Connect with us

Location

ಸಾಕ್ಷರತೆ ಪ್ರಮಾಣಕ್ಕೆ ಹೆಚ್ಚಳಕ್ಕೆ ಮಠಗಳು ಕೊಡುಗೆಯು ಅಪಾರ; ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

Published

on

ಸಾಕ್ಷರತೆ ಪ್ರಮಾಣಕ್ಕೆ ಹೆಚ್ಚಳಕ್ಕೆ ಮಠಗಳು ಕೊಡುಗೆಯು ಅಪಾರ; ಶ್ರೀ ನಿರ್ಮಲಾನಂದನಾಥ ಸ್ವಾಮೀಜ

ಮೈಸೂರು : ರಾಜ್ಯದಲ್ಲಿ ಸಾಕ್ಷರತೆ ಪ್ರಮಾಣ ಬಹಳ ದೊಡ್ಡ ಮಟ್ಟಕ್ಕೆ ಏರಲು ಸರ್ಕಾರಗಳು ಎಷ್ಟು ಕಾರಣವೋ ಅಷ್ಟೆ ಈ ನಾಡಿನ ಮಠಮಾನ್ಯಗಳು ಕಾರಣ ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಚುಂಚನಗಿರಿ ಮಠದ ಸಂಸ್ಥೆಗಳಲ್ಲಿ ಒಂದೂವರೆ ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಕೆಂಪೇಗೌಡರ ಜಯಂತಿ ಮಾಡಿ ಎಂದು ಸಿದ್ದರಾಮಯ್ಯರನ್ನು ಕೇಳಿದ್ದಾಗ ಸಿದ್ದರಾಮಯ್ಯ ಅವರು ನನಗೆ ಯಾಕೆ ಒತ್ತಡ ಅಂತಾ ಕೇಳಿದ್ದರು. ಆದರೂ ನಂತರ ಕೆಂಪೇಗೌಡರ ಜಯಂತಿಯನ್ನು ಸರ್ಕಾರದಿಂದ ಘೋಷಿಸಿದರು.
ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರವನ್ನು ಕೂಡ ಸಿದ್ದರಾಮಯ್ಯ ಸ್ಥಾಪಿಸಿದರು ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಒಂದು ಭಾಗಕ್ಕೆ ಕೆಂಪೇಗೌಡ ವಿವಿ ಎಂದು ಹೆಸರಿಡಲು ಮನವಿ ಮಾಡಿದರು.

ತುಳಿತಕ್ಕೆ ಒಳಗಾದ ಸಮಾಜದ ಉದ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Hassan

ಫೆ.15 ಮತ್ತು 16 ರಂದು ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ಜಾತ್ರೆ

Published

on

ಸತೀಶ್ ಚಿಕ್ಕಕಣಗಾಲು

ಆಲೂರು: ತಾಲೂಕಿನ ಎರಡು ಹೋಬಳಿಗಳ ಧಾರ್ಮಿಕ ಸಂಬಂಧ ಬೆಸೆಯುವ ಪುರಾಣ ಪ್ರಸಿದ್ಧ ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ದೇವರ ಐತಿಹಾಸಿಕ ಜಾತ್ರೆ ಫೆ.೧೫ ಮತ್ತು ೧೬ ರಂದು ನಡೆಯಲಿದೆ.

