Kodagu
ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
ಮಡಿಕೇರಿ : ತಾಲೂಕು ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.
ಬಳಿಕ ಶಾಸಕರ ಅನುದಾನದ 25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕೇರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತುರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ, ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್, ಪ್ರಕಾಶ್, ಆಪ್ರು ರವೀಂದ್ರ, ರತ್ನಕರ್ ರೈ,ಅಭಿನ್ ರೈ ಹಾಗೂ ಉಪಸ್ಥಿತರಿದ್ದರು.
Kodagu
ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ: ಡಾ.ಎನ್.ವಿ.ಪ್ರಸಾದ್
ಪೊನ್ನಂಪೇಟೆ : ಮುಂಗಾರು ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಅಗತ್ಯ ಪೂರ್ವ ತಯಾರು ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದ್ದಾರೆ.
ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು.
ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಎಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತಾಗಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಅಪಾಯ ಶಿಥಿಲ ಸ್ಥಿತಿಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಯಾವುದೇ ಅವಘಡಗಳು ಬಾರದ ರೀತಿಯಲ್ಲಿ ನೋಡಿಕೊಳ್ಳಲು ನಿರ್ದೇಶನ ನೀಡಿದರು.
ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವೆಲ್ಲಾ ಕಾಮಗಾರಿಗಳು ಪೂರ್ಣಗೊಂಡಿದೆ ಹಾಗೂ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜೆಜೆಎಂ ಯೋಜನೆಯಡಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು.
ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೃಷಿ ಇಲಾಖೆಯಡಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜ, ಯೂರಿಯ, ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆದು ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲಕ್ಕೆ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುಂಗಾರು ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು.
ಪಶುಸಂಗೋಪನೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಇದೇ ಸಂದರ್ಭದಲ್ಲಿ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಹಲವು ವಿಷಯಗಳ ಕುರಿತು ಮಾತನಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಎನ್.ಹೆಚ್, ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್, ಪೆÇನ್ನಂಪೇಟೆ ತಹಶೀಲ್ದಾರ್ ಸಿ.ಎಸ್.ಸಂಜನಾ, ವಿರಾಜಪೇಟೆ ತಾ.ಪಂ.ಇಒ ರಾಜೇಶ್ ಕೆ.ಆರ್, ಮಡಿಕೇರಿ ತಾ.ಪಂ.ಇಒ ಶೇಖರ್, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.
Kodagu
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ವಾರ್ಷಿಕೋತ್ಸವ| ಕಾಲೇಜು ಅಭಿವೃದ್ಧಿಗೆ ಅಗತ್ಯ ಸಹಕಾರ: ಪ್ರೊ.ಅಶೋಕ್ ಸಂಗಪ್ಪ ಆಲೂರ
ಮಡಿಕೇರಿ : ಐತಿಹಾಸಿಕ ಹಿನ್ನೆಲೆ ಹೊಂದಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಅವಕಾಶ ಕಲ್ಪಿಸಿದ್ದು, ಕಾಲೇಜಿನ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ್ ಸಂಗಪ್ಪ ಆಲೂರ ಅವರು ಹೇಳಿದರು.
ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಲೇಜಿನ 77ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು 77 ಅರ್ಥಪೂರ್ಣ ವಸಂತವನ್ನು ಪೂರೈಸಿದ್ದು, ತನ್ನದೇ ಆದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಹಲವಾರು ಇತಿಮಿತಿಗಳ ನಡುವೆಯೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ ಎಂದರು.
ಮುಂದಿನ ದಿನಗಳಲ್ಲಿಯೂ ಕಾಲೇಜು ತನ್ನ ಹಿರಿಮೆ, ಗರಿಮೆಯನ್ನು ನಾಡಿನಾದ್ಯಂತ ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗುರುಗಳಿಗೆ ಗೌರವ ಹಾಗೂ ಸಹಕಾರ ನೀಡಬೇಕು ಎಂದರು.
