State
ಮುನಿರತ್ನನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು: ಕೆ.ಎನ್ ರಾಜಣ್ಣ
ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್ ಕಾರಣವೇ ಹೊರತು ಬೇರೆ ಯಾರೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಆರೋಪದ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಮುನಿರತ್ನನನ್ನೇ ಮೊದಲು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಯಾಕೆಂದರೆ ಮುನಿರತ್ನ ಮೊದಲೆಲ್ಲಾ ಡಿಕೆಶಿ ಜೊತೆಯಲ್ಲೇ ಇದ್ದರು. ಆದ್ದರಿಂದ ಅವರನ್ನು ಮಂಪರು ಪರೀಕ್ಷೆ ಮಾಡಿಸಿ ಎಂದರು.
State
ಸ್ಟಾರ್ ವಾರ್ | 15 ಇನ್‌ಸ್ಟಾಗ್ರಾಂ ಐಡಿ, 150 ಪೋಸ್ಟ್ ವಿರುದ್ದ ದೂರು ನೀಡಿದ ವಿಜಯಲಕ್ಷ್ಮೀ ದರ್ಶನ್
ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕೆಲ ದಿನಗಳ ಹಿಂದೆ ದಾವಣಗೆರೆಯಲ್ಲಿ ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ನೀಡಿದ ನಂತರ ವಿಜಯಲಕ್ಷ್ಮೀ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. ನಿಂದನೆಯ ವಿರುದ್ಧ ಕಿಡಿಕಾರಿರುವ ವಿಜಯಲಕ್ಷ್ಮೀ 15 ಇನ್‌ಸ್ಟಾಗ್ರಾಂ ಐಡಿ ಹಾಗೂ 150ಕ್ಕೂ ಅಧಿಕ ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ದೂರು ನೀಡಿದ್ದಾರೆ.
Special
ಮನೆಬಾಗಿಲಿಗೆ ಮಿನಿ ಆಸ್ಪತ್ರೆ| ‘ಆರೋಗ್ಯ ಸೇತು’ ಸಂಚಾರಿ ಆರೋಗ್ಯ ಘಟಕ ಯೋಜನೆ: ಸಂಪೂರ್ಣ ಮಾಹಿತಿ ಇಲ್ಲಿದೆ..
ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸರಿಯಾದ ಸಮಯಕ್ಕೆ ವೈದ್ಯಕೀಯ ಸೇವೆ ದೊರಕದೆ ಅನೇಕ ಬಾರಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ “ಆರೋಗ್ಯ ಸೇತು” ಎಂಬ ಸಂಚಾರಿ ಆರೋಗ್ಯ ಘಟಕ ಯೋಜನೆಯನ್ನು ಜಾರಿಗೆ ತಂದಿದೆ.
ಆರೋಗ್ಯ ಸೇತು ಯೋಜನೆ ಎಂದರೇನು?
ಆರೋಗ್ಯ ಸೇತು ಯೋಜನೆ ಅಡಿಯಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಸಂಚಾರಿ ವೈದ್ಯಕೀಯ ವಾಹನಗಳನ್ನು (Mobile Health Units) ಹಳ್ಳಿಗಳಲ್ಲಿ ಸಂಚರಿಸುವಂತೆ ಮಾಡಲಾಗಿದೆ. ಈ ವಾಹನಗಳಲ್ಲೇ ಅಗತ್ಯ ವೈದ್ಯಕೀಯ ಉಪಕರಣಗಳು, ಔಷಧಿಗಳು ಹಾಗೂ ತರಬೇತಿ ಪಡೆದ ಆರೋಗ್ಯ ಸಿಬ್ಬಂದಿ ಇದ್ದು, ಮಿನಿ ಆಸ್ಪತ್ರೆಯಂತೆಯೇ ಸೇವೆ ನೀಡುತ್ತವೆ.

