Connect with us

Location

ರಾಂಪುರ ಗ್ರಾಮ ಪಂಚಾಯಿತಿಗೆ ರೈತರ ಮುತ್ತಿಗೆ

Published

on

ರಾಂಪುರ ಗ್ರಾಮ ಪಂಚಾಯಿತಿಗೆ ರೈತರ ಮುತ್ತಿಗೆ

  1. ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಗ್ರಾಮ ಪಂಚಾಯಿತಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಂಜನಗೂಡು ಸೆ.25

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ ಪಂಚಾಯಿತಿಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ,
ಕಳೆದ ಐದು ತಿಂಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲ. ಸಾರ್ವಜನಿಕರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಬೇಕಾದರೆ ಸಿಬ್ಬಂದಿಗಳಿಗೆ ಹತ್ತರಿಂದ ಹದಿನೈದು ಸಾವಿರ ಲಂಚ ಕೊಡಲೇಬೇಕು. ಅಹಲ್ಯ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ತಡೆದಿರುವುದರಿಂದ ಅಲ್ಲಿನ ನಿವಾಸಿಗಳ ಕೈ ಪಂಪ್ ಗಳನ್ನು ಅಧಿಕಾರಿಗಳು ಕಿತ್ತುಕೊಂಡು ಬಂದಿದ್ದಾರೆ. ಚರಂಡಿಗಳನ್ನು ಸ್ವಚ್ಛತೆ ಮಾಡದೆ ಹಾಗೆ ಬಿಟ್ಟಿದ್ದಾರೆ. ಸ್ಮಶಾನವನ್ನು ಅಭಿವೃದ್ಧಿಪಡಿಸುವಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಸಿದ್ದರಾಮಯ್ಯರವರ ಕ್ಷೇತ್ರದಲ್ಲಿ ಈ ರೀತಿ ನಡೆಯುತ್ತಿದೆ. ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಯನ್ನು ನೇಮಕ ಮಾಡಬೇಕು. ಹಾಗೂ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡಬೇಕು. ಕಂಪ್ಯೂಟರ್ ಆಪರೇಟರ್ ನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಸತೀಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ಪೈಲ್ವಾನ್ ರಘು, ಮಹಿಳಾ ಘಟಕದ ಅಧ್ಯಕ್ಷ ಶ್ವೇತ, ಸವಿತಾ ಸೇರಿದಂತೆ ಹಲವು ರೈತರು ಭಾಗವಹಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mysore

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬಾಲಕಿ ಸ್ಥಳದಲ್ಲೇ ಸಾ*ವು, ಮೂವರ ಸ್ಥಿತಿ ಗಂಭೀರ

Published

on

ಚಿಕ್ಕಮಗಳೂರು: ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

ಲಹರಿ‌ (6) ಸ್ಥಳದಲ್ಲೇ ಮೃತಪಟ್ಟ ಬಾಲಕಿ. ಅವರ ಸಹೋದರಿ, ತಂದೆ ತಾಯಿ ಸ್ಥಿತಿ ಗಂಭೀರವಾಗಿದೆ.

ಪುನೀತ್ (37) ಚೈತ್ರ (34)ದಂಪತಿ ಮಗು ಸಿರಿ(8) ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಮಕ್ಕಳ‌ ಜೊತೆ ಬೈಕಿನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ.

ಬೈರಂಬುದಿ ಗ್ರಾಮದಿಂದ ಅಂಬಳೆ ಗ್ರಾಮಕ್ಕೆ ಬರುತ್ತಿದ್ದ ಪುನೀತ್ ಕುಟುಂಬದೊಂದಿಗೆ ಬೈಕಿನಲ್ಲಿ ಬರುತ್ತಿದ್ದ ಪುನೀತ್‌ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಇನ್ನೂ ಗಾಯಾಳುಗಳಿಗೆ ಚಿಕ್ಕಮಗಳೂರು ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಹರಿ ಮೃತ ದೇಹ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Continue Reading

Kodagu

ನಾಪೋಕ್ಲು ಬಳಿಯ ಐತಿಹಾಸಿಕ ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದಿಂದ ಜರುಗಿದ ಪುತ್ತರಿ ಕೋಲಾಟ