ಪತ್ರಕರ್ತರಾದ ಹೆಚ್.ಜೆ.ರಾಕೇಶ್ ಮಾತನಾಡಿ, ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು 200 ನೇ ವಾರ್ಷಿಕೋತ್ಸವವನ್ನು ಆಚರಿಸುವಂತಾಗಲಿ ಎಂದು ಶುಭಹಾರೈಸಿದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಪತ್ರಕರ್ತರಾದ ಜಿ.ವಿ.ರವಿಕುಮಾರ್ ಅವರು ಮಾತನಾಡಿ ದೇಶದ ಸರ್ವತೋಮುಖ ಅಭಿವೃದ್ಧಿ ಮತ್ತು ಪ್ರಗತಿಗೆ ಯುವ ಸಮೂಹವೇ ಬೆನ್ನೆಲುಬು. ಯುವ ಶಕ್ತಿ ಮನಸ್ಸು ಮಾಡಿದರೆ ಸಮಾಜದ ಅಂಕು-ಡೊಂಕುಗಳನ್ನು ಸರಿಪಡಿಸುವ ಕೆಲಸ ಮಾಡಬಹುದು. ಯುವಕರ ಹೊಸ ಆಲೋಚನೆಗಳು, ಶಕ್ತಿ, ಉತ್ಸಾಹ ಮತ್ತು ಸೃಜನಶೀಲತೆಯು ದೇಶದ ಬಲವನ್ನು ಹೆಚ್ಚಿಸುತ್ತದೆ. ಆ ನಿಟ್ಟಿನಲ್ಲಿ ಹಿರಿಯರ ಸಲಹೆಗಳನ್ನು ಆಲಿಸಿ, ಅವರ ಮಾರ್ಗದರ್ಶನದಲ್ಲಿ ನಡೆಯಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆ, ಗುರಿ, ಆಸಕ್ತಿಯನ್ನು ಹೊಂದಿರಬೇಕು. ಸೋಮಾರಿತನವನ್ನು ಬಿಟ್ಟು, ತಮ್ಮ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುನ್ನುಗ್ಗಬೇಕು. ಆ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಎಂದರೆ ಸಾಧಕರ ಕಾಲೇಜು ಎಂದು ಹೆಮ್ಮೆ ವ್ಯಕ್ತಪಡಿಸಿದರು. 1949ರಲ್ಲಿ ಆರಂಭವಾದ ಕಾಲೇಜಿನಲ್ಲಿ ರಾಜಕೀಯ, ಸೇನೆ, ಪೊಲೀಸ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಪ್ರಸ್ತುತವು ಹಲವಾರು ಸಾಧಕರಿದ್ದಾರೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ರಾಘವ ಬಿ, ಅವರು ಮಾತನಾಡಿ, ಕಾಲೇಜಿನ ಬೋಧಕ, ಬೋಧಕೇತರ ಎಲ್ಲಾ ಸಿಬ್ಬಂದಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಹಳೆಯ ವಿದ್ಯಾರ್ಥಿ ಸಂಘ ಸೇರಿದಂತೆ ದಾನಿಗಳ ಸಹಕಾರವೂ ಕಾಲೇಜಿಗೆ ದೊರೆಯುತ್ತಿದೆ. ಪ್ರತಿಯೊಬ್ಬ ವ್ಯಕ್ತಿ ಸಮಾಜದಲ್ಲಿ ಅಳಿಲು ಸೇವೆ ಮಾಡುವ ಮೂಲಕ ಜೀವನವನ್ನು ಸಾರ್ಥಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ವಿಭಾಗೀಯ ವ್ಯವಸ್ಥಾಪಕರಾದ ಸಿ.ಜಿ.ವಿನಾಯಕ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಕೊಡಗು ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಮೇಚಿರ ರವಿಶಂಕರ್, ಐಕ್ಯೂಎಸಿ ಸಂಚಾಲಕರಾದ ಪ್ರೊ.ಕೆ.ಪಿ.ನಾಗರಾಜ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಕೆ.ಟಿ.ವರ್ಷ, ಕೆ.ಡಿ.ಇಂಪನಾ, ನಿಲಿಷಾ ಜೋಜೋ, ಬಿ.ಎಂ.ವಂದನಾ, ಎಸ್.ಶ್ರೀನಂದ, ಎನ್‍ಸಿಸಿ ನಾಯಕರಾದ ಕೆ.ಎಂ.ತಿಮ್ಮಯ್ಯ, ಬಿ.ಎಲ್.ಚರಿಷ್ಮಾ ರೈ, ಅಧ್ಯಾಪಕರು ಅಧ್ಯಾಪಕೇತರ ವೃಂದ ಮತ್ತು ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು. ಎಸ್. ಶ್ರೀನಂದ್, ಹೆಚ್.ಆರ್.ಸಂದೇಶ್ ನಿರೂಪಿಸಿದರು, ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪ್ರೊ.ಶ್ರೀಧರ್ ಹೆಗಡೆ ಸ್ವಾಗತಿಸಿದರು, ಪ್ರೊ.ಅಲೋಕ್ ಕಾಲೇಜಿನ ಶೈಕ್ಷಣಿಕ ವರದಿ ವಾಚಿಸಿದರು, ಕೆ.ಟಿ.ವರ್ಷ ವಂದಿಸಿದರು.