ಯೋಜನೆಯ ಪ್ರಮುಖ ಉದ್ದೇಶ:
•ಗ್ರಾಮೀಣ ಜನರಿಗೆ ಮೂಲಭೂತ ಆರೋಗ್ಯ ಸೇವೆ ಸುಲಭವಾಗಿ ಒದಗಿಸುವುದು
•ದೂರದ ಸರ್ಕಾರಿ ಆಸ್ಪತ್ರೆಗಳ ಮೇಲೆ ಇರುವ ಒತ್ತಡ ಕಡಿಮೆ ಮಾಡುವುದು
•ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಉಂಟಾಗುವ ಸಾವು-ನೋವುಗಳನ್ನು ತಗ್ಗಿಸುವುದು
•ಆರೋಗ್ಯ ಜಾಗೃತಿ ಹೆಚ್ಚಿಸುವುದು
ಸಂಚಾರಿ ಆರೋಗ್ಯ ಘಟಕಗಳಲ್ಲಿ ಸಿಗುವ ಸೇವೆಗಳು:
* ಸಾಮಾನ್ಯ ಕಾಯಿಲೆಗಳ ತಪಾಸಣೆ
* ವೈದ್ಯರಿಂದ ಪ್ರಾಥಮಿಕ ಚಿಕಿತ್ಸಾ ಸಲಹೆ
* ರಕ್ತದ ಒತ್ತಡ, ಸಕ್ಕರೆ, ಜ್ವರ ಮುಂತಾದ ಪರೀಕ್ಷೆಗಳು
* ಗಾಯಗಳು ಮತ್ತು ಸಣ್ಣ ಅಪಘಾತಗಳಿಗೆ ಚಿಕಿತ್ಸೆ
* ಅಗತ್ಯ ಔಷಧಿಗಳ ಉಚಿತ ವಿತರಣೆ
* ಆರೋಗ್ಯ ಹಾಗೂ ಸ್ವಚ್ಛತೆ ಕುರಿತ ಜಾಗೃತಿ ಮಾಹಿತಿ

ಯೋಜನೆ ಹೇಗೆ ಕಾರ್ಯನಿರ್ವಹಿಸುತ್ತದೆ?
ಪ್ರತಿ ಜಿಲ್ಲೆಯಲ್ಲೂ ನಿರ್ದಿಷ್ಟ ಸಂಖ್ಯೆಯ ಸಂಚಾರಿ ಆರೋಗ್ಯ ಘಟಕಗಳನ್ನು ನಿಯೋಜಿಸಲಾಗಿದೆ. ಈ ವಾಹನಗಳು ನಿಗದಿತ ದಿನಗಳಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಿ ಸೇವೆ ನೀಡುತ್ತವೆ. ಸ್ಥಳೀಯರು ಯಾವುದೇ ಶುಲ್ಕವಿಲ್ಲದೆ ಪ್ರಾಥಮಿಕ ಚಿಕಿತ್ಸೆ ಪಡೆಯಬಹುದು
ಆರೋಗ್ಯ ಸೇತು ಯೋಜನೆಯ ವಿಶೇಷತೆಗಳು:
•ಮನೆಬಾಗಿಲಿಗೆ ಆರೋಗ್ಯ ಸೇವೆ
•ಉಚಿತ ಚಿಕಿತ್ಸೆ ಮತ್ತು ಔಷಧಿ
•ಬಡ ಮತ್ತು ವೃದ್ಧರಿಗೆ ವರದಾನ
•ತುರ್ತು ಸಂದರ್ಭಗಳಲ್ಲಿ ತಕ್ಷಣದ ನೆರವು
ಆರೋಗ್ಯ ಸೇತು ಸಂಚಾರಿ ಘಟಕ ಯೋಜನೆ ಕರ್ನಾಟಕ ಸರ್ಕಾರದ ಜನಪರ ಹಾಗೂ ದೂರದೃಷ್ಟಿಯ ಯೋಜನೆಯಾಗಿದೆ. ಆಸ್ಪತ್ರೆಯೇ ಮನೆಬಾಗಿಲಿಗೆ ಬರುವ ಈ ವ್ಯವಸ್ಥೆ ಗ್ರಾಮೀಣ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ. ಪ್ರತಿಯೊಬ್ಬ ನಾಗರಿಕನಿಗೂ ಆರೋಗ್ಯ ಸೇವೆ ತಲುಪಬೇಕು ಎಂಬ ಉದ್ದೇಶವನ್ನು ಈ ಯೋಜನೆ ಯಶಸ್ವಿಯಾಗಿ ಸಾಕಾರಗೊಳಿಸುತ್ತಿದೆ.
