National - International
ಭಾಷೆಗಳ ನಡುವಿನ ಭಾಷಾಂತರಕ್ಕೆ ಮೊಬೈಲ್ ಆಪ್: ಅಮಿತ್ ಶಾ

ನವದೆಹಲಿ: ಭಾರತದ ಯಾವುದೇ ಭಾಷೆ ಅಥವಾ ರಾಜ್ಯದ ಜನರ ಮೇಲೆ ನಾವು ಹಿಂದಿ ಏರಿಕೆ ಮಾಡುತ್ತಿಲ್ಲ. ಭಾರತೀಯ ಭಾಷೆಗಳು ಈ ದೇಶದ ಸಂಪತ್ತಾಗಿದ್ದು, ಭಾಷೆಗಳ ಕುರಿತು ರಾಜಭಾಷಾ ವಿಭಾಗದಡಿಯಲ್ಲಿ ಹೊಸ ಇಲಾಖೆ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಶುಕ್ರವಾರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎಲ್ಲಾ ಭಾಷೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಲಾಖೆ ತೆರೆಯಲಾಗುತ್ತಿದ್ದು, ಭಾಷೆಗಳ ನಡುವಣ ಭಾಷಾಂತರಕ್ಕೆ ಮೊಬೈಲ್ ಆಪ್ ಹೊರತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ತಮ್ಮ ಭ್ರಷ್ಟಾಚಾರ, ಇತರೆ ಅಂಶಗಳನ್ನು ಮರೆಮಾಚುವ ಉದ್ದೇಶದಿಂದ ಹಾಗೂ ತಮ್ಮ ರಾಜಕೀಯ ಲಾಭಕ್ಕಾಗಿ ಭಾಷಾ ವಿವಾದವನ್ನು ವಿರೋಧ ಪಕ್ಷಗಳು ಹುಟ್ಟುಹಾಕುತ್ತಿದ್ದಾವೆ. ಭಾಷೆಗಳ ರಕ್ಷಣೆಗಾಗಿ ಡಿಸೆಂಬರ್ ನಂತರದ ಬಳಿಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದ ಜೊತೆಗೂಡಿ ಚರ್ಚೆ ಮಾಡಲಾಗುವುದು ಎಂದರು.
ಭಾಷಾ ವಿಚಾರವಾಗಿ ದೇಶದಲ್ಲಿ ಹಲವಾರು ವಿಭಜನೆಗಳಿಗೆ ದಾರಿಯಾಗಿವೆ. ಹಿಂದೆ ಯಾವುದೇ ಭಾಷೆಯೊಂದಿಗೆ ಸ್ಪರ್ಧೆಗೆ ಇಳಿದಿಲ್ಲ. ಎಲ್ಲಾ ಭಾಷೆಗಳ ಉತ್ತಮ ಸ್ನೇಹಿತ ಹಿಂದಿಯಾಗಿದೆ. ಇದನ್ನು ಕೆಲವರು ರಾಜಕೀಯಕ್ಕಾಗಿ ಬಳಕೆ ಮಾಡಿಕೊಳ್ಳುವ ಮೂಲಕ ವಿವಾದ ಸೃಷ್ಠಿಸುತ್ತಿವೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.
National - International
ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ವಕ್ಫ್ ಕಾನೂನು ರೂಪಿಸಿದ್ದು ಕಾಂಗ್ರೆಸ್: ಪ್ರಧಾನಿ ಮೋದಿ

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ವಕ್ಫ್ ಕಾನೂನು ರೂಪಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ ಆಶಯವನ್ನು ಹಾಳು ಮಾಡುವಂತೆ ವಕ್ಫ್ ಕಾನೂನನ್ನು ಕಾಂಗ್ರೆಸ್ ರೂಪಿಸಿತ್ತು.
ಕಳೆದ 2013ರಲ್ಲಿ ಕಾಂಗ್ರೆಸ್ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತನ್ನ ಮತ ಬ್ಯಾಂಕ್ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು.
