Connect with us

Hassan

ಎಸ್‌ಐಆರ್‌ಗೆ ಹೆಚ್ಚಿನ ಕಾಲಾವಕಾಶ ನೀಡಬೇಕಿತ್ತು – ಶಿವಲಿಂಗೇಗೌಡ

Published

on

ಹಾಸನ: ಎಸ್‌ಐಆರ್‌  ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಲಾಗಿದ್ದು, ಮತದಾರರಿಗೆ ಹೆಚ್ಚಿನ ಕಾಲಾವಕಾಶ ನೀಡಬೇಕಿತ್ತು ಎಂದು ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಹಳೆಯ ಮತದಾರರ ಪಟ್ಟಿಯನ್ನೇ ಆಧರಿಸಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಬೇಕು ಎಂದು ಅಭಿಪ್ರಾಯಪಟ್ಟರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ ಶಿವಲಿಂಗೇಗೌಡ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲೂ ಗೆದ್ದು ತೋರಿಸುತ್ತೇವೆ ಎಂದು ಹೇಳಿದರು.

“ಇದನ್ನು ನಾನು ಬಹಿರಂಗವಾಗಿ ಹೇಳುತ್ತೇನೆ. ಈ ಜಿಲ್ಲೆಯಲ್ಲಿ ಏನು ನಡೆದಿದೆ ಎಂಬುದು ನಮಗೆ ಗೊತ್ತಿದೆ. ಜಿಲ್ಲೆಯ ಜನ ನಮಗೆ ಆಶೀರ್ವಾದ ಮಾಡುತ್ತಾರೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ವತಿಯಿಂದ ನಡೆಯುತ್ತಿರುವ ವಿಜಯ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಶಿವಲಿಂಗೇಗೌಡ, ಅವರು ತಮ್ಮ ಪಕ್ಷದ ಕಾರ್ಯಕ್ರಮ ಮಾಡಿಕೊಳ್ಳಲಿ, ಅದನ್ನು ಬೇಡ ಎನ್ನಲು ಸಾಧ್ಯವಿಲ್ಲ ಎಂದರು.“ಅವರೆಲ್ಲಿ 25 ವರ್ಷ ಆಡಳಿತ ಮಾಡಿದ್ದಾರೆ? ಪ್ರಧಾನಮಂತ್ರಿಯಾಗಿ 25 ವರ್ಷ ಆಗಿಲ್ಲವಲ್ಲ,” ಎಂದು ಅವರು ಟೀಕಿಸಿದರು.

ನೈಸ್ ರಸ್ತೆ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಶಿವಲಿಂಗೇಗೌಡ ವಾಗ್ದಾಳಿ ನಡೆಸಿದರು.

ನೈಸ್ ರಸ್ತೆ ಯೋಜನೆಯನ್ನು ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಬಳಿಕ ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ಒಪ್ಪಂದದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

“ನೈಸ್ ರಸ್ತೆ ಮಾಡಿದ್ದು ದೇವೇಗೌಡರು. ಅದರಲ್ಲಿ ಯಾವುದನ್ನೂ ಮುಚ್ಚಿಡಲು ಸಾಧ್ಯವಿಲ್ಲ. ಬೆಂಗಳೂರು ಬೆಳೆಯುತ್ತಿದ್ದಂತೆ ಈ ರಸ್ತೆಯಿಂದಲೂ ಬೆಳವಣಿಗೆ ಆಗುತ್ತಿದೆ. ನೈಸ್ ರಸ್ತೆ ಮಾಡಿದ್ದು ತಪ್ಪು ಎಂದು ಹೇಳಬಾರದು. ಇದರಿಂದ ಅನುಕೂಲವಾಗಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ,” ಎಂದರು.

