Connect with us

Kodagu

ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್‌ಗೆ ಚಾಲನೆ

Published

on

ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಾಹ್ಮಾನ್ ವಲಿಯುಲ್ಲಾಹಿ ಅವರ ಉರೂಸ್ ಸಮಾರಂಭಕ್ಕೆ ಗಣ್ಯರು ಶ್ರದ್ಧಾ ಭಕ್ತಿಯ ಚಾಲನೆ ನೀಡಿದರು.

ಶುಕ್ರವಾರ ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನದೊಂದಿಗೆ ದರ್ಗಾಗೆ ತೆರಳಿದ ಸಮುದಾಯ ಬಾಂಧವರು ಕೊಡಗು ಜಿಲ್ಲಾ ನಾಹಿಬ್ ಖಾಝಿಗಳಾದ ಅಬ್ದುಲ್ಲಾ ಫೈಝಿ ದರ್ಗಾದ ಆವರಣದಲ್ಲಿ ನೂತನವಾಗಿ ಅಳವಡಿಸಿದ ಇಂಟರ್ ಲಾಕ್ ಲೋಕಾರ್ಪಣೆಗೊಳಿಸಿದರು. ಬಳಿಕ ಮಖಾಂ ಝಿಯಾರತ್‌ಗೆ ನೇತೃತ್ವ ವಹಿಸಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.

ಚೆರಿಯಪರಂಬು ಮೊಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ ಪರವಂಡ ಝುಬೈರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಜಮಾಅತ್ ಕಾರ್ಯದರ್ಶಿ ಪರವಂಡ ಸಿರಾಜ್ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಉರೂಸ್ ಸಮಾರಂಭವನ್ನು ೫ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ಆಚರಿಸಲು ತೀರ್ಮಾನಿಸಲಾಗಿದೆ. ಫೆ ೧೦ರ ಶನಿವಾರ ಸಂಜೆ ೭ಗಂಟೆಗೆ ಸರ್ವಧರ್ಮ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

ಫೆ.೧೨ಸೋಮವಾರ ಮಧ್ಯಾಹ್ನ ೨ ಗಂಟೆಗೆ ಬುರ್ದಾ ಮಜ್ಲಿಸ್ ಸಂಜೆ ೪ಗಂಟೆಗೆ ಮೌಲೂದ್ ಪಾರಾಯಣ ಹಾಗೂ ಸರ್ವಧರ್ಮೀಯರಿಗೆ ಅನ್ನದಾನ ಕಾರ್ಯಕ್ರಮ ನೆರವೇರಲಿದ್ದು ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಉರೂಸ್ ಸಮಾರಂಭವನ್ನು ಯಶಸ್ವಿಗೊಳಿಸಲು ಸಹಕರಿಸ ಬೇಕೆಂದು ಸಿರಾಜ್ ಮನವಿ ಮಾಡಿದರು.

ಈ ಸಂದರ್ಭ ಜಮಾಅತ್ ಉಪಾಧ್ಯಕ್ಷ ಪಿ.ಎ.ಹಾರಿಸ್, ಸಹ ಕಾರ್ಯದರ್ಶಿ ಕೆ.ಎ.ಮಾಹಿನ್, ಖಜಾಂಚಿ ಪಿ. ಎ. ಬಶೀರ್,ಕಕ್ಕುಂದಕಾಡು ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ಅಧ್ಯಕ್ಷ ಟಿ. ಎಸ್.ಮಂಜಯ್ಯ ಮತ್ತಿತರರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Kodagu

ಮತದಾನ ಜಾಗೃತಿಗೆ ಸೆಲ್ಫಿ ಸ್ಪರ್ಧೆ

Published

on

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಸೆಲ್ಫಿ contest ನಡೆಸಲು ತೀರ್ಮಾನಿಸಲಾಗಿರುತ್ತದೆ. ಈ ಸೆಲ್ಫಿ contest ನಲ್ಲಿ #Lets Vote Kodagu! ಶೀರ್ಷಿಕೆಯಲ್ಲಿ ಸ್ಪರ್ಧೆ ನಡೆಯಲಿದೆ.

ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿ, ನಗರದ ರಾಜಾಸೀಟು, ಸೋಮವಾರಪೇಟೆ ತಾಲೂಕು ಪಂಚಾಯತ್ ಕಚೇರಿ, ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಕಚೇರಿ, ವಿರಾಜಪೇಟೆ ತಹಸೀಲ್ದಾರ್ ಕಚೇರಿ, ಕುಶಾಲನಗರ ಕಾವೇರಿ ನಿಸರ್ಗಧಾಮ ಈ 06 ಸ್ಥಳಗಳಲ್ಲಿ ಮತದಾನ ಜಾಗೃತಿಗಾಗಿ ಸೆಲ್ಫಿ ಪಾಯಿಂಟ್‍ಗಳನ್ನು ನಿರ್ಮಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು ಯುವ ಮತದಾರರು ಪೋಟೊವನ್ನು ಕಳುಹಿಸಬಹುದಾಗಿದೆ.

ಅಲ್ಲದೆ ಏಪ್ರಿಲ್, 26 ರಂದು ಮತದಾನ ನಡೆಯಲಿರುವ ಆಯ್ದ ವಿಶೇಷ ಮತಗಟ್ಟೆಗಳಲ್ಲಿಯೂ ಸೆಲ್ಪಿ ಪಾಯಿಂಟ್ ಗಳನ್ನು ಸ್ಥಾಪಿಸಲಿದ್ದು, ಈ ಮತಗಟ್ಟೆಗಳಲ್ಲಿ ಮತದಾನ ಮಾಡಿದ ನಂತರ ಸೆಲ್ಪಿ ಪಾಯಿಂಟ್‍ನಲ್ಲಿ ಪೋಟೋಗಳನ್ನು ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ.


ಜಿಲ್ಲೆಯಾದ್ಯಂತ ಎಲ್ಲಾ ಸಾರ್ವಜನಿಕರು, ಮತದಾರರು ಮತದಾನದ ಪೂರ್ವದಲ್ಲಿ ನಾನು ಮತ ಚಲಾಯಿಸುತ್ತೇನೆ ಎಂಬ ಪರಿಕಲ್ಪನೆಯೊಂದಿಗೆ ತಾವಿರುವ ಸ್ಥಳದಲ್ಲಿಯೇ ವೈಯಕ್ತಿಕವಾಗಿ ಮತ್ತು ಗುಂಪಾಗಿ ಮತದಾನದಲ್ಲಿ ಪೂರ್ವದಲ್ಲಿ ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ವ್ಯಾಟ್ಸಪ್ ಮೊಬೈಲ್ ಸಂಖ್ಯೆ : 9741224300 ಗೆ ಕಳುಹಿಸಿ ಸ್ಪರ್ದೆಯಲ್ಲಿ ಭಾಗವಹಿಸಬಹುದಾಗಿದೆ. ಅಲ್ಲದೆ ಮತದಾನದ ದಿನದಂದು ಮತ ಚಲಾಯಿಸಿದ ನಂತರ “I VOTED’’ ಎಂಬ ಶೀರ್ಷಿಕೆಯೊಂದಿಗೆ ಸೆಲ್ಪಿ ಕ್ಲಿಕ್ಕಿಸಿ 9741224300 ವಾಟ್ಸಪ್ ಸಂಖ್ಯೆಗೆ ಕಳಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಇಂದಿನಿಂದ ಮತದಾನ ಪೂರ್ಣಗೊಳ್ಳುವವರೆವಿಗೂ ಈ ಸೆಲ್ಫಿ contest ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಮತದಾರರು/ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸುವ ಆಯ್ದ ಪೋಟೊಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು.

