Kodagu
ದಾಖಲೆ ರಹಿತ ಹಣ ವಶಪಡಿಸಿಕೊಂಡ ಚುನಾವಣಾ ಆಧಿಕಾರಿಗಳು
ಮಡಿಕೇರಿ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷದ 92 ಸಾವಿರ ಹಣವನ್ನು ಕೊಡಗು ಮೈಸೂರು ಗಡಿ ಕುಶಾಲನಗರ ಚೆಕ್ ಪೊಸ್ಟ್ನಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನಿAದ ಕುಶಾಲನಗರ ಕಡೆಗೆ ಬರುತ್ತಿದ್ದ ಬೈಕ್‌ನಲ್ಲಿ ಹಣ ಪತ್ತೆಯಾಗಿದ್ದು, ದಾಖಲೆ ರಹಿತ ಹಣ ಹಾಗೂ ಬೈಕ್‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೆಟ್ರೋಲ್ ಬಂಕ್‌ನಿAದ ಬ್ಯಾಂಕ್‌ಗೆ ಕೊಂಡೊಯ್
ತಿದ್ದ ಹಣ ಇದು ಎನ್ನಲಾಗಿದ್ದು, 50 ಸಾವಿರಕ್ಕಿಂತ ಹೆಚ್ಚು ಹಣ ಹಿನ್ನಲೆ ಅಧಿಕಾರಿಗಳು ದಾಖಲೆ ಕೇಳಿದ್ದಾರೆ. ಸ್ಥಳದಲ್ಲಿ ದಾಖಲೆ ಒದಗಿಸಲು ವಿಫಲವಾದ ಹಿನ್ನಲೆ ಪೊಲೀಸರು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.
Kodagu
ಜಿಲ್ಲಾಡಳಿತದಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ
ಮಡಿಕೇರಿ : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯು ಭಾನುವಾರ ಜರುಗಿತು.
ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಮೇಜರ್ ಜನರಲ್ ಕಾಳೆಂಗಡ ಸಿ. ಕಾರ್ಯಪ್ಪ (ನಿವೃತ್ತ), ಏರ್ ಮಾರ್ಷಲ್ ನಂದಾ ಕಾರ್ಯಪ್ಪ(ನಿ), ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಗ್ರೂಪ್ ಕ್ಯಾಪ್ಟನ್ ಮನು ಭೀಮಯ್ಯ(ನಿ), ಏರ್ ಕಮಾಂಡರ್ ದೇವಯ್ಯ(ನಿ), ಲೆ.ಕರ್ನಲ್ ಕಾವೇರಪ್ಪ(ನಿ), ಕರ್ನಲ್ ನಾಚಪ್ಪ (ನಿ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಬಿ.ಆರ್.ಶೆಟ್ಟಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ನಿವೃತ್ತ ಸೈನಾಧಿಕಾರಿಗಳು, ಎನ್‍ಸಿಸಿ ವಿದ್ಯಾರ್ಥಿಗಳು ಇತರರು ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಛವಿರಿಸಿ, ಗೌರವಪ ನಮನ ಸಲ್ಲಿಸಿದರು.

ಕರ್ತವ್ಯ ಪಾಲನೆ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ ಯೋಧರ ಸ್ಮರಣಾರ್ಥ ಎರಡು ನಿಮಿಷಗಳ ಕಾಲ ಮೌನಾಚರಿಸಲಾಯಿತು. ಪೊಲೀಸ್ ತಂಡದವರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಮೇ.ಜ. ಕೆ.ಸಿ.ಕಾರ್ಯಪ್ಪ(ನಿ) ಅವರು ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಿದರು.
ಪೊಲೀಸ್ ಇಲಾಖೆಯ ಎಆರ್‍ಎಸ್‍ಐ ತಂಡದ ಚೆನ್ನಕೇಶವ ಮತ್ತು ಪೊಲೀಸರು ಗೌರವ ವಂದನೆ ನಡೆಸಿಕೊಟ್ಟರು. ಹಾಗೆಯೇ ಪೊಲೀಸ್ ಬ್ಯಾಂಡ್ ತಂಡದವರು ಪೊಲೀಸ್ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಸೈನಿಕರು, ಪೊಲೀಸರು, ಎನ್‍ಸಿಸಿ ವಿದ್ಯಾರ್ಥಿಗಳು, ಇತರರು ಗೌರವ ಸಲ್ಲಿಸಿದರು.