Chamarajanagar
ತಾಯಿ ಮತ್ತು ನಾಲ್ಕು ಮರಿ ಹುಲಿಗಳ ಸಂಚಾರ: ನಿಗಾ ವಹಿಸುವಂತೆ ಅರಣ್ಯ ಸಚಿವ ಖಂಡ್ರೆ ಆದೇಶ
ಬೆಂಗಳೂರು: ಚಾಮರಾನಗರ ತಾಲೂಕಿನ ನಂಜೆದೇವನಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಅವರು, ಹುಲಿಗಳು ಖಾಸಗಿ ಜಮೀನಿನಲ್ಲಿ ಕಾಣಿಸಿಕೊಂಡಿರುವ ಕಾರಣ ಜನರು ಭಯಭೀತರಾಗಿದ್ದು, ಅಮೂಲ್ಯವಾದ ಜೀವಹಾನಿ ಆಗದ ರೀತಿಯಲ್ಲಿ ಮತ್ತು ವನ್ಯಜೀವಿಗಳಿಗೂ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸುವಂತೆ ಅವರು ನಿರ್ದೇಶನ ನೀಡಿದರು.

ಹುಲಿಗಳ ಚಲನವಲನದ ಮೇಲೆ ಸತತ ನಿಗಾ ಇಡುವುದು ಅತ್ಯಗತ್ಯವಾಗಿದ್ದು, ಡ್ರೋನ್ ಕ್ಯಾಮರಾಗಳು, ಥರ್ಮಲ್ ಕ್ಯಾಮರಾಗಳನ್ನು ಬಳಸಿ ಹುಲಿಗಳು ಎಲ್ಲಿವೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಗ್ರಾಮಸ್ಥರಿಗೆ ಕೂಡಲೇ ಮಾಹಿತಿ ನೀಡಬೇಕು ಮತ್ತು ಅಲ್ಲಿಗೆ ಅರಣ್ಯ ಇಲಾಖೆಯ ತಂಡಗಳನ್ನು ಕಳುಹಿಸಿ ಯಾವುದೇ ಅನಾಹುತ ಆಗದಂತೆ ಕ್ರಮ ವಹಿಸಬೇಕು ಎಂದರು.
5 ಹುಲಿಗಳ ಕಾರ್ಯಾಚರಣೆ ಸುಲಭದ ಕಾಯಕವಲ್ಲ ಎಂಬುದು ತಮಗೂ ಅರಿವಿದೆ. ಹುಲಿಗಳನ್ನು ಹಿಡಿಯುವಾಗ ಹುಲಿಗಳು ಕಾರ್ಯಾಚರಣೆ ತಂಡದ ಮೇಲೆ ದಾಳಿ ಮಾಡದಂತೆ ಮತ್ತು ಬಡಗಲಪುರದಲ್ಲಿ ಹುಲಿ ರಕ್ಷಣೆ ಕಾರ್ಯಾಚರಣೆ ವೇಳೆ ವ್ಯಕ್ತಿಯ ಮೇಲೆ ದಾಳಿ ಆದಂತಹ ಪ್ರಕರಣಗಳು ಮರುಕಳಿಸದಂತೆ ಹಿರಿಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದರು.

ಹೆಚ್ಚುವರಿ ಆನೆ, ಪಶುವೈದ್ಯರ ನಿಯೋಜನೆಗೂ ಸೂಚನೆ:
5 ಹುಲಿಗಳ ರಕ್ಷಣೆ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ಸಲಕರಣೆ, ಹೆಚ್ಚುವರಿ ಪಶುವೈದ್ಯರು, ಶಾರ್ಪ್ ಶೂಟರ್ ಗಳನ್ನು ಸಹ ನಿಯೋಜನೆ ಮಾಡುವಂತೆ ಹಾಗೂ ಹೆಚ್ಚುವರಿಯಾಗಿ ಆನೆಗಳನ್ನು ತಕ್ಷಣವೇ ತರಿಸಿಕೊಳ್ಳುವಂತೆಯೂ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟವಾಗಿ ತಿಳಿಸಿದರು.
ಜನರ ಜೀವ ಪರಮೋಚ್ಚ:
ಜನರ ಜೀವದ ಸುರಕ್ಷತೆ ಅತ್ಯಂತ ಪರಮೋಚ್ಚವಾದ್ದು, ಅದೇ ವೇಳೆ ವನ್ಯಜೀವಿಗಳ ರಕ್ಷಣೆಯೂ ಅಷ್ಟೇ ಮುಖ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ನಡೆಸಬೇಕು, ಸಿಬ್ಬಂದಿಯ ಸುರಕ್ಷತೆಗೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಜೊತೆಗೆ ಜನರು ಯಾರೂ ಕಾರ್ಯಾಚರಣೆ ಸ್ಥಳಕ್ಕೆ ಬಾರದಂತೆ ಸೆಕ್ಷನ್ 144 ನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಿದರು.
