Chikmagalur
ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
ಚಿಕ್ಕಮಗಳೂರು : ಆಂಬುಲೆನ್ಸ್ ನಲ್ಲೇ ತಾಯಿ ಮಗುವಿಗೆ ಜನ್ಮ ನೀಡಿದ ಪ್ರಕರಣ ನಡೆದಿದೆ.
ಆಸ್ಪತ್ರೆಗೆ ಹೋಗುವಾಗ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನನ ಆಗಿದೆ.ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದ ಅಸ್ಮಿಯಾ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.

ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತಿದ್ದ ಅಸ್ಸಾಂ ಮೂಲದ ಮಹಿಳೆ ಈಕೆ ಆಂಬುಲೆನ್ಸ್ ನಲ್ಲಿ ಹೆರಿಗೆ ನೋವಿನಿಂದ ಕೂಗುತ್ತಿದ್ದು, ಮೂಡಿಗೆರೆ ಆಸ್ಪತ್ರೆಗೆ ಹೋಗುವಾಗ ಮಾರ್ಗಧ್ಯೆಯೇ ಮಗುವಿಗೆ ಜನನ ನೀಡಿದ್ದಾರೆ.
ತಾಯಿ-ಮಗುವನ್ನ ರಕ್ಷಿಸಿ ಆಸ್ಪತ್ರೆಗೆ ಆಂಬುಲೆನ್ಸ್ ಚಾಲಕ ಆರೀಫ್ ಕರೆ ತಂದಿದ್ದಾನೆ. ತಾಯಿ-ಮಗು ಇಬ್ಬರು ಕ್ಷೇಮ, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
Chikmagalur
ನಾನು ರಾಮನಗರ ಜಿಲ್ಲೆ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ
ಚಿಕ್ಕಮಗಳೂರು : ರಾಮನಗರ ಜಿಲ್ಲೆ ನಮ್ಮ ತಂದೆಯವರ ಕರ್ಮ ಭೂಮಿ, 1994ರಲ್ಲಿ ಹಾಸನದಿಂದ ಬಂದಂತಹ ದೇವೇಗೌಡರಿಗೆ ರಾಜಕೀಯವಾಗಿ ಜನ್ಮ ಕೊಟ್ಟ ಭೂಮಿಯಾಗಿದೆ. ಹಾಗಾಗಿ ನಾನು ರಾಮನಗರ ಜಿಲ್ಲೆ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಚಾಮರಾಜನಗರದಿಂದ ಸ್ಪರ್ಧೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬೇರೆ ಯಾವುದೇ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೂ ಇಲ್ಲ. ರಾಮನಗರದಲ್ಲಿ ನನ್ನನ್ನೇ ನಂಬಿರುವಂತಹ ಕಾರ್ಯಕರ್ತರು, ಮುಖಂಡರು, ಒಂದು ವರ್ಗವಿದ್ದು ನಮ್ಮನ್ನ ಪ್ರೀತಿಸುವ ಜನರಿದ್ದಾರೆ. ಇವತ್ತು ಜಿಲ್ಲೆಯಲ್ಲಿ ಸಣ್ಣಪುಟ್ಟ ಹಿನ್ನೆಡೆಗಳು ಆಗಿರಬಹುದು, ನಾನು ಒಪ್ಪಿಕೊಳ್ಳುತ್ತೇನೆ. ಕಳೆದ 4 ಚುನಾವಣೆಯಲ್ಲೂ ನಮ್ಮ ಜಿಲ್ಲೆಯ ಜನ ನಮ್ಮ ಕೈ ಬಿಟ್ಟಿಲ್ಲ ಎಂದು ಹೇಳಿದ್ದಾರೆ.

ರಾಜಕೀಯದ ಕೆಲ ಸಂದರ್ಭದಲ್ಲಿ ಚುನಾವಣೆಯಲ್ಲಿ ಏರು-ಪೇರು ಆಗಿದೆ. ನಾವು ಎಲ್ಲವನ್ನೂ ಸಮತೋಲನವಾಗಿ ತೆಗೆದುಕೊಂಡು ಹೋಗಬೇಕು, ಏಕೆಂದರೆ ಅಲ್ಲಿ ದುಡಿದಿದ್ದೇವೆ. ದೇವೇಗೌಡರ ಕುಟುಂಬ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದೆ ಎಂದಿದ್ದಾರೆ.