ಬಳಿಕ ಮಾತನಾಡಿದ ಮೇ.ಜ.,ಕೆ.ಸಿ.ಕಾರ್ಯಪ್ಪ ಅವರು ರಾಷ್ಟ್ರದಲ್ಲಿ ಸೇನೆಗೆ ಸೇರುವವರಲ್ಲಿ ಪಂಜಾಬ್ ಪ್ರಥಮ ಸ್ಥಾನದಲ್ಲಿ, ರಾಜ್ಯದಲ್ಲಿ ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಈ ಹಿಂದೆ ಕೊಡಗು ಜಿಲ್ಲೆಯಿಂದ ಸೇನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆ ಆಗುತ್ತಿದ್ದರು, ಆದರೆ ಇತ್ತೀಚಿನ ದಿನಗಳಲ್ಲಿ ವಿವಿಧ ಕಾರಣಗಳಿಂದ ಸೇನೆಗೆ ಸೇರ್ಪಡೆ ಆಗುವವರ ಸಂಖ್ಯೆ ಕಡಿಮೆ ಆಗಿದೆ ಎಂದು ಮೇಜರ್, ಕೆ.ಸಿ.ಕಾರ್ಯಪ್ಪ ಅವರು ಹೇಳಿದರು.
ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಗೆ ಸೇರುವಂತಾಗಬೇಕು ಎಂದು ಅವರು ಕರೆ ನೀಡಿದರು.
Kodagu
ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದ ಎ.ಎಸ್.ಪೊನ್ನಣ್ಣ
ಮಡಿಕೇರಿ : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾವಳಿಗೆ” ಬೆಂಗಳೂರಿನಲ್ಲಿ ಜರಗಿತು.
ಪಂದ್ಯಾಟವನ್ನು ಉದ್ಘಾಟಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರವಿಂದ್ ಕುಮಾರ್ ಆಗಮಿಸಿದ್ದರು. ಪಂದ್ಯಾಟ ಉದ್ಘಾಟಿಸಿ ಮಾತನಾಡಿದ ಅರವಿಂದ್ ಕುಮಾರ್, ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಸರ್ವೋತ್ತಮ ತಂಡವು ಜಯಗಳಿಸಲಿ ಎಂಬ ಶುಭಾಶಯಗಳು ಕೋರುತ್ತೇನೆ ಎಂದರು.

ಈ ಸಂದರ್ಭದಲ್ಲಿ, ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಎ.ಕೆ.ಎಸ್ ಲೀಗಲ್ ಸಂಸ್ಥೆಯ ಸ್ಥಾಪಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಹಾಗೂ ಅವರ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ಉಪಸ್ಥಿತರಿದ್ದರು.
Kodagu
ಡಾ.ಬಿ.ಆರ್.ಅಂಬೇಡ್ಕರ್ ಜೀವನ ಸಾಧನೆಗಳನ್ನು ಅಧ್ಯಯನ ಮಾಡಿ: ವೆಂಕಟ್ ರಾಜಾ
ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು.

ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು.
ಅಂಬೇಡ್ಕರ್ ಅವರ ಮೌಲ್ಯಗಳು ಹಾಗೂ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಅವರು ಬರೆದಿರುವ ಸಂವಿಧಾನವನ್ನು ಸ್ಮರಿಸಿಕೊಂಡು ಅಭಿವೃದ್ಧಿಯತ್ತ ಚಿಂತನೆ ಮಾಡಬೇಕು. ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ ನಡೆದುಕೊಳ್ಳಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಅವರು ಮಾತನಾಡಿ, ಸುಮಾರು ಆರು ದಶಕಗಳ ಹೋರಾಟದ ನಂತರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿರುವುದು ಶ್ಲಾಘನೀಯ ಎಂದರು.
ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಅವರು ನುಡಿದಂತೆ ನಡೆದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ, ಪ್ರೇಮ್ ಕುಮಾರ್, ರಮೇಶ್, ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
-
Mysore1 hour agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
State3 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Chikmagalur1 hour agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
Chikmagalur1 hour agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Hassan3 minutes agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
Mysore7 hours agoಕೊಲ್ಕತ್ತಾದ ಮೈಸೂರು ಉದ್ಯಾನಕ್ಕೆ 10ನೇ ಚಾಮರಾಜ ಒಡೆಯರ್ ನಾಮಫಲಕ ಅಳವಡಿಸಲು ಪತ್ರ
-
Hassan6 hours agoರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
-
Sports3 hours agoಮೌನ ಮುರಿದು ಮದುವೆ ವಂದತಿಗಳಿಗೆ ಫುಲ್ಸ್ಟಾಪ್ ಇಟ್ಟ ಸ್ಮೃತಿ ಮಂದಾನ
