Connect with us

Hassan

ಛತ್ರಪತಿ ಶಿವಾಜಿ ತತ್ವ ಆದರ್ಶ ಅನುಸರಿಸಿ: ಸಂಸದ ಶ್ರೇಯಸ್ ಪಟೇಲ್

Published

on

ಹಾಸನ : ಇಡೀ ದೇಶಕ್ಕೆ ಮಾದರಿಯಾದ ಛತ್ರಪತಿ ಶಿವಾಜಿ ಮಹಾರಾಜರ ತತ್ವ ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು.

ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರದಂದು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದ ಕ್ರಾಂತಿವೀರರು. ಮುಂದಿನ ಪೀಳಿಗೆಯವರು, ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಹೇಳಿದರು.

ಬೆಂಗಳೂರಿನ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಮಾತನಾಡಿ, ಛತ್ರಪತಿ ಶಿವಾಜಿಯವರು ಕೇವಲ ಮರಾಠ ಸಮಾಜಕ್ಕೆ ಸೀಮಿತವಲ್ಲ, ಇಡೀ ವಿಶ್ವಕ್ಕೆ ಆದರ್ಶ ಪುರುಷರಾಗಿದ್ದಾರೆ. ಶಿವಾಜಿ ರಾಷ್ಟ್ರ ನಾಯಕ, ಸ್ವರಾಜ್ಯ ಸ್ಥಾಪಕರಾಗಿದ್ದಾರೆ. ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ಆದರ್ಶ ಕೊಟ್ಟಿರುವ ಮಹಾಪುರುಷರಲ್ಲಿ ಶಿವಾಜಿ ಅವರೂ ಒಬ್ಬರು. ಶಿವಾಜಿವನ್ನು ನಾಲ್ಕು ಗೋಡೆಗೆ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಹೇಳಿದರು.

ಶಾಸಕ ಹೆಚ್.ಪಿ. ಸ್ವರೂಪ್ ಮಾತನಾಡಿ, ಶಿವಾಜಿಯವರು ವೀರ ಯೋಧರಾಗಿದ್ದು, ವಿಶ್ವ ಪ್ರಸಿದ್ಧರಾಗಿದ್ದಾರೆ. ಶಿವಾಜಿ ಅವರ ಪುತ್ತಳಿಯನ್ನು ಹಾಸನದಲ್ಲಿ ಶೀಘ್ರದಲ್ಲೇ ಅನಾವರಣ ಮಾಡೋಣ ಹಾಗೂ ಮರಾಠ ಸಮುದಾಯದ ಮಕ್ಕಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಿಕೊಡುವುದರ ಕುರಿತು ನೀವು ಕೂಡ ಮನವಿ ಮಾಡಿದ್ದೀರಿ ಅದನ್ನು ಶೀಘ್ರದಲ್ಲೇ ಶಾಸಕರ ನಿಧಿಯಿಂದ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮೊದಲು ೩೯೮ನೇ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪ, ಅಗ್ರಹಾರ, ಹಾಸನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಇಲ್ಲಿಂದ ಮೆರವಣಿಗೆ ಹೊರಟು ಹಳೆ ಬಸ್ ಸ್ಟ್ಯಾಂಡ್ ರಸ್ತೆ ಮಾರ್ಗವಾಗಿ ಕಲಾಭವನವರೆಗೆ ಮೆರವಣಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಚ್.ಪಿ. ತಾರಾನಾಥ್, ಹಾಸನ ಜಿಲ್ಲಾ ನೌಕರರ ಸಂಘದ ಗೌವಾಧ್ಯಕ್ಷರಾದ ಈ. ಕೃಷ್ಣೇಗೌಡ, ವಕೀಲರಾದ ವಿಜಯಕುಮಾರ್ ನಾರ್ವೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಹಾಸನ ಜಿಲ್ಲಾಧ್ಯಕ್ಷರಾದ ಎನ್ ಲೀಲಾಕುಮಾರ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎ.ವಿ. ರುದ್ರಪ್ಪಾಜಿರಾವ್ ಫೋರ್ಪಡೆ, ಗೌರವಾಧ್ಯಕ್ಷ ಹೆಚ್.ಜೆ. ತುಳಜಿರಾವ್ ಠಾಣ್ಗೆ, ಖಜಾಂಚಿ ಪ್ರಕಾಶ್, ನಿರ್ದೇಶಕ ಸುರೇಶ್ ಇತರರು ಉಪಸ್ಥಿತರಿದ್ದರು. ಯದೀಶ್ ಅವರು ಕಾರ್ಯಕ್ರಮ ನಿರೂಪಿಸಿದರು.