ಕಾನೂನು ಉಲ್ಲಂಘನೆಯಾಗಿದ್ದರೆ ಸಂಬಂಧಪಟ್ಟವರು ಅದರ ಪರಿಣಾಮ ಎದುರಿಸಬೇಕು. ಆದರೆ ಹಳೆಯ ವಿಚಾರಗಳನ್ನು ತೆಗೆದುಕೊಂಡು ರಾಜಕೀಯ ಆರೋಪ ಮಾಡುವುದು ಸರಿಯಲ್ಲ ಎಂದು ಶಿವಲಿಂಗೇಗೌಡ ಹೇಳಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಕ್ರಮ ಕೈಗೊಳ್ಳಬಹುದಿತ್ತು. ಆಗ ಕ್ರಮ ಕೈಗೊಳ್ಳದೆ ಈಗ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡುವುದು ಏಕೆ ಎಂದು ಪ್ರಶ್ನಿಸಿದರು.

“ಆಗಲೇ ವಜಾ ಮಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಿತ್ತು. ಆಗ ಸುಮ್ಮನಿದ್ದು, ಈಗ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಭಾವಿ ನಾಯಕರಾಗಿ ಬೆಳೆಯುತ್ತಿದ್ದಾರೆ ಎಂಬ ಕಾರಣಕ್ಕೆ ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ,” ಎಂದು ಆರೋಪಿಸಿದರು.ಈಗ ಕೇಂದ್ರದಲ್ಲಿ ತಮ್ಮದೇ ಸರ್ಕಾರ ಇರುವುದರಿಂದ ತನಿಖೆ ನಡೆಸಿಸಲಿ. ಕೇವಲ ಆರೋಪ ಮಾಡಿ ಹೋಗುವುದು ಸರಿಯಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಶಿವಲಿಂಗೇಗೌಡ ಟೀಕಿಸಿದರು.

“ಸುಮ್ಮನೆ ಹಿಟ್‌ ಅಂಡ್‌ ರನ್‌ ಮಾಡಿಕೊಂಡು ಹೋದರೆ ಹೇಗೆ? ಹಳೆಯ ಕಥೆಗಳನ್ನು ತೆಗೆದುಕೊಂಡು ಹೋದರೆ ಬೇರೆ ಆಗುತ್ತದೆ. ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸ ಮಾಡಬಾರದು,” ಎಂದರು.

ಇದೇ ವೇಳೆ, ಕೇಂದ್ರದಿಂದ ನಾಳೆ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಲಿದೆ. ತಂಡಕ್ಕೆ ವಾಸ್ತವ ಪರಿಸ್ಥಿತಿ ಹಾಗೂ ಬರದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸತ್ಯಾಸತ್ಯತೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ಶಿವಲಿಂಗೇಗೌಡ ಹೇಳಿದರು.

Continue Reading

Hassan

ಗಾಂಧೀಜಿ–ಶಾಸ್ತ್ರಿ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಿ: ರಘು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ

Published

on

ಆಲೂರು: ಮಹಾತ್ಮ ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಸಂದೇಶವನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೋಳಬೇಕು ಎಂದು ಚಿಕ್ಕಕಣಗಾಲು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಘು ಹೇಳಿದರು.

ತಾಲೂಕಿನ ಪಾಳ್ಯ ಹೋಬಳಿ ತಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕಣಗಾಲು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಎಲ್ಲಾ ಭಾರತೀಯರು ಮಹಾತ್ಮ ಗಾಂಧಿಯವರ ಜನ್ಮ ವಾರ್ಷಿಕೋತ್ಸವವನ್ನು ಪ್ರೀತಿ ಮತ್ತು ಕೃತಜ್ಞತೆಯಿಂದ ಆಚರಿಸುತ್ತಾರೆ. ಸತ್ಯ, ಅಹಿಂಸೆ ಮತ್ತು ಪ್ರಾಮಾಣಿಕತೆಯ ತತ್ವಗಳು ಇನ್ನೂ ಶಾಶ್ವತವಾಗಿ ಉಳಿದಿವೆ ಮತ್ತು ಗಾಂಧಿಯವರು ಎಲ್ಲಾ ಭಾರತೀಯರ ಹೃದಯಗಳಲ್ಲಿ ವಾಸಿಸುತ್ತಾರೆ. ರಾಷ್ಟ್ರಪಿತನನ್ನು ಹೊರತುಪಡಿಸಿ ಅವರು ಜನಸಾಮಾನ್ಯರ ನಾಯಕರಾಗಿದ್ದರು. ಭಾರತದ ರಾಜಕೀಯ ಇತಿಹಾಸದಲ್ಲಿ, ಗಾಂಧಿಯವರ ಸಾಧನೆಗಳು ಇನ್ನೂ ವಿಶಿಷ್ಟ ಸ್ಥಾನದಲ್ಲಿ ಉಳಿದಿವೆ ಎಂದು ತಿಳಿಸಿದರು.