ದ್ವೇಷ ಭಾಷಣ ಕಾಯ್ದೆ ಜಾರಿಗೊಳಿಸಲು ಸರ್ಕಾರ ರಾಜ್ಯಪಾಲರ ಅಂಕಿತಕ್ಕೆ ಕಾದು ಕುಳಿತಿದ್ದರು. ಈ ಕಾಯ್ದೆ ಪತ್ರಿಕಾ ಮಾಧ್ಯಮವನ್ನ ಕಟ್ಟಿ ಹಾಕುವಂತದ್ದು, ಪ್ರಜಾಪ್ರಭುತ್ಬದಲ್ಲಿ ಪ್ರತಿಪಕ್ಷಗಳ ಹಕ್ಕನ್ನ ಸದೆಬಡಿಯವ ಹುನ್ನಾರ. ಈ ಕಾಯ್ದೆ ಜಾರಿಯಾಗಿದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಮಸೂದೆ ಆಗ್ತಿತ್ತು. ರಾಜ್ಯಪಾಲರು ಈ ಎಲ್ಲಾ ಅಂಶಗಳ ಗಮನಿಸಿ ಒಳ್ಳೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರ ತೀರ್ಮಾನವನ್ನ ನಾವು ಸ್ವಾಗತ ಕೊರುತ್ತೇವೆ
ರಾಜ್ಯಪಾಲರ ಘನತೆಯನ್ನ ತಗ್ಗಿಸುವ ಕೆಲಸ ಸರ್ಕಾರದಿಂದ ಆಗಬಾರದು. ರಾಜ್ಯಪಾಲರನ್ನ ಮುಜುಗರಕ್ಕೆ ಸಿಲುಕಿಸಿ, ಗೌರವಕ್ಕೆ ದಕ್ಕೆ ತರುವ ಕೆಲಸವನ್ನ ಅವರಿಂದಲೇ ಮಾಡಿಸೋ ಕೆಲಸವನ್ನ ಸರ್ಕಾರ ಬಿಡಬೇಕು. ರಾಜ್ಯಪಾಲರು ಒಂದು ವಾಕ್ಯ ಓದುತ್ತಾರೋ. ಒಂದು ಪ್ಯಾರಾ ಓದಬೇಕಾ ಅಥವಾ ಒಂದು ಪದದಲ್ಲಿ ಮುಗಿಸಬೇಕಾ ಎಂಬುದು ಅವರಿಗೆ ಬಿಟ್ಟದ್ದು, ಮುಜಗರಕ್ಕೀಡು ಮಾಡುವ ಅಂಶ ಹಾಕಿದ್ರು ಅವುಗಳನ್ನ ನೋಡಿಯೇ ಅವರು ಅವರ ಘನತೆ ಉಳಿಸಿಕೊಂಡಿದ್ದಾರೆ. ಅವರ ನಿರ್ಧಾರ-ತೀರ್ಮಾನವನ್ನ ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.
ಇನ್ನೊಂದು ತಿಂಗಳಲ್ಲಿ ಜಾತಿ ಜನಗಣತಿ ಬಿಡುಗಡೆ ವಿಚಾರ
ಜಾತಿ ಜನಗಣತಿ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಹಾಗೂ ಹಿಂದುಳಿದ ವಿಚಾರಕ್ಕೆ ಆಗಬೇಕು. ಇದು ಮೇಲ್ನೋಟಕ್ಕೆ ರಾಜಕೀಯ ಉದ್ದೇಶದಿಂದ ಕೂಡಿರುವಂತಿದೆ. ಸರ್ಕಾರದ ಲೋಪದೋಶಗಳು, ಸಮಸ್ಯೆಗಳು ಎದುರಾದಾಗ ಅದರಿಂದ ಜಾರಿಕೊಳ್ಳಲು ಇವೆಲ್ಲಾ ಬರುತ್ತದೆ. ಆಗ ಜಾತಿಗಣತಿ-ಜನಗಣತಿಯನ್ನ ಮುಂದಿಟ್ಟು ಜನರ ದಿಕ್ಕು ತಪ್ಪಿಸುವುದು ಬೇಡ. ನೀವು ಮಾಡಿ ಅದಕ್ಕೆ ನಮ್ಮ ಸ್ವಾಗತವಿದೆ, ಅದರೆ ಅದು ಯಾವ ರೀತಿ ಇದೆ. ಜಾತಿಗಣತಿ ಜಾರಿ ಮಾಡುವ ಉದ್ದೇಶ ಸರಿ ಇರಬೇಕು. ನಿಮ್ಮ ವರದಿ ಜನರ ಮುಂದೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದಾರೆ.
Chikmagalur
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧವಾಗಿ ಆಯ್ಕೆ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿರುವ ಎಂಎಲ್ಸಿ ಸಿ.ಟಿ ರವಿ ಇದೀಗ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.
ಕೊಪ್ಪ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿರುವ ದಿನೇಶ್ ಹೊಸೂರು ಅವರಿಗೆ ಉಪಾಧ್ಯಕ್ಷ ಸ್ಥಾನ ಲಭಿಸಿದೆ.

ಡಿಸಿಸಿ ಬ್ಯಾಂಕ್‌ನಲ್ಲಿ ಒಟ್ಟು 13 ನಿರ್ದೇಶಕ ಸ್ಥಾನಗಳಿದ್ದು, ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಕೊಪ್ಪದ ದಿನೇಶ್ ಹೊಸೂರು ಅವರು ಕಡೂರು ಶಾಸಕ ಕೆ.ಎಸ್. ಆನಂದ್ ವಿರುದ್ಧ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ.
