Connect with us

Mysore

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ಸಭೆಯಲ್ಲಿ ಸಿದ್ದರಾಮಯ್ಯ ಅವರ ಮಾತುಗಳು :

ಕಾರ್ಕಜಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು

ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ.
ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು.

ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ.

ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು.

ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ.

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ.

ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ಬಿಸಿಯೂಟ ಅನುದಾನ ದುರುಪಯೋಗ

Published

on

ತಿ.ನರಸೀಪುರ: ವಿದ್ಯೋದಯ ಶಿಕ್ಷಣ ಸಂಸ್ಥೆಯಲ್ಲಿ ಬಿಸಿಯೂಟ ಯೋಜನೆ ಹೆಸರಿನಲ್ಲಿ ಅನುದಾನ ದುರ್ಬಳಕೆ, ಅನುದಾನ ಹೊಂದಾಣಿಕೆ ಮಾಡಲು ನಕಲಿ ಬಿಲ್‌ಗಳ ಸೃಷ್ಟಿ ಮತ್ತು ಲೆಕ್ಕಪತ್ರಗಳಲ್ಲಿ ಗೊಂದಲವಿದ್ದು, ವಿದ್ಯೋದಯ ಸಂಸ್ಥೆ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಬಣ) ಜಿಲ್ಲಾ ಸಂಚಾಲಕ ಸೋಸಲೆ ರಾಜಶೇಖರ್ ಅಗ್ರಹಿಸಿದರು.

ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಕ್ಷರ ದಾಸೋಹ ಖಾತೆಯಿಂದ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿಕೊಂಡು ಹಣವನ್ನು ಸಂಸ್ಥೆಯ ಎರಡು ಶಾಲೆಗಳ ಮುಖ್ಯ ಶಿಕ್ಷಕರು ದುರುಪಯೋಗ ಮಾಡಿಕೊಂಡಿರುವುದು ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗಗೊಂಡಿದೆ.

ಹೆಚ್ಚುವರಿ ಹಣ ಬಿಡುಗಡೆ ಮಾಡಿ ಆದನ್ನು ಹೊಂದಾಣಿಕೆ ಮಾಡಲು ನಕಲಿ ದಾಖಲೆ ಸೃಷ್ಟಿಸಲಾಗಿದೆ. ಇದ್ದಕ್ಕಾಗಿ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಅಸಮಾನತೆ, ಹಾಜರಿಲ್ಲದ ಮಕ್ಕಳಿಗೂ ಹಾಜರಾತಿ ನೀಡಲಾಗಿದೆ.ಅಲ್ಲದೆ ಡ್ರಾ ಮಾಡಿರುವ ಹಣಕ್ಕೆ ಹಣಕಾಸು ವಹಿಯನ್ನು ಸಮರ್ಪಕವಾಗಿ ನಿರ್ವಹಿಸದಿಲ್ಲದಿರುವುದು ಕೂಡ ಕಂಡು ಬಂದಿದೆ.

ಸಾಮಾಜಿಕ ಹೋರಾಟಗಾರ ಬಿ.ಎಂ.ನವೀನ್ ಮಾತನಾಡಿ,ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹಶಿಕ್ಷಕರಿಗೆ ಗೈರು ಹಾಜರಾತಿಯಾಗಿದ್ದ ಮಕ್ಕಳ ಹೆಸರಿನಲ್ಲಿ ಸುಳ್ಳು ಹಾಜರಾತಿ ದಾಖಲಿಸಲು ಒತ್ತಡ ಹಾಕಿದ್ದು, ನಕಲಿ ಬಿಲ್‌ಗಳಿಗೆ ಸಹಿ ಮಾಡಿಸಲು ಒತ್ತಾಯ ಮಾಡಿದ್ದಾರೆ. ಕೆಲ ಶಿಕ್ಷಕರ ಮೇಲೆ ಜಾತಿ ಆಧಾರಿತ ಪ್ರಕರಣ ದಾಖಲಿಸಲು ಸೂಚನೆ ನೀಡಿರುವುದು ವರದಿಯಲ್ಲಿ ಉಲ್ಲೇಖವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕದಸಂಸ ತಾಲೂಕು ಸಂಚಾಲಕ
ಕುಂತನಹಳ್ಳಿ ಪುರುಷೋತ್ತಮ್, ಕೋಣಗಳ್ಳಿ ಮಹೇಶ್, ಅತ್ತಹಳ್ಳಿ ರವಿ, ಸದಸ್ಯರಾದ ಸೋಸ್ಲೆ ನಾರಾಯಣ್, ಬಿ.ಎಂ.ನವೀನ್, ಕುಂತನಹಳ್ಳಿ ಗೋಪಿ ಹಾಜರಿದ್ದರು.