ಶಿಕ್ಷಕ ಯೋಗೇಶ್ ಮಾತನಾಡಿ, ಪ್ರತಿ ವರ್ಷ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಚರಣೆ ಮಾಡುವಂತೆ ನಾವು ಮತ್ತೊಬ್ಬರು ಶ್ರೇಷ್ಠ ಮುತ್ಸದ್ಧಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಣೆ ಮಾಡುತ್ತೇವೆ. ಅವರ ಜನ್ಮ ದಿನವು ಸಹ ಇದೇ ಅಕ್ಟೋಬರ್ 02 ರಂದು. ಲಾಲ್‌ ಬಹದ್ಧೂರ್ ಶಾಸ್ತ್ರಿ ಈ ದೇಶ ಕಂಡ ಅಪ್ರತಿಮ ನಾಯಕ.

ಸಜ್ಜನ ನೇತಾರ. ಗಾಂಧೀಜಿಯವರನ್ನು ನೆನೆಯುವಂತೆ, ಈ ದಿನದಂದು ನಾವು ಅವರ ಕೊಡುಗೆಗಳನ್ನು ಸಹ ನೆನೆಯುವ ದಿನವು ಹೌದು. ದೇಶದ ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ಅನುಯಾಯಿಯಾಗಿ ಅವರ ಕೊಡುಗೆಯು ಅಪಾರವಾಗಿದೆ. ಬಡತನದಲ್ಲೇ ಹುಟ್ಟಿ, ಬಡತನದಲ್ಲೇ ಬೆಳೆದು, ಬಡತನದಲ್ಲೇ ನಿಧನರಾಧ ಭಾರತದ ಏಕೈಕ ಪ್ರಧಾನಿ ಲಾಲ್ ಬಹದ್ಧೂರ್ ಶಾಸ್ತ್ರಿ ಅವರು ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಕೃಷ್ಣ, ಸದಸ್ಯರಾದ ಆನಂದ್, ನಿಂಗರಾಜು, ಶಾಲಾ ಶಿಕ್ಷಕಿಯರಾದ ಭಾವನಿ, ಸುಮಿತ್ರಾ, ಮಹೇರಾ ಭಾನು, ಪ್ರವೀಣ್, ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಟೋ ಕ್ಯಾಪ್ಶನ್: ತಾಲೂಕಿನ ಪಾಳ್ಯ ಹೋಬಳಿ ತಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕಣಗಾಲು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ಮುಖ್ಯ ಶಿಕ್ಷಕ ರಘು ಮಾತನಾಡಿದರು.

ವರದಿ : ಸತೀಶ್ ಚಿಕ್ಕಕಣಗಾಲು

Continue Reading

Hassan

ಅ.4 ರಂದು ಹಾಸನದಲ್ಲಿ ವಿದ್ವತ್ ಪಿಯು ಕಾಲೇಜಿನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪರೀಕ್ಷೆ