ಕೊಡಗು ಜಿಲ್ಲಾ ಸ್ವೀಪ್ ಸಮಿತಿಯ ವ್ಯಾಟ್ಸಪ್ ಸಂಖ್ಯೆಗೆ ಉತ್ತಮವಾಗಿ ಕ್ಲಿಕ್ಕಿಸಿದ ಒಂದು ಪೋಟೊವನ್ನು ಕಳುಹಿಸಲು ಅವಕಾಶ ನೀಡಲಾಗಿದೆ. #Lets Vote Kodagu! ಸೆಲ್ಫಿ ಸ್ಪರ್ಧೆಯಲ್ಲಿ ಭಾಗವಹಿಸಿ ಆಕರ್ಷಕ ಬಹುಮಾನ ಗೆಲ್ಲಿರಿ.

ನಿಬಂಧನೆಗಳು: ಒಬ್ಬ ವ್ಯಕ್ತಿ ಒಂದು ಪೋಟೊವನ್ನು ಮಾತ್ರವೇ ಕಳುಹಿಸತಕ್ಕದ್ದು. ಪೋಟೊ ಜೊತೆಯಲ್ಲಿ ತಮ್ಮ ಹೆಸರು, ಊರಿನ ಹೆಸರನ್ನು ಕಡ್ಡಾಯವಾಗಿ ಕಳುಹಿಸತಕ್ಕದ್ದು. ವಿಜೇತರನ್ನು ಆಯ್ಕೆ ಮಾಡುವಲ್ಲಿ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ನಿರ್ಣಯವೇ ಅಂತಿಮವಾಗಿರುತ್ತದೆ. ಯಾವುದೇ ಧರ್ಮ, ಜಾತಿ, ವ್ಯಕ್ತಿ, ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿ ಪರವಾಗಿ ಅಥವಾ ಪಕ್ಷದ ಗುರುತಿನೊಂದಿಗೆ ಕಳುಹಿಸುವ ಪೋಟೊವನ್ನು ಸ್ಫರ್ಧೆಗೆ ಪರಿಗಣಿಸಲಾಗುವುದಿಲ್ಲ. ವ್ಯಾಟ್ಸಪ್ ಮುಖಾಂತರವಾಗಿ ಮಾತ್ರವೇ ಪೋಟೊ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ತಿಳಿಸಿದ್ದಾರೆ.

