Connect with us

Chikmagalur

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಬಗೆಹರಿಸುವುದೇ ನನ್ನ ಕರ್ತವ್ಯ: ಎಚ್.ಡಿ ತಮ್ಮಯ್ಯ

Published

on

ಚಿಕ್ಕಮಗಳೂರು: ಶಾಸಕಾಂಗ ಹಾಗೂ ಕಾರ್ಯಾಂಗ ಸೇರಿ ಕಾರ್ಯನಿರ್ವಹಿಸಿದಲ್ಲಿ ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸಲು ಸಹಕಾರಿಯಾಗುತ್ತವೆ. ಸರ್ಕಾರದ ಯೋಜನೆಗಳನ್ನು ಕ್ಷೇತ್ರದ ಪ್ರತಿಯೊಬ್ಬ ಸಾರ್ವಜನಿಕರಿಗೂ ತಲುಪಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಬಗೆಹರಿಸುವುದೇ ನನ್ನ ಕರ್ತವ್ಯ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿ ಲಕ್ಕಮ್ಮನಹಳ್ಳಿ ಮತ್ತು ಬಿಳೇಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಲಕ್ಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹಿಡಿದು ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಪ್ರತಿದಿನ ತಿರುಗಿದರು ಕೆಲವೊಮ್ಮೆ ಅಧಿಕಾರಿಗಳು ಸಂಪರ್ಕಕ್ಕೆ ಸಿಗದೇ ತಮ್ಮ ಸಮಸ್ಯೆಗಳನ್ನು ಅವರಲ್ಲಿ ವಿವರಿಸಲಾಗದೇ ಸಮಸ್ಯೆಗಳು ಬಗೆಹರಿಸಿಕೊಳ್ಳಲು ಕಷ್ಟಕರವಾಗುತ್ತದೆ ಎಂಬ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಿ ಅಧಿಕಾರಿಗಳೆ ಸ್ವತಹ ಜನ ಸಾಮಾನ್ಯರ ಮನೆ ಬಾಗಿಲಿಗೆ ಬಂದು ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಕಾರ್ಯಕ್ರಮ ಉತ್ತಮ ವೇಧಿಕೆಯಾಗಿದೆ ಎಂದರು.

ಈ ಜನ ಸಂಪರ್ಕ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದು ಸಾರ್ವಜನಿಕರು ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರು ಅವುಗಳನ್ನು ಬಿತ್ತರಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಗೆಹರಿಯಬಹುದಾದ ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲೆ ಸೂಕ್ತ ಪರಿಹಾರ ನೀಡಿ ಬಗೆಹರಿಸಲಾಗುವುದು. ಅಧಿಕಾರಿಗಳು ಒಮ್ಮೆ ಸಾರ್ವಜನಿಕರು ಸಮಸ್ಯೆಗಳನ್ನು ಹೊತ್ತು ತಂದರೆ ಶೀಘ್ರವಾಗಿ ಪರಿಹಾರ ಕ್ರಮ ಕೈಗೊಂಡು ಸಮಸ್ಯೆಗಳ ಅಹವಾಲುಗಳು ಪುನರಾವರ್ತಿ ಆಗದಂತೆ ಕ್ರಮ ವಹಿಸಬೇಕು ಎಂದರು.

