Connect with us

Kodagu

ಶಾಂತಿ, ಸುವ್ಯೆವಸ್ಥೆಗಾಗಿ ನಗರ ದಲ್ಲಿ ಪಥಸಂಚಲನ.

Published

on

ಕುಶಾಲನಗರ :ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ ಶಾಂತಿ ಕದಡುವ ಶಕ್ತಿ ಬಲಿಷ್ಠವಾಗುತ್ತಿದೆ. ಅದನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೊಡಗು ಪೊಲೀಸ್ ಮುಂದಾಗಿದ್ದು ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಕ್ಷಿಪ್ರಪಡೆ ಮತ್ತು ಪೊಲೀಸರು ಜಂಟಿಯಾಗಿ ಮತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುತ್ತಿದೆ. ಅದರಂತೆ ಭಾನುವಾರ ಕುಶಾಲನಗರದ ಬೈಚನಹಳ್ಳಿಯಿಂದ ಆರಂಭಿಸಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಮೂಲಕ ಅಯ್ಯಪ್ಪ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಸಾಗಿ, ದಂಡಿನಪೇಟೆ, ಮೈಸೂರು ಮಡಿಕೇರಿ ರಸ್ತೆ, ರಥ ಬೀದಿಯಲ್ಲಿ ಹೋಗಿ ಕುಶಾಲನಗರ ಡಿವೈಎಸ್ಪಿ ಕಚೇರಿ ತನಕ ಸಂಚರಸಿ ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಿದೆ ಎಂದು ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ತಿಳಿಸಿದರು.
ಬೆಳಗಾವಿ ಯೂನಿಟ್ ನ 97 ಬೆಟಾಲಿಯನ್ ನ 30 ಪೇದೆಗಳು ಸಹಾಯಕ ಕಮಾಡೆಂಟ್ ಅನೀಲ್ ಜಾದವ್ ನೇತೃತ್ವದಲ್ಲಿ ಮತ್ತು ಕೊಡಗು ಪೊಲೀಸರು 20 ಪೇದೆಗಳು ಪಥಸಂಚಲನ ನಡೆಸಿದರು.
ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ಕ್ಷಿಪ್ರಪಡೆಯ ನಿರೀಕ್ಷಕ ನರಸಿಂಹ ಮೂರ್ತಿ, ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್, ಸಂಚಾರಿ ಠಾಣೆಯ ಠಾಣಾಧಿಕಾರಿ ಗಣೇಶ್, ನಗರ ಠಾಣೆಯ ಗೀತಾ ಸೇರಿದಂತೆ ಪೊಲೀಸರು ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಕ್ಷಿಪ್ರ ಪಡೆಯ ಸಹಾಯಕ ಕಮಾಡೆಂಟ್ ಅನೀಲ್ ಜಾದವ್ ಮತ್ತು ಕ್ಷಿಪ್ರಪಡೆಯ ನಿರೀಕ್ಷಕ ನರಸಿಂಹ ಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ವರದಿ.ಟಿ.ಆರ್.ಪ್ರಭುದೇವ್
ಕುಶಾಲನಗರ

Continue Reading

Kodagu

ಕುಶಾಲನಗರ| ಕಾಲೇಜಿನಲ್ಲಿ ಮಾರಕಾಸ್ತ್ರ ಹಿಡಿದು ರಿಲ್ಸ್: ವಿದ್ಯಾರ್ಥಿ ವಿರುದ್ಧ ಎಫ್‌ಐಆರ್‌ ದಾಖಲು

Published

on

ಕುಶಾಲನಗರ: ನಗರದ  ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿದ್ಯಾರ್ಥಿ ವಿರುದ್ದ ಇಲ್ಲಿನ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಕಾಲೇಜಿನೊಳಗೆ ಲಾಂಗ್ ಹಿಡಿದು ರಿಲ್ಸ್ ಮಾಡಿದ್ದ, ಇದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ವ್ಯವಸ್ಥೆ ವಿರುದ್ಧ ಕೂಡ ಅಸಮಧಾನ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣ ನಿಗಾವಹಿಸಿದ ಪೊಲೀಸರು ನೀಡಿದ ದೂರಿನ ಮೇರೆಗೆ ಇಂದು ರಿಲ್ಸ್ ಮಾಡಿದ್ದ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು ಮಾಡಿ ಪೊಲೀಸರು ಮುಂದಿನ ಕ್ತಮ ಕೈಗೊಂಡಿದ್ದಾರೆ. ಪ್ರಕರಣ ದಾಖಲಾದ‌ ಹಿನ್ನೆಲೆಯಲ್ಲಿ ವಿದ್ಯಾರ್ಥಿ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆ ಮಾಡಿದ್ದಾನೆ.

Continue Reading

Kodagu

ತಾಲೂಕು ಮಟ್ಟದ ಪಂದ್ಯಾಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸಂತ ಅಂತೋಣಿ ಪ್ರೌಢ ಶಾಲೆ ವಿದ್ಯಾರ್ಥಿಗಳು

Published

on

ಪೊನ್ನಂಪೇಟೆ: ನಗರದ ಸಂತ ಅಂತೋಣಿ ಪ್ರೌಢ ಶಾಲೆ ಬಾಲಕ ಬಾಲಕಿಯರ ಬ್ಯಾಡ್ ಮಿಂಟನ್ ತಂಡವು ತಾಲೂಕು ಮಟ್ಟದ ಪಂದ್ಯಾಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ .

ಈ ತಂಡವನ್ನು ಪವನ್ ಮತ್ತು  ಪೌಶಿಕ ಅವರು ಉಸ್ತುವಾರಿಗಳಾಗಿ ತಂಡವನ್ನು ಮುನ್ನಡೆಸಿದರು.

Continue Reading

Kodagu

ವಿರಾಜಪೇಟೆ ಸುತ್ತಮುತ್ತ ಸೆ.11 ರಂದು ವಿದ್ಯುತ್ ವ್ಯತ್ಯಯ

Published

on

ಮಡಿಕೇರಿ : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಸೆಪ್ಟೆಂಬರ್. 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Continue Reading

Trending

error: Content is protected !!