ಮಾನ್ಯತೆ ನವೀಕರಣ ರದ್ದತಿಗೆ ಅಗ್ರಹ:

ಕರ್ನಾಟಕ ಶಿಕ್ಷಣ ಕಾಯಿದೆ 1983ರ ಕಲಂ 53ರಡಿ ಮೂವರು ಶಿಕ್ಷಕರನ್ನು ಅಮಾನತು ಮಾಡಲು ಶಿಫಾರಸು ಮಾಡಿದ್ದರೂ, ಆಡಳಿತ ಮಂಡಳಿ ಕ್ರಮ ಕೈಗೊಂಡಿಲ್ಲ. “ರಾಜಕೀಯ ಒತ್ತಡದಿಂದ ವಿಚಾರಣೆ ನಿಲ್ಲಿಸಲಾಗಿದೆ.ವಿದ್ಯೋದಯ ಶಾಲೆಗೆ ಅಕ್ಷರ ದಾಸೋಹ ಅನುದಾನವನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು. ಶಾಲೆಯ ಮಾನ್ಯತೆ ನವೀಕರಣ ರದ್ದುಪಡಿಸಬೇಕು.ಆರೋಪಿತ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಮಿತಿ ಮನವಿ ಸಲ್ಲಿಸಿದೆ. ಒಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ಮಾಡಲಾಗುವುದು ಎಂದು ಸೋಸಲೆ ರಾಜಶೇಖರ್ ಎಚ್ಚರಿಸಿದ್ದಾರೆ.

Continue Reading

Mysore

ಪತ್ನಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

Published

on

ಮೈಸೂರು: ಪತ್ನಿಯನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ನಗರದ ಜಯನಗರ ನಿವಾಸಿಯಾಗಿದ್ದ ರಾಜೇಶ್ ಶಿಕ್ಷೆಗೆ ಒಳಗಾದ ಅಪರಾಧಿ.
ರಾಜೇಶ್‌ನು ನಳಿನಾ ಅವರೊಂದಿಗೆ 2009ರ ಮಾರ್ಚ್ 8ರಂದು ಮದುವೆ ಮಾಡಿಕೊಂಡಿದ್ದ. ಮೈಸೂರಿನ ಹೊರವಲಯದ ರಮಾಬಾಯಿನಗರದಲ್ಲಿ ವಾಸವಿದ್ದಾಗ 2019ರಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಈ ಸಂಬAಧ ಪತ್ನಿ ನಳಿನಾ ಮೈಸೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ರಾಜೇಶನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ತಿಳಿವಳಿಕೆ ನೀಡಿ ಕಳುಹಿಸಿದ್ದರು.
ಪತ್ನಿಯೊಂದಿಗೆ ಜಯನಗರದಲ್ಲಿ ಮನೆ ಮಾಡಿ ವಾಸವಿದ್ದ ರಾಜೇಶ್, ತಾಯಿ ಮನೆಗೆ ಆಗಾಗ್ಗೆ ಹೋಗಿ ಬರುತ್ತಿದ್ದ. 2021ರಲ್ಲಿ ನಳಿನಾ ತನ್ನ ಮಕ್ಕಳಿಗೆ ಅಜ್ಜಿ ನೋಡಲು ಹೋಗಬಾರದು ಎಂದು ಹೇಳಿದ್ದ ವಿಚಾರಕ್ಕೆ ಗಲಾಟೆ ಮಾಡಿದ್ದ. ಮಕ್ಕಳ ಎದುರೇ ಮಚ್ಚಿನಿಂದ ಪತ್ನಿಯನ್ನು ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದ.
ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಅಶೋಕಪುರಂ ಠಾಣೆಯ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪಿ.ಜೆ.ಸೋಮಶೇಖರ ನೇತೃತ್ವದ ಪೀಠ ಜೀವಾವಧಿ ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸರ್ಕಾರಿ ಅಭಿಯೋಜಕರಾಗಿ ಸುಧಾ.ಎಸ್.ಟಿ. ಹಾಗೂಊ ಲೋಲಾಕ್ಷಿ ಟಿ.ಎಚ್. ವಾದ ಮಂಡಿಸಿದ್ದರು.

Trending

error: Content is protected !!