ಇದೇ ಸಂದರ್ಭ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆಯಿತು.
Kodagu
ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
ಮಡಿಕೇರಿ : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು, ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮರಗೋಡು ಗೌಡ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಮರಗೋಡು ಗೌಡ ಸಮಾಜದ ಆವರಣದಲ್ಲಿ ಅರೆಭಾಷೆ ಗ್ರಾಮೋತ್ಸವ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕನ್ನಡದ ಉಪ ಭಾಷೆಯಾದ ಅರೆಭಾಷೆಯನ್ನು ಉಳಿಸಿ ಬೆಳೆಸಿದಲ್ಲಿ ಕನ್ನಡ ಭಾಷೆಯನ್ನೂ ಸಹ ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯಲು ಸಾಧ್ಯ. ಆ ನಿಟ್ಟಿನಲ್ಲಿ ಅರೆಭಾಷೆಯನ್ನು ಮಕ್ಕಳು ಮತ್ತು ಯುವಜನರಿಗೆ ಕಲಿಸುವಂತಾಗಬೇಕು ಎಂದು ಅವರು ನುಡಿದರು.
ಅರೆಭಾಷೆಯು ಒಂದು ವಿಶಿಷ್ಟ ಭಾಷೆಯಾಗಿದ್ದು, ಕನ್ನಡ ಭಾಷೆಗೆ ಹತ್ತಿರವಾಗಿದೆ. ಆ ದಿಸೆಯಲ್ಲಿ ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಪರಂಪರೆ, ಆಚಾರ-ವಿಚಾರಗಳನ್ನು ಉಳಿಸಿಕೊಂಡು ಹೋಗಬೇಕು ಎಂದು ಡಾ.ಮಂತರ್ ಗೌಡ ಅವರು ಸಲಹೆ ಮಾಡಿದರು.
ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅಕಾಡೆಮಿ ಮೂಲಕ ಹಲವು ಪುಸ್ತಕಗಳನ್ನು ಹೊರತರಲಾಗುತ್ತಿದೆ. ಹಾಗೆಯೇ ತ್ರೈಮಾಸಿಕ ‘ಹಿಂಗಾರ’ ಪುಸ್ತಕವನ್ನು ಪ್ರಕಟಿಸಲಾಗುತ್ತಿದ್ದು, ಇದನ್ನು ಪ್ರತಿ ಕುಟುಂಬದವರು ಪಡೆಯುವಂತಾಗಬೇಕು ಎಂದರು.
ಪುಸ್ತಕ ಅಧ್ಯಯನದಿಂದ ಅರೆಭಾಷೆ ಮತ್ತು ಸಾಹಿತ್ಯ ಬೆಳವಣಿಗೆಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಮಕ್ಕಳು ಅರೆಭಾಷೆ ಕಲಿಕೆಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.