Continue Reading

Hassan

ಆಟೋ ಹತ್ತಿಸುವ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿ

Published

on

ಹಾಸನ: ಆಟೋ ಹತ್ತಿಸುವ ನೆಪದಲ್ಲಿ ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಮಾಂಗಲ್ಯ ಸರ ಸುಲಿಗೆ ಮಾಡಿಕೊಂಡು ಅಪರಿಚಿತ ಪರಾರಿಯಾಗಿರುವ ಘಟನೆ
ಸಾಲಗಾಮೆ ಹೋಬಳಿ ಸುಂಕದಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಎಂಬುವರು ಸಾಲಗಾಮೆ ಗೇಟ್‌ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು, ಏ.೧೮ ರಂದು ಊರಿನಿಂದ ಬಸ್ಸಿನಲ್ಲಿ ಹಾಸನಕ್ಕೆ ಹೋಗಿದ್ದರು.

ಅಲ್ಲಿಂದ ಹೂವಿನಹಳ್ಳಿ ಕಾವಲು ಹೊಸೂರಿಗೆ ಬಸ್ಸಿನಲ್ಲಿ ಬಂದು ಇಳಿದು ಸರ್ಕಾರಿ ಆಸ್ಪತ್ರೆಗೆ ಹೋದರು. ಆದರೆ ಗುಡ್‌ಫ್ರೈಡೆ ನಿಮಿತ್ತ ರಜೆ ಇದ್ದುದರಿಂದ ವಾಪಸ್ ಊರಿಗೆ ಹೋಗಲೆಂದು ಮಧ್ಯಾಹ್ನ ೧ ಗಂಟೆ ಸಮಯದಲ್ಲಿ ಆಸ್ಪತ್ರೆ ಮುಂದೆ ರಸ್ತೆಯ ಬದಿಯಲ್ಲಿ ನಿಂತಿದ್ದರು.

 

ಅಲ್ಲಿಗೆ ಬಂದ ಸುಮಾರು ೩೦-೩೫ ವರ್ಷ ವಯಸ್ಸಿನ ವ್ಯಕ್ತಿ, ಅಜ್ಜಿ ನಿಂತಿದ್ದಲ್ಲಿಗೆ ಬಂದು ಯಾವೂರವ್ವ ಎಂದು ಕೇಳಿ, ನನ್ನ ಬೈಕಿಗೆ ಬನ್ನಿ ಕರೆದುಕೊಂಡು ಹೋಗುತ್ತೇನೆಂದು ಹೇಳಿದ್ದಾನೆ.

ಮಗಳ ಊರಾದ ಅರೇಕಲ್ ಹೊಸಳ್ಳಿ ಗ್ರಾಮದ ಮನೆಗೆ ಹೋಗುತ್ತೇನೆಂದು ಹೇಳಿದಾಗ ಆಟೋದಲ್ಲಿ ಹೋಗಿ ಎಂದು ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದ ಆಸಾಮಿ, ರಸ್ತೆಯಲ್ಲಿ ಹೋಗುತ್ತಿದ್ದ ಆಟೋವನ್ನು ಅಡ್ಡಹಾಕಿ ನಿಲ್ಲಿಸಿ, ಅಜ್ಜಿ ಆಟೋದ ಒಳಕ್ಕೆ ಕಾಲಿಟ್ಟು ಹತ್ತುವಾಗ ಅವರ ಕೊರಳಿನಲ್ಲಿದ್ದ ಸುಮಾರು ೪೦ ಗ್ರಾಂ. ತೂಕದ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಮಾಂಗಲ್ಯ ಸರದ ಅಂದಾಜು ಬೆಲೆ ೩ ಲಕ್ಷ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Hassan