Published

on

ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು, ಶೈಕ್ಷಣಿಕ ಶ್ರೇಷ್ಠತೆ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಶಿಕ್ಷಣ ಸಂಸ್ಥೆಯಾಗಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ 04 ಅಕ್ಟೋಬರ್ 2026 ರಂದು ಹಾಸನದ ಹೊಸಲೈನ್ ನಾರ್ತ್ ಲೇಔಟ್‌ನ ಶ್ರೀ ಶ್ರೀಶೈಲ ಪುಷ್ಪಗಿರಿ ಬಸವರಾಜೇಂದ್ರ ಪ್ರೌಢಶಾಲೆಯಲ್ಲಿ ಪ್ರತಿಭಾ ಪರೀಕ್ಷೆಯನ್ನು ಆಯೋಜಿಸಿದೆ.
ವಿದ್ಯಾರ್ಥಿಗಳಲ್ಲಿರುವ ಶೈಕ್ಷಣಿಕ ಪ್ರತಿಭೆಯನ್ನು ಗುರುತಿಸಿ, ಅದನ್ನು ಪೋಷಿಸುವುದು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವಿನೊಂದಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸುವುದು ಈ ಪ್ರತಿಭಾ ಪರೀಕ್ಷೆಯ ಉದ್ದೇಶವಾಗಿದೆ.

ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರುವ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಇದರ ಮೂಲಕ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ತಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಸಹಕಾರಿಯಾಗಲಿದೆ.

ವಿದ್ವತ್ ಪಿಯು ಕಾಲೇಜು ತನ್ನ ಪ್ರಥಮ ಬ್ಯಾಚ್‌ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಿಸಿದೆ. KCET ಎಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ನಾಲ್ವರು ವಿದ್ಯಾರ್ಥಿಗಳಿಗೆ AIIMS ಪ್ರವೇಶ ದೊರೆತಿರುವುದು ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ.

ಹಾಸನ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರತಿಭಾವಂತ ಮತ್ತು ಉನ್ನತ ಶಿಕ್ಷಣದ ಆಶಯ ಹೊಂದಿರುವ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳು ಈ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.

ಸ್ಥಳ: ಶ್ರೀ ಶ್ರೀಶೈಲ ಪುಷ್ಪಗಿರಿ ಬಸವರಾಜೇಂದ್ರ ಪ್ರೌಢಶಾಲೆ, ಹೊಸಲೈನ್ ನಾರ್ತ್ ಲೇಔಟ್, ಹಾಸನ– 573 201

ದಿನಾಂಕ: 4 ಅಕ್ಟೋಬರ್ 2026
ಅರ್ಹತೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು.
ಉದ್ದೇಶ: ಪ್ರತಿಭಾ ಗುರುತಿಸುವಿಕೆ ಮತ್ತು ವಿದ್ಯಾರ್ಥಿವೇತನ.
ನೋಂದಣಿ: ಉಚಿತ
ನೋಂದಣಿಗಾಗಿ ಸಂಪರ್ಕಿಸಿ:
📞 7618775602
📞 7618775600

Continue Reading

Hassan

ಗಾಂಧೀಜಿ, ಶಾಸ್ತ್ರಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಿವಲಿಂಗೇಗೌಡ

Published

on

ಅರಸೀಕೆರೆ: ನಗರದ ಹೊರವಲಯದ ಮೈಸೂರು ರಸ್ತೆಯಲ್ಲಿರುವ ಕಸ್ತೂರ ಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಆವರಣದಲ್ಲಿ ಕರ್ನಾಟಕ ಸರ್ಕಾರ, ಹಾಸನ ಜಿಲ್ಲಾ ಪಂಚಾಯಿತಿ, ಅರಸೀಕೆರೆ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದಲ್ಲಿ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಕೊಡುಗೆ, ಅವರ ಸರಳ ಜೀವನ, ಶಿಸ್ತು, ಪ್ರಾಮಾಣಿಕತೆ ಹಾಗೂ ದೇಶಭಕ್ತಿಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರು ಮಾಡಿದ ತ್ಯಾಗ, ಹೋರಾಟ ಮತ್ತು ಪರಿಶ್ರಮವನ್ನು ಸ್ಮರಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ.ಜಿ. ಸಂತೋಷ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣನವರು, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ಅನಂತ ಇಂಟರ್‌ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅನಂತ ಕುಮಾರ್ ಸೇರಿದಂತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲೆ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತಿ ಇದ್ದರು….

Continue Reading

Trending

error: Content is protected !!