾಗೂ ಆತ್ಮವಿಶ್ವಾಸದಿಂದ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದು ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನಗಳಿಸಲು ಶಿಕ್ಷಕರು ಉತ್ತೇಜಿಸಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.

ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ 2022-23, 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದ ಪ್ರೌಢಶಾಲಾ ಮುಖ್ಯೋಪಾಧ್ಯಯರಿಗೆ ಅಭಿನಂದನಾ ಫಲಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿದ್ದು, ಉಳಿದಿರುವ ಶೈಕ್ಷಣಿಕ ಅವಧಿಯಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಬಗ್ಗೆ ವಿಶೇಷವಾಗಿ ಕೇಂದ್ರೀಕರಿಸಬೇಕು. ಮಕ್ಕಳಿಗೆ ಪರೀಕ್ಷೆ ಬಗೆಗಿನ ಭಯ ಇರಬಾರದು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಮನೋಭಾವನೆ ಉಂಟು ಮಾಡಬೇಕು. ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಪರೀಕ್ಷೆ ಬರೆಯಲು ಸಜ್ಜುಗೊಳಿಸಬೇಕು ಎಂದರು.

 

ಇತ್ತೀಚೆಗೆ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದೆ ಇದ್ದಾರೆ ಎಂಬ ಬಗ್ಗೆ ಪರಿಶೀಲಿಸಿ ಅಂತಹ ವಿಷಯಗಳಿಗೆ ವಿಶೇಷ ತರಗತಿಗಳನ್ನು ನಡೆಸಬೇಕು. ಕ್ಲಿಷ್ಟಕರ ಎನಿಸಬಹುದಾದ ವಿಷಯಗಳನ್ನು ಸರಳವಾಗಿ ಮನಮುಟ್ಟುವಂತೆ ಹೇಳಿಕೊಡಬೇಕು. ಇತರೆ ವಿದ್ಯಾರ್ಥಿಗಳಂತೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಲು ಶಿಕ್ಷಕರು ಮಾರ್ಗದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಎಸ್.ಎಸ್.ಎಲ್.ಸಿ ಹಂತವು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಕಮರಿ ಹೋಗದಂತೆ ಶಿಕ್ಷಕರು ಎಚ್ಚರಿಕೆ ವಹಿಸಬೇಕಿದೆ. ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ. ಎಸ್.ಎಸ್.ಎಲ್.ಸಿ ಯಲ್ಲಿ ಜಿಲ್ಲೆ ಮೇಲಿನ ಕ್ರಮಾಂಕದಲ್ಲಿ ಉನ್ನತ ಸ್ಥಾನಗಳಿಸಬೇಕು. ಉತ್ತಮ ಫಲಿತಾಂಶ ಪಡೆದು ಜಿಲ್ಲೆಗೆ ಹಿರಿಮೆ ತರಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ ಪರೀಕ್ಷೆಗೆ ಉಳಿದಿರುವ ಬಾಕಿ ದಿನಗಳಲ್ಲಿ ಫಲಿತಾಂಶದಲ್ಲಿ ಕಡಿಮೆ ಸಾಧನೆ ಮಾಡಿರುವ ಕೆಲ ಶಾಲೆಗಳು ವಿದ್ಯಾರ್ಥಿಗಳಿಗೆ ಹಳೆಯ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಮಾಡಿಸಬೇಕು. ಗೈರು ಹಾಜರಿಯಿಂದ ಹೆಚ್ಚು ಅಂಕ ಪಡೆಯಲು ಸಾಧ್ಯವಾಗದೆ ಇರುವ ಮಕ್ಕಳಿಗೆ ಸರಳವಾಗಿ ವಿಷಯಗಳನ್ನು ಮನದಟ್ಟು ಮಾಡಿಕೊಡಬೇಕು. ಪೋಷಕರೊಂದಿಗೆ ಸಂಪರ್ಕದಲ್ಲಿದ್ದು ಮಕ್ಕಳ ಕಲಿಕೆಗೆ ಉತ್ತೇಜಿಸಬೇಕು. ಫಲಿತಾಂಶದಲ್ಲಿ ಜಿಲ್ಲೆ ಗಮನಾರ್ಹ ಸಾಧನೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್. ಚಂದ್ರಪಾಟಿಲ್ ಮಾತನಾಡಿ ಎಸ್.ಎಸ್.ಎಲ್.ಸಿ 2ನೇ ಪೂರ್ವಭಾವಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆ ಐದನೇ ಸ್ಥಾನದಲ್ಲಿದೆ. ಮುಖ್ಯ ಪರೀಕ್ಷೆಯಲ್ಲಿ ಇದಕ್ಕಿಂತಲೂ ಮೇಲಿನ ಸ್ಥಾನ ಪಡೆಯಬೇಕು. ಈಗಾಗಲೇ 4 ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚು ಅಭ್ಯಾಸ ಮಾಡಿಸಬೇಕಿದೆ. ಪರೀಕ್ಷೆಗೆ ಇನ್ನುದಿಳಿದಿರುವ ದಿನಗಳಲ್ಲಿ ಶಿಕ್ಷಕರು ಹೆಚ್ಚು ಪರಿಶ್ರಮದಿಂದ ಫಲಿತಾಂಶ ಸುಧಾರಣೆಗೆ ಮುಂದಾಗಬೇಕು ಎಂದು ತಿಳಿಸಿದರು.

ಇದೇ ವೇಳೆ 2022-23 ಮತ್ತು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದ 83 ಶಾಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಯರಿಗೆ ಅಭಿನಂದನಾ ಫಲಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲ ಕಾಶಿನಾಥ್ ಅವರು ಉಪಸ್ಥಿತರಿದ್ದರು.

Continue Reading

Chamarajanagar

ಮಹಾಶಿವರಾತ್ರಿ ಜಾತ್ರೆ: ಪೌರಕಾರ್ಮಿಕರೊಂದಿಗೆ ಸ್ವಚ್ಛತೆಯಲ್ಲಿ ಭಾಗಿಯಾದ ಕಾರ್ಯದರ್ಶಿ ಎ.ಈ ರಘು

Published

on

ವರದಿ : ಗೋವಿಂದ ಕೆ. ಗೌಡ ಹನೂರು

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ.

 

ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿನಿತ್ಯ ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಈ ರಘು ರವರ ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ಜಾತ್ರಾ ಮಹೋತ್ಸವದ ಅಂಗವಾಗಿ ಪೌರಕಾರ್ಮಿಕರು ನಿರಂತರವಾಗಿ ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಸ್ಥಾನದ ಆವರಣ ಸ್ವಚ್ಛವಾಗಿರಲು ಪೌರಕಾರ್ಮಿಕರ ಶ್ರಮ ಅತ್ಯಂತ ಪ್ರಮುಖವಾಗಿದೆ.


ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಬಾರಿಯ ಜಾತ್ರೆಯಂತೆ ಈ ಬಾರಿಯೂ ಅವರ ಜೊತೆಗೆ ಸೇರಿ ಸ್ವಚ್ಛತೆ ಮಾಡಿ ನಾನು ಕೂಡ ಮಾದಪ್ಪನ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

Continue Reading

Chamarajanagar

ಫೆ. 18 ರಂದು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Published

on

ಚಾಮರಾಜನಗರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಫೆಬ್ರವರಿ 18ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ, ಜ್ಯೋತಿಗೌಡನಪುರ, ಅಮ್ಮನಪುರ, ಸುತ್ತೂರು ಕೋಟಂಬಳ್ಳಿ, ಮುಂಟಿಪಾಳ್ಯ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ. 1912 ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Trending

error: Content is protected !!