ಅರೆಭಾಷೆಯು ಇಂದು ವ್ಯವಹಾರಿಕ ಭಾಷೆಯಾಗಿ ಬೆಳೆದಿದೆ. ಆ ನಿಟ್ಟಿನಲ್ಲಿ ಅರೆಭಾಷೆ ಮಾತನಾಡಲು ಹಿಂಜರಿಕೆ ಪಡದೆ, ಎಲ್ಲರೂ ಅರೆಭಾಷೆ ಮಾತನಾಡುವಂತಾಗಬೇಕು ಎಂದು ಕರೆ ನೀಡಿದರು.
ಶಾಲಾ ಕಾಲೇಜುಗಳಲ್ಲಿ ಅರೆಭಾಷೆ ಸಂಘಗಳನ್ನು ಸ್ಥಾಪಿಸುವ ಮೂಲಕ ಅರೆಭಾಷೆ ಕಲಿಕಾ ಬೆಳವಣಿಗೆಗೆ ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ಭಾಷೆ, ಸಾಹಿತ್ಯ, ಸಂಸ್ಕøತಿ, ಕಲೆಗಳ ಪರಿಚಯಕ್ಕೆ ಅನುಕೂಲವಾಗಿದೆ ಎಂದರು.
ಅರೆಭಾಷೆಯಲ್ಲಿ ನಾಟಕ ಪ್ರದರ್ಶನ ಏರ್ಪಡಿಸುವ ಮೂಲಕ ಅರೆಭಾಷೆಯನ್ನು ಎಲ್ಲರಿಗೂ ತಲುಪಿಸುವಲ್ಲಿ ಮುಂದಾಗಲಾಗಿದೆ. ಹಲವು ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಐನ್‍ಮನೆಗಳ ಸಂಸ್ಕøತಿ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರು ತಿಳಿಸಿದರು.
ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್ ಅವರು ಮಾತನಾಡಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಆರಂಭದಿಂದ ಇಲ್ಲಿಯವರೆಗೂ ಉತ್ತಮ ಕೆಲಸ ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಕಲೆಗಳು, ಪರಂಪರೆ ಬಗ್ಗೆ ಎಲ್ಲೆಡೆ ಪಸರಿಸುವಲ್ಲಿ ಶ್ರಮಿಸಲಾಗುತ್ತಿದೆ. ಅನೇಕ ಪುಸ್ತಕಗಳನ್ನು ಪ್ರಕಟಿಸುವ ಮೂಲಕ ಅರೆಭಾಷೆ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರೀರ ಮೋಹನ್‍ದಾಸ್ ಅವರು ಮಾತನಾಡಿ ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಕಲೆಗಳನ್ನು ಉಳಿಸುವಲ್ಲಿ ಗ್ರಾಮೋತ್ಸವ ಮತ್ತು ಗಡಿನಾಡ ಉತ್ಸವ ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮರಗೋಡು ಗೌಡ ಸಮಾಜದ ಅಧ್ಯಕ್ಷರಾದ ಕಟ್ಟೆಮನೆ ಜನಾರ್ಧನ ಅವರು ಮಾತನಾಡಿ ಅರೆಭಾಷೆಯನ್ನು ಮತ್ತಷ್ಟು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಭಾಷೆ ಉಳಿದರೆ ಸಮಾಜ ಉಳಿಯಲು ಸಾಧ್ಯ. ಹಾಗೆಯೇ ಅನಾದಿಕಾಲದಿಂದಲೂ ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದರು.
ಮೈಸೂರಿನ ಗೌಡ ವಿದ್ಯಾಸಂಘದ ಮಾಜಿ ಅದ್ಯಕ್ಷರಾದ ತೋಟಂಬೈಲು ಮನೋಹರ್ ಅವರು ಮಾತನಾಡಿ ಅರೆಭಾಷೆಯನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.