ದೇವಸ್ಥಾನದಲ್ಲಿ ಫೆ.೮ ರಿಂದ ೧೭ ರವರೆಗೆ ಉತ್ಸವಗಳು ಮತ್ತು ಅನ್ನ ಸಂತರ್ಪಣೆ ನಡೆಯುತ್ತದೆ. ಇತಿಹಾಸ ಹೇಳುವಂತೆ ಒಬ್ಬ ಕೊರಮನು ಬುಟ್ಟಿ ಹೆಣೆಯಲು ಬಿದಿರು ತರಲು ಹೋಗಿದ್ದನು. ಬಿದಿರು ಮೆಣೆ (ಗುಂಪೊದಕ್ಕೆ) ಕತ್ತಿಯನ್ನು ಹೊಡೆಯುವಾಗ ಆಯತಪ್ಪಿ ಏಟು ಒಂದು ಬಂಡೆಗೆ ತಾಗುತ್ತದೆ. ಆ ಬಂಡೆಯಿಂದ ಒಂದು ಬದಿಯಲ್ಲಿ ಹಾಲು ಮತ್ತೊಂದು ಬದಿಯಲ್ಲಿ ರಕ್ತ ಬರುತ್ತದೆ ಇದರಿಂದ ಗಾಬರಿಯಾದ ಅವನು ಪ್ರಜ್ಞೆ ತಪ್ಪಿ ಬೀಳುವನು. ಮನೆಗೆ ವಾಪಾಸು ಬಾರದ ಈತನನ್ನು ಮನೆಯವರು ಹುಡುಕಿಕೊಂಡು ಹೋದರು. ಪ್ರಜ್ಞೆಬಂದ ವ್ಯಕ್ತಿಯು ನಡೆದ ವಿಷಯವನ್ನು ತಿಳಿಸುತ್ತಾನೆ.

ಸ್ಥಳವನ್ನು ಗಮನಿಸಿದಾಗ ಬ್ರಹ್ಮದೇವನ ವಿಗ್ರಹ ಪತ್ತೆಯಾಗುತ್ತದೆ.ಆ ಉದ್ಭವ ಮೂರ್ತಿಯನ್ನು ಪಾಳೆಗಾರರಿಂದ ರಕ್ಷಿಸಲೆಂದು ವಿಷ್ಣುವರ್ಧನ ರಾಜನು ದೇವಾಲಯವನ್ನು ನಿರ್ಮಾಣ ಮಾಡಿಸುತ್ತಾನೆ. ಹೊಯ್ಸಳ ದೊರೆ ವಿಷ್ಣುವರ್ಧನ ಜೈನ ಧರ್ಮದಿಂದ ವೈಷ್ಣವ ಧರ್ಮಕ್ಕೆ ಮತಾಂತರ ಹೊಂದಿದ್ದರಿಂದ ಬ್ರಹ್ಮದೇವನನ್ನು ರಂಗನಾಥನೆಂಬ ಹೆಸರಿನಿಂದ ಕರೆಯಲಾರಂಭಿಸಿದರು.

ಕೆಂಚಮ್ಮನ ಹೊಸಕೋಟೆ ಮತ್ತು ಕುಂದೂರು ಹೋಬಳಿಗೆ ಸೇರಿದ ಸುಮಾರು ೪೮ ಹಳ್ಳಿಗಳಿಗೆ ಸಂಬಂಧಿಸಿದ ಈ ಜಾತ್ರೆ ಸಂಕ್ರಾಂತಿ ಹಬ್ಬದ ದಿನದಂದು ಕುಂದೂರು ಹೋಬಳಿ ವ್ಯಾಪ್ತಿಗೊಳಪುಡುವ ಸುಮಾರು ೨೦ ಗ್ರಾಮಗಳಿಗೆ ಅಡ್ಡೆ ದೇವರು ಹೋಗುತ್ತದೆ. ಉತ್ಸವ ಮುಗಿದ ನಂತರ ಜಾತ್ರೆ ನಡೆಯುವ ಏಳು ದಿನಗಳ ಮೊದಲು ಬೆಟ್ಟದಲ್ಲಿರುವ ದೇವಾಲಯಕ್ಕೆ ಕರೆತರಲಾಗುತ್ತದೆ.

