Connect with us

Hassan

ಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ

Published

on

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾಲುವಾಗಿಲು ಗ್ರಾಮದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಸ್ವರೂಪ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು.

ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರು ಬಳಿಕ ಅದೇ ಗ್ರಾಮದಲ್ಲಿ 5 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಅಲ್ಲಿನ ಪ್ರವಾಸಿ ತಾಣವಾದ ಹಾಲುವಾಗಿಲು ಕಟ್ಟೆಗೆ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಹಾಲುವಾಗಿಲು ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಶಾಸಕರ ಅನುದಾನದಲ್ಲಿ ನಿರ್ಮಾಣ ವಾಗುತ್ತಿರುವ ತೆರಿನಮನೆ ವೀಕ್ಷಿಸಿ ಗುಣಮಟ್ಟದ ಕಾಮಗಾರಿ ಮೂಲಕ ಅತೀ ಶೀಘ್ರವಾಗಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಶಾಸಕರನ್ನು ಅಭೂತಪೂರ್ವಕವಾಗಿ ಬರಮಾಡಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದರು

Continue Reading

Hassan

ಹಾಸನ ಬಸ್‌ ನಿಲ್ದಾಣದಲ್ಲಿ ಬಸ್‌ ಚಾಲಕರ ನಡುವೆ ವಾಗ್ವಾದ; ಬಳಿಕ ಹೆದ್ದಾರಿಯಲ್ಲಿ ಮತ್ತೆ ಜಗಳ

Published

on

ಹಾಸನ: ಹಾಸನ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಸಮಯದ ವಿಚಾರವಾಗಿ ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗದ ಬಸ್‌ ಚಾಲಕರ ನಡುವೆ ಜಗಳ ನಡೆದ ಘಟನೆ ವರದಿಯಾಗಿದೆ.

  ಮಾಹಿತಿಯ ಪ್ರಕಾರ, ಕೆಎ09-F-5249 ಸಂಖ್ಯೆಯ ಧರ್ಮಸ್ಥಳ ಮಾರ್ಗದ ಬಸ್‌ ಹಾಗೂ ಕೆಎ42-F-2308 ಸಂಖ್ಯೆಯ ಮಂಗಳೂರು ಮಾರ್ಗದ ಬಸ್‌ ನಡುವೆ ಬಸ್‌ ನಿಲುಗಡೆ ಸಮಯದ ವಿಚಾರದಲ್ಲಿ ವಾಗ್ವಾದ ಉಂಟಾಗಿದೆ. ಈ ವೇಳೆ ಚಾಲಕರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದು, ಮಂಗಳೂರು ಮಾರ್ಗದ ಬಸ್‌ ಚಾಲಕನ ಮೇಲೆ ಬೈಗುಳದ ಆರೋಪ ಕೇಳಿಬಂದಿದೆ.

ನಂತರ ಬಸ್‌ ನಿಲ್ದಾಣದ ಮೇಲಾಧಿಕಾರಿಗಳು ಮಧ್ಯಪ್ರವೇಶಿಸಿ ಇಬ್ಬರ ನಡುವೆ ಸಂಧಾನ ನಡೆಸಿ ಕಳುಹಿಸಿದ್ದಾರೆ. ಬಳಿಕ ಕೆಎ09-F-5249 ಸಂಖ್ಯೆಯ ಬಸ್‌ಗೆ ಸಂಬಂಧಿಸಿದವರು ಕೆಎ05-AG-3616 ಸಂಖ್ಯೆಯ ಶಿಫ್ಟ್‌ ಡಿಸೈರ್‌ ಕಾರಿನಲ್ಲಿ ಬಂದು ಎನ್‌ಎಚ್‌-75 ಹೆದ್ದಾರಿಯಲ್ಲಿ ಮತ್ತೆ ಜಗಳ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Continue Reading

Hassan

ಮರ ಕಡಿಯುವ ವೇಳೆ ಮರ ಬಿದ್ದು ವ್ಯಕ್ತಿ ಸಾ*ವು

Published

on

ವರದಿ:  ಸತೀಶ್ ಚಿಕ್ಕಕಣಗಾಲು

ಆಲೂರು: ಮರ ಕಡಿಯುವ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ದಾಟೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ದಾಟೂರು ಗ್ರಾಮದ ನಿವಾಸಿ ನಾಗಪ್ಪ (42) ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಮರ ಕಡಿಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ನಾಗಪ್ಪ ಅವರು, ಹೊಸಕೋಟೆಯ ಗುರುಪಾದಪ್ಪ ಅವರ ಕಾಫಿ ತೋಟದಲ್ಲಿ ಮರಕಟ್ಟು ಮಾಡುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಮರ ಕಡಿಯುವ ವೇಳೆ ಮರ ನಾಗಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಆಲೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಪ್ರಕರಣವನ್ನು ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Continue Reading

Hassan

ಹಿರಿಯ ಪತ್ರಕರ್ತ ಜಯಕುಮಾರ್ ನಿಧನ

Published

on

ಅರಕಲಗೂಡು: ತಾಲ್ಲೂಕಿನ ಹಿರಿಯ ಪತ್ರಕರ್ತರು ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷರಾದ ಜಯಕುಮಾರ್ (59) ಅವರು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು.

ಜಯಕುಮಾರ್ ಅವರು ಜನಮಿತ್ರ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಕುಟುಂಬಕ್ಕೆ ಮಾತ್ರವಲ್ಲದೆ, ಅರಕಲಗೂಡು ತಾಲ್ಲೂಕಿನ ಪತ್ರಿಕೋದ್ಯಮ ಕ್ಷೇತ್ರಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದೆ.

Continue Reading

Trending

error: Content is protected !!