Continue Reading

Kodagu

ಬಾರ್ ವೆಂಡರ್ ಕೊಲೆ – ಆರೋಪಿ ಬಂಧನ

Published

on

ವರದಿ : ಟಿ.ಆರ್ ಪ್ರಭುದೇವ್ ಕುಶಾಲನಗರ
=================
ಕುಶಾಲನಗರದ ಹೃದಯ ಭಾಗದಲ್ಲಿರುವ ಖಾಸಗಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ವೆಂಡರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ ನಡೆದ ಘಟನೆ ಭಾನುವಾರ ನಡೆದಿದೆ.
ಮೂಲತ ಸೋಮವಾರಪೇಟೆಯ ನಿವಾಸಿ ಸಂತೋಷ್ (42) ಕೊಲೆಯಾದ ದುರ್ದೈವಿ.
ಸಂತೋಷ್ ಹಲವಾರು ವರ್ಷಗಳಿಂದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಕೂಡ ಕೆಲಸದಲ್ಲಿ ಇದ್ದು ಬಾರ್ ಮುಚ್ವುವ ಸಂದರ್ಭದಲ್ಲಿ ಅಂದಾಜು ರಾತ್ರಿ 11.25 ರ ಸಮಯದಲ್ಲಿ ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದ ಜನತಾ ಕಾಲೋನಿಯ ನಿವಾಸಿ ಹರ್ಷ (33) ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದೆ. ಬಾರ್ ಸಮೀಪದಲ್ಲಿ ಕೈ ತೊಳೆಯುವ ಜಾಗದಲ್ಲಿ ಹರ್ಷ ಸಂತೋಷ್ ಮೇಲೆ ದೊಡ್ಡ ಬಿಯರ್ ಗ್ಲಾಸ್‌ನಿಂದ ತಲೆಗೆ ಹೊಡೆದು ನಂತರ ಚೂರಾದ ಗ್ಲಾಸ್‌ನ ಹರಿತವಾದ ಭಾಗದಿಂದ ಕುತ್ತಿಗೆ ಇರಿದಿದ್ದಾನೆ ಎಂದು ಪೋಲಿಸ್ ಮೂಲಗಳು ತಿಳಿಸಿದೆ.
ಘಟನೆಯಲ್ಲಿ ತೀವ್ರವಾಗಿ ರಕ್ತಸ್ರಾವಗೊಂಡ ಸಂತೋಷ್‌ನನ್ನು ಹೋಟೆಲ್ ಮಾಲೀಕರು ಕೂಡಲೇ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಕೇಂದ್ರ ಮಡಿಕೇರಿಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಸಂತೋಷ್ ಮೃತಪಟ್ಟಿದ್ದಾರೆ.
ಆರೋಪಿಹರ್ಷನನ್ನು ಪೋಲಿಸ್ ಬಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಎಎಸ್‌ಪಿ.ಸುಂದರ್ ರಾಜ್, ಡಿವೈಎಸ್‌ಪಿ ಗಂಗಾಧರಪ್ಪ, ಸಿ.ಐ ಪ್ರಕಾಶ್ ಭೇಟಿ ಪರಿಶೀಲನೆ ನಡೆಸಿದರು.

Continue Reading

Kodagu

ನೆಲಜಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರು ದ್ವಂಸ

Published

on

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಬಳಿಯ ನೆಲಜಿ ಗ್ರಾಮದ ಮನೆಯಂಗಳದ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರನ್ನು ಕಾಡಾನೆಗಳು ದಾಳಿ ನಡೆಸಿ ಧ್ವಂಸಗೊಳಿಸಿದ ಘಟನೆ ನಡೆದಿದೆ.

ನೆಲಜಿ ಗ್ರಾಮದ ಕೈಬುಲಿರ ದಿನೇಶ್ ಎಂಬುವವರ ಮನೆಯ ಪಕ್ಕದ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ದಾಳಿನಡೆಸಿದ ಕಾಡಾನೆಗಳು ದ್ವಂಸಗೋಳಿಸಿದೆ. ಇದರಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು ಶೆಡ್ ನ ಮೇಲ್ಚಾವಣಿಗೂ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ.
ಸೋಮವಾರ ಮುಂಜಾನೆ ನೆಲಜಿ ಗ್ರಾಮದ ಕೈಬುಲಿರ ಐನ್ ಮನೆ ಬಳಿಯಲ್ಲಿ ಕಾಡಾನೆಗಳ ಹಿಂಡು ಕಂಡುಬಂದಿದ್ದು ಮನೆಯ ಆವರಣದಲ್ಲೂ ಕಾಡಾನೆಗಳು ಜಾಲಾಡಿ ನಷ್ಟ ಉಂಟು ಮಾಡಿದೆ.

ನೆಲಜಿ ಗ್ರಾಮದಲ್ಲಿ ಇತ್ತೀಚೆಗೆ ಕಾಡಾನೆಗಳು ನಿರಂತರ ಧಾಳಿ ನಡೆಸುತ್ತಾ ಗ್ರಾಮಸ್ಥರ ತೋಟಗಳಿಗೆ ಲಗ್ಗೆ ಇಟ್ಟು ಲಕ್ಷಾಂತರ ರುಪಾಯಿ ನಷ್ಟ ಉಂಟುಮಾಡಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಕೂಡಲೇ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳದೇ ಹೋದರೆ ನೆಲಜಿ ಮುಖ್ಯ ರಸ್ತೆಯನ್ನು ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Continue Reading

Trending

error: Content is protected !!