ಇ-ಗಸ್ತು ಹೆಚ್ಚಿಸಬೇಕು. ಎಲ್ಲ ಅರಣ್ಯ ಗಸ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಮೊಬೈಲ್ ನಲ್ಲಿ ಈ ಆಪ್ ಅಳವಡಿಸಿ, ಗಸ್ತಿನ ಮೇಲೆ ಕೇಂದ್ರ ಕಚೇರಿಯಿಂದ ನಿಗಾ ಇಡಬೇಕು. ಗಸ್ತಿನಲ್ಲಿ ಯಾವುದೇ ಲೋಪ ಆಗದಂತೆ ಪೂರ್ಣ ಪ್ರಮಾಣದಲ್ಲಿ ಎಚ್ಚರಿಕೆ ವಹಿಸಬೇಕು ಹಾಗೂ ಕಮಾಂಡ್ ಕೇಂದ್ರಗಳನ್ನು ವಿಳಂಬವಿಲ್ಲದೆ ಎಲ್ಲೆಡೆ ಕಾರ್ಯಾರಂಭ ಮಾಡಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗ ನಾವು ಕೈಗೊಳ್ಳುತ್ತಿರುವುದೆಲ್ಲವೂ ತಾತ್ಕಾಲಿಕ ಕ್ರಮಗಳಾಗಿದ್ದು, ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬಾರದಂತೆ ಶಾಶ್ವತ ಪರಿಹಾರ ಏನು ಎಂಬ ಬಗ್ಗೆ ಅಧಿಕಾರಿಗಳು ತಜ್ಞರೊಂದಿಗೆ ಚರ್ಚಿಸಿ ರೂಪುರೇಶೆ ತಯಾರಿಸಿ ವರದಿ ಸಲ್ಲಿಸಲು ಸೂಚಿಸಿದರು.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಹಿರಿಯ ಅಧಿಕಾರಿಗಳಾದ ಮನೋರ್ ರಾಜನ್, ಬಿಸ್ವಜಿತ್ ಮಿಶ್ರಾ ಮತ್ತು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಮತ್ತಿತರರು ಪಾಲ್ಗೊಂಡಿದ್ದರು.
-
Chamarajanagar20 hours agoಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿಗೆ ಸಿಲುಕಿದ ವ್ಯಕ್ತಿ
-
Hassan23 hours agoವಿದ್ಯಾರ್ಥಿನಿಗೆ ಥಳಿತ : ಶಿಕ್ಷಕನ ಮೇಲೆ ಕೇಸ್
-
Kodagu19 minutes agoಜ್ಯೋತಿ ಪ್ರಧಾನ ಕಾರ್ಯಕ್ರಮ
-
Mysore23 hours agoದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ವಿಧೇಯಕ-2026 ವಿರೋಧಿಸಿ ಬಿಜೆಪಿ ಪ್ರತಿಭಟನೆ
-
Chamarajanagar19 hours agoನಂಜೇದೇವನಪುರ: ಹುಲಿಗಳ ಪತ್ತೆಗೆ ಇನ್ನೆರಡು ಆನೆ
-
Kodagu19 hours agoಕೊಂಗಂಡ, ಕುಪ್ಪಂಡ, ಚೇಂದಿರ ಮತ್ತು ತೀತಿಮಾಡ ತಂಡಗಳು ಸೆಮಿಫೈನಲ್ಗೆ ಆಯ್ಕೆ
-
Hassan48 minutes agoಬಂದೂಕು ಪರವಾನಗಿ ನವೀಕರಣ ವಿಳಂಬ: ಜಿಲ್ಲಾಡಳಿತ ವಿರುದ್ಧ ರೈತರ ಆಕ್ರೋಶ
-
Hassan8 hours agoತಾಯಿಯಾದ 10 ತರಗತಿ ವಿದ್ಯಾರ್ಥಿನಿ: ಕಾರಣ ಕರ್ತ ಕೀಚಕ ಪರಾರಿ