ಸರ್ಕಾರವು ರಾಜ್ಯದ ಜನತೆಯ ಹಿತದೃಷ್ಠಿಯಿಂದ ಹಸಿವು, ಬಡತನ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿ ಮಹಿಳೆಯರನ್ನು ಸಬಲೀಕರಣಗೊಳಿಸಿ, ಎಲ್ಲಾ ಬಡ ಹಾಗೂ ಹಿಂದುಳಿದ ವರ್ಗಗಳು ಉತ್ತಮ ಜೀವನ ನಿರ್ವಹಿಸಬೇಕು ಎಂಬ ಉದ್ದೇಶದಿಂದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ಹಾಗೂ ಯುವ ನಿಧಿಯಂತಹ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಏಳಿಗೆಗೆ ಶ್ರಮಿಸುತ್ತಿದೆ. ಈ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಕ್ರಮ ಬದ್ಧವಾಗಿ ನಿರ್ವಹಿಸಬೇಕು. ಪ್ರತಿ ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಹಾಗೂ ಸ್ವಚ್ಚತೆ ಸೇರಿದಂತೆ ವಿವಿಧ ಮೂಲ ಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಪೂರೈಸಬೇಕು ಎಂದ ಅವರು ಅಧಿಕಾರಿಗಳು ತಮ್ಮ ಕಚೇರಿಗೆ ಸಮಸ್ಯೆಗಳನ್ನು ಹೊತ್ತು ತರುವ ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಸ್ಪಂಧಿಸಬೇಕು ಎಂದರು.

ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಯೋಜನೆ ಮೂಲಕ ನೀಡಿ ಜನರ ಏಳಿಗೆಗೆ ಶ್ರಮಿಸುವುದರೊಂದಿಗೆ ರಾಜ್ಯದ ಸಾರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿದೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ೨೫ ಕೋಟಿ ರೂಗಳ ವಿಶೇಷ ಅನುದಾನವನ್ನು ನೀಡಲಾಗಿದೆ ಈ ಅನುದಾನದಲ್ಲಿ ಹಲವಾರು ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿ ಕಾರ್ಯಗಳನ್ನು ಗುಣಮಟ್ಟದಿಂದ ನಿರ್ವಹಿಸಲಾಗುತ್ತಿದೆ ಸದ್ಯ ಲಕ್ಕಮ್ಮನಹಳ್ಳಿ ಹಾಗೂ ಬಿಳೇಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ, ಸಮುದಾಯ ಭವನ, ದೇವಸ್ತಾನ, ಸೇರಿದಂತೆ ಒಟ್ಟು ೨ ಕೋಟಿ ೨೫ ಲಕ್ಷ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದ ಅವರು ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದರು
ಕುನ್ನಾಳು ಗ್ರಾಮದಲ್ಲಿ ವಿದ್ಯುತ್ ತಂತಿ ಕೈಗೆ ಎಟುಕುವ ರೀತಿಯಲ್ಲಿ ಜೋತು ಬಿದ್ದಿವೆ ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಹಾಗೂ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಶಾಸಕ ತಮ್ಮಯ್ಯ ಮೆಸ್ಕಾಂ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಕೆಲಸ ಮಾಡಿ ಇಲ್ಲ ಗಂಟು ಮೂಟೆ ಕಟ್ಟಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಳೇಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಬಾನು ಪ್ರಕಾಶ್ ಲಕ್ಕಮ್ಮನಹಳ್ಳಿ ಗ್ರಾ.ಪಂ ಅಧ್ಯಕ್ಷೇ ಶಶಿಕಲಾ, ಉಪಾಧ್ಯಕ್ಷ ಲಕ್ಷಣ್ ಗೌಡ, ಚಂದ್ರಶೇಕರ್, ಸಣ್ಣ ಕಾಟೇಗೌಡ ಹರೀಶ್, ಯಶೋಧ, ಲತಾ, ರತ್ನಮ್ಮ, ಜಗದೀಶ್, ನಾಗರತ್ನ, ಗೋಪಿಕೃಷ್ಣ, ಲೋಲಾಕ್ಷಿ, ದೌರ್ಜನ್ಯ ಸಮಿತಿ ಸದಸ್ಯ ರಮೇಶ್ ಯು.ಸಿ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್, ತಹಶೀಲ್ದಾರ್ ಸುಮಂತ್, ಲಕ್ಕಮ್ಮನಹಳ್ಳಿ ಗ್ರಾ.ಪಂ ಪಿಡಿಒ ಲೀಲಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Chikmagalur

ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

Published

on

ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಒಬ್ಬರು ಮೃತಪಟ್ಟಿದ್ದಾರೆ.