ಮೊದಲ ದಿನ ಶನಿವಾರ ದೊಡ್ಡ ಹರಿಸೇವೆ. ಭಾನುವಾರ, ಸೋಮವಾರ ಹಕ್ಕಿನ ಉತ್ಸವ ನಡೆಯುತ್ತದೆ. ಮಂಗಳವಾರ ಬಿಂದಿಗಮ್ಮ ಕಳಸ ಹೊರುವ ಪೂಜಾರಿಯವರಿಗೆ ತಲೆ ಬೋಳಿಸಿ, ಹಸೆ ಹಾಕಿ ಕಾಸೆ ವೇಷದೊಂದಿಗೆ ದೇವಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ಇವರು ಜಾತ್ರಾ ಮಹೋತ್ಸವ ಮುಗಿಯುವವರೆಗೂ ಹಣ್ಣ-ಹಂಪಲು ಬಿಟ್ಟರೆ ಬೇರೆನನ್ನೂ ಸೇವಿಸದೆ ಪೂಜಾ ಕೈಂಕರ್ಯದಲ್ಲಿ ತೊಡಗುತ್ತಾರೆ. ಶ್ರೀ ರಂಗನಾಥಸ್ವಾಮಿಗೂ ಬಿಂದಿಗಮ್ಮನಿಗೂ ಮದುವೆ ಮಾಡಿ ಆ ವೈಭವವನ್ನು ಆನಂದಿಸುವುದು ಈ ಜಾತ್ರೆಯ ವಿಶೇಷವಾಗಿದೆ.

ದೇವಾಲಯದಲ್ಲಿ ಗುರುವಾರ ರಾತ್ರಿ ಬಿಂದಿಗಮ್ಮನವರಿಗೆ ಹಸೆ ಹಾಕುವ ವಿಶೇಷ ಪೂಜೆ ಇರುತ್ತದೆ. ಶುಕ್ರವಾರ ರಾತ್ರಿ ಗಂಡನ ಕಡೆ ಊರಾದ ಭರತೂರಿನ ಹೊಳೆ ದಡಕ್ಕೆ ಉತ್ಸವ ಮೂರ್ತಿಯೊಂದಿಗೆ ಬಿಂದಿಗಮ್ಮನವರನ್ನು ಕರೆ ತರಲಾಗುವುದು. ಶನಿವಾರ ಹೊಳೆ ದಡದಲ್ಲಿ ಜಾತ್ರೆ ನಡೆಯುತ್ತದೆ. ಸಂಜೆ ಬಿಂದಿಗಮ್ಮನವರನ್ನು ಗಂಡನ ಮನೆಗೆ ಅಂದರೆ ರಂಗನಾಥಸ್ವಾಮಿ ದೇವಾಲಯಕ್ಕೆ ಕಳುಹಿಸುವ ಸಂದರ್ಭ ನೋಡಲೇಬೇಕಾದುದು. ಕಳಸ ಹೊರಡುವ ಮುನ್ನ ಕುಂದೂರಿನ ಗ್ರಾಮಸ್ಥರನ್ನು ಭರತೂರು ಗ್ರಾಮಸ್ಥರು ಬರಮಾಡಿಕೊಂಡು ವಿಶೇಷ ಆತಿಥ್ಯ ನೀಡಿ ಗೌರವಿಸುತ್ತಾರೆ.

ಹೂವು ತುಳಸಿಯಿಂದ ಅಲಂಕೃತವಾದ ಹರಿವಾಣದಲ್ಲಿ ಬಿಂದಿಗಮ್ಮನವರ ಕಳಸವನ್ನು ತಲೆ ಬೋಳಿಸಿದ್ದ ಪೂಜಾರಿ ತಲೆ ಮೇಲೆ ಇಡಲಾಗುತ್ತದೆ. ಸ್ವಲ್ಪ ದೂರ ನಿಧಾನವಾಗಿ ನಡೆದು ಹೋಗುತ್ತಿದ್ದ ಕಳಸ ಹೊತ್ತವರು, ನಂತರದಲ್ಲಿ ತಲೆ ಮೇಲಿರುವ ಕಳಸವನ್ನು ಕೈಯಲ್ಲಿ ಹಿಡಿಯದೆ ಓಡಲು ಪ್ರಾರಂಭ ಮಾಡುತ್ತಾರೆ. ಹೊಳೆಯಿಂದ ಸುಮಾರು ೧೦ ಕಿ. ಮೀ. ದೂರದ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಏಳು ಊರು ಬಾಗಿಲಗಳನ್ನು ದಾಟಿಕೊಂಡು ಕೇವಲ ಮುಕ್ಕಾಲು ಗಂಟೆಯಲ್ಲಿ ತಲುಪುತ್ತದೆ.

