Connect with us

Mysore

ಪುರಸಭೆ ವಂಚನೆ ಪ್ರಕರಣ: ಸಿಐಡಿ ತನಿಖೆಯಾಗಬೇಕೆಂದು ಆಗ್ರಹಿಸಿದ ಡಾ. ಎ. ಎಸ್.ಚಂದ್ರಶೇಖರ್ 

Published

on

ತಿ.ನರಸೀಪುರ: ಇತ್ತೀಚಿಗೆ ಪುರಸಭೆಯಲ್ಲಿ ನಡೆದಿರುವ ಬಹುಕೋಟಿಗಳ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಿ ದಸಂಸ ಸಂಚಾಲಕ ಡಾ.ಆಲಗೂಡು ಎಸ್.ಚಂದ್ರಶೇಖರ್ ಅಗ್ರಹಿಸಿದರು.

ಪಟ್ಟಣದ ಮಿನಿವಿಧಾನದ ಮುಂದೆ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ ಹಮ್ಮಿಕೊಂಡಿದ್ದ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪುರಸಭೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಬಗ್ಗೆ ಸಿಐಡಿ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕಲ್ಪಿಸಿಕೊಡಬೇಕು. ಆರೋಪಿ ಟಿ. ಎಂ. ನಂಜುಂಡಸ್ವಾಮಿ ಮಾಡಿಸಿರುವ ಎಲ್ಲ ಖಾತೆಗಳನ್ನು ರದ್ದುಪಡಿಸಬೇಕು.ಅಲ್ಲದೆ ನಂಜುಂಡಸ್ವಾಮಿ ಮತ್ತು ಆತನ ಸಂಬಂಧಿಕರ ಹೆಸರಿನಲ್ಲಿರುವ ಅಕ್ರಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಪಾರದರ್ಶಕ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.

ತಿ.ನರಸೀಪುರ ಪುರಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಸ್ತುವಾರಿ ಸಚಿವ ಮಹದೇವಪ್ಪ ಇಬ್ಬರೂ ಪ್ರತಿನಿಧಿಸುವ ಕ್ಷೇತ್ರವಾಗಿರುವುದರಿಂದ ಇಷ್ಟೊಂದು ದೊಡ್ಡಮಟ್ಟದ ವಂಚನೆ ಪ್ರಕರಣ ನಡೆದಿರುವುದರಿಂದ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹದೇವಪ್ಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು. ಇಲ್ಲವಾದಲ್ಲಿ ಇವರ ಕೃಪಾಕಟಾಕ್ಷದಿಂದಲೇ ವಂಚನೆ ಪ್ರಕರಣ ನಡೆದಿರಬಹುದು ಎಂಬ ತಪ್ಪು ಕಲ್ಪನೆ ಜನರಲ್ಲಿ ಮೂಡಬಹುದು ಎಂದರು.