ಇನ್ನು ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನು ಮಾತ್ರ ಖುಷಿಪಡಿಸಿದೆ. ಉಳಿದ ಸಮಾಜವು ಶೋಚನೀಯ, ಅವಿದ್ಯಾವಂತ ಮತ್ತು ಬಡವರಾಗಿಯೇ ಉಳಿದಿದೆ. ಕಾಂಗ್ರೆಸ್ಸಿನ ಈ ದುಷ್ಟ ನೀತಿಗೆ ದೊಡ್ಡ ಪುರಾವೆ ವಕ್ಫ್ ಕಾಯ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಾಬಾ ಸಾಹೇಸ್ ಅಂಬೇಡ್ಕರ್ ಅವರನ್ನು ಪದೇ ಪದೇ ಅವಮಾನಿಸಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿದ್ದ ಮೋಸವನ್ನು ನಾವು ಮರೆಯಲು ಕೂಡ ಆಗಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರು ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು.
National - International
ಅಮೆರಿಕಾದಿಂದ ಭಾರತಕ್ಕೆ ಬಂದಿಳಿದ 26/11 ರೂವಾರಿ ತಹವ್ವೂರ್ ರಾಣಾ

ಮುಂಬೈ: ಅಮೆರಿಕದಿಂದ ಗಡಿಪಾರಾಗಿದ್ದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಗುರುವಾರ ಭಾರತಕ್ಕೆ ವಾಪಾಸ್ ಕರೆತರಲಾಗಿದೆ.
ಎನ್‌ಐಎ, ಆರ್‌ಎಡಬ್ಲ್ಯೂ, ಎಸ್‌ಡಬ್ಲ್ಯೂಎಟಿ ತಂಡಗಳು ಅಮೆರಿಕಕ್ಕೆ ತೆರಳಿ ಗುರುವಾರ ಮಧ್ಯಾಹ್ನ 2.39ರ ಸುಮಾರಿಗೆ ರಾಣಾ ಇದ್ದ ವಿಮಾನ ದೆಹಲಿಯಲ್ಲಿ ಇಳಿಯಿತು. ಇನ್ನು ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆಯಿದ್ದು, ಮುಂದಿನ ಬೆಳವಣಿಗೆ ಕಾದುನೋಡಬೇಕಿದೆ.
ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತುರ್ತು ತಡೆಹಿಡಿಯುವಂತೆ ಕೋರಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ದೇಶದ ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಭಾರತದ ತನಿಖಾಧಿಕಾರಿಗಳ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಿತ್ತು.
ಅಧಿಕಾರಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿರುವ ಹೈ ಸೆಕ್ಯುರಿಟಿ ಸೆಲ್‌ಗಳು ಹೆಚ್ಚಿನ ಅಪಾಯದ ಬಂಧಿತ ವ್ಯಕ್ತಿಗಾಗಿ ಸಿದ್ಧವಾಗಿವೆ. ಎನ್‌ಐಎ ಇತ್ತೀಚೆಗೆ ಅವರ ಪ್ರಕರಣವನ್ನು ಮುಂಬೈನಿಂದ ದೆಹಲಿಗೆ ವರ್ಗಾಯಿಸುವ ಬಗ್ಗೆ ನ್ಯಾಯಾಲಯದ ಆದೇಶವನ್ನು ಪಡೆದುಕೊಂಡಿದೆ. ಅವರನ್ನು ಭಾರತಕ್ಕೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಏಜೆನ್ಸಿ ಅವರನ್ನು ಕಸ್ಟಡಿಗೆ ವಿಚಾರಣೆಗೆ ಒಳಪಡಿಸಬಹುದು. ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ರಾಣಾ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ.