ಊರು ಬಾಗಿಲಲ್ಲಿ ಅಕ್ಕಿ ಹಸೆ ಬರೆದು ಹಣ ಹಾಕಿರುತ್ತಾರೆ. ಬಾಗಿಲು ದಾಟುವ ಸಂದರ್ಭದಲ್ಲಿ ಕಳಸ ಹೊತ್ತವರು ತನ್ನ ಗದ್ದದಿಂದ ನೆಲದ ಮೇಲಿಟ್ಟ ಹಣವನ್ನು ಮುಟ್ಟುತ್ತಾರೆೆ. ಕಳಸ ಮುಂದೆ ಹೋದ ಕೂಡಲೆ ನೆರೆದಿದ್ದವರು ಹಸೆ ಅಕ್ಕಿಯನ್ನು ಮುಗಿಬಿದ್ದು ತೆಗೆದುಕೊಳ್ಳುತ್ತಾರೆ. ಈ ಸಂದರ್ಭ ನೋಡಲು ಅತ್ಯಂತ ಕುತೂಹಲಕಾರಿಯಾಗಿರುತ್ತದೆ.

ಭಾನುವಾರ ಬೆಟ್ಟದ ಮೇಲೆ ಹಗಲು ಜಾತ್ರೆ ನಡೆಯುತ್ತದೆ. ಸೋಮವಾರ ಹೇಮಾವತಿ ನದಿ ನೀರಿನಿಂದ ಅಭಿಷೇಕದೊಂದಿಗೆ ಜಾತ್ರಾ ವಿಶೇಷ ಪೂಜಾ ಕಾರ್ಯಕ್ಕೆ ನಾಂದಿ ಹಾಡಲಾಗುತ್ತದೆ. ನಂತರ ಯುಗಾದಿ ಹಬ್ಬದ ಸಂದರ್ಭದಲ್ಲಿ ಭರತೂರು ಕಡೆಗೆ ಸೇರುವ ಸುಮಾರು ೧೦ ಗ್ರಾಮಗಳಲ್ಲಿ ಅಡ್ಡೆ ಉತ್ಸವ ನಡೆಯುತ್ತದೆ ಮುಜರಾಯಿ ಇಲಾಖೆಗೆ ಸೇರಿದ ಅಡಿಬೈಲು ಶ್ರೀ ರಂಗನಾಥಸ್ವಾಮಿ ದೇವರ ಜಾತ್ರೆ ಫೆ. ೧೫ ರಂದು ಭರತೂರು ಗ್ರಾಮ ಹೇಮಾವತಿ ಹಿನ್ನಿರು ಬದಿಯಲ್ಲಿ ಮತ್ತು ೧೬ ರಂದು ರಂಗನಬೆಟ್ಟದ ಮೇಲೆ ನಡೆಯುತ್ತದೆ ಆಲೂರಿನಿಂದ ೧೮ ಕಿ. ಮೀ. ಮಗ್ಗೆ-ರಾಯರಕೊಪ್ಪಲು ಮಾರ್ಗವಾಗಿ ಪ್ರತಿದಿನ ಸಾರಿಗೆ ಬಸ್ ವ್ಯವಸ್ಥೆ ಇರುತ್ತದೆ ಭಕ್ತರು ಸ್ವಚ್ಚತೆಯನ್ನು ಕಾಪಾಡಬೇಕು ಎನ್ನುತ್ತಾರೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಿ. ಉಮೇಶ್.

Continue Reading

Mandya

ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ

Published

on

ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.

Continue Reading

Mandya

ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ

Published

on

ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.

ಎಸ್‌.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.

ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Continue Reading

Trending

error: Content is protected !!