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಚಿಕ್ಕಮಗಳೂರು ನಗರದ ರತ್ನಗಿರಿ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಘೋಷಣೆ ಕೂಗುವ ಮೂಲಕ ಕಾರ್ಯಕರ್ತರು ತಮ್ಮ ಸಂತಸ ವ್ಯಕ್ತಪಡಿಸಿದರು.
Chikmagalur
ಬಜೆಟ್: ಕರಾವಳಿ ಕೃಷಿಕರಿಗೆ ಬಂಪರ್ ಕೊಡುಗೆ
2026ರ ಬಜೆಟ್‌ನಲ್ಲಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ, ಕೋಕೋಗೆ ಆದ್ಯತೆ ನೀಡಲಾಗಿದೆ. ಶ್ರೀಗಂಧ ಪುನರುಜ್ಜೀವನ, ಕರಾವಳಿ ಬೆಳೆಗಳ ಉತ್ಪಾದಕತೆ ಹೆಚ್ಚಳ ಗುರಿ.
AI ಕೃಷಿ ಉಪಕರಣ ‘ಭಾರತ್ ವಿಸ್ತಾರ್’ ಮೂಲಕ ರೈತರಿಗೆ ಮಾಹಿತಿ ನೀಡಲು ಯೋಜನೆ. ಮೀನುಗಾರಿಕೆ ಮತ್ತು ಪಶುಸಂಗೋಪನೆ ವಲಯಕ್ಕೂ ಬಂಪರ್ ಕೊಡುಗೆ, ಮೌಲ್ಯ ಸರಪಳಿ ಬಲಪಡಿಸಿ, ಉದ್ಯೋಗ ಸೃಷ್ಟಿಗೆ ಒತ್ತು.
ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದಿನ ಬಜೆಟ್‌ನಲ್ಲಿ ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಾರರಿಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಶ್ರೀಗಂಧದ ವ್ಯವಸ್ಥಿತಿ ಕೃಷಿ, ಕೊಯ್ಲು, ಕೊಯ್ಲಿನ ನಂತರದ ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ.
ಕರಾವಳಿ ಪ್ರದೇಶಗಳಲ್ಲಿ ತೆಂಗು, ಗೋಡಂಬಿ ಮತ್ತು ಕೋಕೋ ಬೆಳೆಗಳ ಉತ್ಪಾದನೆಯನ್ನು ಹೆಚ್ಚಿಸಲು ವಿಶೇಷ ಕಾರ್ಯಕ್ರಮವನ್ನು ಘೋಷಿಸಲಾಗಿದೆ.
ಮೀನುಗಾರಿಕೆ ಮೌಲ್ಯ ಸರಪಳಿಯನ್ನು ಬಲಪಡಿಸಲು 500 ಜಲಾಶಯಗಳು ಮತ್ತು ಇತರ ಜಲಮೂಲಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಉಪಕ್ರಮಗಳನ್ನು ಪ್ರಸ್ತಾಪಿಸಿದೆ. ಈ ಪ್ರಯತ್ನಗಳು ಮಾರುಕಟ್ಟೆ ಸಂಪರ್ಕಗಳನ್ನು ಸುಧಾರಿಸುವುದು ಮತ್ತು ಸ್ಟಾರ್ಟ್‌ಅಪ್‌ಗಳು, ಮಹಿಳಾ ನೇತೃತ್ವದ ಗುಂಪುಗಳು ಮತ್ತು ಮೀನು ರೈತ ಉತ್ಪಾದಕ ಸಂಸ್ಥೆಗಳನ್ನು ಬೆಂಬಲಿಸುವುದರ ಮೇಲೆ ಕೇಂದ್ರೀಕರಿಸುತ್ತವೆ. ಪಶುಸಂಗೋಪನೆಗಾಗಿ, ಉದ್ಯಮಶೀಲತೆಯನ್ನು ಉತ್ತೇಜಿಸಲು, ಜಾನುವಾರು ಉದ್ಯಮಗಳನ್ನು ಆಧುನೀಕರಿಸಲು ಮತ್ತು ಡೈರಿ, ಕೋಳಿ ಮತ್ತು ಜಾನುವಾರು ವಲಯಗಳಲ್ಲಿ ಸಮಗ್ರ ಮೌಲ್ಯ ಸರಪಳಿಗಳನ್ನು ಹೆಚ್ಚಿಸಲು ಕ್ರೆಡಿಟ್-ಸಂಬಂಧಿತ ಸಬ್ಸಿಡಿ ಕಾರ್ಯಕ್ರಮವನ್ನು ಪರಿಚಯಿಸಲಾಗುವುದು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸಲು ಜಾನುವಾರು ರೈತ ಉತ್ಪಾದಕ ಸಂಸ್ಥೆಗಳ ರಚನೆಯನ್ನು ಸರ್ಕಾರ ಪ್ರೋತ್ಸಾಹಿಸುತ್ತದೆ.
-
Manglore2 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Cinema22 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Hassan2 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan3 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
National4 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State5 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya7 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Special23 hours agoಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಅನುದಾನ – ನಿಮ್ಮ ಹಳ್ಳಿಗೂ ಅವಕಾಶ!