Published

on

ವರದಿ : ಝಕರಿಯ ನಾಪೋಕ್ಲು

ನಾಪೋಕ್ಲು : ನಾಪೋಕ್ಲು ಬಳಿಯ ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್ ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ನಡೆದ ಕೋಲಾಟ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ ದೈವಾಧೀನವಾಗಿ ಸಾಂಪ್ರದಾಯಿಕ ಕಾಪಳಕಳಿ,ಕೊಂಬು,ಕೊಟ್ಟು ವಾಲಗ, ದುಡಿ ಕೊಟ್ಟ್ ಪಾಟ್ ನೊಂದಿಗೆ ಬೇತು ಗ್ರಾಮದ ಕುರುಂಬರಾಟ್ ಎಂಬ ಸ್ಥಳದಿಂದ ಬಿದ್ದಾಟಂಡ ವಾಡೆಗೆ ಗ್ರಾಮಸ್ಥರು ಮೆರವಣಿಗೆಯ ಮೂಲಕ ಬರುತ್ತಿದ್ದಂತೆ ನೂರಂಬಡ ಮಂದ್ ನಲ್ಲಿ ಬಿದ್ದಾಟಂಡ ಕುಟುಂಬದ ಹಿರಿಯರು ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ದೇವರ ಕೋಲನ್ನು ಬರಮಾಡಿಕೊಳ್ಳಲಾಯಿತು.

ನೂರಂಬಡ ನಾಡಿಗೆ ಸಂಬಂಧಿಸಿದಂತೆ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಅದರಂತೆ ನಾಲ್ಕು ಗ್ರಾಮದವರು ದುಡಿಕೊಟ್ಟ್ ಪಾಟ್ ನೊಂದಿಗೆ ಬಿದ್ದಾಟಂಡ ವಾಡೆಗೆ ಬರುತ್ತಾರೆ.ಅದರಂತೆ ಮೂಟೇರಿ,ಕೊಳಕೇರಿಯ ಗ್ರಾಮಸ್ಥರು ಬರುತ್ತಿದ್ದಂತೆ ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ಕೋಲಾಟ ನಡೆಸುವ ಮರದ ಕೆಳಗೆ ದೇವರ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ನೀಡಲಾಗಿ ಬಿದ್ದಾಟಂಡ ವಾಡೆಯ ಮಂದ್ ನಲ್ಲಿ ಮೂರು ಗ್ರಾಮಸ್ಥರು ಸೇರಿ ಕೋಲಾಟವನ್ನು ದೇವರ ಉದ್ಘೋಷದೊಂದಿಗೆ ನಡೆಸಿದರು.

ಗ್ರಾಮಸ್ಥರ ಉತ್ಸಾಹ ಹರ್ಷೋದ್ಗಾರಗಳ ನಡುವೆ ನೂರಂಬಡ ಮಂದ್ ನ ಪುತ್ತರಿ ಕೋಲಾಟದ ಸಂಭ್ರಮವನ್ನು ನೆರೆದ ಜನರು ಕಣ್ತುಂಬಿಕೊಂಡರು. ಇದೇ ವಾಡೆಯಲ್ಲಿ ಎರಡನೇ ದಿನ ಚಿಕ್ಕ ಕೋಲಾಟವನ್ನು ಇದೇ ಮೂರು ಗ್ರಾಮಸ್ಥರು ಸೇರಿ ನಡೆಸಿದ ಬಳಿಕ ಕೋಲನ್ನು ಮಕ್ಕಿಶಾಸ್ತಾವು ದೇವಾಲಯಕ್ಕೆ ಒಪ್ಪಿಸುವುದರೊಂದಿಗೆ ಹಬ್ಬ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ.

ಕಾಪಳಕಳಿ

ಪುತ್ತರಿಹಬ್ಬದಲ್ಲಿ ಕಾಪಳಕಳಿಗೆ ಹೆಚ್ಚು ಪ್ರಾಮುಖ್ಯತೆ ಇದೆ. ಪುತ್ತರಿ ಹಬ್ಬದಂದು ಬೇತು ಗ್ರಾಮದ ಮಕ್ಕಿಶಾಸ್ತಾವು ದೇವಾಲಯಕ್ಕೆ ಅಡಗಿದ ಕೆಂಬಟ್ಟಿ ಜನಾಂಗದವರು ಕಾಪಳ ವೇಷವನ್ನು ಧರಿಸುತ್ತಾರೆ.ಮೈಗೆ ಕಪ್ಪು ಬಣ್ಣದ ಮಸಿಯನ್ನು ಬಳಿದು ಕೈಯಲ್ಲಿ ಅಂಗರೆ ಕೋಲು ಹಿಡಿದು ವಾದ್ಯಕ್ಕೆ ತಕ್ಕಂತೆ ಕುಣಿಯುತ್ತಾರೆ. ಈ ವೇಷ ಎರಡು ಮೂರು ದಿನಗಳ ಕಾಲ ಇದ್ದು, ಊರಿನ ಎಲ್ಲಾ ಮನೆಗಳಿಗೆ ತೆರಳುವುದು ಸಾಂಪ್ರದಾಯಿಕವಾಗಿ ನಡೆದು ಬಂದಿರುತ್ತದೆ. ಕೋಲಾಟ ಕಾರ್ಯಕ್ರಮದಲ್ಲಿ ಊರಿನ ಪರ ಊರಿನ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಕೋಲಾಟ ಕಾರ್ಯಕ್ರಮಕ್ಕೆ ಮೆರಗು ನೀಡಿದರು.ಕಾರ್ಯಕ್ರಮದಲ್ಲಿ ಬಿದ್ದಾಟಂಡ ಕುಟುಂಬದ ಪ್ರಮುಖರಾದ ರಮೇಶ್ ಚಂಗಪ್ಪ ಹಾಗೂ ಬೇತು ಗ್ರಾಮದ ಕೊಂಡಿರ ಕುಟುಂಬದ ಗಣೇಶ್ ಅವರು ನಾಡ್ ಮಂದ್ ನಲ್ಲಿ ನಡೆಯುವ ಕೋಲಾಟದ ಇತಿಹಾಸದ ಕುರಿತು ಮಾಹಿತಿ ನೀಡಿದರು.