ಅಡಿಕೆ ಮರದಲ್ಲಿ ಗೊನೆ ಕೊಯ್ಯುವಾಗ ಬಿದ್ದು ಸಾವಪ್ಪಿದ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ.

ಮಂಜು (35) ಮೃತ ದುರ್ದೈವಿ. ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗೊನೆ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.

ಕಳಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chikmagalur

ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಿದ  ಕೆ.ಎಸ್.ಗೋಪಾಲಕೃಷ್ಣ

Published

on

ಚಿಕ್ಕಮಗಳೂರು: ಶ್ರೀ ಬೀರಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕೆಂಪನಹಳ್ಳಿ ಕನಕ ಗೆಳೆಯರ ಬಳಗದಿಂದ ನಗರ ಸಮೀಪ ಆಯೋಜಿಸಿದ್ಧ ಎರಡನೇ ವರ್ಷದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಬುಧವಾರ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.


ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು, ಪ್ರಥಮ ಹಾ ಗೂ ದ್ವಿತೀಯ ಹೆಚ್.ಎಫ್. ಡಿಲಕ್ಸ್ ಬೈಕ್, ತೃತೀಯ 25 ಸಾವಿರ ನಗದು ಟ್ರೋಫಿ ಮತ್ತು ಚತುರ್ಥ ವಿಜೇತರಿಗೆ 20 ಸಾವಿರ ನಗದು ಆಕರ್ಷಕ ಟ್ರೋಫಿ ವಿತರಿಸಲಾಗುವುದು ಎಂದು ಸ್ಪರ್ಧೆಯ ಆಯೋಜಕ ಕೆಂಪನಹಳ್ಳಿ ಸುನೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಂಜುಳಾ ಲಕ್ಷ್ಮಣ್, ಎಲ್.ಬಿ.ಎಸ್. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರತೀಪ್, ಕೆಂಪನಹಳ್ಳಿ ಗ್ರಾಮಸ್ಥರಾದ ಚರಣ್, ಹರೀಶ್, ರಾಕೇಶ್, ಶಶಾಂಕ್, ಸಚಿನ್, ಕಾರ್ತೀಕ್ , ವರುಣ್, ಡಿಂಪು, ವಸಂತ್, ದರ್ಶನ್ ಮತ್ತಿತರರು ಹಾಜರಿದ್ದರು.

Continue Reading

Chikmagalur

ಅಸ್ಸಾಂನಿಂದ ಬಂದಿರುವ ಕಾರ್ಮಿಕನಿಂದ ಕಾಫಿ ತೋಟದಲ್ಲಿ ಗೋ ಹತ್ಯೆ

Published

on

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಗೋ ಹತ್ಯೆ ಮಾಡಿದ ಘಟನೆ ನಡೆದಿದ್ದು, ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿರುವ ಕಾರ್ಮಿಕರಿಂದ ಕೃತ್ಯ ನಡೆದಿದೆ.

ಗೋವುಗಳನ್ನು ಕದ್ದು ತೋಟದಲ್ಲಿ ಹತ್ಯೆ ಮಾಡಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದ್ದು ಆರೋಪಿಗಳು-ಗೋಮಾಂಸ ಪಕ್ಷಕ್ಕೆ ಪಡೆಯಲಾಗಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರಿನ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು,ಎರಡು ದನಗಳನ್ನು ಹತ್ಯೆ ಮಾಡಿ, ಮಾಂಸ ಹಂಚಿಕೆ ವೇಳೆಯಲ್ಲಿ ದಾಳಿ ಆಗಿದೆ.

ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿಆರೋಪಿಗಳಾದ ಅನ್ಸರ್, ಮಜೀದ್, ಮುಜಾಮಿಲ್ ನನ್ನು ಬಂಧಿಸಿದ್ದಾರೆ.

ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Continue Reading

Trending

error: Content is protected !!