ಮೂಲಗಳ ಪ್ರಕಾರ, ಎನ್‌ಐಎ ಡಿಐಜಿ ಜಯಾ ರಾಯ್ ಮಂಗಳವಾರ ತಹಾವೂರ್ ರಾಣಾ ಶರಣಾಗತಿ ವಾರಂಟ್‌ಗೆ ಸಹಿ ಹಾಕಿದರು. ಅದಾದ ನಂತರ ಅವರ ಹಸ್ತಾಂತರ ಪ್ರಕ್ರಿಯೆಯು ವೇಗವಾಗಿ ಮುಂದುವರಿಯಿತು. ಬುಧವಾರ ಬೆಳಿಗ್ಗೆ 6.30ರ ಸುಮಾರಿಗೆ ಭಾರತೀಯ ತನಿಖಾ ಸಂಸ್ಥೆ ರಾಣಾ ಅವರನ್ನು ಹೊತ್ತ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟು, ಗುರುವಾರ ಭಾರತಕ್ಕೆ ಮರಳಿದ್ದಾರೆ.
National - International
ರೆಪೋ ದರ ಇಳಿಸಿದ ಆರ್‌ಬಿಐ: ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಿಷ್ಟು

ನವದೆಹಲಿ: ಆರ್‌ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ತನ್ನ ಹಣಕಾಸು ನೀತಿ ಸಭೆಯಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿಮೆ ಮಾಡಿದೆ. ಆ ಮೂಲಕ 6.25%ರಿಂದ 6.00ಗೆ ತಂದಿದೆ.
ಈ ನಿರ್ಧಾರವನ್ನು ಹಣಕಾಸು ನೀತಿ ಸಮಿತಿ (ಎಂಪಿಸಿ) ಏಕಮತದಿಂದ ತೆಗೆದುಕೊಂಡಿದೆ. ಈ ಬಗ್ಗೆ ಮಾತನಾಡಿರುವ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, ಹಣದುಬ್ಬರವು ತಗ್ಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
2026ರ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆಯನ್ನು 6.7% ಎಂದು ಮೊದಲು ಅಂದಾಜಿಸಲಾಗಿತ್ತು, ಆದರೆ ಈಗ ಅದನ್ನು 6.5%ಗೆ ಕಡಿಮೆ ಮಾಡಲಾಗಿದೆ. ಹಣದುಬ್ಬರ ಯೋಜನೆಯನ್ನು 4.2% ರಿಂದ 4%ಗೆ ಇಳಿಸಲಾಗಿದೆ. ಜಾಗತಿಕ ಸುಂಕಗಳ ಪ್ರಭಾವದಿಂದ ಭಾರತದ ಆರ್ಥಿಕತೆಯ ಮೇಲೆ ಒತ್ತಡ ಉಂಟಾಗಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.
ಆದರೆ, ಆರ್‌ಬಿಐ ದೇಶೀಯ ಬೆಳವಣಿಗೆಯನ್ನು ಸಮತೋಲನಗೊಳಿಸಲು ಈ ಕ್ರಮ ತೆಗೆದುಕೊಂಡಿದೆ. ಈ ದರ ಕಡಿತವು ಸಾಲಗಾರರಿಗೆ ಪ್ರಯೋಜನವನ್ನು ಒದಗಿಸುತ್ತದೆ ಮತ್ತು ಆರ್ಥಿಕ ಚೇತರಿಕೆಯನ್ನು ಬೆಂಬಲಿಸುತ್ತದೆ. ಎಂಪಿಸಿ “ತಟಸ್ಥ” ನೀತಿಯನ್ನು ಮುಂದುವರಿಸಿದೆ, ಇದು ಭವಿಷ್ಯದಲ್ಲಿ ಮತ್ತಷ್ಟು ದರ ಕಡಿತಕ್ಕೆ ಸೂಚನೆ ನೀಡುತ್ತದೆ. ಒಟ್ಟಾರೆಯಾಗಿ, ಈ ನಿರ್ಧಾರವು ಭಾರತದ ಆರ್ಥಿಕ ಸ್ಥಿರತೆಯನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಹಲವು ಸಾಲಗಳ ಮೇಲಿನ ಬಡ್ಡಿ ದರ ಇಳಿಕೆಯಾಗಲಿದ್ದು, ಇದು ಇಎಂಐ ಕಟ್ಟುವ ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ.
-
Mandya21 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar21 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar21 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Kodagu13 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