Continue Reading

Chamarajanagar

ಮೆಕ್ಕೆಜೋಳ ಖರೀದಿಸಲು ನೊಂದಣಿ ಕೇಂದ್ರ ಕಾರ್ಯಾರಂಭ

Published

on

ಚಾಮರಾಜನಗರ: ಕರ್ನಾಟಕ ಹಾಲು ಮಹಾಮಂಡಳಿಯು (ಕೆಎಂಎಫ್) ರೈತರಿಂದ ನೇರವಾಗಿ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಮೂಲಕ ಮೆಕ್ಕೆಜೋಳ ಖರೀದಿಸುತ್ತಿದ್ದು, ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಚಾಮುಲ್) ಸಹಕಾರ ಸಂಘಗಳ ಮೂಲಕವೂ ಖರೀದಿ ಕೇಂದ್ರ ತೆರೆಯಲಾಗಿದೆ.

ಚಾಮರಾಜನಗರದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ನಿಯಮಿತವು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಒಡೆತನದ ಪಶು ಆಹಾರ ಘಟಕಗಳಿಗೆ ಪಶು ಆಹಾರ ಉತ್ಪಾದನೆಗೆ ಅವಶ್ಯವಿರುವ ಮೆಕ್ಕೆಜೋಳವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ 2,400 ರೂ. ಗಳಂತೆ (ಮೂಲ ಬೆಲೆ, ಎರಡು ಗೋಣಿಚೀಲದ ಮೊತ್ತ ಮತ್ತು ಸಾಗಾಣಿಕೆ ಮೊತ್ತ ಸೇರಿದಂತೆ) ಗುಣಮಟ್ಟ ನಿಬಂಧನೆಗೊಳಪಟ್ಟು ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನವಾಗಿರುತ್ತದೆ.

ಅದರಂತೆ ಜಿಲ್ಲೆಯ ರೈತರಿಂದ ಕರ್ನಾಟಕ ಹಾಲು ಮಹಾಮಂಡಳಿಯ ಹಾಸನ ಪಶು ಆಹಾರ ಘಟಕಕ್ಕೆ ನಿಗದಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿಸಲು ಪ್ರಕ್ರಿಯೆ ಆರಂಭವಾಗಿರುತ್ತದೆ. ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿ ಹಾಗೂ ಒಕ್ಕೂಟದ ನಿಯೋಜಿತ ಅಧಿಕಾರಿಗಳ ಸಮನ್ವಯದೊಂದಿಗೆ ಎನ್‍ಇಎಂಎಲ್ ಸಂಸ್ಥೆ ಅಭಿವೃದ್ಧಿಪಡಿಸಿದ ಇ-ಸಂವೃದ್ಧಿ ಹಾಗೂ ಸರ್ಕಾರದ ಫ್ರೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ನಂತರ ಖರೀದಿಸಲಾಗುವುದು.

ಮೆಕ್ಕೆಜೋಳ ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮೆಕ್ಕೆಜೋಳ ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಎಕರೆಗೆ 12 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳವನ್ನು ಮಾತ್ರ ಖರೀದಿಸಲಾಗುವುದು. ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಪಾವತಿಸಲಾಗುವುದು.

ಮೆಕ್ಕೆಜೋಳ ಮಾರಾಟ ಮಾಡಲು ಆಸಕ್ತ ರೈತರು ಚಾಮರಾಜನಗರದ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯ ತಾಲೂಕು ಉಪ ಕಚೇರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಚಾಮುಲ್ ಮೊ.ಸಂ. 6366824213, ಚಾಮರಾಜನಗರ ಮತ್ತು ಯಳಂದೂರು ಮೊ.ಸಂ. 9945828993, ಗುಂಡ್ಲುಪೇಟೆ ಮೊ.ಸಂ. 9606098335, ಹನೂರು ಮೊ.ಸಂ 9740576484, ಕೊಳ್ಳೇಗಾಲ ಮೊ.ಸಂ. 6366824224 ಸಂಪರ್ಕಿಸುವಂತೆ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ರಾಜ್‍ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Continue Reading

Trending

error: Content is protected !!