ಅರೆಭಾಷೆಯನ್ನು ಹಳ್ಳಿಯಿಂದ ಡೆಲ್ಲಿಯವರೆಗೆ ಕೊಂಡೊಯ್ದು ಅರೆಭಾಷೆ ಮಹತ್ವವನ್ನು ತಿಳಿಸುವುದು ಶ್ಲಾಘನೀಯವಾಗಿದೆ. ಯಕ್ಷಗಾನ, ಹಾಡುಗಾರಿಕೆ, ನಾಟಕ ಹೀಗೆ ವಿವಿಧ ಕಾರ್ಯಕ್ರಮ ಆಯೋಜಿಸುವ ಮೂಲಕ ಉತ್ತಮ ಕೆಲಸ ಮಾಡಲಾಗುತ್ತದೆ ಎಂದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅರೆಭಾಷಿಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ನಿವೃತ್ತ ಪ್ರಾಂಶುಪಾಲರಾದ ಚೆರಿಯಮನೆ ರಾಮಚಂದ್ರ ಅವರು ಮಾತನಾಡಿ ಅರೆಭಾಷಿಕರ ಇತಿಹಾಸ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಅರೆಭಾಷಿಕರ ಬದುಕು, ಕೃಷಿ ಚಟುವಟಿಕೆ ವಿಶಿಷ್ಟವಾಗಿದೆ ಎಂದರು.
ಅರೆಭಾಷಿಕರು ಕಾಸರಗೋಡಿನಿಂದ ಅರಕಲಗೋಡು ವರೆಗೆ, ದಕ್ಷಿಣ ಕನ್ನಡದಿಂದ ಪಿರಿಯಾಪಟ್ಟಣದವರೆಗೆ ವಾಸ ಮಾಡುತ್ತಿದ್ದು, ಅರೆಭಾಷೆ ಹೆಚ್ಚು ಹೆಚ್ಚು ಮಾತನಾಡಲು ಪ್ರೋತ್ಸಾಹಿಸಬೇಕು ಎಂದರು.
ಅರೆಭಾಷೆ ಸಂಪ್ರದಾಯ, ಸಂಸ್ಕøತಿ, ಆಚಾರ-ವಿಚಾರಗಳು ವಿಭಿನ್ನವಾಗಿದೆ. ಪಟ್ಟೆದಾರರ ಸಂಸ್ಕøತಿ, ಅರಮನೆ- ಗುರುಮನೆ, ಹಬ್ಬ ಹರಿದಿನಗಳು, ಹರಿಸೇವೆ, ಕೆಡ್ಡಾಸ ಹಬ್ಬ, ಸೋಬಾನೆ ಪದಗಳು ಹೀಗೆ ವಿಭಿನ್ನತೆಯ ನಾಗರಿಕತೆಯನ್ನು ಹೊಂದಿದೆ ಎಂದು ವಿವರಿಸಿದರು.
ಅರೆಭಾಷೆ ಸಾಹಿತ್ಯ, ಸಂಸ್ಕøತಿ ಬೆಳವಣಿಗೆಯಲ್ಲಿ ಕೋಡಿ ಕುಶಾಲಪ್ಪ ಗೌಡ ಸೇರಿದಂತೆ ಹಲವರು ಶ್ರಮಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಅಧ್ಯಯನಗಳು ಆಗಬೇಕು ಎಂದು ರಾಮಚಂದ್ರ ಅವರು ವಿವರಿಸಿದರು.
ಕಾರ್ಯಕ್ರಮ ಸಂಚಾಲಕರಾದ ಸಂದೀಪ್ ಪೂಳಕಂಡ ಅವರು ಮಾತನಾಡಿ ರಾಷ್ಟ್ರದಲ್ಲಿ ಅನೇಕ ಭಾಷೆಗಳಿದ್ದು, ಭಾಷೆ ಸಂಸ್ಕøತಿ ಪ್ರತಿಯೊಬ್ಬರ ಅವಿನಾಭಾವ ಸಂಬಂಧವನ್ನು ಹೊಂದಿವೆ ಎಂದು ಅವರು ನುಡಿದರು.
ಹಿಂದೆ ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಮಾಡುವ ಪ್ರದೇಶವನ್ನು ಮೇಲಿನ ಕೊಡಗು ಮತ್ತು ಕೆಳಗಿನ ಕೊಡಗು ಎಂದು ಹೇಳಲಾಗಿತ್ತು ಎಂದು ಸ್ಮರಿಸಿದರು.
ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಉಳಿಯಬೇಕು. ಸಮಾಜದಲ್ಲಿ ಒಗ್ಗಟ್ಟು ಇರಬೇಕು. ಭಾಷೆ ಮತ್ತು ಸಂಸ್ಕøತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದರು.
ಸೂರ್ತಲೆ ವಾರಿಜ ಅವರು ಬರೆದಿರುವ ‘ಅರ್ಸು ಮತ್ತು ಪ್ರಧಾನಿನ ಕಥೆ’ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ಹೊರತಂದಿರುವ ಹಲವು ಪುಸ್ತಕಗಳನ್ನು ಮರಗೋಡು ಗ್ರಾಮ ಪಂಚಾಯಿತಿಗೆ ನೀಡಲಾಯಿತು. ಮರಗೋಡು ವ್ಯಾಪ್ತಿಯ ಪಟ್ಟೆದಾರರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.
ಮರಗೋಡು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕಾಂಗೀರ ಸತೀಶ್, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಬೆಂಗಳೂರಿನ ಅಧ್ಯಕ್ಷರಾದ ಪಾಣತ್ತಲೆ ಪಳಂಗಪ್ಪ, ಮರಗೋಡು ಗೌಡ ಸಮಾಜದ ಮಾಜಿ ಅಧ್ಯಕ್ಷರಾದ ದೇವಜನ ನಾಣಯ್ಯ, ನಿವೃತ್ತ ಪೊಲೀಸ್ ಅಧಿಕಾರಿ ಅಪ್ಪಯಂಡ್ರ ದೇವಯ್ಯ, ಅಕಾಡೆಮಿ ಸದಸ್ಯರಾದ ಸೂದನ ಈರಪ್ಪ, ಪಿ.ಎಸ್.ಕಾರ್ಯಪ್ಪ, ತೇಜಕುಮಾರ ಕುಡೆಕಲ್, ಕುದ್ಪಾಜೆ ಪ್ರಕಾಶ್, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಕಾಶ್ ಕುದ್ಪಾಜೆ, ವಿನೋದ್ ಮೂಡಗದ್ದೆ, ಮರಗೋಡು ಗ್ರಾ.ಪಂ.ಪಿಡಿಒ ಶೋಭರಾಣಿ ಇತರರು ಇದ್ದರು.
ವಿನೋದ್ ಮೂಡಗದ್ದೆ ಸ್ವಾಗತಿಸಿದರು. ಡೀನಾಪ್ರಭಾ ಮತ್ತು ತೇಜ ಪ್ರವೀಣ್ ಅವರು ನಿರೂಪಿಸಿದರು. ರೋಹಿಣಿ ಚೆರಿಯಮನೆ ಮತ್ತು ತಂಡದವರು ಪ್ರಾರ್ಥಿಸಿದರು. ವೆಂಕಟೇಶ್ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
-
Mysore14 hours agoದೈವ ನಿಂದನೆ ಪ್ರಕರಣ: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್
-
Mysore20 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Special7 hours agoಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಹೇಗೆ?
-
State12 hours agoರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ನಾಯಕತ್ವ ಬದಲಾವಣೆ: ಹೈಕಮಾಂಡ್ ಸಭೆ ಕುತೂಹಲ
-
Hassan14 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Manglore16 hours agoಪ್ರವಾಸಿಗರಿಗೆ ಜಲಪಾತ ವೀಕ್ಷಣೆ, ಪರ್ವತ ಏರಲು ಜೂ.1ರಿಂದ ಅವಕಾಶ
-
Sports12 hours agoಧರ್ಮಶಾಲಾದಲ್ಲಿ ಆರ್ಸಿಬಿಗೆ ಗುಡ್ ನ್ಯೂಸ್: ಫಿಲ್ ಸಾಲ್ಟ್ ಕಮ್ಬ್ಯಾಕ್ ಸಾಧ್ಯತೆ
-
Hassan13 hours ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