ಎಸ್‌ಡಿಎಂ ಜನಮಂಗಳ ಯೋಜನೆಯಡಿ ಉಚಿತ ಕಮೋಡಾ ವೀಲ್ ಚೇರ್ ವಿತರಣೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ಕಮೋಡಾ ವೀಲ್ ಚೇರ್ ವಿತರಣೆ ಮಾಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕಿನ ಯೋಜನಾಧಿಕಾರಿ ರತ್ನಾಕರ್ ಕೊಠಾರಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಅಂಗವಿಕಲರಿಗೆ ಅವಶ್ಯಕತೆ ಸಲಕರಣೆಗಳಾದ ವೀಲ್ ಚೇರ್, ಸೇಫ್ ವಾಕ‌ರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು ಉಪಕರಣಗಳನ್ನು ನೀಡಲಾಗಿದೆ. ಅಲ್ಲದೆ 105 ಮಂದಿ ಸದಸ್ಯರಿಗೆ ಪ್ರತಿ ತಿಂಗಳು ತಲಾ ಒಂದೊಂದು ಸಾವಿರ ಮಾಸಾಸನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪಾಳ್ಯ ಹೋಬಳಿಯ ಮೇಲ್ವಿಚಾರಕಿ ಯಶೋಧ ಮಾತನಾಡಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಗ್ರಾಮದ ನಿವಾಸಿಯಾದ ಬೈರಯ್ಯರ ಎಂಬುವವರು ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಯಿತು‌ ಎಂದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಸದಸ್ಯ ಮಲ್ಲಿಕಾರ್ಜುನ್, ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಫಲಾನುಭವಿಯ ಮನೆಯ ಸದಸ್ಯರು ಉಪಸ್ಥಿತರಿದ್ದರು.

Continue Reading

Hassan

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು

Published

on

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾವು

ಶಿವಪ್ರಸಾದ್ (32) ಸಾವನ್ನಪ್ಪಿದ ವ್ಯಕ್ತಿ

ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ರಾಮೇಶ್ವರ ಬಡಾವಣೆ‌ ಬಳಿ ಘಟನೆ

ದಿಡಗ ಗ್ರಾಮ ಪಂಚಾಯ್ತಿಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್

ಅತಿಯಾಗಿ ಮದ್ಯ ಸೇವಿಸುತ್ತಿದ್ದ ಶಿವಪ್ರಸಾದ್

ನಿನ್ನೆ ತಡರಾತ್ರಿ ಮದ್ಯಸೇವಿಸಿ ತಮ್ಮ KA-13-M-7321 ರೆನಾಲ್ಟೊ ಕಾರಿನೊಳಗೆ ಮಲಗಿದ್ದ ಶಿವಪ್ರಸಾದ್

ಕಾರಿನಲ್ಲೇ ಸಾವನ್ನಪ್ಪಿರುವ ಶಿವಪ್ರಸಾದ್

ಕಾರಿನೊಳಗೆ ಇದ್ದ ಕಾರಿನ ಕೀ

ಕಾರು ನಿಂತಿರುವುದನ್ನು ನಿಂತಲ್ಲೆ ನಿಂತಿರುವುದನ್ನು ನೋಡಿದ ಸ್ಥಳೀಯರು

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು

ಮ್ಯಾಕಾನಿಕ್ ಕರೆಸಿ ಕಾರಿನ ಡೋರ್‌ಲಾಕ್ ತೆಗೆದು ಪರಿಶೀಲಿಸಿದ ಪೊಲೀಸರು

 

ಕಾರಿನೊಳಗೆ ಸಾವನ್ನಪ್ಪಿದ್ದ ಶಿವಪ್ರಸಾದ್

ಶಿವಪ್ರಸಾದ್ ಆಲೂರು ತಾಲ್ಲೂಕಿನ, ಸಿದ್ದಾಪುರ ಗ್ರಾಮದವನು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Trending

error: Content is protected !!