40 ಕೋಟಿ ರೂ.ಗಳ ತೆರಿಗೆ ವಂಚನೆ ಆಗಿರುವ ಬಗ್ಗೆ ಸ್ವತಃ ಪುರಸಭೆ ಮುಖ್ಯಾಧಿಕಾರಿ ಬಿ.ಕೆ. ವಸಂತಕುಮಾರಿ ಖಾಸಗಿಯೊಬ್ಬರ ಜತೆ ಮಾತನಾಡಿರುವ ಸಂಭಾಷಣೆ ಹಲವು ಕಡೆ ಹರಿದಾಡುತ್ತಿದ್ದು, ಆಡಿಯೋ ಸತ್ಯಾಸತ್ಯತೆಯನ್ನು ಪರಾಮರ್ಶಿಸಲು ಉನ್ನತಮಟ್ಟದ ತನಿಖೆ ಅವಶ್ಯಕತೆ ಇರುತ್ತದೆ. ಹಾಗಾಗಿ ವಂಚನೆ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರ ಮಾಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ತಾಲೂಕು ಸಂಚಾಲಕ ಕೆಂಪಯ್ಯನಹುಂಡಿ ರಾಜು, ಮನೋಜ್ ಕುಮಾರ್, ಕೊಳತ್ತೂರು ಪ್ರಭಾಕರ್, ಜಿಲ್ಲಾ ಮುಖಂಡ ಕನ್ನಾಯಕನಹಳ್ಳಿ ಮರಿಸ್ವಾಮಿ, ಗೋವಿಂದರಾಜು, ರಾಜಪ್ಪ, ಕುಮಾರ್, ಶಿವಕುಮಾರ್, ಗವಿಸಿದ್ದಯ್ಯ, ಪ್ರಸನ್ನ, ಪರಶುರಾಮ್, ಜಯಣ್ಣ, ರೈತ ಮುಖಂಡರಾದ ಕಳ್ಳಿಪುರ ಮಹದೇವಸ್ವಾಮಿ, ಬನ್ನೂರು ರಾಮಕೃಷ್ಣ, ತಲಕಾಡು ಚೆಲುವರಾಜು, ಅತ್ತಳ್ಳಿ ಶಿವನಂಜು, ಮೂಗೂರು ಶಾಂತ ನಾಗರಾಜು ಇತರರು ಪಾಲ್ಗೊಂಡಿದ್ದರು.

ಅಧಿಕಾರಿಗಳನ್ನೂ ತನಿಖೆ ನಡೆಸಲಿ

ದೊಡ್ಡ ಮಟ್ಟದ ವಂಚನೆ ಪ್ರಕರಣವನ್ನು ಏಕ ವ್ಯಕ್ತಿಯು ನಡೆಸಲು ಸಾಧ್ಯವಿಲ್ಲ. ಹಗರಣದಲ್ಲಿ ಪುರಸಭೆಯ ಅಧಿಕಾರಿಗಳು ಶಾಮೀಲಾಗಿರುವ ಸಾಧ್ಯತೆಯಿದ್ದು, ಪುರಸಭೆಯ ಮುಖ್ಯಾ ಧಿಕಾರಿ, ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಮತ್ತು ಸಂಬಂಧಿತ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಡಾ. ಆಲಗೂಡು ಎಸ್.ಚಂದ್ರಶೇಖರ್ ಒತ್ತಾಯಿಸಿದರು.

Continue Reading

Mysore

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವಾ ಮನೋಭಾವ,ಇಂದಿನ ಸಮಾಜಕ್ಕೂ ಆದರ್ಶ: ಯದುವೀರ್‌

Published

on

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಇಂದು ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಅವರ ಸೇವಾ ಮನೋಭಾವ, ಅಭಿವೃದ್ಧಿ ದೃಷ್ಟಿಕೋನ ಮತ್ತು ಸಾಮಾಜಿಕ ನ್ಯಾಯದ ಕೊಡುಗೆಗಳನ್ನು ಸ್ಮರಿಸಲಾಯಿತು.

ಈ ಕಾರ್ಯಕ್ರಮವನ್ನು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವಾ ಮನೋಭಾವ ಮತ್ತು ದೂರದೃಷ್ಟಿ ಇಂದಿನ ಸಮಾಜಕ್ಕೂ ಆದರ್ಶವಾಗಿವೆ ಎಂದು ಹೇಳಿದರು.

ಸಮಾಜದಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ ಎಂದು ಅವರು ಒತ್ತಿಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ ಅವರು ಮಾತನಾಡಿ, ನಾಲ್ವಡಿ ಒಡೆಯರ್ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದರ ಜೊತೆಗೆ ಕೆಆರ್‌ಎಸ್ ಅಣೆಕಟ್ಟಿನ ನಿರ್ಮಾಣಕ್ಕೆ ವೈಯಕ್ತಿಕ ತ್ಯಾಗವನ್ನೂ ಮಾಡಿದ್ದಾರೆ. ಮೈಸೂರು ಮತ್ತು ಮಂಡ್ಯ ಪ್ರದೇಶಗಳ ಅಭಿವೃದ್ಧಿಯಲ್ಲಿ ಎಂ. ವಿಶ್ವೇಶ್ವರಯ್ಯ ಅವರ ಜೊತೆಗೆ ನಾಲ್ವಡಿ ಒಡೆಯರ್ ಅವರ ಪಾತ್ರವೂ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ನಿವೃತ್ತ ಪ್ರಾಂಶುಪಾಲ ಹಾಗೂ ಲೇಖಕ ಸಿದ್ದಸ್ವಾಮಿ ಅವರು ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಮಿಲ್ಲರ್ ಸಮಿತಿಯನ್ನು ರಚಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಅಡಿಪಾಯ ಹಾಕಿದರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತಾತ್ಮಕ ಸಾಧನೆಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವನ್ನು ಎಲ್ಲರೂ ಒತ್ತಿಹೇಳಿದರು.

Continue Reading

Mysore

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ| ಜಿಲ್ಲೆಯಲ್ಲಿ ಶೇ.96 ಮ್ಯಾಪಿಂಗ್ ಪೂರ್ಣ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

Published

on

ಮೈಸೂರು: ಜಿಲ್ಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಶೇ.96ರಷ್ಟು ಮ್ಯಾಪಿಂಗ್ ಪೂರ್ಣಗೊಂಡಿರುವ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು. ಪ್ರಕ್ರಿಯೆಯ ವೇಳಾಪಟ್ಟಿಯಂತೆ ಜೂನ್ 20 ರಿಂದ 29 ರವರೆಗೆ ಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯ ನಡೆಯಲಿದೆ. ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರಂ ವಿತರಣೆ ಮತ್ತು ಸಂಗ್ರಹ ಕಾರ್ಯ ನಡೆಸಲಿದ್ದಾರೆ.

ಜುಲೈ 29 ರಂದು ಮತಗಟ್ಟೆಗಳ ರೇಷನಲೈಸೇಶನ್ ಪ್ರಕ್ರಿಯೆ ನಡೆಯಲಿದ್ದು, ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಇರಲಿದೆ. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.

ಅರ್ಹ ಮತದಾರರು ನಿಖರ ಮಾಹಿತಿ ನೀಡಿ ಫಾರಂ ಭರ್ತಿ ಮಾಡಬೇಕು. ತಪ್ಪು ಮಾಹಿತಿ ನೀಡುವುದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. BLOಗಳು ಕನಿಷ್ಠ ಮೂರು ಬಾರಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಹಾಗೂ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವೆಂದು ಅವರು ಮನವಿ ಮಾಡಿದ್ದಾರೆ.

2002ರ ಮತದಾರರ ಪಟ್ಟಿಯನ್ನು ಆಧಾರವಾಗಿ ತೆಗೆದುಕೊಂಡು 2025ರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Continue Reading

Mysore

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಪುಷ್ಪಾರ್ಚನೆ ಹಾಗೂ ಅನ್ನಸಂತರ್ಪಣೆ

Published

on

ಮೈಸೂರು: ನಗರದ ಅಶೋಕಪುರಂನ ಅಶೋಕ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಾಜಿ ಉಪಮೇಯರ್  ವಿ. ಶೈಲೇಂದ್ರ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.

ಬಳಿಕ ಸಾರ್ವಜನಿಕರಿಗೆ ಅನ್ನಸಂತರ್ಪಣೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಉಪಮೇಯರ್ ವಿ. ಶೈಲೇಂದ್ರ, ಮಾಜಿ ನಗರ ಪಾಲಿಕೆ ಸದಸ್ಯ ಜಗದೀಶ್, ಬಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಡಿ. ಮುರಳಿಧರ್, ಸುಶೀಲ, ಮಹದೇವು, ಮಹೇಶ್, ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ರವಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರುದ್ರಮೂರ್ತಿ ಹಾಗೂ ನಿಖಿಲೇಶ್ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Continue Reading

Trending

error: Content is protected !!